Azeem Premji Scholarship-ಅಜೀಂ ಪ್ರೇಮ್‌ಜಿ ವತಿಯಿಂದ 30,000 ವಿದ್ಯಾರ್ಥಿವೇತನ! ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

January 13, 2026 | Siddesh
Azeem Premji Scholarship-ಅಜೀಂ ಪ್ರೇಮ್‌ಜಿ ವತಿಯಿಂದ 30,000 ವಿದ್ಯಾರ್ಥಿವೇತನ! ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!
Share Now:

2025-2026 ನೇ ಸಾಲಿನ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನದ ಅಡಿಯಲ್ಲಿ(Azeem Premji Scholarship) ಅರ್ಹ ಅಭ್ಯರ್ಥಿಗಳಿಗೆ 30,000 ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದು, ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿ ಸಲ್ಲಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಅಜೀಂ ಪ್ರೇಮ್‌ಜಿ, ಇವರು ತಮ್ಮ ಅಪಾರವಾದ ಸಂಪತ್ತಿನ ಬಹುಭಾಗವನ್ನು(Educational Grants India) ಮಕ್ಕಳ ಶಿಕ್ಷಣದ ಅಭಿವೃದ್ಧಿಗೆ ವಿರಳ ಮನಸ್ಸಿಲ್ಲದೆ ನೀಡಲು ಮುಂದಾಗಿದ್ದಾರ‍ೆ. ಅದೆಷ್ಟೋ ಬಡ ಮಕ್ಕಳ ಹಾಗೂ ಆರ್ಥಿಕ ಸ್ಥಿತಿಯ ಅಡಚಣೆ ಇರುವ ವಿದ್ಯಾರ್ಥಿಗಳ ಕನಸನ್ನು ನನಸು ಮಾಡುವ ಗುರಿಯಲ್ಲಿದ್ದಾರೆ.

ಇದನ್ನೂ ಓದಿ: Poultry Shed Subsidy-ಕೋಳಿ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ₹60,000 ಸಹಾಯಧನ!

ಈ ಎಲ್ಲಾ ಸೌಲಭ್ಯವನ್ನು ಪಡೆದುಕೊಳ್ಳಲು ಯಾರೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Purpose of this Scholorship-ಈ ವಿದ್ಯಾರ್ಥಿವೇತನದ ಮುಖ್ಯ ಉದ್ದೇಶವೇನು?

✔️ ಪ್ರತಿಭಾವಂತ ಆದರೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅವರ ಮುಂದಿನ ಶಿಕ್ಷಣಕ್ಕೆ ನೆರವಿಗಾಗಿ.
✔️ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಯುವಕರಿಗೆ ವೃತ್ತಿ ಹಾಗೂ ಮೌಲ್ಯಾಧಾರಿತ ತರಬೇತಿ ನೀಡುವುದು.
✔️ ಗ್ರಾಮೀಣ ಮತ್ತು ಬಡ ಪ್ರದೇಶಗಳ ಶಿಕ್ಷಣ ಮಟ್ಟವನ್ನು ಸುಧಾರಿಸಲು ಯುವ ಪ್ರತಿಭೆಯನ್ನು ಗುರುತಿಸುವುದು.

Last Date For Application-ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 31 ಜನವರಿ 2026

ಇದನ್ನೂ ಓದಿ: New Ration Card-ಹೊಸ ರೇಶನ್ ಕಾರ್ಡ ವಿತರಣೆ ಕುರಿತು ಮಹತ್ವದ ಮಾಹಿತಿ ಪ್ರಕಟ!

Who Can Apply-ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ಅರ್ಜಿದಾರ‍ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ವಿದ್ಯಾರ್ಥಿಯು 10 ಹಾಗೂ 12 ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

2025-26ನೇ ಶೈಕ್ಷಣಿಕ ವರ್ಷಕ್ಕೆ ಮೊದಲ ವರ್ಷದಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಭಾರತದ ಸರ್ಕಾರಿ/ಖಾಸಗಿ ವಿಶ್ವವಿದ್ಯಾಲಯದಲ್ಲಿ ಮಾನ್ಯತೆ ಪಡೆದ ಪದವಿಪೂರ್ವ ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ ಪಡೆದಿರಬೇಕು.

ಹೆಚ್ಚಿನ ಮಾಹಿತಿಗಾಗಿ:

ಪದವಿಪೂರ್ವ ಪದವಿ ಅಥವಾ ಡಿಪ್ಲೊಮಾ ಕಾರ್ಯಕ್ರಮವು 2 ರಿಂದ 5 ವರ್ಷಗಳವರೆಗೆ ಇರಬೇಕು.
2025-26 ಅಥವಾ ಅದಕ್ಕೂ ಮೊದಲು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಯಾವುದೇ ಕಾರ್ಯಕ್ರಮಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ವಿಪ್ರೋದ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಇದನ್ನೂ ಓದಿ: PM Kisan Amount-ಪಿಎಂ ಕಿಸಾನ್ ಆರ್ಥಿಕ ನೆರವು ಏರಿಕೆ ನಿರೀಕ್ಷೆ!

Documents Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

ಆಧಾರ್ ಕಾರ್ಡ್
10 ಮತ್ತು 12 ನೇ ತರಗತಿಯ ಅಂಕಪಟ್ಟಿ
ವಿಶ್ವವಿದ್ಯಾಲಯ ಪ್ರವೇಶ ಪತ್ರ
ಕಾಗದದ ಮೇಲೆ ಅರ್ಜಿದಾರರ ಸಹಿ ಪತ್ರ
ಬ್ಯಾಂಕ್ ಪಾಸ್ ಪುಸ್ತಕ
ವಿದ್ಯಾರ್ಥಿಯ ಫೋಟೊ

ಇದನ್ನೂ ಓದಿ: Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

azim premji application

ಇದನ್ನೂ ಓದಿ: Dairy Shed Subsidy-ಗ್ರಾಮ ಪಂಚಾಯಿತಿಯಿಂದ ದನದ ಶೆಡ್ ನಿರ್ಮಾಣಕ್ಕೆ ರೂ 57,000 ಪಡೆಯುವುದು ಹೇಗೆ!

Online Application Process-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನದ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು.

Step-1: ಅರ್ಹ ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ "Click Here" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿದಾರ ವಿದ್ಯಾರ್ಥಿಗಳು ಈ ಜಾಲತಾಣವನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ನಮೂದಿಸಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Kuri Shed Subsidy-ನರೇಗಾ ಯೋಜನೆಯಡಿ ಕುರಿ ಶೆಡ್ ನಿರ್ಮಾಣಕ್ಕೆ ರೂ 70,000 ಪಡೆಯುವುದು ಹೇಗೆ!

For More Information-ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: