Anganavadi Recruitment-558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ!

April 21, 2025 | Siddesh
Anganavadi Recruitment-558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ!
Share Now:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳಲ್ಲಿ(Anganavadi Recruitment) ಖಾಲಿಯಿರುವ 558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ, 2025ನೇ ಸಾಲಿನಲ್ಲಿ 558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ(Anganavadi Recruitment Notification) ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದು.

ಇದನ್ನೂ ಓದಿ: Vidyasiri Yojane-2025: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ! ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿವೇತನ ಏರಿಕೆ!

ಈ ಲೇಖನದಲ್ಲಿ ಅರ್ಜಿ ಸಲ್ಲಿಸಲು ಇಲಾಖೆಯಿಂದ(anganwadi recruitment 2025) ನಿಗದಿಪಡಿಸಿರುವ ಪ್ರಮುಖ ದಿನಾಂಕ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅಭ್ಯರ್ಥಿಯ ಆಯ್ಕೆ ವಿಧಾನ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ವಿಧಾನ, ಇನ್ನಿತರೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

Last Date For Application-ಪ್ರಮುಖ ದಿನಾಂಕಗಳು:

ಅರ್ಜಿ ಪ್ರಾರಂಭ ದಿನಾಂಕ: 18 ಏಪ್ರಿಲ್ 2025

ಅರ್ಜಿ ಕೊನೆಯ ದಿನಾಂಕ: 20 ಮೇ 2025

Education Qualification-ಶೈಕ್ಷಣಿಕ ಅರ್ಹತೆ:

ಅಂಗನವಾಡಿ ಕಾರ್ಯಕರ್ತೆ(Anganwadi Teacher): ಕನಿಷ್ಠ 12ನೇ ತರಗತಿ (ಪಿಯುಸಿ) ಉತ್ತೀರ್ಣರಾಗಿರಬೇಕು.

ಅಂಗನವಾಡಿ ಸಹಾಯಕಿ(Anganwadi Helper): ಕನಿಷ್ಠ 10ನೇ ತರಗತಿ (ಎಸ್‌ಎಸ್‌ಎಲ್‌ಸಿ) ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ: Free Bus-ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಸ್ಮಾರ್ಟ್ ಕಾರ್ಡ!

anganwadi recruitment

Age Limit-ವಯೋಮಿತಿ:

ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಒಳಗಿರಬೇಕು.

ಸರ್ಕಾರಿ ನಿಯಮಗಳಂತೆ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿರುತ್ತದೆ.

Candidate selection method-ಅಭ್ಯರ್ಥಿಯ ಆಯ್ಕೆ ವಿಧಾನ:

ಅಭ್ಯರ್ಥಿಗಳ ಆಯ್ಕೆಯು ಮೆರಿಟ್ ಲಿಸ್ಟ್ (ಅಂಕಗಳ ಆಧಾರದ ಮೇಲಿನ ಶ್ರೇಯಾಂಕ ಪಟ್ಟಿ) ಮೂಲಕ ನಡೆಯಲಿದೆ. ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: Home Documents-ಮನೆ ಖರೀದಿಸುವಾಗ ಈ 6 ದಾಖಲೆಗಳನ್ನು ತಪ್ಪದೇ ಪರಿಶೀಲಿಸಿ!

Anganwadi Job Apply Method-ಅರ್ಜಿ ಸಲ್ಲಿಕೆ ವಿಧಾನ:

ಅರ್ಹ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್‌ಸೈಟ್ karnemakaone.kar.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯು 18 ಏಪ್ರಿಲ್ 2025 ರಿಂದ 20 ಮೇ 2025 ರವರೆಗೆ ಲಭ್ಯವಿರುತ್ತದೆ.

Anganwadi Recruitment Online Application-ಅರ್ಜಿ ಸಲ್ಲಿಸುವ ಹಂತಗಳು:

Step-1: ವೆಬ್‌ಸೈಟ್ ಭೇಟಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: Apply Now

Step-2: ಲಾಗಿನ್/ನೋಂದಣಿ: ಈಗಾಗಲೇ ನೋಂದಾಯಿಸಿದವರು ತಮ್ಮ ಬಳಕೆದಾರ ಹೆಸರು ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಮಾಡಿ.

Step-3: ಹೊಸ ಬಳಕೆದಾರರು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.

Step-4: ಅರ್ಜಿ ಭರ್ತಿ: ಅಗತ್ಯ ವಿವರಗಳನ್ನು ಭರ್ತಿ ಮಾಡಿ.

ಇದನ್ನೂ ಓದಿ: Monsoon Forecast-ಹಮಾಮಾನ ಇಲಾಖೆಯಿಂದ ಮುಂಗಾರು ಮಳೆ ಕುರಿತು ರೈತರಿಗೆ ಶುಭಸುದ್ದಿ!

Step-5: ದಾಖಲೆ ಅಪ್‌ಲೋಡ್: ಇತ್ತೀಚಿನ ಛಾಯಾಚಿತ್ರ, ಸಹಿ, ಮತ್ತು ಇತರ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

Step-6: ಅರ್ಜಿ ಶುಲ್ಕ: ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು (ಅನ್ವಯವಾದರೆ) ಆನ್‌ಲೈನ್ ಮೂಲಕ ಪಾವತಿಸಿ.

Step-7: ಅಂತಿಮ ಸಲ್ಲಿಕೆ: ಎಲ್ಲಾ ವಿವರಗಳನ್ನು ಪರಿಶೀಲಿಸಿದ ನಂತರ ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಓದಿ: Agriculture Loan-ಬೆಳೆ ಸಾಲವನ್ನು ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

Important Points-ಗಮನಿಸಬೇಕಾದ ಅಂಶಗಳು:

  • ಅಭ್ಯರ್ಥಿಗಳು ನೇರವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರ ಅರ್ಜಿಯನ್ನು ಸಲ್ಲಿಸಬೇಕು.
  • ಎಲ್ಲಾ ದಾಖಲೆಗಳನ್ನು ಸರಿಯಾದ ಸ್ವರೂಪದಲ್ಲಿ (format) ಮತ್ತು ಗಾತ್ರದಲ್ಲಿ (size) ಅಪ್‌ಲೋಡ್ ಮಾಡಿ.
  • ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಅಥವಾ ಸಂಬಂಧಿತ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಿ.

Anganavadi Online Application Link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ: Apply Now
Anganavadi Recruitment Guidelines- ಅಧಿಕೃತ ಮಾರ್ಗಸೂಚಿಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ: Download Now

WhatsApp Group Join Now
Telegram Group Join Now
Share Now: