Breaking News:
Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ! Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ! LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
HomeNew postsbagar hukum-ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

bagar hukum-ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ(bagar hukum)’ ಸಾಗುವಳಿ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ರವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಕಳೆದ ಹಲವು ವರ್ಷಗಳಿಂದ ಸರಕಾರಿ ಜಮೀನಿನಲ್ಲಿ ಉಳುಮೆ ಮಾಡುತ್ತಾ ಬಂದಿರುವ ಹಾಗೂ ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಸಿಹಿ ಸುದ್ದಿ ನೀಡಿದೆ. ಬಗರ್ ಹುಕುಂ ಅರ್ಜಿ ವಿಲೇವಾರಿ ಪ್ರಕ್ರಿಯೆತನ್ನು ಪ್ರಾರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಸಚಿವ ಕೃಷ್ಣಭೈರೇಗೌಡ ರವರು, ಬಗರ್ ಹುಕುಂ ನಮೂನೆ 57ರ ಅಡಿಯಲ್ಲಿ ಒಟ್ಟಾರೆ 9.80ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅನರ್ಹ ಅರ್ಜಿಗಳೇ ಅಧಿಕ. ಈ ಅರ್ಜಿಗಳ ವಿಲೇವಾರಿಗೆ ಈಗಾಗಲೇ ರಾಜ್ಯಾದ್ಯಂತ 160 ಬಗರ್ ಹುಕುಂ ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ತಿಂಗಳೂ ಕನಿಷ್ಟ ಮಟ್ಟದ ಅರ್ಜಿ ವಿಲೇವಾರಿ ಆಗಬೇಕು, ಮುಂದಿನ ಎಂಟು ತಿಂಗಳಲ್ಲಿ ಎಲ್ಲಾ ಅರ್ಜಿಗಳನ್ನೂ ವಿಲೇಗೊಳಿಸಬೇಕು. ಅಲ್ಲದೆ, ಅರ್ಹರಿಗೆ ಭೂ ಮಂಜೂರು ಮಾಡಬೇಕು ಎಂದು ಈಗಾಗಲೇ ತಹಶೀಲ್ದಾರ್ ಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಮಟ್ಟದಲ್ಲಿ ಕನಿಷ್ಟ 4 ಲಕ್ಷ ರೈತರಿಗೆ ಸಂಬಂಧಿಸಿದ 69,437 ಸರ್ವೇ ನಂಬರ್ಗಳಲ್ಲಿ ನಮೂನೆ 1-5 ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಅಂದರೆ ಸಂಬಂಧಪಟ್ಟ ರೈತರ ಕಡತಗಳನ್ನು ತಯಾರು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಈ ದಾಖಲೆಗಳನ್ನು ಒಂದುಗೂಡಿಸಿ ರೈತರು ಪೋಡಿಗೆ ಅರ್ಹರೇ ಎಂದು ಗುರುತಿಸಲಾಗುವುದು. ಆರ್‌ಐ, ಶಿರಸ್ತೇದಾರ್ ಹಾಗೂ ತಹಶೀಲ್ದಾರ್ ಈ ಬಗ್ಗೆ ಪರಿಗಣಿಸಿ ನಂತರ ನಮೂನೆ 6-10 ರ ಪ್ರಕ್ರಿಯೆಗೆ ಸರ್ವೇ ಇಲಾಖೆಗೆ ಪೋಡಿಗೆ ಶೀಫಾರಸು ಮಾಡುತ್ತಾರೆ. ತದನಂತರ ರೈತರಿಗೆ ಪೋಡಿ ಲಭ್ಯವಾಗುತ್ತದೆ” ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

RTC aadhr seeding-ಇಲ್ಲಿಯವರೆಗೆ ಪಹಣಿ/RTC ಶೇ. 81.74 ರಷ್ಟು ಆಧಾರ್ ಲಿಂಕ್ ಮಾಡಲಾಗಿದೆ ಉಳಿದವರು ಕೂಡಲೇ ಮಾಡಿಕೊಳ್ಳಲು ಸೂಚಿಸಲಾಗಿದೆ:

ಕಂದಾಯ ಇಲಾಖೆಯಿಂದ ಇಲ್ಲಿಯವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸೇರಿಸಿ ಒಟ್ಟು ಶೇ. 81.74 ರಷ್ಟು ಪಹಣಿ/RTC ಗಳಿಗೆ ಆಧಾರ್ ಲಿಂಕ್ ಮಾಡುವ ಕೆಲಸವನ್ನು ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ರವರು ಮಾಹಿತಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, “ರಾಜ್ಯಾದ್ಯಂತ 4,09,87,831 ರಷ್ಟು ಜಮೀನುಗಳ ಆಧಾರ್ ಸೀಡಿಂಗ್ ಮಾಡುವುದು ಇಲಾಖೆಯ ಗುರಿ. ಈ ಪೈಕಿ ಸುಮಾರು 61 ಲಕ್ಷ ಜಮೀನುಗಳು ಕೃಷಿಯೇತರ ಚಟುವಟಿಕೆಗೆ ಉಪಯೋಗವಾಗುತ್ತಿದೆ. ಇದನ್ನು ಆಧಾರ್ ಸೀಡಿಂಗ್ ಮಾಡುವುದು ಸಾಧ್ಯವಿಲ್ಲ. ಏಕೆಂದರೆ ಅಲ್ಲಿ ನಿವೇಶನಗಳು ಇರುತ್ತದೆ. ನಾವು ಕೃಷಿ ಭೂಮಿಯಲ್ಲಿ ಮಾತ್ರ ಸೀಡಿಂಗ್ ಮಾಡಲು ಸಾಧ್ಯ. ಈವರೆಗೆ 2.15 ಕೋಟಿ ಜಮೀನುಗಳಿಗೆ ಆಧಾರ್ ಅಥೆಂಟಿಫಿಕೇಷನ್ ಕೆಲಸ ಮುಗಿಸಲಾಗಿದ್ದು, ಆಧಾರ್ ಸೀಡಿಂಗ್ ವಿಚಾರದಲ್ಲಿ ಶೇ. 81.74 ರಷ್ಟು ಪ್ರಗತಿ ಸಾಧಿಸಲಾಗಿದೆ” ಎಂದು ಮಾಹಿತಿ ತಿಳಿಸಿದ್ದಾರೆ.

Pouthi khate andolana-ಶೀಘ್ರದಲ್ಲಿ ಪೌತಿ ಖಾತೆ ಆಂದೋಲನ: ಸಚಿವ ಕೃಷ್ಣ ಬೈರೇಗೌಡ

ಸಚಿವ ಕೃಷ್ಣ ಬೈರೇಗೌಡ ರವರು ಪೌತಿ ಖಾತೆ ಆಂದೋಲನದ ಕುರಿತು ಸಹ ಮಾಹಿತಿ ತಿಳಿಸಿದ್ದು”ರಾಜ್ಯಾದ್ಯಂತ 48,16,813 ಜಮೀನುಗಳ ಮಾಲೀಕರು ನಿಧನರಾಗಿದ್ದಾರೆ. ಆದರೆ, ಅವರ ಹೆಸರಲ್ಲೇ ಪಹಣಿ ಮುಂದುವರೆಯುತ್ತಿದೆ. ಈ ಎಲ್ಲರಿಗೂ ಶೀಘ್ರದಲ್ಲಿ ಪೌತಿ ಖಾತೆ ಆಂದೋಲನದ ಅಡಿಯಲ್ಲಿ ಖಾತೆ ಬದಲಿಸಿಕೊಡಲಾಗುವುದು” ಎಂದು ಅವರು ತಿಳಿಸಿದರು.

Most Popular

Latest Articles

- Advertisment -

Related Articles