Shakti Yojana- ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯ ಅನುಷ್ಥಾನಕ್ಕೆ ರಾಜ್ಯ ಸರಕಾರದಿಂದ ಹೊಸ ಆದೇಶ!
free bus scheme: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯ ಅನುಷ್ಥಾನಕ್ಕೆ ರಾಜ್ಯ ಸರಕಾರದಿಂದ ಹೊಸ ಆದೇಶ ಹೊರಡಿಸಲಾಗಿದೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯ ಅನುಷ್ಥಾನಕ್ಕೆ ರಾಜ್ಯ ಸರಕಾರದಿಂದ ಹೊಸ ಆದೇಶ ಹೊರಡಿಸಲಾಗಿದೆ.
ರಾಜ್ಯ ಸರಕಾರದಿಂದ ಎಲ್ಲಾ ಮಹಿಳೆಯರಿಗೆ ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸಲು ಉಚಿತ ವ್ಯವಸ್ಥೆ ಮಾಡಲಾಗಿದ್ದು, ಅದರೆ ಉಚಿತ ಟಿಕೆಟ್ ಪಡೆಯಲು ಮಹಿಳೆಯರು ಬಸ್ಸಿನ ನಿರ್ವಾಹಕರಿಗೆ ಯಾವುದಾದರು ಒಂದು ಗುರುತಿನ ಚೀಟಿಯನ್ನು(ಆಧಾರ್ ಕಾರ್ಡ/ವೋಟಿಂಗ್ ಕಾರ್ಡ) ತೋರಿಸುವುದು ಕಡ್ಡಾಯ ಮಾಡಲಾಗಿತ್ತು.
ಅದರೆ ಈಗ ಈ ಕುರಿತು ಹೊಸ ಆದೇಶವನ್ನು ಹೊರಡಿಸಲಾಗಿದ್ದು ಇನ್ನು ಮುಂದೆ ಮಹಿಳೆಯರು ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸಲು ಹಾರ್ಡ ಕಾಪಿ ಗುರುತಿನ ಚೀಟಿ ಇಲ್ಲದಿದ್ದ ಪಕ್ಷದಲ್ಲಿ ಸಾಪ್ಟ್ ಕಾಪಿ ಅನ್ನು ತೋರಿಸಿ ಉಚಿತ ಟಿಕೆಟ್ ಪಡೆಯಬವುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ: Drought relief amount: ನವೆಂಬರ್ 30ರ ಒಳಗಾಗಿ ಈ ಕೆಲಸ ಮಾಡಿದರೆ ಮಾತ್ರ ಬರ ಪರಿಹಾರ ಹಣ ಬರುತ್ತದೆ: ಸಚಿವ ಕೃಷ್ಣ ಬೈರೇಗೌಡ
Shakti yojana- ಹೊಸ ಆದೇಶದ ವಿವರ ಈ ಕೆಳಗಿನಂತಿದೆ:
ಕರ್ನಾಟಕ ಸರ್ಕಾರವು “ಶಕ್ತಿ ಯೋಜನೆ"ಯಡಿ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಿದ್ದು ಹಾಗೂ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲ ನಕಲು/ಡಿಜಿಲಾಕರ್ (Digilocker) ಹಾರ್ಡ್ ಮತ್ತು ಸಾಫ್ಟ್ ಕಾಪಿ ಮಾದರಿಯಲ್ಲಿ ತೋರಿಸಿದಲ್ಲಿ ಹಾಜರುಪಡಿಸಿದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ಆದೇಶದಲ್ಲಿ ತಿಳಿಸಲಾಗಿರುತ್ತದೆ.
ಇದನ್ನೂ ಓದಿ: Invalid ration card list-ಈ ಪಟ್ಟಿಯಲ್ಲಿ ಹೆಸರಿರುವವರಿಗಿಲ್ಲ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಹಣ!
ಆದಾಗ್ಯೂ ಸಹ ಮಹಿಳಾ ಪ್ರಯಾಣಿಕರು ಮೊಬೈಲ್‌ನಲ್ಲಿ ಅಧಿಕೃತ ಗುರುತಿನ ಚೀಟಿ ತೋರಿಸಿದಾಗ್ಯೂ ಸಹ ಮೊಬೈಲ್‌ನಲ್ಲಿನ ಗುರುತಿನ ಚೀಟಿ ನಡೆಯುವುದಿಲ್ಲ ಎಂದು ಕೆಲವು ನಿರ್ವಾಹಕರು ಅನಾವಶ್ಯಕವಾಗಿ ಮಹಿಳಾ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾ), ಕ.ರಾ.ರ.ಸಾ.ನಿಗಮ, ಕೇಂದ್ರ ಕಛೇರಿ, ಬೆಂಗಳೂರು ರವರು ತಿಳಿಸಿರುತ್ತಾರೆ.
Ration card cancellation: ಈ ನಿಯಮ ಪಾಲನೆ ಮಾಡದಿದ್ದಲ್ಲಿ ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ! ಇಲ್ಲಿದೆ ಸಂಪೂರ್ಣ ವಿವರ.
ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ, ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಅಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಲಾಗಿದೆ. ಈ ಬಗ್ಗೆ ದೂರುಗಳು ಸ್ವೀಕೃತಗೊಂಡಲ್ಲಿ ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.