Akrama-Sakrama yojana: ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ರಾಜ್ಯ ಸರಕಾರದಿಂದ ನೂತನ ಕ್ರಮ ಚಾರಿ!

Facebook
Twitter
Telegram
WhatsApp

ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ನಲ್ಲಿ ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57ರಲ್ಲಿ ಅರ್ಜಿ ಸಲ್ಲಿಸಿದವರೆಗೆ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ರಾಜ್ಯ ಸರಕಾರದಿಂದ ನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಪತ್ರಿಕಾ ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಏನಿದು ಬಗರ್ ಹುಕುಂ? ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57ರಲ್ಲಿ ಅರ್ಜಿ? ನೂತನ ವ್ಯವಸ್ಥೆ ಹೇಗಿರಲಿದೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಹದಿನೈದು ವರ್ಷಗಳಿಂದ ಉಳುಮೆ ಮಾಡುತ್ತಿರುವವರಿಗೆ ಮಾತ್ರ ಸಕ್ರಮಕ್ಕೆ ಅವಕಾಶ ಮತ್ತು ಅರ್ಜಿಯನ್ನು ಭೌತಿಕವಾಗಿ ಪರಿಶೀಲಿಸಿ ವಿಲೇವಾರಿ ಮಾಡುವ ಬದಲು ತಂತ್ರಜ್ಞಾನ ಬಳಕೆಗೆ ರಾಜ್ಯ ಸರಕಾರ ಮುಂದಾಗಿದೆ.

ಇದನ್ನೂ ಓದಿ: PM kisan amount: ಪಿ. ಎಮ್ ಕಿಸಾನ್ ಯೋಜನೆಯಡಿ ದೇಶದ 8 ಕೋಟಿ ರೈತರ ಖಾತೆ 18,000 ಸಾವಿರ ಕೋಟಿ ಹಣ ವರ್ಗಾವಣೆ!

akrama-sakrama yojana- ಬಗರ್‌ಹುಕುಂ ಎಂದರೇನು? ಮತ್ತು ಯಾರೆಲ್ಲ ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57ರಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿತ್ತು?

ಈ ಹಿಂದೆ ಅಂದರೆ 1980ರಲ್ಲಿ ಕೃಷಿ ಚಟುವಟಿ ಕೈಗೊಳ್ಳಲು ಯಾರ ಬಳಿ ಜಮೀನು ಇರುವುದಿಲ್ಲ ಅಂತಹ ರೈತರಿಗೆ ಸರಕಾರದಿಂದ ಎರಡು ಎಕರೆ ಜಮೀನನ್ನು ಮಂಜೂರು ಮಾಡುವ ವ್ಯವಸ್ಥೆಯನ್ನು ಅಗಿನ ಸರಕಾರ ಜಾರಿ ಮಾಡಿತ್ತು ಅದರೆ ಈ ಯೋಜನೆಯನ್ನು ಎಲ್ಲಾ ಭೂ ರಹಿತ ರೈತರಿಗೆ ತಲುಪಿಸಲು ಸರಕಾರದಿಂದ ಸಾಧ್ಯವಾಗಲಿಲ್ಲ.

ಇದರಿಂದ ಭೂಮಿ ಸಿಗದ ಭೂ ರಹಿತ ಕೃಷಿಕರು ತಮ್ಮ ಜೀವನೋಪಾಯಕ್ಕಾಗಿ ತಮಗೆ ಅನುಕೂಲವಾದ ಕಡೆ ಜಮೀನನ್ನು ಉಳುಮೆ ಮಾಡಲು ಪ್ರಾರಂಭಿಸಿದರು ಆದರೆ ಇವರಿಗೆ ಆ ಭೂಮಿಯ ಹುಕ್ಕು ಪತ್ರ ದೊರೆತಿರುವುದಿಲ್ಲ.

ಇದಕ್ಕಾಗಿ ಇಂತಹ ರೈತರಿಗೆ ತಾವು ಉಳುಮೆ ಮಾಡುತ್ತಿರುವ ಜಮೀನನ ಸಾಗುವಳಿ ಚೀಟಿ/ಹಕ್ಕು ಪತ್ರವನ್ನು ನೀಡುವುದಕ್ಕಾಗಿ 1991ರಲ್ಲಿ ರಾಜ್ಯ ಸರಕಾರದಿಂದ ಕರ್ನಾಟಕ ಭೂ ಕಂದಾಯ ಕಾಯಿದೆ 1964 ಅನ್ವಯ 1991ರಲ್ಲಿ ನಮೂನೆ 50 ರಲ್ಲಿ ಮತ್ತು 1999ರಲ್ಲಿ ನಮೂನೆ 53 ರಲ್ಲಿ 2018 ರಲ್ಲಿ ನಮೂನೆ 57ರಲಿ ರೈತರಿಂದ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು.

ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57ರಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 2023ರವರೆಗೆ ಅವಕಾಶ ಮಾಡಿಕೊಡಲಾಗಿತ್ತು. ಕಳೆದ 15 ವರ್ಷಗಳಿಂದ ಸಾಗುವಳಿ ಮಾಡುತ್ತಿರುವವರಿಗೆ ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿತ್ತು.

ಇದನ್ನೂ ಓದಿ: Drought relief amount: ನವೆಂಬರ್ 30ರ ಒಳಗಾಗಿ ಈ ಕೆಲಸ ಮಾಡಿದರೆ ಮಾತ್ರ ಬರ ಪರಿಹಾರ ಹಣ ಬರುತ್ತದೆ: ಸಚಿವ ಕೃಷ್ಣ ಬೈರೇಗೌಡ

form 57 application- ಇನ್ನು ಮುಂದೆ ಸಾಗುವಳಿ ಚೀಟಿ ವಿತರಣೆ ತಂತ್ರಜ್ಞಾನ ಬಳಕೆ!

ಈ ಮೊದಲು ನಮೂನೆ 50, 53 ಮತ್ತು 57 ರಲ್ಲಿ ಸಕ್ರಮಕ್ಕೆ ಅರ್ಜಿ ಸಲ್ಲಿಸಿದವರ ಅರ್ಜಿಯನ್ನು ಭೌತಿಕವಾಗಿ ಪರಿಶೀಲಿಸಿ ವಿಲೇವಾರಿ ಮಾಡಲಾಗುತ್ತಿತ್ತು, ಅಲ್ಲಿ ಅನರ್ಹ ಫಲಾನುಭವಿಗಳಿಗೆ ಅವಕಾಶ ಮತ್ತು ಅಕ್ರಮಗಳಿಗೆ ಅವಕಾಶ ಇರುವುದರಿಂದ ಈ ಕಾರಣದಿಂದಾಗಿ ಈಗ ಈ ಪ್ರಕ್ರಿಯೆಯನ್ನು ಸಂಪೂರ್ಣ ತಂತ್ರಜ್ಞಾನ ಬಳಕೆ ಮಾಡಿ ಸಾಗುವಳಿ ಚೀಟಿ ನೀಡಲು ಸರ್ಕಾರ ಮುಂದಾಗಿದೆ.

ಇದನ್ನೂ ಓದಿ: Invalid ration card list-ಈ ಪಟ್ಟಿಯಲ್ಲಿ ಹೆಸರಿರುವವರಿಗಿಲ್ಲ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಹಣ!

ಹೇಗಿರಲಿದೆ ಸಾಗುವಳಿ ಚೀಟಿ ವಿತರಣೆ  ತಂತ್ರಜ್ಞಾನ?

ಹದಿನೈದು ವರ್ಷಗಳಿಂದ ಉಳುಮೆ ಮಾಡಲಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ಇಸ್ರೋ ಹಾಗೂ ಕರ್ನಾಟಕ ರಿಮೋಟ್ ಸೆನ್ಸಿಂಗ್ ಅಪ್ಲಿಕೇಷನ್ ಸೆಂಟರ್ (ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಕ ಕೇಂದ್ರ) ಉಪಗ್ರಹ ಆಧಾರಿತ ಚಿತ್ರಗಳನ್ನು ಸಂಗ್ರಹಿಸಿ ಪತ್ತೆ ಮಾಡಲಾಗುತ್ತದೆ. ಈ ಸಲುವಾಗಿ ಹದಿನೈದು ವರ್ಷಗಳ ಚಿತ್ರಗಳನ್ನು ಪಡೆದುಕೊಂಡು. ಅನರ್ಹರಿಗೆ ಭೂಮಿ ಹೋಗಬಾರದು ಹಾಗೂ ಅರ್ಹರಿಗೆ ಕೈ ತಪ್ಪಬಾರದು ಎಂಬ ಕಾರಣಕ್ಕಾಗಿ ಎರಡು ಸಂಸ್ಥೆಗಳ ಸ್ಯಾಟಲೈಟ್ ಚಿತ್ರಗಳನ್ನು ಪಡೆಯಲಾಗುತ್ತದೆ. ಅದರಲ್ಲಿ ಸರ್ವೆ ನಂಬರ್ ಮೂಲಕ ಎಷ್ಟು ವರ್ಷದಿಂದ ಉಳುಮೆ ಮಾಡಲಾಗುತ್ತಿದೆ ಎಂಬುದು ಪತ್ತೆ ಹಚ್ಚಲಾಗುತ್ತದೆ. ಉಪಗ್ರಹದ ಚಿತ್ರಗಳಲ್ಲಿ ಉಳುಮೆಯ ಮಾಹಿತಿ ಲಭ್ಯವಾಗದಿದ್ದಲ್ಲಿ ಅಂತಹ ಅರ್ಜಿಗಳನ್ನು ಮುಲಾಜಿಲ್ಲದೇ ರದ್ದು ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ರವರು ಮಾಹಿತಿ ಹಂಚಿಕೊಂಡಿದ್ದಾರೆ.

6 ತಿಂಗಳಲ್ಲಿ ಎಲ್ಲಾ ಅರ್ಜಿ ವಿಲೇವಾರಿಗೆ ಕ್ರಮ: 

ಈ ಮೇಲೆ ತಿಳಿಸಿರುವ ನಮೂನೆಯಲ್ಲಿ ಸಾಗುವಳಿ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದ ಫಲಾನುಭವಿಗಳ ಅರ್ಜಿಗಳನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ತಾಲ್ಲೂಕು ಮಟ್ಟದಲ್ಲಿ ಸಮಿತಿಯನ್ನು ರಚನೆ ಮಾಡಲಾಗುತ್ತದೆ.

ಈ ಕಾರಣ ಸಮಿತಿ ಮುಂದೆ ಬಾಕಿ ಇರುವ ಅರ್ಜಿಗಳನ್ನು ಆರು ತಿಂಗಳ ಅವಧಿಯಲ್ಲಿ ವಿಲೇವಾರಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವರು ತಿಳಿಸಿದ್ದಾರೆ. ಸಮಿತಿಗಳನ್ನು ರಚನೆ ಮಾಡಲು ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಿದ್ದು ತಕ್ಷಣಕ್ಕೆ 50 ತಾಲೂಕುಗಳಲ್ಲಿ ಸಮಿತಿ ರಚನೆ ಪ್ರಕ್ರಿಯೆ ಅಂತಿಮವಾಗಿದ್ದು ಶೀಘ್ರದಲ್ಲಿ ಆದೇಶ ಹೊರಬೀಳಲಿದೆ ಎಂದರು. ಉಳಿದ ತಾಲೂಕುಗಳಲ್ಲಿಯೂ ಸಮಿತಿಗಳ ರಚನೆಯಾಗಲಿದೆ ಅದಷ್ಟು ಬೇಗ ಮುಗಿಯಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

Facebook
Twitter
Telegram
WhatsApp
Picture of siddesh

siddesh

Leave a Comment

Top Stories

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ

Crop insurance

Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯವಾಗಿ ಹಿಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು(Rabi Crop Insurance) ಮಾಡಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಯಾವೆಲ್ಲ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದು? ಅರ್ಜಿ