- Advertisment -
HomeGovt SchemesAnganwadi Jobs-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ 491 ಹುದ್ದೆಗಳಿಗೆ ಅರ್ಜಿ ಆಹ್ವಾನ!

Anganwadi Jobs-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ 491 ಹುದ್ದೆಗಳಿಗೆ ಅರ್ಜಿ ಆಹ್ವಾನ!

ರಾಜ್ಯ ಸರಕಾರದಡಿ ಗ್ರಾಮೀಣ ಮಟ್ಟದಲ್ಲಿ ಸಣ್ಣ ಮಕ್ಕಳಿಗೆ ಶಿಕ್ಷಣವನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಅಂಗನವಾಡಿ ಕೇಂದ್ರಗಳನ್ನು(Anganwadi Center Jobs) ನಡೆಸಲಾಗಿದ್ದು ಇಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ 491 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಂಗನವಾಡಿ ಕೇಂದ್ರಗಳಲ್ಲಿ(Anganawadi Workers) ಕಾಲ ಕಾಲಕ್ಕೆ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಭರ್ತಿಯನ್ನು ಮಾಡಲಾಗುತ್ತದೆ.

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ(Anganawadi Helper Recruitment) ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅರ್ಹತೆಗಳೇನು? ಪ್ರಸ್ತುತ ಯಾವ ಜಿಲ್ಲೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನದ ವಿವರಣೆ ಸೇರಿದಂತೆ ಇನ್ನಿತರೆ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Loan Application- ಬ್ಯಾಂಕ್ ನಿಂದ ಸಾಲ ಪಡೆಯುವುದು ಈಗ ಭಾರೀ ಸುಲಭ!

Anganwadi Job Notification-491 ಹುದ್ದೆಗಳಿಗೆ ಅರ್ಜಿ ಆಹ್ವಾನ:

ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಉತ್ತರಕನ್ನಡ(Uttarakannada Anganwadi Jobs) ಜಿಲ್ಲೆಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ ಒಟ್ಟು 491 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ತಾಲ್ಲೂಕುವಾರು ಖಾಲಿಯಿರುವ ಹುದ್ದೆಗಳ ಮಾಹಿತಿ ಈ ಕೆಳಗೆ ತಿಳಿಸಲಾಗಿದೆ.

ಇದನ್ನೂ ಓದಿ: Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

Anganawadi Recruitment Vacancy Details-ತಾಲ್ಲೂಕುವಾರು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆ ವಿವರ:

1) ಅಂಕೋಲಾ- 25
2) ಭಟ್ಕಳ- 30
3) ದಾಂಡೇಲಿ- 20
4) ಹೊನ್ನಾವರ- 48
5) ಕಾರವಾರ- 20
6) ಕುಮಟಾ- 42
7) ಮುಂಡಗೋಡ- 48
8) ಸಿದ್ದಾಪುರ- 44
9) ಶಿರಸಿ- 93
10) ಜೋಯಿಡಾ- 43
11) ಯಲ್ಲಾಪುರ- 31
12) ಹಳಿಯಾಳ- 36

ಒಟ್ಟು ಎಲ್ಲಾ ಸೇರಿ- 115 ಅಂಗನವಾಡಿ ಕಾರ್ಯಕರ್ತೆ ಮತ್ತು 376 ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!

Anganwadi worker

Eligibility Criteria For Anganawadi Recruitment-ಅರ್ಜಿ ಸಲ್ಲಿಸಲು ಅರ್ಹತೆಗಳು:

1) ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

1) ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 2nd PUC ಉತ್ತಿರ್ಣರಾಗಿರಬೇಕು.

1) ಅಂಗನವಾಡಿ ಸಹಾಯಕಿ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ 10ನೇ ತರಗತಿ ಉತ್ತಿರ್ಣರಾಗಿರಬೇಕು.

Age Limit-ಅರ್ಜಿ ಸಲ್ಲಿಸಲು ವಯೋಮಿತಿ:

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುವ ಅಭ್ಯರ್ಥಿಗಳು ಕನಿಷ್ಠ 19 ವರ್ಷದಿಂದ 35 ವರ್ಷದ ವಯೋಮಿತಿಯಲ್ಲಿರಬೇಕು.

ಇದನ್ನೂ ಓದಿ: Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

How to apply-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಎರಡು ವಿಧಾನ ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹಳ್ಳಿಯ ಗ್ರಾಮ ಒನ್/ಕರ್ನಾಟಕ ಒನ್ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನೇರವಾಗಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ನಿಮ್ಮ ಮೊಬೈಲ್ ನಲ್ಲೇ ಅರ್ಜಿಯನ್ನು ಸಲ್ಲಿಸಬಹುದು.

Required Documents For Anganwadi Job-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

  • ಅಭ್ಯರ್ಥಿಯ ಆಧಾರ್‌ ಕಾರ್ಡ್
  • ನಿವಾಸ ದೃಢೀಕರಣ ಪ್ರಮಾಣ ಪತ್ರ್
  • 10ನೇ ತರಗತಿ ಅಂಕಪಟ್ಟಿ(ಅಂಗನವಾಡಿ ಸಹಾಯಕಿ)
  • 12th ತರಗತಿ ಅಂಕಪಟ್ಟಿ(ಅಂಗನವಾಡಿ ಕಾರ್ಯಕರ್ತೆ)
  • ಫೋಟೋ ಮತ್ತು ಅಭ್ಯರ್ಥಿಯ ಸಹಿ
  • ಜಾತಿ ಪ್ರಮಾಣ ಪತ್ರ (ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ)
  • ಮೊಬೈಲ್ ನಂಬರ್

ಇದನ್ನೂ ಓದಿ: Bhagyalaxmi Bond-ಭಾಗ್ಯಲಕ್ಷ್ಮಿ ಬಾಂಡ್ 18 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ₹1 ಲಕ್ಷ ಹಣ ಜಮಾ! ಯಾರಿಗೆಲ್ಲ ಸಿಗಲಿದೆ ಈ ಸೌಲಭ್ಯ?

Online Application Link For Anganwadi Jobs-ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಈ ಕೆಳಗಿನ ಹಂತಗಳನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಮೊಟ್ಟ ಮೊದಲಿಗೆ ಈ Apply Now ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಇದಾದ ನಂತರ ಈ ಪೇಜ್ ನಲ್ಲಿ “ಹಂತ-1/Step-1 : Submit Application for the post of Anganawadi Worker/Mini Anganawadi Workers/Anganawadi Helper ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆಯರು/ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ “Uttara Kannada” ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ನಂತರ ತಾಲ್ಲೂಕು, ಅಧಿಸೂಚನೆ ಸಂಖ್ಯೆ, ಹುದ್ದೆ, ಸೆಲೆಕ್ಟ್ ಮಾಡಿ “Submit” ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದಾದ ಬಳಿಕ ಈ ಪೇಜ್ ನಲ್ಲಿ ಜಿಲ್ಲೆ ಅಯ್ಕೆ ಮಾಡಿ ಕಾಲಂ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು, ಪ್ರಾಜೆಕ್ಟ್ ಆಯ್ಕೆ ಮಾಡಿ ಕ್ಲಿಕ್ ಮಾಡಿ, ಹುದ್ದೆಯನ್ನು ಆಯ್ಕೆ ಮಾಡಿಕೊಂಡು, ಅಭ್ಯರ್ಥಿಯ ವರ್ಗ ಸೆಲೆಕ್ಟ್ ಮಾಡಿ “Submit” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ನಂತರ ಈ ಪೇಜ್ ನಲ್ಲಿ “Please select the vacancy as per your choice” ಕಾಲಂ ನಲ್ಲಿ “Select Vacancy” ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ “Preview” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-4: ನಂತರ ನಿಮ್ಮ ಪೋಟೋ, ಸಹಿ ಅಪ್ಲೋಡ್ ಮಾಡಲು ಹಿಂದಿನ ಪೇಜ್ ಅನ್ನು ಪ್ರವೇಶ ಮಾಡಿ “Upload Your Photo,Signature/ನಿಮ್ಮ ಭಾವ ಚಿತ್ರ, ಸಹಿ ಅಪ್ಲೋಡ್ ಮಾಡಲು” ಬಟನ್ ಮೇಲೆ ಕ್ಲಿಕ್ ಮಾಡಿ ಅಪ್ಲೋಡ್ ಮಾಡಬೇಕು.

Step-5:  ಬಳಿಕ ಇದೇ ಪೇಜ್ ನಲ್ಲಿ “Upload Documents/ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್ ಮಾಡಿ” ಕ್ಲಿಕ್ ಮಾಡಿ ಡಾಕ್ಯುಮೆಂಟ್‌ಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Print Application/ಅರ್ಜಿ ಮುದ್ರಿಸಲು” ಬಟನ್ ಮೇಲೆ ಕ್ಲಿಕ್ ಅರ್ಜಿಯನ್ನು Print ತೆಗೆದುಕೊಳ್ಳಬಹುದು.

Online Application User Manual-ಅರ್ಜಿ ಸಲ್ಲಿಸುವ ವಿಧಾನದ ಸಂಪೂರ್ಣ ಕೈಪಿಡಿಯನ್ನು ಡೌನ್ಲೋಡ್ ಮಾಡಲು ವೆಬ್ಸೈಟ್ ಲಿಂಕ್ : Download Now

Anganwadi Jobs Guidelines-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳ ಭರ್ತಿಗೆ ಅಧಿಕೃತ ಮಾರ್ಗಸೂಚಿಗಳು: Download Now

- Advertisment -
LATEST ARTICLES

Related Articles

- Advertisment -

Most Popular

- Advertisment -