Udyoga mela-2024: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್! ಸರಕಾರದಿಂದ ಬೃಹತ್ ಉದ್ಯೋಗ ಮೇಳ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್

ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ರಾಜ್ಯ ಸರಕಾರದ ಕೌಶಲ್ಯಾಭಿವೃದ್ದಿ, ಉದ್ಯಮಶೀಲ ಮತ್ತು ಜೀವನೋಪಾಯ ಇಲಾಖೆಯಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು(Udyoga mela bengalore) ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ.

Udyoga mela-2024: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್! ಸರಕಾರದಿಂದ ಬೃಹತ್ ಉದ್ಯೋಗ ಮೇಳ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್
Udyoga mela-2024

ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ರಾಜ್ಯ ಸರಕಾರದ ಕೌಶಲ್ಯಾಭಿವೃದ್ದಿ, ಉದ್ಯಮಶೀಲ ಮತ್ತು ಜೀವನೋಪಾಯ ಇಲಾಖೆಯಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು(Udyoga mela bengalore) ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ.

ಆಸಕ್ತ ಅಭ್ಯರ್ಥಿಗಳು ಈ ಅಂಕಣದಲ್ಲಿ ತಿಳಿಸಿರುವ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳಬಹುದಾಗಿದೆ.

Bengalore job fair date and place- ಉದ್ಯೋಗ ಮೇಳ ನಡೆಯುವ ಸ್ಥಳ ಮತ್ತು ದಿನಾಂಕ:

ಉದ್ಯೋಗ ಮೇಳವನ್ನು ದಿನಾಂಕ: 26 ಫೆಬ್ರವರಿ 2024 ಮತ್ತು 27 ಫೆಬ್ರವರಿ 2024 ರಂದು ಒಟ್ಟು ಎರಡು ದಿನ ಏರ್ಪಡಿಸಲಾಗಿದ್ದು ಈ ಮೇಳವು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ(Palace Ground - Bengaluru) 

ಇದನ್ನೂ ಓದಿ: Copra msp price- ಕೇಂದ್ರ ಸರ್ಕಾರದಿಂದ ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿಗೆ ಅನುಮತಿ! ಅಧಿಕೃತ ಮಾರ್ಗಸೂಚಿ ಬಿಡುಗಡೆ.

Who can apply for job fair- ಈ ಉದ್ಯೋಗ ಮೇಳದಲ್ಲಿ ಯಾರೆಲ್ಲ ಭಾಗವಹಿಸಬಹುದು?

ಮೇಳದಲ್ಲಿ ಭಾಗವಹಿಸುವಂತಹ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ, ಐಐಟಿಐ, ಡಿಪ್ಲೋಮಾ, ಬಿ.ಕಾಂ. ಬಿಎ.ಬಿಎಸ್‍ಸಿ, ಬಿ.ಇ, ಎಂಬಿಎ, ಎಂಸಿಎ, ಎಮ್‍ಎಸ್‍ಡಬ್ಲೂ ಸೇರಿದಂತೆ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾದ ಆಸಕ್ತ ಎಲ್ಲ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ಭಾಗಹಿಸಬಹುದು.  

Application link- ನೋಂದಾವಣೆ ಮಾಡಿಕೊಳ್ಳಲು ಲಿಂಕ್:

ನಿರುದ್ಯೋಗಿ ಯುವಕ/ಯುವತಿಯರು ಅಥವಾ ಆಸಕ್ತ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: New ration card- ಹೊಸ ರೇಶನ್ ಕಾರ್ಡಗಾಗಿ ಕಾಯುತ್ತಿರುವವರಿಗೆ ಸಿಹಿ ಸುದ್ದಿ! ಈ ತಿಂಗಳಲ್ಲಿ ನಿಮ್ಮ ಕೈ ಸೇರಲಿದೆ ರೇಶನ್ ಕಾರ್ಡ.

Bengalore Job fair registration link- ನೋಂದಣಿ ಮಾಡಿಕೊಳ್ಳುವ ವಿಧಾನ:

ರಾಜ್ಯ ಸರಕಾರದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ (KSDC) ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಭೇಟಿ ಮಾಡಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳಬಹುದು.

Step-1: ಮೊದಲಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಗಮದ ಅಧಿಕೃತ ವೆಬ್ಸೈಟ್ ಭೇಟಿ ಮಾಡಬೇಕು, ಬಳಿಕ ಅರ್ಜಿದಾರರ ಮೊಬೈಲ್ ಸಂಖ್ಯೆಯನ್ನು ಹಾಕಿ ನೀವು ಹಾಕಿರುವ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಅನ್ನು ನಮೂದಿಸಿ "Verify OTP" ಬಟನ್ ಮೇಲೆ ಕ್ಲಿಕ್ ಮಾಡಿ "Proceed" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ ತೋರಿಸುವ ಒಟ್ಟು 24 ಕಾಲಂ ಅನ್ನು ಸಂಪೂರ್ಣವಾಗಿ ಓದಿಕೊಂಡು ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: HSRP number plate- ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸದಿದ್ದಲ್ಲಿ ರೂ. 500 ರಿಂದ 1000 ದಂಡ! ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Job fair helpline number-ಹೆಚ್ಚಿನ ಮಾಹಿತಿಗಾಗಿ:

ಸಹಾಯವಾಣಿ ಸಂಖ್ಯೆ: 1800 599 9918 
ಉದ್ಯೋಗ ಮೇಳಕ್ಕೆ ನೋಂದಣಿ ಮಾಡಿಕೊಳ್ಳಲು ಲಿಂಕ್: Apply Now
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಲಿಂಕ್: Click here
ಇ-ಮೇಲ್ ವಿಳಾಸ: udyogamela.ksdc@karnataka.gov.in 
ಉದ್ಯೋಗ ಮೇಳಕ್ಕೆ ನೋಂದಣಿ ಮಾಡಿಕೊಳ್ಳಲು ಲಿಂಕ್: Apply Now