Breaking News:
LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ! Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000! Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!
HomeNew postsadhar rtc link-2024: ರೈತರು ಇನ್ನೂ 7 ದಿನದ ಒಳಗಾಗಿ ಈ ಕೆಲಸ ಮಾಡದಿದ್ದಲ್ಲಿ ಸರಕಾರಿ...

adhar rtc link-2024: ರೈತರು ಇನ್ನೂ 7 ದಿನದ ಒಳಗಾಗಿ ಈ ಕೆಲಸ ಮಾಡದಿದ್ದಲ್ಲಿ ಸರಕಾರಿ ಯೋಜನೆಗಳ ಸೌಲಭ್ಯ ಸಿಗುವುದಿಲ್ಲ!

ಕಂದಾಯ ಇಲಾಖೆಯಿಂದ ಈ ವರ್ಷದಿಂದ ರೈತರು ಯಾವುದೇ ಸರಕಾರಿ ಸೌಲಭ್ಯವನ್ನು ಪಡೆಯಲು ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಗಳಿಗೆ ಆಧಾರ್ ಲಿಂಕ್(adhar to rtc link) ಮಾಡುವುದನ್ನು ಕಡ್ಡಾಯ ಮಾಡಲಾಗಿದ್ದು, ಈಗ ಲಿಂಕ್ ಮಾಡಲು ಕೊನೆಯ ದಿನಾಂಕವನ್ನು  ಪ್ರಕಟಿಸಿದೆ.

ರೈತರು ಈ ಕೊನೆಯ ದಿನಾಂಕದ ಒಳಗಾಗಿ ತಮ್ಮ ತಮ್ಮ ಜಮೀನಿನ ಪಹಣಿಗಳಿಗೆ ಆಧಾರ್ ಕಾರ್ಡ ಲಿಂಕ್ ಮಾಡಿಕೊಳ್ಳದಿದ್ದಲ್ಲಿ ಕೃಷಿ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಯೋಜನೆಯ ಸೌಲಭ್ಯವನ್ನು ಪಡೆಯಲು ಸಾಧ್ಯವಾಗುವುದಿಲ್ಲ.

ಪಹಣಿಗೆ ಆಧಾರ್ ಕಾರ್ಡ ಲಿಂಕ್ ಮಾಡಲು ಕೊನೆಯ ದಿನಾಂಕ ಯಾವುದು? ಲಿಂಕ್ ಎಲ್ಲಿ ಮಾಡಿಸಿಕೊಳ್ಳಬೇಕು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: NTPC Recruitment 2024 – ಇಂಧನ ಇಲಾಖೆಯಲ್ಲಿ ಸರ್ವೇಯರ್ ಹುದ್ದೆಗಳ ನೇಮಕಾತಿ

Why rtc to adhar link-ಪಹಣಿಗೆ ಆಧಾರ್ ಲಿಂಕ್ ಏಕೆ ಮಾಡಿಸಬೇಕು?

ಸಹಾಯಧನದಲ್ಲಿ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಪಡೆಯಲು ಅತ್ಯಗತ್ಯ.

ಪ್ರಕೃತಿ ವಿಕೋಪ ಸಮಯದಲ್ಲಿ ಉಂಟಾದ ಬೆಳೆ ನಷ್ಟಕ್ಕೆ ಪರಿಹಾರವನ್ನು ಪಡೆಯಲು ಅಗತ್ಯವಾಗಿದೆ.

ಬೆಳೆ ವಿಮೆ ಪರಿಹಾರ, ಬೆಳೆ ಹಾನಿ ಪರಿಹಾರ ಸಹಾಯಧನವನ್ನು DBT ಮೂಲಕ ಪಡೆಯಲು ಪಹಣಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.

ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ, ಅರಣ್ಯ ಇಲಾಖೆಯ ಸಹಾಯಧನ ಯೋಜನೆಯ ಸೌಲಭ್ಯ ಪಡೆಯಲು ಲಿಂಕ್ ಮಾಡುವುದು ಕಡ್ಡಾಯ.

ಪಹಣಿಗೆ ಆಧಾರ್ ಲಿಂಕ್ ಮಾಡಲು ಕೊನೆಯ ದಿನಾಂಕ ಯಾವುದು?

ಕಂದಾಯ ಇಲಾಖೆಯ ಪ್ರಸ್ತುತ ಪ್ರಕಟಣೆಯ ಪ್ರಕಾರ ರೈತರು ತಮ್ಮ ಜಮೀನಿನ ಪಹಣಿ/RTC ಗೆ ಆಧಾರ್ ಕಾರ್ಡ ಲಿಂಕ್ ಮಾಡಿಕೊಳ್ಳಲು 31 ಜುಲೈ 2024 ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ: free Hostel Application-2024: ಉಚಿತ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ! ಮೊಬೈಲ್ ನಲ್ಲಿಯೇ ಅರ್ಜಿ ಸಲ್ಲಿಸುವ ಲಿಂಕ್ ಬಿಡುಗಡೆ!

RTC Aadhar link-ಪಹಣಿ/RTC ಗೆ ಆಧಾರ್ ಕಾರ್ಡ ಲಿಂಕ್ ಎಲ್ಲಿ ಮಾಡಿಸಬೇಕು?

ಅಗತ್ಯ ದಾಖಲೆಗಳ ಸಮೇತ ನಿಮ್ಮ ಗ್ರಾಮ/ಹಳ್ಳಿಯ ಗ್ರಾಮ ಲೆಕ್ಕಾಧಿಕಾರಿ/VA ಅವರನ್ನು ನೇರವಾಗಿ ಭೇಟಿ ಮಾಡಿ ಪಹಣಿಗೆ ಆಧಾರ್ ಲಿಂಕ್ ಮಾಡಿಕೊಳ್ಳಬಹುದು ಅಥವಾ ನಿಮ್ಮ ಹೋಬಳಿಯ ನಾಡಕಚೇರಿಯನ್ನು ಭೇಟಿ ಮಾಡಿ ಪಹಣಿಗೆ ಆಧಾರ್ ಕಾರ್ಡ ಲಿಂಕ್ ಮಾಡಿಸಬಹುದು.

Required documents for rtc-adhar link-ಆಧಾರ್ ಕಾರ್ಡ ಲಿಂಕ್ ಮಾಡಲು ಯಾವೆಲ್ಲ ದಾಖಲೆಗಳು ಬೇಕಾಗುತ್ತದೆ?

1) ಅರ್ಜಿದಾರರ ಆಧಾರ್ ಕಾರ್ಡ
2) ಪಹಣಿ/RTC
3) ಅರ್ಜಿದಾರರ ಮೊಬೈಲ್ ನಂಬರ್

ಇದನ್ನೂ ಓದಿ: karnataka dams water level: ರಾಜ್ಯದ ಯಾವ ಜಲಾಶಯಕ್ಕೆ ಎಷ್ಟು ನೀರು ಹರಿದು ಬರುತ್ತಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.

How to link rtc to adhar card-ಮೊಬೈಲ್ ನಲ್ಲೇ ಪಹಣಿ-ಆಧಾರ್ ಲಿಂಕ್ ಮಾಡಬಹುದೇ?

ಕಂದಾಯ ಇಲಾಖೆಯ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ ರೈತರು ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ನಲ್ಲೇ ಆನ್ಲೈನ್ ಮೂಲಕ ಪಹಣಿಗೆ ಆಧಾರ್ ಕಾರ್ಡ ಲಿಂಕ್ ಅನ್ನು ಮಾಡಿಕೊಳ್ಳಬಹುದು.

Step-1: ಪ್ರಥಮದಲ್ಲಿ ಈ RTC adhar card link status ಲಿಂಕ್ ಮೇಲೆ ಕ್ಲಿಕ್ ಮಾಡಿ ಕಂದಾಯ ಇಲಾಖೆಯ ಭೂಮಿ ವೆಬ್ಸೈಟ್ ಅನ್ನು ಪ್ರವೇಶ ಮಾಡಿ. ಇದಾದ ನಂತರ ಜಮೀನು ಯಾರ ಹೆಸರಿಗೆ ಇರುತ್ತದೆಯೋ ಅವರ ಮೊಬೈಲ್ ನಂಬರ್ ಅನ್ನು ಹಾಕಿ ಅಲ್ಲೇ ಕೆಳಗೆ ಕಾಣುವ ಕ್ಯಾಪ್ಚ್ ಕೋಡ್ ಅನ್ನು ಹಾಕಿ “SEND OTP” ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ತದನಂತರ ನೀವು ಹಾಕಿರುವ ಮೊಬೈಲ್ ನಂಬರ್ ಗೆ ಬಂದಿರುವ 6 ಅಂಕಿಯ ಒಟಿಪಿ ಅನ್ನು ನಮೂದಿಸಿ “LOGIN” ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

Step-2: ಮೇಲಿನ ವಿಧಾನವನ್ನು ಅನುಸರಿಸಿ ಲಾಗಿನ್ ಅದ ಬಳಿಕ ಅರ್ಜಿದಾರರ ಆಧಾರ್ ಕಾರ್ಡ ಸಂಖ್ಯೆಯನ್ನು ಮತ್ತು ಆಧಾರ್ ಕಾರ್ಡನಲ್ಲಿರುವಂತೆ ಹೆಸರನ್ನು ಭರ್ತಿ ಮಾಡಿ “Verify” ಎಂದು ಕಾಣುಸುವ ಬಟನ್ ಮೇಲೆ ಕ್ಲಿಕ್ ಮಾಡಿದರೆ “ಆಧಾರ್ ಅನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ” ಎಂದು ಗೋಚರಿಸುತ್ತದೆ ಇದಕ್ಕೆ “OK” ಎಂದು ಕ್ಲಿಕ್ ಮಾಡಿಬೇಕು.

ಇದನ್ನೂ ಓದಿ: Veterinary department-ಪಶುಪಾಲನಾ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು?

Step-3: ಈ ಮೇಲಿನ ಹಂತವನ್ನು ಮುಗಿಸಿದ ಬಳಿಕ ಅಲ್ಲೇ ಕೆಳಗೆ ಗೋಚರಿಸುವ “ಆಧಾರ್ ಪರಿಶೀಲನೆಯನ್ನು ಬಳಸಿಕೊಂಡು ಅರ್ಜಿದಾರರ ವಿವರಗಳನ್ನು ಭರ್ತಿ ಮಾಡಿ” ಎನ್ನುವ ಬಟನ್ ಮೇಲೆ ಕ್ಲಿಕ್ ಮಾಡಿ ಇಲ್ಲಿ ಮತ್ತೊಮ್ಮೆ ಅರ್ಜಿದಾರರ ಆಧಾರ್ ಕಾರ್ಡ ನಂಬರ್ ಅನ್ನು ಹಾಕಿ OTP ಬಟನ್ ಮೇಲೆ ಟಿಕ್ ಮಾಡಿ ಒಟಿಪಿ ಪಡೆಯಿರಿ/Generate OTP ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಕಾರ್ಡ ನಲ್ಲಿರುವ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಅನ್ನು ಹಾಕಿ “ಸಲ್ಲಿಸು/Submit” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-4: ಈ ಪೇಜ್ ನ ಮುಖಪುಟದ ಎಡಬದಿಯಲ್ಲಿ ಕಾಣುವ “ಲಿಂಕ್ ಆಧಾರ್/Link Aadhar” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಕೆಳಗಡೆ ಕಾಣುವ ನಿಮ್ಮ ಸರ್ವೆ ನಂಬರ್ ಒಂದೊಂದನ್ನು ಟಿಕ್ ಮಾಡಿಕೊಂಡು ಅದರ ಮುಂದೆ ಕಾಣುವ “Link” ಬಟನ್ ಮೇಲೆ ಕ್ಲಿಕ್ ಮಾಡಬೇಕು ನಂತರ ಮತ್ತೆ ನಿಮ್ಮ ಮೊಬೈಲ್ ಗೆ ಬರುವ 6 ಅಂಕಿಯ OTP ಅನ್ನು ನಮೂದಿಸಿ “Verify OTP” ಬಟನ್ ಮೇಲೆ ಕ್ಲಿಕ್ ಮಾಡಬೇಕು ಅಗ “ಪಹಣಿಯೊಂದಿಗೆ ನಿಮ್ಮ ಆಧಾರ್ ಅನ್ನು ಲಿಂಕ್ ಮಾಡಲು ನೀವು ಬಯಸುವಿರಾ?/ Do you want to link your Aadhaar with the RTC?” ಎಂದು ಪ್ರಶ್ನೆ ತೋರಿಸುತ್ತದೆ ಅದಕ್ಕೆ ಹೌದು/Yes ಎಂದು ಕ್ಲಿಕ್ ಮಾಡಿದರೆ ಈ ಸರ್ವೆ ನಂಬರ್ ಈಗಾಗಲೇ ಲಿಂಕ್ ಆಗಿದೆ/Survey No. already linked” ಎನ್ನುವ ಸಂದೇಶ ತೋರಿಸಿದರೆ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಅಗಿದೆ ಎಂದು ನೀವು ತಿಳಿದುಕೊಳ್ಳಬೇಕು.

Most Popular

Latest Articles

- Advertisment -

Related Articles