Breaking News:
LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ! Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000! Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!
HomeNew postsBPL ಮತ್ತು APL​​​ ಕಾರ್ಡ್​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್! ಮಿಸ್ ಮಾಡ್ದೆ ಸುದ್ದಿ ನೋಡಿ.

BPL ಮತ್ತು APL​​​ ಕಾರ್ಡ್​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್! ಮಿಸ್ ಮಾಡ್ದೆ ಸುದ್ದಿ ನೋಡಿ.

ರಾಜ್ಯ ಸರಕಾರದಿಂದ ಗ್ಯಾರಂಟಿ ಯೋಜನೆಗಳ ಜಾರಿಯ ನಂತರ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ರೇಷನ್ ಕಾರ್ಡನಲ್ಲಿ ನಮೂದಿಸಿರುವ ವಿವರಗಳು ಸರಿಯಾಗಿರುವುದು ಕಡ್ಡಾಯವಾಗಿರುತ್ತದೆ.

ಈ ಎಲ್ಲಾ ಕಾರಣಗಳಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರು ಸಂಖ್ಯೆಯು ಹೆಚ್ಚಿರುವುದರಿಂದ ರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಮತ್ತೊಮ್ಮೆ ಹೆಚ್ಚುವರಿ 9 ದಿನಗಳವರೆಗೆ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

ಕಳೆದ ತಿಂಗಳು ಬಿಪಿಎಲ್, ಎಪಿಎಲ್ ಕಾರ್ಡ್ ತಿದ್ದುಪಡಿಗೆ ಇಲಾಖೆಯಿಂದ ಅವಕಾಶ ನೀಡಿತ್ತು. ಅತೀ ಹೆಚ್ಚು ಅರ್ಜಿದಾರರಿಂದ ಸರ್ವರ್ ಸಮಸ್ಯೆ ಸೇರಿದಂತೆ ವಿವಿಧ ಕಾರಣಕ್ಕೆ ತಿದ್ದುಪಡಿ, ಹೆಸರು ಸೇರ್ಪಡೆಗೆ ಪಡಿತರ ಚೀಟಿದಾರರಿಗೆ ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಅಕ್ಟೋಬರ್ 5 ರಿಂದ ಅಕ್ಟೋಬರ್ 13 ರವರೆಗೆ ಮತ್ತೆ 9 ದಿನಗಳ ಕಾಲ ತಿದ್ದುಪಡಿ ಮತ್ತು ಪಡಿತರ ಚೀಟಿಗೆ ಹೊಸ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ.

ಈ ಮಾಹಿತಿಯನ್ನು ತಪ್ಪದೇ ಇತರರಿಗೂ ಶೇರ್ ಮಾಡಿ ಏಕೆಂದರೆ ಪಡಿತರ ಚೀಟಿ ತಿದ್ದುಪಡಿ ಮಾಡಿಕೊಳ್ಳದ ಗ್ರಾಹಕರಿಗೆ ಈ ಮಾಹಿತಿ ಸಹಕಾರಿಯಾಗಿದೆ.

ಇದನ್ನೂ ಓದಿ: ಒಂದು ಭಾರಿಯು ಅನ್ನಭಾಗ್ಯ ಯೋಜನೆಯಡಿ ಹಣ ಜಮಾ ಅಗಿಲ್ಲವೇ? ಇಲ್ಲಿದೆ ಸೂಕ್ತ ಪರಿಹಾರ ಕ್ರಮಗಳು.

ration card application date-ವಿಭಾಗವಾರು ಅರ್ಜಿ ಸಲ್ಲಿಕೆ ದಿನಾಂಕ ನಿಗದಿ ಮಾಡಲಾಗಿದೆ:

ಈ ಕುರಿತಂತೆ ಆಹಾರ ಇಲಾಖೆಯ ಹೆಚ್ಚುವರಿ ನಿರ್ದೇಶ ಘ್ಯಾನೇಂದ್ರ ಅವರು ಮಾಹಿತಿ ನೀಡಿದ್ದು, ಅಕ್ಟೋಬರ್ 5ರ ಇಂದಿನಿಂದ ಅ.13ರವರೆಗೆ ಮತ್ತೆ ಬಿಪಿಎಲ್, ಎಪಿಎಲ್ ಕಾರ್ಡ್ ಗಳಲ್ಲಿನ ತಿದ್ದುಪಡಿ, ಸೇರ್ಪಡೆಗೆ ಅವಕಾಶ ನೀಡಲಾಗಿದ್ದು. ಆದರೆ ರಾಜ್ಯಾದ್ಯಂತ ಏಕಕಾಲಕ್ಕೆ ಅವಕಾಶ ನೀಡಲಾಗಿಲ್ಲ ಬದಲಾಗಿ ತಲಾ ಮೂರು ದಿನಗಳಂತೆ ವಿಭಾಗವಾರು ಅವಕಾಶ ನೀಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ration card application- ಯಾವ ಯಾವ ಜಿಲ್ಲೆಗಳಲ್ಲಿ ಯಾವ ದಿನ ತಿದ್ದುಪಡಿಗೆ ಅರ್ಜಿ ಸ್ವೀಕರಿಸಲಾಗುತ್ತದೆ?

ಮೊದಲ ಹಂತದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿನ BPL, APL ಕಾರ್ಡ್ ದಾರರಿಗೆ ಅಕ್ಟೋಬರ್ 5 ಇಂದಿನಿಂದ 7ರವರೆಗೆ ಅವಕಾಶ ನೀಡಲಾಗಿದೆ. ಈ ಜಿಲ್ಲೆಯ ಪಡಿತರ ಚೀಟಿದಾರರು ತಿದ್ದುಪಡಿ ಮತ್ತು ಹೊಸ ಸದಸ್ಯರ ಸೆರ್ಪಡೆಗೆ ಅರ್ಜಿ ಸಲ್ಲಿಸಬವುದು.

ಬೆಳಗ್ಗೆ 10 ರಿಂದ ರಾತ್ರಿ 7 ಗಂಟೆಯವರೆಗೆ ತಿದ್ದುಪಡಿ, ಸೇರ್ಪಡೆಗೆ ಅವಕಾಶ ನೀಡಲಾಗಿದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಇದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Gruhalakshmi amount- ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ?

ಎರಡನೇ ಹಂತದಲ್ಲಿ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಹಾವೇರಿ, ಹಾಸನ, ಗದಗ, ಮೈಸೂರು, ವಿಜಯಪುರ, ಉತ್ತರ ಕನ್ನಡ, ಉಡುಪಿ ಸೇರಿದಂತೆ 15 ಜಿಲ್ಲೆಗಳ ರೇಷನ್ ಕಾರ್ಡ್ ದಾರರಿಗೆ ಅವಕಾಶ ನೀಡಲಾಗಿದ್ದು. ಅಕ್ಟೋಬರ್ 8 ಇಂದಿನಿಂದ 10ರವರೆಗೆ ಅವಕಾಶ ನೀಡಲಾಗಿದೆ.

ಮೂರನೇ ಹಂತದಲ್ಲಿ ಬೀದರ್, ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಶಿವಮೊಗ್ಗ, ರಾಮನಗರ, ಯಾದಗಿರಿ, ತುಮಕೂರು, ವಿಜಯನಗರ ಸೇರಿದಂತೆ ಒಟ್ಟು 14 ಜಿಲ್ಲೆಗಳ ರೇಷನ್ ಕಾರ್ಡ್ ದಾರರಿಗೆ ಅಕ್ಟೋಬರ್ 11ರಿಂದ 13ರವರೆಗೆ ತಿದ್ದುಪಡಿ, ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ಮಾಡಿಕೊಡಲಾಗಿದೆ.

Ration card tiddupadi- ತಿದ್ದುಪಡಿ ಅರ್ಜಿ ಸ್ಥಿತಿ ಚೆಕ್ ಮಾಡುವ ವಿಧಾನ:

ಇಲ್ಲಿ ಕ್ಲಿಕ್ ಮಾಡಿ> ration card application status check ಈ ಅಂಕಣದಲ್ಲಿ ವಿವರಿಸಿರುವ ವಿಧಾನವನ್ನು ಅನುಸರಿಸಿ ಈಗಾಗಲೇ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಿದರೆ ನಿಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂದು ನಿಮ್ಮ ಮೊಬೈಲಲ್ಲೇ ಅರ್ಜಿ ಸ್ಥಿತಿ ಚೆಕ್ ಮಾಡಿಕೊಳ್ಳಬವುದಾಗಿದೆ.

ಇದನ್ನೂ ಓದಿ: PM-kisan amount- ಈ ರೀತಿ  ಸಂದೇಶ ಬಂದವರಿಗಿಲ್ಲಾ ಪಿ ಎಂ ಕಿಸಾನ್ ಯೋಜನೆ ಹಣ!

Most Popular

Latest Articles

- Advertisment -

Related Articles