Village administrative officer- 1000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಅರ್ಜಿ! ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲಾತಿಗಳು ಬೇಕಾಗುತ್ತದೆ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ/ಗ್ರಾಮ ಲೆಕ್ಕಾಧಿಕಾರಿ(Village administrative officer) ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿರುತ್ತದೆ.

Village administrative officer- 1000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಅರ್ಜಿ! ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲಾತಿಗಳು ಬೇಕಾಗುತ್ತದೆ?
Village administrative officer job application

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ/ಗ್ರಾಮ ಲೆಕ್ಕಾಧಿಕಾರಿ(Village administrative officer) ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿರುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವೆಲ್ಲ ಅವಶ್ಯಕ ದಾಖಲಾತಿಗಳನ್ನು ಅಭ್ಯರ್ಥಿಗಳು ಒದಗಿಸಬೇಕು ಮತ್ತು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು ಇತ್ಯಾದಿ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಇದರ ವಿವರ ಈ ಕೆಳಗಿನಂತಿದೆ. 

ಇದನ್ನೂ ಓದಿ: Why Link Aadhaar to RTC-2024: ಪಹಣಿಗೆ ಆಧಾರ್ ಲಿಂಕ್ ಏಕೆ ಮಾಡಬೇಕು? ಆಧಾರ್ ಲಿಂಕ್ ಅಗಿರುವುದನ್ನು ಚೆಕ್ ಮಾಡುವುದು ಹೇಗೆ?

Required Documents For Online application- ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಮಾಹಿತಿ:

1)ಆಧಾರ್‌ ಕಾರ್ಡ್
2)SSLC ಮಾರ್ಕ್ಸ್‌ ಕಾರ್ಡ್
3)PUC ಮಾರ್ಕ್ಸ್‌ ಕಾರ್ಡ್
4)ಜಾತಿ ಮತ್ತು ಆದಾಯ ಪ್ರಮಾಣ ಪತ್ರ
5)ಫೋಟೊ ಮತ್ತು ಅಭ್ಯರ್ಥಿಯ ಸಹಿ
6)ಮೈಲ್‌ ಐಡಿ ಮತ್ತು ಮೊಬೈಲ್‌ ಫೋನ್ ನಂಬರ್
7)ಕನ್ನಡ ಮಾದ್ಯಮ ವ್ಯಾಸಂಗ ಪ್ರಮಾಣ ಪತ್ರ (ಇದ್ದಲ್ಲಿ ಮಾತ್ರ)
8)ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ (ಇದ್ದಲ್ಲಿ ಮಾತ್ರ)

Last date for application- ಅರ್ಜಿ ಸಲ್ಲಿಸಲು ಮುಖ್ಯ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಮುಕ್ತಾಯ ದಿನ: 04 ಮೇ 2024 
  • ಶುಲ್ಕ ಪಾವತಿಸಲು ಕೊನೆಯ ದಿನ: 07 ಮೇ 2024

ಇದನ್ನೂ ಓದಿ: PDO job Application: PDO ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ ಬಿಡುಗಡೆ!

ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಹೀಗಿದೆ:

  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ: 35 ವರ್ಷಗಳು
  • ಪ್ರವರ್ಗ 2ಎ,2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 38 ವರ್ಷಗಳು
  • ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷಗಳು

How to apply- ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ನೇರವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA website) ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Co-operative Bank Recruitment-2024: ಸಹಕಾರಿ ಬ್ಯಾಂಕ್ ನಲ್ಲಿ ಉದ್ಯೋಗವಕಾಶ! 19 ಏಪ್ರಿಲ್ 2024 ಅರ್ಜಿ ಸಲ್ಲಿಸಲು ಕೊನೆಯ ದಿನ!

Online application link- ಅರ್ಜಿ ಸಲ್ಲಿಸಲು ಲಿಂಕ್: Apply Now

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು ಮತ್ತು ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಅಧಿಕೃತ ಅಧಿಸೂಚನೆಯ ಪ್ರತಿಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ: Download Now