Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

December 13, 2025 | Siddesh
Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?
Share Now:

2025-26ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಯಾವೆಲ್ಲ ಯೋಜನೆಯಡಿ(Agriculture Subsidy Schemes In Karnataka) ಸಹಾಯಧನದಲ್ಲಿ ರೈತರು ವಿವಿಧ ಪರಿಕರ/ಚಟುವಟಿಕೆಗಳನ್ನು ಕೈಗೊಳ್ಳಲು ಯೋಜನೆಗಳನ್ನು ಪ್ರಸ್ತುತ ಅನುಷ್ಥಾನ ಮಾಡಲಾಗುತ್ತಿದೆ? ಎನ್ನುವ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಕೃಷಿ ಇಲಾಖೆಯಿಂದ ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳ ಕುರಿತು ಅನೇಕ ರೈತರಿಗೆ ಸಮರ್ಪಕವಾದ ಮಾಹಿತಿ ಕೊರತೆ ಇರುವುದರಿಂದ ಇಂದಿನ ಅಂಕಣದಲ್ಲಿ ಕೃಷಿ ಇಲಾಖೆಯಿಂದ(Karnataka Agriculture Department) ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳು ಯಾವುವು? ಇದಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾದುವ ಅವಶ್ಯಕ ದಾಖಲೆಗಳು ಸೇರಿದಂತೆ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: PM Vikas Yojana-ಪಿಎಂ ವಿಕಾಸ ಯೋಜನೆಯಡಿ ಕೈಗಾರಿಕಾ ಕೌಶಲ್ಯ ತರಬೇತಿ ಹಾಗೂ ₹3000 ಸ್ಟೈಪೆಂಡ್!

Krishi Yojanegalu-ಕೃಷಿ ಇಲಾಖೆಯಿಂದ ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳು:

ಕೃಷಿ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಜಾರಿಯಲ್ಲಿರುವ ಚಾಲ್ತಿ ಯೋಜನೆಗಳ ಪಟ್ಟಿ ಹೀಗಿದೆ:

  • ಬೀಜಗಳ ಪೂರೈಕೆ.
  • ಕೃಷಿ ಯಾಂತ್ರೀಕರಣ.
  • ಕೃಷಿ ಸಂಸ್ಕರಣೆ.
  • ಸೂಕ್ಷ್ಮ ನೀರಾವರಿ: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ.
  • ಕೃಷಿ ಆವರ್ತ ನಿಧಿ.
  • ರೈತರಿಗೆ ನೇರವಾಗಿ ಸಹಕಾರ ಸಂಘಗಳಿಂದ ಸಾಲದ ನೆರವು.
  • ಬೆಳೆ ಸಾಲಕ್ಕೆ ಸಹಾಯಧನ.
  • ಕೃಷಿ ಭಾಗ್ಯ.
  • ಹೈಟೆಕ್ ಹಾರ್ವೆಸ್ಟರ್ ಹಬ್- ಹೈಟೆಕ್ ಹಾರ್ವೆಸ್ಟರ್ ಹಬ್.
  • ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ.
  • ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ ಯೋಜನೆ.

ಇದನ್ನೂ ಓದಿ: Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

Agriculture Department Schemes-ಯೋಜನೆವಾರು ವಿವರಣೆ ಹೀಗಿದೆ:

ಬೀಜಗಳ ಪೂರೈಕೆ: ಬೀಜಗಳ ಪೂರೈಕೆ ಯೋಜನೆಯಡಿ ರಾಜ್ಯದ ಎಲ್ಲಾ ವರ್ಗದ ರೈತರಿಗೆ ವಿವಿಧ ಕೃಷಿ ಬೆಳೆಗಳ ಪ್ರಮಾಣಿತ/ ನಿಜ ಚೀಟಿ ಬಿತ್ತನೆ ಬೀಜಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ. 50 ಹಾಗೂ ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.75 ರ ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ.

ಕೃಷಿ ಯಾಂತ್ರೀಕರಣ: ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದಕ್ಕೆ ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಸದರಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ.50 ಹಾಗೂ ಪ.ಜಾ./ಪ.ಪಂ. ರೈತರಿಗೆ ಶೇ.90 ರಂತೆ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.1.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ ಹಾಗೂ 45 ಪಿ.ಟಿ.ಒ ಹೆಚ್.ಪಿ ವರೆಗಿನ ಟ್ರಾಕ್ಟರ್ ಳಿಗೆ ಸಾಮಾನ್ಯ ವರ್ಗದ ರೈತರಿಗೆ ರೂ. 75,000/- ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ರೈತರಿಗೆ ಶೇ.90 ರ ಗರಿಷ್ಠ ರೂ.3.00 ಲಕ್ಷ ಸಹಾಯಧನ ನೀಡಲಾಗುತ್ತಿದೆ.

ಕೃಷಿ ಸಂಸ್ಕರಣೆ: ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ಕೃಷಿ ಸಂಸ್ಕರಣಾ ಘಟಕಗಳು, ಟಾರ್ಪಾಲಿನ್ ಮತ್ತು ಸಣ್ಣ ಯಂತ್ರಚಾಲಿತ ಎಣ್ಣೆಗಾಣ ಘಟಕಗಳನ್ನು ಸಹಾಯಧನದಡಿ ರೈತರಿಗೆ ವಿತರಿಸಲಾಗುತ್ತಿದೆ. ಸದರಿ ಯೋಜನೆಯಡಿ ಕೃಷಿ ಸಂಸ್ಕರಣಾ ಘಟಕಗಳು ಮತ್ತು ಟಾರ್ಪಾಲಿನ್ ಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ.50ರಷ್ಟು ಮತ್ತು ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.90ರಷ್ಟು ಸಹಾಯಧನದಡಿ ನೀಡಲಾಗುವುದು. ಸಣ್ಣ ಯಂತ್ರಚಾಲಿತ ಎಣ್ಣೆಗಾಣ ಘಟಕಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ.75 ಹಾಗೂ ಪ.ಜಾ./ಪ.ಪಂ., ರೈತರಿಗೆ ಶೇ.90 ರಂತೆ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.1.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ.

ಇದನ್ನೂ ಓದಿ: Swaavlambi Saarathi Scheme-ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ 3.00 ಲಕ್ಷ ಸಹಾಯಧನ ಪಡೆಯಲು ಅರ್ಜಿ!

'ಸೂಕ್ಷ್ಮ ನೀರಾವರಿ: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ: ಯೋಜನೆಯ ಮಾರ್ಗಸೂಚಿ ಅನ್ವಯ ಸಣ್ಣ / ಅತಿ ಸಣ್ಣ ರೈತರಿಗೆ ಶೇ.55 ಮತ್ತು ಇತರೇ ವರ್ಗದ ರೈತರಿಗೆ ಶೇ.45 ರಷ್ಟು ಸಹಾಯಧನವನ್ನು ಪ್ರತಿಯೊಬ್ಬ ರೈತರಿಗೆ ಗರಿಷ್ಠ 5.0 ಹೆಕ್ಟೇರ್ ಪ್ರದೇಶದವರೆಗೆ ನೀಡಲು ಅವಕಾಶವಿರುತ್ತದೆ. ಇದರಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು 60:40 ಇದ್ದು, ರಾಜ್ಯದಲ್ಲಿ ರಾಜ್ಯ ಸರ್ಕಾರದ ವತಿಯಿಂದ ರಾಜ್ಯದ ಪಾಲಿನ ಹೆಚ್ಚುವರಿ ಸಹಾಯಧನವನ್ನು ಸೇರಿಸಿ, ಎಲ್ಲಾ ವರ್ಗದ ರೈತರಿಗೆ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆಗೆ ಶೇ. 90ರ ಸಹಾಯಧನವನ್ನು ನೀಡಲಾಗುತ್ತಿದೆ.

ಕೃಷಿ ಆವರ್ತ ನಿಧಿ: ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಬೆಲೆ ಕುಸಿತವಾದಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಆವರ್ತ ನಿಧಿಯನ್ನು ನಿರ್ವಹಿಸಲಾಗುತ್ತಿದೆ.

ರೈತರಿಗೆ ನೇರವಾಗಿ ಸಹಕಾರ ಸಂಘಗಳಿಂದ ಸಾಲದ ನೆರವು: ಸಹಕಾರ ಸಂಘಗಳ ಮೂಲಕ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಗರಿಷ್ಠ ರೂ.5.00 ಲಕ್ಷಗಳವರೆಗೆ ಅಲ್ಪಾವಧಿ ಸಾಲ ಮತ್ತು ಶೇ.3ರ ಬಡ್ಡಿಯಲ್ಲಿ ರೂ. 15.00 ಲಕ್ಷಗಳವರೆಗೆ ಮಧ್ಯಮಾವಧಿ ಸಾಲವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Insurance Scholarship-TATA AIA ಲೈಫ್ ಇನ್ಶುರೆನ್ಸ್ ವತಿಯಿಂದ 15,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

ಬೆಳೆ ಸಾಲಕ್ಕೆ ಸಹಾಯಧನ: ಈ ಯೋಜನೆಯಡಿ ವಾಣಿಜ್ಯ ಬ್ಯಾಂಕುಗಳು ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಅಲ್ಪಾವಧಿ ಸಾಲ ಪಡೆದ ರೈತರಿಗೆ ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮಿತಿ (SLBC) ಮೂಲಕ ಸಾಲದ ಮೊತ್ತ ರೂ.1.00,000/-ಮಿತಿಯೊಳಗಿನ ಬೆಳೆ ಸಾಲ/ಅಲ್ಪಾವಧಿ ಕೃಷಿ ಸಾಲವನ್ನು ಬ್ಯಾಂಕ್ ನಿಗದಿಪಡಿಸಿದ ಅವಧಿಯೊಳಗೆ ಪಾವತಿಸಿದ ರೈತರಿಗೆ ಶೇ.1 ರ ಬಡ್ಡಿ ರಿಯಾಯಿತಿ ನೀಡಲಾಗುವುದು.

ಕೃಷಿ ಭಾಗ್ಯ: ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ (ಕೃಷಿ ಹೊಂಡ), ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಹೊಂಡದಿಂದ ನೀರು ಎತ್ತಲು ಡೀಸಲ್/ಪಟ್ರೋಲ್/ಸೋಲಾರ್ ಪಂಪ್ ಸೆಟ್ ಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ.80 ಹಾಗೂ ಪ.ಜಾ./ಪ.ಪಂ. ರೈತರಿಗೆ ಶೇ.90 ರ ಸಹಾಯಧನವನ್ನು ಒದಗಿಸಲಾಗುತ್ತಿದೆ ಹಾಗೂ ಸೂಕ್ಷ್ಮ (ತುಂತುರು/ಹನಿ) ನೀರಾವರಿ ಘಟಕಗಳ ಅಳವಡಿಕೆಗೆ ಶೇ.90 ರ ಸಹಾಯಧನವನ್ನು ಎಲ್ಲಾ ವರ್ಗದ ರೈತರಿಗೆ ನೀಡಲಾಗುತ್ತದೆ. ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಾಣಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇ.40 ಹಾಗೂ ಪ.ಜಾ./ಪ.ಪಂ. ರೈತರಿಗೆ ಶೇ.50 ರ ಸಹಾಯಧನವನ್ನು ಒದಗಿಸಲಾಗುತ್ತಿದೆ.

ಇದನ್ನೂ ಓದಿ: Old RTC And Mutation-ಮೊಬೈಲ್ ನಲ್ಲೇ ಹಳೆಯ ಪಹಣಿ ಮ್ಯುಟೇಷನ್ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

ಹೈಟೆಕ್ ಹಾರ್ವೆಸ್ಟರ್ ಹಬ್- ಹೈಟೆಕ್ ಹಾರ್ವೆಸ್ಟರ್ ಹಬ್ ಗಳ ಸ್ಥಾಪನೆಗೆ: ಶೇ.40 ರಿಂದ ಶೇ.70 ರಷ್ಟು ಸಹಾಯಧನದಲ್ಲಿ ಕೃಷಿ ಯಂತ್ರಧಾರೆ ಕೇಂದ್ರಗಳು, ಇತರೆ ಸಂಘ-ಸಂಸ್ಥೆಗಳು ಹಾಗೂ ವೈಯಕ್ತಿಕ ಫಲಾನುಭವಿಗಳಿಗೆ ಪ್ರತಿ ಘಟಕಕ್ಕೆ ಗರಿಷ್ಟ ರೂ.100.00 ಲಕ್ಷಗಳಿಗೆ ಮೀರದಂತೆ ಅನುದಾನ ನೀಡಲಾಗುತ್ತದೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಕಾರ್ಯಕ್ರಮದಡಿ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಾದ ತೋಟಗಾರಿಕೆ ಹಾಗೂ ಪಶುಸಂಗೋಪನೆಗಳನ್ನು ಒಗ್ಗೂಡಿಸಿ “ಸಮಗ್ರ ಕೃಷಿ ಪದ್ಧತಿ' ಮೂಲಕ ರೈತನ ಆದಾಯ ಹೆಚ್ಚಳ ಮಾಡುವುದು ಹಾಗೂ ಅಳವಡಿಸಿದ ಪ್ರದೇಶದಲ್ಲಿ/ಜಮೀನಿನಲ್ಲಿ ಬೆಳೆ ಉತ್ಪಾದಕತೆ, ಸುಸ್ಥಿರತೆ, ಸಮತೋಲನಾ ಆಹಾರ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗಿದೆ.

ರಾಷ್ಟ್ರೀಯ ಆಹಾರ ಸುರಕ್ಷತಾ ಅಭಿಯಾನ ಮತ್ತು ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ಎಣ್ಣೆ ಕಾಳು (NMEO-Oilseeds): ವಿವಿಧ ಆಹಾರ ಬೆಳೆಗಳು, ದ್ವಿದಳ ಧಾನ್ಯಗಳು, ಹತ್ತಿ, ಕಬ್ಬು ಮತ್ತು ಎಣ್ಣೆ ಕಾಳು ಬೆಳೆಗಳ ಉತ್ಪಾದನೆಯನ್ನು ಹೆಚ್ಚಿಸಲು ಆಧುನಿಕ ತಾಂತ್ರಿಕತೆಗಳ ಗುಚ್ಛ ಪ್ರಾತ್ಯಕ್ಷಿಕೆಗಳನ್ನು ಆಯೋಜಿಸುವುದರ ಜೊತೆಗೆ ಬಿತ್ತನೆ ಬೀಜ, ಲಘು ಪೋಷಕಾಂಶಗಳು, ಜೈವಿಕ ಗೊಬ್ಬರಗಳು, ಸಸ್ಯ ಸಂರಕ್ಷಣಾ ರಾಸಾಯನಿಕಗಳು, ಜಿಪ್ಪಂ/ ಕೃಷಿ ಸುಣ್ಣ ಹಾಗೂ ಕೃಷಿ ಉಪಕರಣಗಳನ್ನು ಶೇ.50ರ ಸಹಾಯಧನದಡಿ ನೀಡಲಾಗುತ್ತದೆ.

ಇದನ್ನೂ ಓದಿ: Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ/ಆತ್ಮಸ್ಥೆರ್ಯ ತುಂಬಲು ಹಿರಿಯ ಅಧಿಕಾರಿಗಳೊಂದಿಗೆ ಇನ್ಸ್‌ಸ್ಪೆಕ್ಟ‌ರ್ ಆಫ್ ಪೊಲೀಸ್, ತಹಶೀಲ್ದಾರ್‌ರವರು ಮತ್ತು ಸಹಾಯಕ ಕೃಷಿ ನಿರ್ದೇಶಕರು ಮನೆಗಳಿಗೆ ಭೇಟಿ ನೀಡುತ್ತಾರೆ. ಅಷ್ಟೇ ಅಲ್ಲದೆ ಸರ್ಕಾರದ ವಿವಿಧ ಸವಲತ್ತುಗಳನ್ನು ಅಂತಹ ಕುಟುಂಬಗಳಿಗೆ ತಲುಪಿಸಲು ಜಿಲ್ಲಾ ಮಟ್ಟದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿ ಅರ್ಹ ರೈತ ಆತ್ಮಹತ್ಯೆ ಪ್ರಕರಣಗಳಿಗೆ ರೂ.5.00 ಲಕ್ಷ ಪರಿಹಾರ ಧನವನ್ನು ಮೃತ ವ್ಯಕ್ತಿಯ ವಾರಸುದಾರರಿಗೆ ನಿರ್ದೇಶಕರು, ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ, ಕಂದಾಯ ಇಲಾಖೆಯಿಂದ ನೀಡಲಾಗುತ್ತಿದೆ. ಇಲಾಖೆಯ ಎಲ್ಲಾ ತರಬೇತಿಗಳಲ್ಲಿ ರೈತರಿಗೆ ಆತ್ಮಸ್ಥೆರ್ಯ ತುಂಬುವ ಕುರಿತು ಅರಿವು ಮೂಡಿಸಲಾಗುತ್ತಿದೆ.

Krishi Yojanegalu

How To Apply-ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಮತ್ತು ಆಸಕ್ತ ರೈತರು ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹೋಬಳಿ ಮಟ್ಟದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Karnataka Agriculture Department Website-ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯ ವೆಬ್ಸೈಟ್- Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: