Weather report-ರಾಜ್ಯದ ಮಳೆ ಮುನ್ಸೂಚನೆ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕರ್ನಾಟಕ ಮಳೆ(Weather report) ಮುನ್ಸೂಚನೆ ಮಾಹಿತಿಯನ್ವ ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದರೆ ತಾಲ್ಲೂಕಿನ ಬಿಳುವಾಯಿ ಗ್ರಾಮದಲ್ಲಿ ಅತ್ಯಧಿಕ 133 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ.

Weather report-ರಾಜ್ಯದ ಮಳೆ ಮುನ್ಸೂಚನೆ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!
Weather report-2024

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕರ್ನಾಟಕ ಮಳೆ(Weather report) ಮುನ್ಸೂಚನೆ ಮಾಹಿತಿಯನ್ವ ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದರೆ ತಾಲ್ಲೂಕಿನ ಬಿಳುವಾಯಿ ಗ್ರಾಮದಲ್ಲಿ ಅತ್ಯಧಿಕ 133 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ.

ಉಳಿದಂತೆ ಬೀದರ್, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಉತ್ತಮ ಮಳೆ  ಬಂದಿರುತ್ತದೆ.

Weather forecast-2024: ನಾಳೆ(22-05-2024ರ) ಬೆಳಿಗ್ಗೆ 8-00 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಂಗಳೂರು ಸ್ವಲ್ಪ ಜಾಸ್ತಿಯೇ ಇರಬಹುದು. 

ಕೊಡಗು ಉತ್ತಮ (ಸೋಮವಾರಪೇಟೆ ಸಾಮಾನ್ಯ), ಹಾಸನ ಸಾಮಾನ್ಯ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ ಕುದುರೆಮುಖ ಉತ್ತಮ, ಉಳಿದ ಭಾಗಗಳಲ್ಲಿ ಸಾಮಾನ್ಯ, ಶಿವಮೊಗ್ಗದ ಹೊಸನಗರ, ಸಾಗರ ಸುತ್ತಮುತ್ತ ಉತ್ತಮ, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಇದನ್ನೂ ಓದಿ: Gift deed-ದಾನಪತ್ರ ಎಂದರೇನು? ದಾನಪತ್ರ ಹೇಗೆ ಬರೆಯಬೇಕು?

ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಮೇ 23 ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆಮೇಲೆ ಕರಾವಳಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ.

Monsoon-2024: ಮುಂಗಾರು ಮಳೆ ಮಾಹಿತಿ ಹೀಗಿದೆ:

ಮೇ 22 ರಂದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇ 26ರಂದು ಮ್ಯಾನ್ಮಾರ್, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುತ್ತಿದ್ದಂತಯೇ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ: Bara parihara Status check-2024: ಬರ ಪರಿಹಾರ ಎಷ್ಟು ಜಮಾ ಅಗಿದೆ? ಯಾವ ಬ್ಯಾಂಕ್ ಖಾತೆಗೆ? ಸಂಪೂರ್ಣ ಮಾಹಿತಿ ಪಡೆಯಲು ಅಪ್ಲಿಕೇಶನ್ ಬಿಡುಗಡೆ!

Next 2 weeks weather update- ಮುಂದಿನ 2 ವಾರದ ರಾಜ್ಯ ಮಳೆ ಮುನ್ಸೂಚನೆ ವಿವರ:

ದಿನಾಂಕ: 21 ಮೇ 2024 ರಿಂದ 29 ಮೇ 2024 ರವರಿಗೆ ಬೀದರ್, ರಾಯಚೂರು, ಬಳ್ಳಾರಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಉತ್ತಮ ಮಳೆ ಮುನ್ಸೂಚನೆ ನೀಡಲಾಗಿದ್ದು ಕರಾವಳಿ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಸಾಧ್ಯತೆ ನೀಡಲಾಗಿದೆ.

ದಿನಾಂಕ: 29 ಮೇ 2024 ರಿಂದ 06 ಮೇ 2024 ರವರಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉತ್ತಮ ಮಳೆ ಮುನ್ಸೂಚನೆ ನೀಡಲಾಗಿದ್ದು ಕರಾವಳಿ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Land survey chian- ನಿಮ್ಮ ಜಮೀನಿನ ಸರ್ವೆ ಮಾಡಲು ಬಳಕೆ ಮಾಡುವ ಚೈನಿನ ಕುರಿತು ಈ ಮಾಹಿತಿ ನಿಮಗೆ ಗೊತ್ತೇ?