Anganwadi worker-2024: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

September 17, 2024 | Siddesh
Anganwadi worker-2024: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!
Share Now:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಶಿಕ್ಷಣ ಇತರೆ ಚಟುವಟಿಕೆಗಳನ್ನು ನಡೆಸಿಕೊಂಡು ಹೋಗಲು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ(Anganwadi job application)ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅರ್ಜಿದಾರರು ತಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವು ಹೇಗೆ ಎನ್ನುವ ಮಾಹಿತಿಯನ್ನು ಸಹ ಈ ಲೇಖನದಲ್ಲಿ ವಿವರಿಸಲಾಗಿದೆ.

ರಾಜ್ಯದ ಕೆಲವು ಆಯ್ದ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಇತರೆ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ.

ಇದನ್ನೂ ಓದಿ: PM Maandhan Yojana-2024: ಕೇಂದ್ರದ ಈ ಯೋಜನೆಯಡಿ ಪ್ರತಿ ತಿಂಗಳು ಸಿಗುತ್ತೆ ರೂ 3,000! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

anganwadi worker job application online- ಪ್ರಸ್ತುತ ಯಾವೆಲ್ಲ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ?

1 ಚಿಕ್ಕಮಂಗಳೂರು/chikkamangalore

2) ದಕ್ಷಿಣಕನ್ನಡ/Dakshinakannada

3) ಧಾರವಾಡ/Dharwad

4) ಗದಗ/Gadag

5) ಮಂಡ್ಯ/Mandya

6) ಉಡುಪಿ/Udupi

7) ಚಿಕ್ಕಬಳ್ಳಾಪುರ/chikkaballapura

8) ರಾಮನಗರ/Ramanagara

ಇದನ್ನೂ ಓದಿ: Akrama-sakrama yojane- ರಾಜ್ಯ ಸರಕಾರದಿಂದ ರೈತರಿಗೆ ಸಿಹಿಸುದ್ದಿ! ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ ಯೋಜನೆ!

Documents-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು?

1) ಆಧಾರ್‌ ಕಾರ್ಡ್‌ ಪ್ರತಿ.

2) ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ.

3) 10ನೇ ತರಗತಿ ಅಂಕಪಟ್ಟಿ(ಅಂಗನವಾಡಿ ಸಹಾಯಕ)

ಇದನ್ನೂ ಓದಿ: labour card- ಕಾರ್ಮಿಕ ಕಾರ್ಡ ನೋಂದಣಿಗೆ ವೆಬ್ಸೈಟ್ ಲಿಂಕ್ ಬಿಡುಗಡೆ!

4) 12th ತರಗತಿ ಅಂಕಪಟ್ಟಿ(ಅಂಗನವಾಡಿ ಟೀಚರ್)

5) ಫೋಟೋ & ಸಹಿ & ಮೈಲ್‌ ಐಡಿ

6) ಜಾತಿ ಪ್ರಮಾಣ ಪತ್ರ (SC, STಆಗಿದ್ದಲ್ಲಿ)

ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ:

ಈ ಕೆಳಗೆ ತಿಳಿಸಲಾಗಿರುವ ವಿಧಾನವನ್ನು ಅನುಸರಿಸಿ ಅರ್ಹ ಅರ್ಜಿದಾರರು ಅಗತ್ಯ ವಿವರಗಳನ್ನು ಭರ್ತಿ ಮಾಡಿ ತಮ್ಮ ಮೊಬೈಲ್ ನಲ್ಲೇ ಕೊನೆಯ ದಿನಾಂಕ ಮುಕ್ತಾಯಯಾಗುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Health insurance scheme- 2024: ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ!

Step-1: ಪ್ರಥಮದಲ್ಲಿ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಜಿಲ್ಲೆ ಅಯ್ಕೆ ಮಾಡಿ ಕಾಲಂ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು, ಪ್ರಾಜೆಕ್ಟ್ ಆಯ್ಕೆ ಮಾಡಿ ಕ್ಲಿಕ್ ಮಾಡಿ, ಹುದ್ದೆಯನ್ನು ಆಯ್ಕೆ ಮಾಡಿಕೊಂಡು, ಅಭ್ಯರ್ಥಿಯ ವರ್ಗ ಸೆಲೆಕ್ಟ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಇಲ್ಲಿ ಹುದ್ದೆಯ ಹೆಸರಿನ ಮುಂದೆ ಟಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: Railway jobs - ರೈಲ್ವೆ ಇಲಾಖೆಯಲ್ಲಿ 8,113 ಹುದ್ದೆಗಳ ಭರ್ತಿ!

Step-4:  ಈ Click here ಲಿಂಕ್ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿಯ ಸಹಿ ಸಹಿತ ಪೋಟೋ ಅಪ್ಲೋಡ್ ಮಾಡಬೇಕು.

Step-5: ಇಲ್ಲಿ ಕ್ಲಿಕ್ ಮಾಡಿ ಅಗತ್ಯ ದಾಖಲೆಗಳಾನ್ನು ಅಪ್ಲೋಡ್ ಮಾಡಬೇಕು.

Step-6: ಕೊನೆಯಲ್ಲಿ ಮೇಲಿನ ಎಲ್ಲಾ ಹಂತಗಳನ್ನು ಪೂರ್ಣಗೊಳಿಸಿದ ಬಳಿಕ ಈ Download applicatiion ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಅರ್ಜಿಯ ಪ್ರಿಂಟ್ ತೆಗೆದುಕೊಳ್ಳಬಹುದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನದ ಸಂಪೂರ್ಣ ಮಾಹಿತಿಯ ಕೈಪಿಡಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ: Download Now

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆ ಭರ್ತಿಗೆ ಅಧಿಕೃತ ಮಾರ್ಗಸೂಚಿಗಳು: Download Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: