Agri Diploma Admission-ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 1, 2025 | Siddesh
Agri Diploma Admission-ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!
Share Now:

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ(UASD) 2025-25ನೇ ಸಾಲಿಗೆ 2 ವರ್ಷದ ಅಗ್ರಿ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಳಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಪ್ರಸ್ತುತ ಈ ಅಂಕಣದಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಕೃಷಿ ಡಿಪ್ಲೊಮಾ(Agri Diploma) ಪ್ರವೇಶಕ್ಕೆ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ಅರ್ಹತಾ ಮಾನದಂಡಗಳೇನು? ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Best Saving Schemes-ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ ಎಷ್ಟು ಬಡ್ಡಿ ಸಿಗುತ್ತದೆ?

ಕೃಷಿ ಡಿಪ್ಲೊಮಾ(Agri Diploma Admission-2025) ಪ್ರವೇಶಕ್ಕೆ ಪ್ರತಿ ವರ್ಷದಂತೆ ಈ ವರ್ಷವು ಸಹ ಕೃಷಿ ವಿಶ್ವವಿದ್ಯಾಲಯ ಧಾರವಾಡದಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಕೃಷಿ ಕ್ಷೇತ್ರದಲ್ಲಿ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯಿರುವವರು ಹಾಗೂ ಕೃಷಿಯಲ್ಲಿ ಉತ್ತಮ ತಾಂತ್ರಿಕ ಶಿಕ್ಷಣವನ್ನು ಪಡೆದು ಕೃಷಿ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದು.

Important Dates-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ- 23 ಜೂನ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 21 ಜುಲೈ 2025
ಅರ್ಹತಾ ಪಟ್ಟಿ ಮತ್ತು ಕೌನ್ಸಿಲಿಂಘ್ ವೇಳಾ ಪಟ್ಟಿ ಪ್ರಕಟಣೆ- 05 ಆಗಸ್ಟ್ 2025
ಪ್ರಥಮ ಕೌನ್ಸಿಲಿಂಗ್ ನಡೆಯುವ ದಿನಾಂಕ- 19 ಆಗಸ್ಟ್ 2025
ತರಗತಿಗಳು ಆರಂಭವಾಗುವ ದಿನಾಂಕ(ತಾತ್ಕಾಲಿಕ)- 01 ಸೆಪ್ಟೆಂಬರ್ 2025

ಇದನ್ನೂ ಓದಿ: PM Kisan-7 ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ಸ್ಥಗಿತ! ಇಲ್ಲಿದೆ ಅರ್ಹ ರೈತರ ಪಟ್ಟಿ!

Diploma Agriculture Admission Eligibility-ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು:

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಕೃಷಿ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸಲು ವಿಶ್ವವಿದ್ಯಾಲಯದಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ವಿವರ ಹೀಗಿದೆ.

1) ಡಿಪ್ಲೊಮಾ (ಕೃಷಿ) ಕೋರ್ಸ್‌ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಠ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಟ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು)

Diploma Agriculture Application-ಕೃಷಿಕರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50ರಷ್ಟು ಮೀಸಲಾತಿ:

ಕೃಷಿಕರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಕೃಷಿ ಡಿಪ್ಲೊಮಾ ಪ್ರವೇಶದಲ್ಲಿ ಶೇ. 50ರಷ್ಟು ಸೀಟುಗಳನ್ನು ಮೀಸಲಿಡಲಾಗಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Scholarship Application-2025: ಎಸ್ ಎಸ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Application Download link-ಅರ್ಜಿ ನಮೂನೆಯನ್ನು ಡೌನ್ಲೋಡ್ ವೆಬ್ಸೈಟ್ ಲಿಂಕ್-Download Now

diploma agriculture

Application Fee Pay Method-ಪ್ರವೇಶದ ಶುಲ್ಕ ಪಾವತಿಗೆ ಡಿಡಿ ತೆಗೆಯುವ ವಿಳಾಸದ ಮಾಹಿತಿ ಹೀಗಿದೆ:

ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿ ಮಾಡಬೇಕಾಗುತ್ತದೆ ಇದಕ್ಕಾಗಿ ಡಿ.ಡಿ ತೆಗೆಯುವ ವಿಳಾಸದ ವಿವರ ಹೀಗಿದೆ: "The Comptroller, UAS Dharwad" ಈ ಹೆಸರಿನಲ್ಲಿ ಡಿಡಿಯನ್ನು ಪಡೆದಿರಬೇಕು.

ಡಿಡಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದರೊಳಗೆ ಅಂಚೆ ವಿಳಾಸಕ್ಕೆ ಕಳುಹಿಸಬೇಕು.

How to Apply For Agri Diploma-ಅರ್ಜಿ ಸಲ್ಲಿಸುವ ವಿಧಾನ:

ಕೃಷಿ ಡಿಪ್ಲೊಮಾ ಪ್ರವೇಶ ಪಡೆಯಲು ಅಸಕ್ತಿಯನ್ನು ಹೊಂದಿರುವ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಡಿಡಿಯನ್ನು ಲಗತ್ತಿಸಿ "ಕುಲಸಚಿವರು, ಕೃಷಿ ವಿಶ್ವವಿದ್ಯಾಲಯ, ಕೃಷಿನಗರ, ಧಾರವಾಡ-580005 ಇವರಿಗೆ ದಿನಾಂಕ: 21-07-2025 (ಸಂಜೆ 04.00 ಗಂಟೆ) ಒಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Diploma agriculture admission-2025: ರಾಯಚೂರು ಕೃಷಿ ವಿವಿಯಿಂದ ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Application Fee-ಪ್ರವೇಶ ಪಡೆಯಲು ಅರ್ಜಿ ಶುಲ್ಕದ ವಿವರ ಹೀಗಿದೆ:

ಸಾಮಾನ್ಯ ವರ್ಗದ ವಿದ್ಯಾರ್ಥಿಗೆ- ರೂ. 500/-
ಪ.ಜಾ./ಪ.ಪಂ./ಪ್ರವರ್ಗದ ವಿದ್ಯಾರ್ಥಿಗೆ- ರೂ. 250/-

Required Documents-ಅರ್ಜಿ ಸಲ್ಲಿಸಲು ದಾಖಲೆಗಳು:

  • ಅರ್ಜಿದಾರರ ಆಧಾರ್ ಕಾರ್ಡ/Aadhar
  • ಅರ್ಜಿದಾರರ ಪೋಟೋ/Photo
  • SSLC ಅಂಕಪಟ್ಟಿ ಪ್ರತಿ/Marks Card
  • ಕನ್ನಡ ಮತ್ತು ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ/Rural Study Certificate
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Income Certificate
  • ಹೈದ್ರಾಬಾದ ಕರ್ನಾಟಕ ಮೀಸಲಾತಿ ಪ್ರಮಾಣ ಪತ್ರ/HK Certificate
  • ಅರ್ಜಿದಾರ ವಿದ್ಯಾರ್ಥಿಯು ರೈತರ ಕುಟುಂಬಕ್ಕೆ ಸೇರಿದರೆ ವ್ಯವಸಾಯ ಪ್ರಮಾಣ ಪತ್ರ/ Agriculture Family Certificate

ಇದನ್ನೂ ಓದಿ: Home Construction-ಕಟ್ಟಡ ನಕ್ಷೆ ಮಂಜೂರಾತಿಯಿಲ್ಲದೆ ಮನೆ ಕಟ್ಟವಂತಿಲ್ಲ: ಸುಪ್ರೀಂ ಕೋರ್ಟ್

Diploma Agriculture Selection Method-ಕೃಷಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ವಿಧಾನ:

ಸಲ್ಲಿಕೆಯಾದ ಒಟ್ಟು ಅರ್ಜಿಯನ್ನು ಪರಿಶೀಲಿಸಿ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಿ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ ಬಳಿಕ ಮೆರಿಟ್ ಆಧಾರದ ಮೇಲೆ ಕೌನ್ಸಿಲಿಂಗ್ ಮೂಲಕ ಅರ್ಹ ವಿದ್ಯಾರ್ಥಿಗೆ ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಆಯ್ಕೆ ಮಾಡಲಾಗುತ್ತದೆ.

For More Information-ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ಉಪಯುಕ್ತ ವೆಬ್ಸೈಟ್ ಲಿಂಕ್ ಗಳು:

ಕೃಷಿ ವಿಶ್ವವಿದ್ಯಾಲಯ ಧಾರವಾಡದ ಅಧಿಕೃತ ವೆಬ್ಸೈಟ್- Click Here
ಕೃಷಿ ಡಿಪ್ಲೊಮಾ ಕೋರ್ಸ್‌ ಪ್ರವೇಶದ ಅಧಿಕೃತ ಪ್ರಕಟಣೆ ಪ್ರತಿ-Download Now

WhatsApp Group Join Now
Telegram Group Join Now
Share Now: