AHFL Scholarship-ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ₹50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 4, 2025 | Siddesh
AHFL Scholarship-ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ₹50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
Share Now:

ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (Aadhar Housing Finance Scholarship) ವತಿಯಿಂದ 2025-2026 ನೇ ಸಾಲಿನ ಆಧಾರ್ ಕೌಶಲ್ ವಿದ್ಯಾರ್ಥಿವೇತನದ ಅಡಿಯಲ್ಲಿ ಭಾರತದಾದ್ಯಂತ ಯಾವುದೇ ವರ್ಷದ ಸಾಮಾನ್ಯ ಅಥವಾ ವೃತ್ತಿಪರ ಪದವಿಪೂರ್ವ ಅಧ್ಯಯನವನ್ನು ಮುಂದುವರಿಸುತ್ತಿರುವ ದೈಹಿಕ ಅಂಗವೈಕಲ್ಯ ಹೊಂದಿರುವ ವಿದ್ಯಾರ್ಥಿಗಳಿಗೆ ₹10,000 ರಿಂದ ₹50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು ಯಾರೆಲ್ಲ ಅರ್ಹರು? ಅರ್ಜಿಯನ್ನು ಸಲ್ಲಿಸುವ ವಿಧಾನಗಳಾವುವು? ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು? ಅರ್ಜಿ ಸಲ್ಲಿಸಲು ಕೊನೆಯ್ ದಿನಾಂಕ ಯಾವುದು? ಈ ಯೋಜನೆಯ ಅಡಿಯಲ್ಲಿ ಎಷ್ಟು ಸಹಾಯಧನವನ್ನು ಪಡೆಯಬಹುದು?

ಇದನ್ನೂ ಓದಿ: E- Swathu Website-ಪಂಚಾಯತ್ ರಾಜ್ ಇಲಾಖೆಯಿಂದ ಇ-ಸ್ವತ್ತು 2.0 ತಂತ್ರಾಂಶ ಜಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

ಈ ಕಾರ್ಯಕ್ರಮವು ಪ್ರತಿಯೊಬ್ಬ ಕಲಿಯುವವರಿಗೆ(Student Scholarship India) ಅವರ ದೈಹಿಕ ಸವಾಲುಗಳು, ಭೌಗೋಳಿಕ ಹಿನ್ನೆಲೆ ಅಥವಾ ಆರ್ಥಿಕ ಸಂದರ್ಭಗಳನ್ನು ಲೆಕ್ಕಿಸದೆ ಶಿಕ್ಷಣಕ್ಕೆ ಸಮಾನ ಪ್ರವೇಶವನ್ನು ಸೃಷ್ಟಿಸಲು ಶ್ರಮಿಸುತ್ತದೆ. ಹಾಗೆಯೇ ಇದು ಅವರ ಶೈಕ್ಷಣಿಕ ಪ್ರಯಾಣವನ್ನು ಘನತೆ ಮತ್ತು ಆತ್ಮವಿಶ್ವಾಸದಿಂದ ಮುಂದುವರಿಸಲು ಸಹಾಯ ಮಾಡುತ್ತದೆ.

ವಿದ್ಯಾರ್ಥಿವೇತನದ ಅಡಿಯಲ್ಲಿ ಎಷ್ಟು ಸಹಾಯಧನವನ್ನು ಪಡೆಯಬಹುದು?

ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನ ಅಡಿಯಲ್ಲಿ ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ₹10,000 ರಿಂದ ₹50,000 ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Digital e-Stamp-ಛಾಪಾ ಕಾಗದ ದಾಖಲೆಗಳಿಗೆ ಈಗ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿ!

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಕೊನೆಯ ದಿನಾಂಕ: ಜನವರಿ 13 2026

ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

  • ವಿದ್ಯಾರ್ಥಿಯ ಆಧಾರ್ ಕಾರ್ಡ್/Aadhar Card.
  • ಪ್ಯಾನ್ ಕಾರ್ಡ್/Pan Card.
  • 12ನೇ ತರಗತಿಯ ಅಂಕಪಟ್ಟಿ/12 Marks Card.
  • ಹಿಂದಿನ ವರ್ಷದ ಅಂಕಪಟ್ಟಿ/Marks Card.
  • ವಿದ್ಯಾರ್ಥಿಯ ಆದಾಯ ಪ್ರಮಾಣ ಪತ್ರ/Income Certificate.
  • ಶುಲ್ಕದ ರಶೀದಿ/Fee Recept.
  • ಫೋಟೊ/Photocopy.
  • ಬ್ಯಾಂಕ್ ಪಾಸ್‌ಬುಕ್/Bank Passbook.
  • ಅಂಗವಿಕಲ ಪತ್ರ/Disability Letter.

ಇದನ್ನೂ ಓದಿ: Indira Kit-ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಕೋಡ್!

ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ಅರ್ಜಿದಾರ ಅಭ್ಯರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ಸಾಮಾನ್ಯ ಅಥವಾ ವೃತ್ತಿಪರ ಪದವಿಪೂರ್ವ ಕೋರ್ಸ್‌ಗಳ ಯಾವುದೇ ವರ್ಷವನ್ನು ಅನುಸರಿಸುತ್ತಿರುವ ದೈಹಿಕ ಅಂಗವೈಕಲ್ಯ ಹೊಂದಿರುವ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.

ಅಭ್ಯರ್ಥಿಯು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.

ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ₹3 ಲಕ್ಷ ದ ಒಳಗಿರಬೇಕು.

ಇದನ್ನೂ ಓದಿ: Parivartan Scholarship-ಪರಿವರ್ತನ್ ECSS ಯೋಜನೆಯಡಿ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

ಇದನ್ನೂ ಓದಿ: Cow Shed Subsidy-ಹಸು ಕೊಟ್ಟಿಗೆ ನಿರ್ಮಾಣಕ್ಕೆ ₹57,000/- ಸಹಾಯಧನ ಪಡೆಯುವುದು ಹೇಗೆ?

ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ವಿಧಾನಗಳು?

ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನ ಅಡಿಯಲ್ಲಿ ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಕೆಳಗೆ ತಿಳಿಸಿರುವ ವಿಧಾನಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಅರ್ಜಿಯನ್ನು ಸಲ್ಲಿಸಲು ಆಸಕ್ತ ಇರುವ ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ “Online Application” ಮೇಲೆ ಕ್ಲಿಕ್ ಮಾಡಿ ಅಧಿಕೃತ ವಿದ್ಯಾರ್ಥಿವೇತನ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ನಂತರ ಅದೇ ಪೇಜ್ ನಲ್ಲಿ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ ನಂತರ “Create an account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಹಾಕಿ ಬಳಕೆದಾರರ ID ಮತ್ತು Password ಅನ್ನು ರಚನೆ ಮಾಡಿಕೊಂಡು “Login” ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

Step-3: ಲಾಗಿನ್ ಅದ ನಂತರ ಅಧಿಕೃತ ಅರ್ಜಿ ನಮೂನೆ ಒಪನ್ ಆಗುತ್ತದೆ ಅಲ್ಲಿ ಕೇಳಿರುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ಅರ್ಜಿ ಸಲ್ಲಿಕೆ ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

ಈ ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ:

ಅಧಿಕೃತ ವೆಬ್ಸೈಟ್ ಲಿಂಕ್: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: