Weather-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!

ಕರ್ನಾಟಕ ಮಳೆ ನಕ್ಷೆಯ ಮಾಹಿತಿಯನ್ವಯ ಕಳೆದ 24 ಗಂಟೆಗಳಲ್ಲಿ ರಾಜ್ಯದ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಕೋಡಿ ಭಾಗದಲ್ಲಿ ಅತ್ಯಧಿಕ 86.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ ಉಳಿದಂತೆ  ಕೊಡಗು, ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಲ್ಲಲ್ಲಿ ಉತ್ತಮ ಮಳೆ ಬಂದಿರುತ್ತದೆ.

Weather-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!
Weather news-2024

ಕರ್ನಾಟಕ ಮಳೆ ನಕ್ಷೆಯ ಮಾಹಿತಿಯನ್ವಯ ಕಳೆದ 24 ಗಂಟೆಗಳಲ್ಲಿ ರಾಜ್ಯದ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಕೋಡಿ ಭಾಗದಲ್ಲಿ ಅತ್ಯಧಿಕ 86.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ ಉಳಿದಂತೆ  ಕೊಡಗು, ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಲ್ಲಲ್ಲಿ ಉತ್ತಮ ಮಳೆ ಬಂದಿರುತ್ತದೆ.

ಹವಾಮಾನ ಇಲಾಖೆಯ ಪ್ರಕಟಣೆಯ ಪ್ರಕಾರ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇರುತ್ತದೆ ಎಂದು ಹೇಳಲಾಗಿದೆ. ಇದರ ಜೊತೆಗೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Home Subsidy scheme-ವಸತಿ ಯೋಜನೆಯಡಿ 1 ಲಕ್ಷಕ್ಕೆ ಮನೆ ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

weather forecast-ನಾಳೆ ಬೆಳಿಗ್ಗೆ(05.01.2024)  8-00 ಗಂಟೆವರೆಗಿನ ರಾಜ್ಯದ ಹವಾಮಾನ ಮುನ್ಸೂಚನೆ ವಿವರ ಹೀಗಿದೆ:

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ. ಕರಾವಳಿ ತೀರ ಭಾಗಗಳಲ್ಲಿ ಜಾಸ್ತಿಯೇ ಇರಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಉತ್ತಮ ಹಾಗೂ ಶಿವಮೊಗ್ಗ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇರುತ್ತದೆ. 

ಮೈಸೂರು ಉತ್ತರ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು (ಗ್ರಾಮಾಂತರ ಸಹಿತ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇರುತ್ತದೆ.

ಇದನ್ನೂ ಓದಿ: DBT amount status-ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮಗೆ ಈ ತಿಂಗಳ ಅನ್ನಭಾಗ್ಯ ಹಣ ಎಷ್ಟು? ಬರುತ್ತದೆ ಎಂದು ಚೆಕ್ ಮಾಡಿ 

ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕರ್ನಾಟಕ ಮಳೆ ಮುನ್ಸೂಚನೆ ನಕ್ಷೆ:

ಇದನ್ನೂ ಓದಿ: PMEGP Scheme: ಗರಿಷ್ಠ 50 ಲಕ್ಷಗಳವರೆಗೆ 250 ಬಗ್ಗೆಯ ಸ್ವ-ಉದ್ಯೋಗ ಪ್ರಾರಂಭಿಸಲು ಸಾಲಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

Karnataka weather-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!

ಅರಬ್ಬಿ ಸಮುದ್ರದಲ್ಲಿನ ವಾಯು ನಿಮ್ನತೆ ಹಾಗೂ ಗಾಳಿಯ ಅಸಹಜ, ಅನಿಶ್ಚಿತ ದಿಕ್ಕಿನ ಚಲನೆಯ ಪರಿಣಾಮದಿಂದ ಜನವರಿ 9ರ ತನಕ ಈಗಿನ ಮಳೆಯ ವಾತಾವರಣವು ರಾಜ್ಯದಲ್ಲಿ ಮುಂದುವರಿಯುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ  ಉತ್ತಮ ಮಳೆಯಾಗಲಿದ್ದು, ಕೆಲವು ಭಾಗಗಳಲ್ಲಿ ಭಾರಿ ಮಳೆ ಮುನ್ಸೂಚನೆಯೂ ಇದ್ದು, ಕೊಡಗು ಜಿಲ್ಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಸಾಧಾರಣ ಹಾಗೂ ಉತ್ತಮ ಮಳೆಯಾಗಲಿದ್ದು ಹಾಗೆಯೇ ಜಿಲ್ಲೆಯ ಕೆಲವು ಭಾಗಗಳಲ್ಲಿ ಹೆಚ್ಚು ಮಳೆ ಆಗುವ ಮುನ್ಸೂಚನೆ ಇರುತ್ತದೆ.

Varuna mitra helpline-ನಿಮ್ಮ ಹಳ್ಳಿಯ ಮಳೆ ಮಾಹಿತಿ ತಿಳಿಯಲು ಹೀಗೆ ಮಾಡಿ:

ರೈತರು ತಮ್ಮ ಹಳ್ಳಿಯ ಮಳೆ ಮುನ್ಸೂಚನೆ ಮಾಹಿತಿಯನ್ನು ತಿಳಿಯುವುದ ಭಾರೀ ಸುಲಭ "ವರುಣಮಿತ್ರ - 9243345433"ಈ ಸಹಾಯವಾಣಿಗೆ ಕರೆ ಮಾಡಿ ನಿಮ್ಮ ಹೆಸರು ಜಿಲ್ಲೆ ತಾಲ್ಲೂಕು,ಗ್ರಾಮ ಪಂಚಾಯತಿ, ಹಳ್ಳಿಯ ಹೆಸರು ಹೇಳಿದರೆ ಸಾಕು ಮಳೆ ಮುನ್ಸೂಚನೆಯನ್ನು ತಿಳಿಸುತ್ತಾರೆ.

ಈ ಸಹಾಯವಾಣಿಯು ದಿನದ 24 ಗಂಟೆಯು ಕಾರ್ಯನಿರ್ವಹಿಸುತ್ತದೆ ಈ ಯೋಜನೆಯ ಪ್ರಯೋಜನವನ್ನು ರೈತರು ಪಡೆದುಕೊಳ್ಳಬವುದುದಾಗಿದೆ.

ಮಾಹಿತಿ ಕೃಪೆ: ಸಾಯಿ ಶೇಖರ್ ಬಿ& KSNDMC