Azim Premji Foundation-ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ ವಿದ್ಯಾರ್ಥಿನಿಯರಿಗೆ ₹30,000 ಸ್ಕಾಲರ್‌ಶಿಪ್!

September 17, 2025 | Siddesh
Azim Premji Foundation-ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ ವಿದ್ಯಾರ್ಥಿನಿಯರಿಗೆ ₹30,000 ಸ್ಕಾಲರ್‌ಶಿಪ್!
Share Now:

ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ(Azim Premji Foundation) ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿನಿಯರಿಗೆ ಉನ್ನತದ ಶಿಕ್ಷಣವನ್ನು ಪಡೆಯಲು ಉತೇಜನವನ್ನು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

2025-2026 ನೇ ಸಾಲಿನ ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್(Azim Premji Foundation scholarship)ವಿದ್ಯಾರ್ಥಿವೇತನದ ಅಡಿಯಲ್ಲಿ ಪದವಿ ಪೂರ್ವ ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ ಪಡೆದಿರುವ ಆಸಕ್ತ ಅರ್ಹ ವಿದ್ಯಾರ್ಥಿಗಳಿಂದ ₹30,000 ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

ಪ್ರಸ್ತುತ ಇಂದಿನ ಈ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು(Azim Premji Scholarship) ಪಡೆಯಲು ಯಾರೆಲ್ಲ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ? ಅರ್ಜಿಯನ್ನು ಸಲ್ಲಿಸಲು ಸಲ್ಲಿಸಬೇಕಾದ ದಾಖಲಾತಿಗಳಾವುವು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಈ ಕಾರ್ಯಕ್ರಮದ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ? ಇನ್ನಿತರ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Who Can Apply For Azim Premji Scholarship-ಎಷ್ಟು ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ?

ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾಗುವ ಎಲ್ಲಾ ವಿದ್ಯಾರ್ಥಿನಿಯರಿಗೆ ಒಂದು ವರ್ಷಕ್ಕೆ ₹30,000 ರೂ ವರೆಗೆ ವಿದ್ಯಾರ್ಥಿವೇತನವನು ಒದಗಿಸಲಾಗುತ್ತದೆ.

  • ಆಯ್ಕೆಯಾದ ಅಭ್ಯರ್ಥಿಗಳು ವಾರ್ಷಿಕ ₹30,000 ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ.
  • ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?
  • ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ ಸ್ಕಾಲರ್‌ಶಿಪ್ ಅನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ಪಟ್ಟಿ ಹೀಗಿದೆ:
  • ವಿದ್ಯಾರ್ಥಿಯು ಭಾರತ ದೇಶದ ಖಾಯಂ ನಿವಾಸಿಯಾಗಿರಬೇಕು.
  • ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
  • 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಮತ್ತು ಡಿಪ್ಲೋಮಾ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Free Bike Repair Training-ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Last Date For Azim Premji Scholarship Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್ 2025

Azim Premji Scholarship

ಇದನ್ನೂ ಓದಿ: NMMS Scholarship-ಎನ್‍ಎಂಎಂಎಸ್ ಯೋಜನೆಯಡಿ ಪ್ರತಿ ತಿಂಗಳು 1,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Online Apply Method-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಅರ್ಜಿಯನ್ನು ಸಲ್ಲಿಸಬಹುದು.

ಹಂತ-1: ವಿದ್ಯಾರ್ಥಿಗಳು ಮೊದಲಿಗೆ "Azim Premji Scholarship Application" ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿಬೇಕು.

ಹಂತ-2: ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿದ ನಂತರ ಇಲ್ಲಿ ಬಲಬದಿಯಲ್ಲಿ ಕಾಣುವ "Apply Now" ಬಟನ್ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ರಚನೆ ಮಾಡಿಕೊಂಡು ಲಾಗಿನ್ ಅಗಿ.

ಹಂತ-3: ಲಾಗಿನ್ ಅದ ಬಳಿಕ ಇಲ್ಲಿ ಅವಶ್ಯವಿರುವ ಎಲ್ಲಾ ದಾಖಲೆ ಮತ್ತು ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣುವ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಓದಿ: Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

Required Documents For Application-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಗತ್ಯವಾಗಿ ಸಲ್ಲಿಸಬೇಕಾದ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ:

  • ಆಧಾರ್ ಕಾರ್ಡ್/Aadhar.
  • ಬ್ಯಾಂಕ್ ಪಾಸ್ ಬುಕ್/Bank Pass Book.
  • ವಿದ್ಯಾರ್ಥಿಯ ಪೋಟೋ/Photo.
  • ವಿದ್ಯಾರ್ಥಿಯ ಶಾಲಾ ವ್ಯಾಸಂಗ ಪ್ರಮಾಣ ಪತ್ರ/Study Certificate.
  • ಪೋಷಕರ ಆದಾಯ ಪ್ರಮಾಣ ಪತ್ರ/Income Certificate.

Online Application Link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್-Apply Now
Azim Premji Foundation Website-ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: