Bangalore Weather-ಅವಧಿಗೂ ಮುನ್ನ ಮುಂಗಾರು ಮಳೆ! ಇಲ್ಲಿದೆ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ!

May 13, 2025 | Siddesh
Bangalore Weather-ಅವಧಿಗೂ ಮುನ್ನ ಮುಂಗಾರು ಮಳೆ! ಇಲ್ಲಿದೆ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ!
Share Now:

ಕರ್ನಾಟಕ ಮಳೆ ಪ್ರಮಾಣ ನಕ್ಷೆಯ(Karnataka Weather) ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ. ಶೆಟ್ಟಹಳ್ಳಿ ವ್ಯಾಪ್ತಿಯಲ್ಲಿ ಅತ್ಯಧಿಕ 119 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ.

ಉಳಿದಂತೆ ಚಿಕ್ಕಮಗಳೂರು,ಚಾಮರಾಜನಗರ ಜಿಲ್ಲೆಯಲ್ಲಿ ಸಾಧಾರಣ ಮಳೆ ದಾಖಲಾಗಿದ್ದು(Rain Forecast) ಚಿತ್ರದುರ್ಗ,ದಾರವಾಡ ಹಾವೇರಿ,ಹಾಸನ, ಕೊಡಗು,ಬೆಂಗಳೂರು ನಗರ, ಉತ್ತರಕನ್ನಡ, ಬೀದರ, ತುಮಕೂರು, ಕಲಬುರ್ಗಿ, ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ದಾಖಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಅಧಿಕೃತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Nrega Yojane-2025: ನರೇಗಾ ಯೋಜನೆಯಡಿ ಕಾರ್ಮಿಕರಿಗೆ ದಿನಕ್ಕೆ 370/- ರೂ ಪಾವತಿ!

ಈ ಲೇಖನದಲ್ಲಿ ಮುಂದಿನ 3 ದಿನದ ರಾಜ್ಯದ ಮಳೆ ಮುನ್ಸೂಚನೆ(Male munsuchane) ಮತ್ತು ಮುಂಗಾರು ಮಳೆಯ ಆಗಮನದ ವಿವರ ಹಾಗೂ ರಾಜ್ಯದಲ್ಲಿರುವ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಅಂಕಿ-ಅಂಶದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

Karnataka Next 3 Days Rain Forecast-ರಾಜ್ಯದಲ್ಲಿ ಮುಂದಿನ 3 ದಿನ ಉತ್ತಮ ಮಳೆ ಸಾಧ್ಯತೆ:

ಪೂರ್ವ ಮುಂಗಾರು ಮಳೆಯು ಚೇತರಿಕೆಗೊಂಡಿರುವ ಕಾರಣ ರಾಜ್ಯದ ಬಹುತೇಕ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಅಂದರೆ ಮೇ 16 ರ ವರಗೆ ಹಗುರದಿಂದ-ಉತ್ತಮ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: Caste Survey Karnataka-ರಾಜ್ಯಾದ್ಯಂತ ಮನೆ-ಮನೆ ಜಾತಿಗಳ ಸಮೀಕ್ಷೆ ಕುರಿತು ಮಹತ್ವದ ಮಾಹಿತಿ ಪ್ರಕಟ!

District Wise Weather Update-ಜಿಲ್ಲಾವಾರು ಮಳೆ ಮುನ್ಸೂಚನೆ ವಿವರ ಈ ಕೆಳಗಿನಂತಿದೆ:

ಇಂದು ರಾಜ್ಯದಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮದ ವರೆಗೆ ಅಲ್ಲಲ್ಲಿ ಮಳೆಯ ಮುನ್ಸೂಚೆನೆಯನ್ನು ನೀಡಲಾಗಿದ್ದು ಪೂರ್ವ ಮುಂಗಾರು ಮಳೆಯಲ್ಲಿ ಚೇತರಿಕೆಯಾಗಿರುವ ಕಾರಣ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

ಇದನ್ನೂ ಓದಿ: Birth Certificate-ಇನ್ನೂ ಮುಂದೆ ಜನನ ಪ್ರಮಾಣ ಪತ್ರ ಪಡೆಯುವುದು ಭಾರಿ ಸುಲಭ!

KARNATAKA WEATHER

Karnataka Coastal- ಕರಾವಳಿ ಜಿಲ್ಲೆ:

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ.

Malenadu-ಮಲೆನಾಡು ಜಿಲ್ಲೆ:

ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Ration Card And LPG-ಜೂನ್ 01 ರಿಂದ ರೇಷನ್ ಕಾರ್ಡ ಮತ್ತು LPG ಸಿಲಿಂಡರ್ ವಿತರಣೆಯಲ್ಲಿ ಪ್ರಮುಖ ಬದಲಾವಣೆ!

Karnataka Weather-ಒಳನಾಡು ಜಿಲ್ಲೆ:

ಉತ್ತರ ಒಳನಾಡಿನ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹಾಗೂ ರಾಮನಗರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ನಿರೀಕ್ಷೆ ಇರುತ್ತದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

Mungaru male-2025: ಅವಧಿಗೂ ಮುನ್ನ ಮುಂಗಾರು ಮಳೆ:

ಪ್ರಸ್ತುತ ನೈರುತ್ಯ ಮಾರುತಗಳ ಚಲನೆಯ ಅನ್ವಯ ಕರ್ನಾಟಕಕ್ಕೆ ಪ್ರತಿ ವರ್ಷ ಯಾವ ಸಮಯಕ್ಕೆ ಮುಂಗಾರು ಮಳೆ ಪ್ರವೇಶವಾಗುತ್ತಿತ್ತೋ ಅದಕ್ಕಿಂತ ಮುಂಚಿತವಾಗಿ ಅಂದರೆ ಅವಧಿಗೂ ಮುನ್ನವೇ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ ಮಾಡಲಿವೆ ಮತ್ತು ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ ಸಮುದ್ರ ಕಡೆಗೆ ಮುಂಗಾರು ಮಾರುತಗಳು ಪ್ರವೇಶಿಸುತ್ತಿರುವ ಲಕ್ಷಣಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Diploma Application-ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ! ತಿಂಗಳಿಗೆ ರೂ. 2,500/- ಶಿಷ್ಯವೇತನ!

Karnataka Dam Water Level-2025: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ(13 ಮೇ 2025):

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಪ್ರಸ್ತುತ 13 ಮೇ 2025ಕ್ಕೆ ಎಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ ಎನ್ನುವ ಮಾಹಿತಿಯನ್ನು ಈ ಕೆಳಗಿನ ಚಿತ್ರದಲ್ಲಿ ಹಂಚಿಕೊಳ್ಳಲಾಗಿದೆ.

karnataka dam water level (4)

ಮಾಹಿತಿ ಕೃಪೆ: ಸಾಯಿ ಶೇಖರ್ ಬಿ & KSNDMC, Bengalore

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: