ಬಗರ್ ಹುಕುಂ ಯೋಜನೆಯಡಿ(Bagar Hukum Yojane) ಕಂದಾಯ ಇಲಾಖೆಯಿಂದ ಅರ್ಜಿ ವಿಲೇವಾರಿಗೆ ಸಂಬಂಧಿಸಿದಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿರುವ ನೂತನ ಸೂಚನೆಯ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ಕಳೆದ ವಾರ ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಎಲ್ಲಾ ತಹಶೀಲ್ದಾರ್ ಹಾಗೂ ಭೂ ದಾಖಲೆಯ ಸಹಾಯ ನಿರ್ದೇಶಕರಿಗೆ ಬಗರ್ ಹುಕುಂ(Akrama-sakrama scheme) ಅರ್ಜಿ ವಿಲೇವಾರಿಗೆ ನೂತನ ಸೂಚನೆಯನ್ನು ನೀಡಿದ್ದಾರೆ.
ಇದನ್ನೂ ಓದಿ: Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?
ಬಗರ್ ಹುಕುಂ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ತಮ್ಮ ಜಮೀನನ್ನು ಸಕ್ರಮಗೊಳಿಸಿ ಅಧಿಕೃತ ಹಕ್ಕುಪತ್ರವನ್ನು ಪಡೆಯಲು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಂದಾಯ ಸಚಿವರು(Karnataka Revenue Department) ವಿಡಿಯೊ ಕಾನ್ಫರೆನ್ಸ್‌ನಲ್ಲಿ ತಹಶೀಲ್ದಾರ್ ಹಾಗೂ ಭೂ ದಾಖಲೆಯ ಸಹಾಯ ನಿರ್ದೇಶಕರಿಗೆ ಜಮೀನಿನ ಸಕ್ರಮ ಕೋರಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳು ಮೃತಪಟ್ಟರೆ ಅವರ ಕುಟುಂಬದ ಸದಸ್ಯರಿಗೆ ಜಮೀನು ಮಂಜೂರು ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ.
Bagar Hukum Application-ಅರ್ಹ ಫಲಾನುಭವಿಗಳು ಮೃತಪಟ್ಟರೆ ಅವರ ಕುಟುಂಬದ ಸದಸ್ಯರಿಗೆ ಹಕ್ಕುಪತ್ರ ನೀಡಲು ಸೂಚನೆ:
ಕಳೆದ ಅನೇಕ ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನುಗಳಿಗೆ ಅಧಿಕೃತ ದಾಖಲೆಗಳನ್ನು ಪಡೆಯಲು ಬಗರ್ ಹುಕುಂ ಯೋಜನೆಯಡಿ ಹಕ್ಕು ಪತ್ರ ಪಡೆಯಲು ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳು ಮೃತಪಟ್ಟರೆ ಅವರ ಕುಟುಂಬದ ಸದಸ್ಯರಿಗೆ ಹಕ್ಕುಪತ್ರವನ್ನು ಹಾಗೂ ಡಿಜಿಟಲ್ ಸಾಗುವಳಿ ಚೀಟಿಯನ್ನು ನೀಡಬೇಕು ಎಂದು ಎಲ್ಲಾ ತಹಶೀಲ್ದಾರ್ ರಿಗೆ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ: Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

Saguvali Cheeti-15 ಸಾವಿರ ಫಲಾನುಭವಿಗಳಿಗೆ ಬಗರ್‌ಹುಕುಂ ಸಾಗುವಳಿ ಚೀಟಿ:
ವಿಡಿಯೊ ಕಾನ್ಫರೆನ್ಸ್ ನಲ್ಲಿ ಬಗರ್‌ಹುಕುಂ ಯೋಜನೆಯ ಅನುಷ್ಥಾನದ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು ಅರ್ಥಿಕವಾಗಿ ಮುಂದಿರುವ ನಾಗರಿಕರಿಗೆ ಸರಕಾರದ ಎಲ್ಲಾ ಯೋಜನೆಗಳ ಮಾಹಿತಿ ಸಮಯಕ್ಕೆ ಸರಿಯಾಗಿ ಲಭ್ಯವಾಗುತ್ತದೆ, ಬಡವರಿಗೆ ಮತ್ತು ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಸಾರ್ವಜನಿಕರಿಗೆ ಯೋಜನೆಯ ಮಾಹಿತಿ ಲಭ್ಯವಾಗುವಂತೆ ಮಾಡುವುದು ಇಲಾಖೆ ಅಧಿಕಾರಿಗಳ ಕರ್ತವ್ಯ ಎಂದು ತಿಳಿಸಿ.
ಇದನ್ನೂ ಓದಿ: Murarji school admission- ಮೊರಾರ್ಜಿ ದೇಸಾಯಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ!
ಈಗಾಗಲೇ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಹಕ್ಕು ಪತ್ರ ಪಡೆಯಲು ಕಾಯುತ್ತಿರುವ 15 ಸಾವಿರ ಅರ್ಹ ಫಲಾನುಭವಿಗಳಿಗೆ 15 ಜನವರಿ 2025 ರ ಒಳಗಾಗಿ ಬಗರ್‌ಹುಕುಂ ಸಾಗುವಳಿ ಚೀಟಿ ನೀಡುವ ಗುರಿ ನೀಡಲಾಗಿತ್ತು. ಈ ಅವಧಿಯಲ್ಲಿ ಕನಿಷ್ಠ 5,600 ಫಲಾನುಭವಿಗಳನ್ನು ಗುರುತಿಸಲಾಗಿದೆ. ಶಾಸಕರ ನೇತೃತ್ವದಲ್ಲಿ ಸಮಿತಿ ಸಭೆ ನಡೆಸಿ, ಅವರಿಗೆ ಜಮೀನು ಮಂಜೂರು ಮಾಡಬೇಕು’ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಶೀಘ್ರವಾಗಿ ಅರ್ಜಿ ವಿಲೇವಾರಿಗೆ ಅಧಿಕಾರಿಗಳಿಗೆ ಸೂಚನೆ:
ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ಅರ್ಜಿ ವಿಲೇವಾರಿಗೆ ಹಾಗೂ ಈ ಯೋಜನೆಯಡಿ ಜಮೀನು ಪಡೆಯಲು ಅರ್ಹರಿರುವ ಫಲಾನುಭವಿಗಳನ್ನು ಗುರುತಿಸುವ ಕೆಲಸವನ್ನು ಅಧಿಕಾರಿಗಳೇ ಜವಾಬ್ದಾರಿ ವಹಿಸಿಕೊಂಡು ಜಮೀನು ಮಂಜೂರು ಮಾಡಲು ಕ್ರಮ ಕೈಗೊಳಬೇಕು ಜೊತೆಗೆ ಆದಷ್ಟು ಬೇಗ ಬಾಕಿ ಉಳಿದಿರುವ ಅರ್ಜಿಗಳನ್ನು ಪರಿಶೀಲಿಸಿ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: SSLC ಮತ್ತು PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ!
ತಹಶೀಲ್ದಾರರ ವಿರುದ್ಧವೂ ಅಸಮಾಧಾನ:
ಜಮೀನಿನ ಅಧಿಕೃತ ಪತ್ರಗಳ ವಿತರಣೆಯಲ್ಲಿನ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು 1-5 ನಮೂನೆ ಪೋಡಿ ದುರಸ್ತಿ ಕೆಲಸಕ್ಕೆ ಈಗಾಗಲೇ ಚಾಲನೆ ನೀಡಲಾಗಿತ್ತು. ಆದರೆ, ಹಲವಾರು ತಾಲೂಕುಗಳಲ್ಲಿ 1-5 ನಮೂನೆ ಪೋಡಿ ದುರಸ್ತಿ ಕಾರ್ಯ ಮುಗಿದರೂ, 6-10 ನಮೂನೆ ಸರ್ವೇ ಕೆಲಸಕ್ಕಾಗಿ ಭೂ ದಾಖಲೆಯ ಸಹಾಯ ನಿರ್ದೇಶಕರಿಗೆ ಕಳುಹಿಸಲು ಮೀನಮೇಷ ಎಣಿಸುತ್ತಿರುವುದು ಏಕೆ ಎಂದು ತಹಶೀಲ್ದಾರ್‌ಗಳನ್ನು ಈ ಸಮಯದಲ್ಲಿ ಸಚಿವರ ತರಾಟೆಗೆ ತೆಗೆದುಕೊಂಡರು.
ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ವರ್ಷಗಳಿಗಿಂತ ಹೆಚ್ಚುಕಾಲ ಬಾಕಿ ಉಳಿದಿರುವ ತಕರಾರು ಅರ್ಜಿಗಳನ್ನು ವಿಲೇವಾರಿ ಮಾಡದ ತಹಶೀಲ್ದಾರರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಕಂದಾಯ ಸಚಿವರು 90 ದಿನಗಳಿಗಿಂತ ಹೆಚ್ಚು ಕಾಲ ಯಾವುದೇ ತಕರಾರು ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.