Ashraya Vasati Yojana-ಆಶ್ರಯ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 2.0 ಲಕ್ಷ ಸಹಾಯಧನ!

December 30, 2025 | Siddesh
Ashraya Vasati Yojana-ಆಶ್ರಯ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 2.0 ಲಕ್ಷ ಸಹಾಯಧನ!
Share Now:

ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವತಿಯಿಂದ ಸ್ವಂತ ಮನೆ ಕಟ್ಟಿಸಬೇಕೆನ್ನುವ ಆಸೆ ಇರುವವರಿಗೆ ಆಶ್ರಯ ವಸತಿ ಯೋಜನೆಯ(Ashraya Vasati Yojana) ಅಡಿಯಲ್ಲಿ ಮನೆ ನಿರ್ಮಾಣ ಮಾಡಲು 2 ಲಕ್ಷ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇಂದಿನ ಕಾಲದಲ್ಲಿ ಪ್ರತಿಯೊಬ್ಬ ಮನುಷ್ಯನು ತನ್ನದೇ ಆದ ಸ್ವಂತ ಮನೆಯನ್ನು ಹೊಂದಿರಬೇಕು ಎನ್ನುವ ಆಸೆ ಇರುತ್ತದೆ ಹಾಗೆಯೇ ಪ್ರತಿಯೊಬ್ಬರ ಜೀವನದಲ್ಲೂ ಇದು ಕನಸಾಗಿರುತ್ತದೆ. ಸ್ವಂತ ಮನೆಯ ಕನಸನ್ನು ನನಸಾಗಿಸಿಕೊಳ್ಳಲು ಸರ್ಕಾರವು ಆರ್ಥಿಕ ಸಹಾಯಧನವನ್ನು(Vasati Yojane) ನೀಡಲು ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ: Solar Pumpset Helpline-ಸೋಲಾರ್ ಪಂಪ್ ಸೆಟ್ ಸಹಾಯಧನ ಪಡೆಯಲು ಸಹಾಯವಾಣಿ ಸ್ಥಾಪನೆ!

ಈ ಅಂಕಣದಲ್ಲಿ ಸಹಾಯಧನವನ್ನು(Vasati Yojane Subsidy) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?ಈ ಯೋಜನೆಯ ಅಡಿಯಲ್ಲಿ ಎಷ್ಟು ಸಹಾಯಧನವನ್ನು ನೀಡಲಾಗುತ್ತದೆ? ಅರ್ಜಿಯನ್ನು ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳಾವುವು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

What Is Ashraya Yojana-ಆಶ್ರಯ ವಸತಿ ಯೋಜನೆ ಎಂದರೇನು?

ಈ ಯೋಜನೆಯು ಕರ್ನಾಟಕ ಸರ್ಕಾರದ ಪ್ರಮುಖ ಸಾಮಾಜಿಕ ಕಲ್ಯಾಣ ಯೋಜನೆಯಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶದ ಬಡ ಹಾಗೂ ಮದ್ಯಮ ವರ್ಗದ ಕುಟುಂಬಗಳಿಗೆ ಸ್ವಂತ ಮನೆಯನ್ನು ನಿರ್ಮಾಣ ಮಾಡಲು ಆರ್ಥಿಕ ನೆರವು ಒದಗಿಸುವ ಉದ್ದೇಶ ಈ ಯೋಜನೆಯದ್ದಾಗಿದೆ. ಸ್ವಂತ ಮನೆ ಇಲ್ಲದವರು ಸುರಕ್ಷಿತ ಮತ್ತು ಗೌರವಯುತ ಜೀವನ ನಡೆಸಲು ಈ ಯೋಜನೆ ಅತ್ಯಂತ ಸಹಾಯಕಾರಿಯಾಗಿದೆ.

ಇದನ್ನೂ ಓದಿ: Federal Bank Scholarship-ಫೆಡರಲ್ ಬ್ಯಾಂಕ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅವಕಾಶ!

Ashraya Vasati Yojana Subsidy Amount-ಮನೆ ನಿರ್ಮಾಣ ಮಾಡಲು ಎಷ್ಟು ಸಹಾಯಧನವನ್ನು ನೀಡಲಾಗುತ್ತದೆ?

ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವತಿಯಿಂದ ಆಶ್ರಯ ವಸತಿ ಯೋಜನೆಯ ಅಡಿಯಲ್ಲಿ ಮನೆ ನಿರ್ಮಾಣ ಮಾಡಲು ಸಹಾಯಧನ ಈ ಕೆಳಗಿನಂತಿದೆ:

  • ಸಾಮಾನ್ಯ ವರ್ಗದವರಿಗೆ: 1.2 ಲಕ್ಷ ರೂ ಗಳು
  • ನಗರ ಪ್ರದೇಶದವರಿಗೆ : 2 ಲಕ್ಷ ರೂ ಗಳು
  • ಪರಿಶಿಷ್ಟ ಜಾತಿ/ಪರಿಶ್ಟ ಪಂಗಡದವರಿಗೆ : 1.75 ಲಕ್ಷ ರೂ ಗಳನ್ನು ಸಹಾಯಧನವನ್ನಾಗಿ ನೀಡಲಾಗುತ್ತದೆ.

ಇದನ್ನೂ ಓದಿ: Aadhaar Update-ಮಕ್ಕಳ ಆಧಾರ್ ಕಾರ್ಡಗೆ ಬಯೋ ಮೆಟ್ರಿಕ್ ನವೀಕರಣ! ತಪ್ಪದೇ ಈ ಮಾಹಿತಿ ತಿಳಿಯಿರಿ!

Who Can Apply-ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಹರು?

ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು.
ಸ್ವಂತ ಪಕ್ಕಾ ಮನೆ ಇಲ್ಲದ ಕುಟುಂಬದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಗ್ರಾಮ ಪಂಚಾಯತ್ ಅಥವಾ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ನಿವಾಸಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 3 ಲಕ್ಷ ಮೀರಿರಬಾರದು.
ಅರ್ಜಿದಾರರು ಸರ್ಕಾರದ್ಅ ಇತರೆ ಯಾವುದೇ ಯೋಜನೆಗಳಲ್ಲಿ ಸೌಲಭ್ಯವನ್ನು ಪಡೆದಿರಬಾರದು.

How To Apply-ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಶ್ರಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸಹಾಯಧನವನ್ನು ಪಡೆಯಲು ಅರ್ಹರಿರುವ ಅಭ್ಯರ್ಥಿಗಳು ತಮ್ಮ ಹಳ್ಳಿ ವ್ಯಾಪ್ತಿಯ ಗ್ರಾಮ ಪಂಚಾಯತಿ ಕಛೇರಿಯನ್ನು ನೇರವಾಗಿ ಅಗತ್ಯ ದಾಖಲೆಗಳ ಸಮೇತ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಈ ಅಂಕಣದಲ್ಲಿ ತಿಳಿಸಿರುವ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬವುದು.

Ashraya Yojane Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅರ್ಜಿದಾರರು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ರಾಜೀವ್ ಗಾಂಧಿ ನಿಗಮ ನಿಯಮಿತದ ಜಾಲತಾಣವನ್ನು ಪ್ರವೇಶ ಮಾಡಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ನಿಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಬಹುದು.

Step-1: ಮೊದಲಿಗೆ Ashraya Yojane Online Application ಇಲ್ಲಿ ಕ್ಲಿಕ್ ಮಾಡಿ ರಾಜೀವ್ ಗಾಂಧಿ ನಿಗಮ ನಿಯಮಿತದ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Free Mushroom Training-ಉಚಿತ ಅಣಬೆ ಕೃಷಿ ತರಬೇತಿಗೆ ಅರ್ಜಿ ಆಹ್ವಾನ!

Ashraya Vasati Yojana application

ಇದನ್ನೂ ಓದಿ: Land Conversion-ಕೃಷಿ ಭೂಮಿ ಪರಿವರ್ತನೆ ಇನ್ನು ತುಂಬಾ ಸರಳ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ!

Step-2: ನಂತರ ಈ ಪೇಜ್ ನಲ್ಲಿ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ, ಪಿನ್ ಕೋಡ್ ಅನ್ನು ಆಯ್ಕೆ ಮಾಡಿಕೊಂಡು ಮುಂದುವರೆಸಿ ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ಬಳಿಕ ಇಲ್ಲಿ ನಿಮ್ಮ 12 ಅಂಕಿಯ ಆಧಾರ್ ಕಾರ್ಡ ನಂಬರ್ ಅನ್ನು ನಮೂದಿಸಿ ಆಧಾರ್ ನಲ್ಲಿರುವಂತೆ ಹೆಸರನ್ನು ಹಾಕಿ ಮುಂದಿನ ಪುಟ ಭೇಟಿ ಮಾಡಿ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

Required Documents For Vasati Yojana-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

ಈ ವಸತಿ ಯೋಜನೆ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಶ್ಯವಿರುವ ಅಗತ್ಯ ದಾಖಲೆಗಳ ಪಟ್ಟಿ ಹೀಗಿದೆ:

  • ಅರ್ಜಿದಾರರ ಆಧಾರ್ ಕಾರ್ಡ್/Adhar Card
  • ರೇಷನ್ ಕಾರ್ಡ್/Ration Card
  • ಆದಾಯ ಪ್ರಮಾಣ ಪತ್ರ/Income Certificate
  • ಜಾತಿ ಪ್ರಮಾಣ ಪತ್ರ (ಅನ್ವಯಿಸಿದ್ದಲ್ಲಿ)/Caste Certificate
  • ಮನೆ ನಿರ್ಮಾಣ ಜಾಗದ ದಾಖಲೆಗಳು/Land Documents
  • ಬ್ಯಾಂಕ್ ಪಾಸ್ ಪುಸ್ತಕ/Bank Pass Book
  • ಅರ್ಜಿದಾರರ ಫೋಟೋ/ Photo
  • ವಾಸಸ್ಥಳ ದೃಡೀಕರಣ ಪತ್ರ/Address Proof

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: