Agriculture Loan-13,689 ರೈತರ ಖಾತೆಗೆ ಶೂನ್ಯ ಬಡ್ಡಿದರದಲ್ಲಿ ₹589 ಕೋಟಿ ಸಾಲ!

March 19, 2025 | Siddesh
Agriculture Loan-13,689 ರೈತರ ಖಾತೆಗೆ ಶೂನ್ಯ ಬಡ್ಡಿದರದಲ್ಲಿ ₹589 ಕೋಟಿ ಸಾಲ!
Share Now:

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಕೃಷಿಕರಿಗೆ ಆರ್ಥಿಕವಾಗಿ ಬೆಂಬಲವನ್ನು ನೀಡಲು ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲವನ್ನು(Agriculture Loan) ಒದಗಿಸಲಾಗುತ್ತಿದ್ದು ಈ ಕುರಿತು ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರು ವಿಧಾನ ಪರಿಷತ್ತಿನಲ್ಲಿ ಹಂಚಿಕೊಂಡಿರುವ ಅಧಿಕೃತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಅರ್ಹತೆ ಅನುಗುಣವಾಗಿ ಪ್ರಸ್ತುತ ಅರ್ಹ ರೈತ ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ವಿಧಾನ ಪರಿಷತ್ತಿನಲ್ಲಿ ಅವರು ತಿಳಿಸಿದ್ದು ರೈತರಿಗೆ ಶೂನ್ಯ ಬಡ್ದಿದರದಲ್ಲಿ(Agriculture Loan interest rate) 5 ಲಕ್ಷವರೆಗೆ ಸಾಲವನ್ನು ಒದಗಿಸುವುದರ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ತಿಳಿಸಿದ್ದಾರೆ.

ಇದನ್ನೂ ಓದಿ: RTC Joint Owner-ನಿಮ್ಮ ಪಹಣಿಯಲ್ಲಿ ಜಂಟಿಯಿರುವ ಖಾತೆಯನ್ನು ಸರಿಪಡಿಸಿಕೊಳ್ಳುವುದು ಹೇಗೆ?

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನ ಆಯವ್ಯಯ ಮಂಡನೆ ಸಂದರ್ಭದಲ್ಲಿ ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಬೆಳೆ ಸಾಲದ(Bele sala) ಮಿತಿಯನ್ನು ರೂ. 3.00 ಲಕ್ಷದಿಂದ ರೂ. 5.00 ಲಕ್ಷ ಏರಿಸಲಾಗಿದ್ದು, ಈ ಮಿತಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು 2023-24ನೇ ಸಾಲಿನಲ್ಲಿ 6,744 ರೈತರಿಗೆ ರೂ. 290.51 ಕೋಟಿ ಮತ್ತು 2024-25ನೇ ಸಾಲಿನಲ್ಲಿ 2025ನೇ ಫೆಬ್ರವರಿ 28 ರ ವರೆಗೆ 13,689 ರೈತರಿಗೆ ರೂ 589.12 ಕೋಟಿ ಮೊತ್ತದ ಸಾಲ ವಿತರಿಸಲಾಗಿರುತ್ತದೆ.

ರಾಜ್ಯದ 19 ಕೃಷಿ ವಲಯಗಳಿಗೆ(Krishi Sala) ರಾಜ್ಯ ಮಟ್ಟದ ತಾಂತ್ರಿಕ ತಜ್ಞರ ಸಮಿತಿಯಲ್ಲಿ ಪ್ರತಿ ಬೆಳೆಗೆ ನಿಗದಿಪಡಿಸಿದ ಸ್ಕೇಲ್ ಆಫ್ ಫೈನಾನ್ಸ್ ಮಿತಿ, ರೈತರು ಹೊಂದಿರುವ ಭೂ ಹಿಡುವಳಿ ಹಾಗೂ ಬೆಳೆಯುವ ಬೆಳೆ ಆಧರಿಸಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಪ್ರತಿ ರೈತರಿಗೆ ಗರಿಷ್ಠ ಸಾಲದ ಮಿತಿಯನ್ನು ನಿಗದಿಪಡಿಸಿದ್ದು ಇದರನ್ವಯ 1,73,449 ರೈತರು ರೂ. 3.00 ಲಕ್ಷದಿಂದ ರೂ. 5.00 ಲಕ್ಷಗಳವರೆಗಿನ ಬೆಳೆಸಾಲ ಪಡೆಯಲು ಅರ್ಹತೆ ಹೊಂದಿರುತ್ತಾರೆ ಎಂದು ತಿಳಿಸಿದರು.

agricultue loan

ಇದನ್ನೂ ಓದಿ: PM Awas Yojana-ವಸತಿ ರಹಿತರು ಮನೆ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

ನಬಾರ್ಡ್(Nabard Agriculture Loan) ನಿಯಮದಂತೆ ಜಿಲ್ಲಾ ಕೆಂದ್ರ ಸಹಕಾರ ಕೇಂದ್ರ ಬ್ಯಾಂಕುಗಳು ಕಳೆದ ಮೂರು ವರ್ಷಗಳಲ್ಲಿ ವಿತರಣೆ ಮಾಡಿದ ಸರಾಸರಿ ಸಾಲದ ಆಧಾರವಾಗಿ ತಯಾರಿಸಬೇಕಾದ ಆರ್.ಎಲ್.ಪಿ ಗೆ ನಬಾರ್ಡ್ ರಿಯಾಯಿತಿ ಬಡ್ಡಿ ದರದಲ್ಲಿ ಶೇ. 40 ರಷ್ಟು ಮತ್ತು ಹೆಚ್ಚಿನ ಬಡ್ಡಿ ದರದಲ್ಲಿ ಶೇ. 69 ರಷ್ಟು ಮಾತ್ರ ಪುನರ್ಧನವನ್ನು ನೀಡಲು ನೀತಿ ಇದ್ದು ಉಳಿದ ಬಂಡವಾಳವನ್ನು ಡಿ.ಸಿ.ಸಿ ಬ್ಯಾಂಕುಗಳು ತನ್ನ ಸಂಪನ್ಮೂಲದಿಂದಲೇ ಭರಿಸಬೇಕಿದ್ದು ಬಂಡವಾಳದ ಕೊರತೆಯಾಗಿರುತ್ತದೆ.

ನಬಾರ್ಡ್ ಸಂಸ್ಥೆ(NABARD) ಶೇ. 40 ರಷ್ಟು ಪ್ರಮಾಣದಲ್ಲಿ ನೀಡಬೇಕಾದ ರಿಯಾಯಿತಿ ಬಡ್ಡಿ ದರದ ಮಿತಿಯನ್ನು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡುತ್ತಾ ಬಂದಿರುತ್ತದೆ. ನಬಾರ್ಡ್ ಸಂಸ್ಥೆ 2024-25 ನೇ ಸಾಲಿನಲ್ಲಿ ರಿಯಾಯಿತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ಕಳೆದ ವರ್ಷದಲ್ಲಿ ಇದ್ದ ರೂ. 5600 ಕೋಟಿಗಳಿಂದ ಪ್ರಾರಂಭದಲ್ಲಿ ರೂ. 2340.00 ಕೋಟಿಗಳಿಗೆ ನಿಗದಿಮಾಡಿ ನಂತರ ರೂ. 896.11 ಕೋಟಿಗಳ ಹೆಚ್ಚುವರಿ ಮಿತಿಯನ್ನು ನೀಡಿದ್ದು ರೂ. 2363.89 ಕೋಟಿ ಕಡಿಮೆಯಾಗಿರುತ್ತದೆ

ಪ್ರತಿ ವರ್ಷ ಹೊಸ ಸದಸ್ಯರು ಸಹ ಸಾಲಕ್ಕೆ ಅರ್ಜಿ ಸಲ್ಲಿಸುತ್ತಿದ್ದು, ಡಿ.ಸಿ.ಸಿ. ಬ್ಯಾಂಕುಗಳು ಈ ಹೊಸ ರೈತರಿಗೆ ಪ್ರಥಮ ಅದ್ಯತೆ ನೀಡಿ ರೂ. 3.00 ಲಕ್ಷದವರೆಗೆ ಸಾಲ ವಿತರಿಸುತ್ತಿದ್ದು, ರೂ 3.00 ಲಕ್ಷಕ್ಕಿಂತ ಹೆಚ್ಚಿನ ಮಿತಿಗೆ ನಂತರದ ಆದ್ಯತೆ ನೀಡಲಾಗುತ್ತಿದೆ.

ಇದನ್ನೂ ಓದಿ: Karmika Card-ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ 2 ಲಕ್ಷ ರೂ. ಸಿಗುವ ಹೊಸ ಯೋಜನೆ!

ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹೆಚ್ಚಿಸುವಂತೆ ನಬಾರ್ಡ್ ಗೆ ಸೂಚಿಸಲು ವಿತ್ತಿಯ ಸಚಿವರು ಕೇಂದ್ರ ಸರ್ಕಾರದ ಮತ್ತು ಮಾನ್ಯ ಪ್ರಧಾನಮಂತ್ರಿಗಳಿಗೆ ಮಾನ್ಯ ಮುಖ್ಯ ಮಂತ್ರಿಗಳು ಪತ್ರ ಬರೆದಿರುತ್ತಾರೆ. ಕೇಂದ್ರ ವಿತ್ತ ಸಚಿವರು, ಕೇಂದ್ರ ಸರ್ಕಾರದವರು ನಬಾರ್ಡ್ ನಲ್ಲಿ ಮಾರುಕಟ್ಟೆ ದರ ಆಧಾರಿತ ಹೆಚ್ಚಿನ ಬಡ್ಡಿ ದರದ ಪುನರ್ಧನವು ಲಭ್ಯವಿರುವುದಾಗಿ ತಿಳಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ನಬಾರ್ಡ್ ರೂ. 896.11ಕೋಟಿಗಳ ಹೆಚ್ಚುವರಿ ಮಿತಿಯನ್ನು ರಿಯಾಯಿತಿ ಬಡ್ಡಿ ದರದಲ್ಲಿ ನೀಡಿರುತ್ತದೆ.

ಡಿ.ಸಿ.ಸಿ. ಬ್ಯಾಂಕುಗಳ(DCC Bank) ಬಂಡವಾಳವನ್ನು ಹೆಚ್ಚಿಸಲು ಜಿಲ್ಲೆಯ ಸಹಕಾರ ಸಂಘಗಳು ಹೊಂದಿರುವ ಮೀಸಲು ನಿಧಿಯನ್ನು ಕಡ್ಡಾಯವಾಗಿ ಡಿ.ಸಿ.ಸಿ. ಬ್ಯಾಂಕುಗಳಲ್ಲಿಯೇ ವಿನಿಯೋಗಿಸಲು ಸುತ್ತೋಲೆ ನೀಡಲಾಗಿದೆ. ಅಲ್ಲದೇ ಮುಜರಾಯಿ ಇಲಾಖೆ ಮತ್ತು ತಾಲ್ಲೂಕು ಕೃಷಿ ಮಾರುಕಟ್ಟೆ ಸಮಿತಿಗಳು ಹೊಂದಿರುವ ಹೆಚ್ಚುವರಿ ನಿಧಿಯನ್ನು ಡಿ.ಸಿ.ಸಿ ಬ್ಯಾಂಕುಗಳಲ್ಲಿ ವಿನಿಯೋಗಿಸುವಂತೆ ಮನವೊಲಿಸಲಾಗುತ್ತಿದೆ.

ಇದನ್ನೂ ಓದಿ: Mudra loan-2025: ಮುದ್ರಾ ಯೋಜನೆಯಡಿ 10 ಲಕ್ಷದವರೆಗೆ ಸಾಲ! ಅರ್ಜಿ ಸಲ್ಲಿಸುವುದು ಹೇಗೆ?

ಸರ್ಕಾರದಿಂದ ರೈತರ ಪರವಾಗಿ ಸಹಕಾರ ಸಂಘಗಳಿಗೆ ಮಾಡಬೇಕಾದ ಬಡ್ಡಿ ಸಹಾಯಧನವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದ್ದು ಮಾರ್ಚ್ 2024 ರ ಅಂತ್ಯದ ಎಲ್ಲಾ ಬಿಲ್ಲುಗಳನ್ನು ಪಾವತಿ ಮಾಡಲಾಗಿದೆ ಎಂದು ತಿಳಿಸಿದರು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: