Anganwadi Recruitment-ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

March 27, 2025 | Siddesh
Anganwadi Recruitment-ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!
Share Now:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ(Anganwadi Recruitment) ಕಾರ್ಯನಿರ್ವಹಿಸಲು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಾಜ್ಯಾದ್ಯಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ(Anganwadi Center) ಮಕ್ಕಳಿಗೆ ಪಾಠ ಮತ್ತು ಇನ್ನಿತರೆ ಚಟುವಟಿಕೆಗಳನ್ನು ನಡೆಸಿಕೊಂಡು ಹೋಗಲು ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

ಪ್ರಸ್ತುತ ಯಾವೆಲ್ಲ ಜಿಲ್ಲೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ? ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಮೊಬೈಲ್ ನಲ್ಲೇ ಮನೆಯಲ್ಲಿ ಕುಳಿತು ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳು ಯಾವುವು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ.

Anganwadi Notification-ಪ್ರಸ್ತುತ ಯಾವೆಲ್ಲ ಜಿಲ್ಲೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ?

ಜಿಲ್ಲಾವಾರು ಖಾಲಿಯಿರುವ ಹುದ್ದೆಗಳಿಗೆ ಅನುಗುಣವಾಗಿ ಕಾಲ ಕಾಲಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ ಇದರಂತೆ ಪ್ರಸ್ತುತ ದಾವಣಗೆರೆ, ಬೆಂಗಳೂರು, ಕಾರವಾರ ಜಿಲ್ಲೆಯಲ್ಲಿ ಒಟ್ಟು ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: Bele Parihara-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

Documents For Anganwadi Worker-ಅರ್ಜಿ ಸಲ್ಲಿಸಲು ದಾಖಲೆಗಳು:

ಅರ್ಜಿದಾರರ ಆಧಾರ್ ಕಾರ್ಡ
ಪೋಟೋ
ವಿದ್ಯಾರ್ಹತೆ ಅಂಕಪಟ್ಟಿ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಮೊಬೈಲ್ ನಂಬರ್

Anganwadi Worker Salary-ಮಾಸಿಕ ವೇತನ:

ಅಂಗನವಾಡಿ ಕಾರ್ಯಕರ್ತೆ- ₹11,250/-
ಅಂಗನವಾಡಿ ಸಹಾಯಕಿ- ₹6,500/-

ಇದನ್ನೂ ಓದಿ: Gruhalakshmi Yojane-2025: ಒಂದೇ ಬಾರಿಗೆ ಎರಡು ಕಂತಿನ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ದಿನಾಂಕ ನಿಗದಿ!

anganavadi application

Online Application For Anganwadi Recruitment-ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ವಿಧಾನ:

Step-1: ಪ್ರಥಮದಲ್ಲಿ Anganwadi Online Application ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಪ್ರವೇಶ ಮಾಡಬೇಕು

Step-2: ತದನಂತರ ಈ ಪೇಜ್ ನಲ್ಲಿ "ಹಂತ-1/Step-1 : Submit Application for the post of Anganawadi Worker/Mini Anganawadi Workers/Anganawadi Helper ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆಯರು/ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ "Uttara Kannada" ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ನಂತರ ತಾಲ್ಲೂಕು, ಅಧಿಸೂಚನೆ ಸಂಖ್ಯೆ, ಹುದ್ದೆ, ಸೆಲೆಕ್ಟ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಮೇಲಿನ ಹಂತ ಮುಗಿಸಿದ ಬಳಿಕ ಈ ಪೇಜ್ ನಲ್ಲಿ ಜಿಲ್ಲೆ ಅಯ್ಕೆ ಮಾಡಿ ಕಾಲಂ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು, ಪ್ರಾಜೆಕ್ಟ್ ಆಯ್ಕೆ ಮಾಡಿ ಕ್ಲಿಕ್ ಮಾಡಿ, ಹುದ್ದೆಯನ್ನು ಆಯ್ಕೆ ಮಾಡಿಕೊಂಡು, ಅಭ್ಯರ್ಥಿಯ ವರ್ಗ ಸೆಲೆಕ್ಟ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: Voter ID-ವೋಟರ್ ಐಡಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Step-3: ಬಳಿಕ ಈ ಪೇಜ್ ನಲ್ಲಿ "Please select the vacancy as per your choice" ಕಾಲಂ ನಲ್ಲಿ "Select Vacancy" ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ "Preview" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-4: ತದನಂತರ ನಿಮ್ಮ ಪೋಟೋ, ಸಹಿ ಅಪ್ಲೋಡ್ ಮಾಡಲು ಹಿಂದಿನ ಪೇಜ್ ಅನ್ನು ಪ್ರವೇಶ ಮಾಡಿ "Upload Your Photo,Signature/ನಿಮ್ಮ ಭಾವ ಚಿತ್ರ, ಸಹಿ ಅಪ್ಲೋಡ್ ಮಾಡಲು" ಬಟನ್ ಮೇಲೆ ಕ್ಲಿಕ್ ಮಾಡಿ ಅಪ್ಲೋಡ್ ಮಾಡಬೇಕು.

Step-5:  ಕೊನೆಯಲ್ಲಿ ಇದೇ ಪೇಜ್ ನ "Upload Documents/ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್ ಮಾಡಿ" ಕ್ಲಿಕ್ ಮಾಡಿ ಡಾಕ್ಯುಮೆಂಟ್‌ಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Print Application/ಅರ್ಜಿ ಮುದ್ರಿಸಲು" ಬಟನ್ ಮೇಲೆ ಕ್ಲಿಕ್ ಅರ್ಜಿಯನ್ನು Print ತೆಗೆದುಕೊಳ್ಳಬಹುದು.

ಇದನ್ನೂ ಓದಿ: Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!

Eligibility Criteria For Anganawadi Recruitment-ಅರ್ಜಿ ಸಲ್ಲಿಸಲು ಅರ್ಹತೆಗಳು:

ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ ದ್ವಿತೀಯ ಪಿಯುಸಿ ಉತ್ತಿರ್ಣರಾಗಿರಬೇಕು.

ಅಂಗನವಾಡಿ ಸಹಾಯಕಿ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ SSLC ಉತ್ತಿರ್ಣರಾಗಿರಬೇಕು.

WhatsApp Group Join Now
Telegram Group Join Now
Share Now: