BCM Hostel Admission-ಬಿ.ಸಿ.ಎಂ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ!

May 22, 2026 | Siddesh
BCM Hostel Admission-ಬಿ.ಸಿ.ಎಂ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ!
Share Now:

ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (BCM Hostel Admission Application) ಪ್ರಸಕ್ತ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ದೂರದ ಊರುಗಳಿಂದ ಬಂದು ನಗರ ಪ್ರದೇಶಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಆಸಕ್ತ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಯೋಜನೆಯಡಿ ಪ್ರವೇಶ ಪಡೆಯಲು ಇಚ್ಛಿಸುವ ಅರ್ಜಿದಾರ(Hostel Admission Application) ವಿದ್ಯಾರ್ಥಿಯು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಹಾಗೂ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಸೇರಿದಂತೆ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಕ್ಕೆ (ST) ಸೇರಿದ ವಿದ್ಯಾರ್ಥಿಗಳಿಗೆ ಈ ಹಾಸ್ಟೆಲ್ ಸೌಲಭ್ಯ ದೊರೆಯಲಿದೆ. ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಇದೊಂದು ಉತ್ತಮ ಅವಕಾಶವಾಗಿದ್ದು, ಜೂನ್ 08, 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ: MPS Price-2026: ರೈತರಿಗೆ ಕೇಂದ್ರದ ಬಂಪರ್ ಕೊಡುಗೆ: ರಾಗಿ ಸೇರಿದಂತೆ 14 ಮುಂಗಾರು ಬೆಳೆಗಳ ಬೆಂಬಲ ಬೆಲೆ ಭಾರಿ ಹೆಚ್ಚಳ!

ವಿದ್ಯಾರ್ಥಿಗಳು ತಮ್ಮ ಮೊಬೈಲ್ ಮೂಲಕವೇ ರಾಜ್ಯ ಜಾಲತಾಣ ತಂತ್ರಾಂಶದ (SHP-State Hostel Portal) ಅಧಿಕೃತ ಲಿಂಕ್ ಬಳಸಿ ಅತ್ಯಂತ ಸುಲಭವಾಗಿ ಅರ್ಜಿ ಸಲ್ಲಿಸಬಹುದು. ಇಂಟರ್ನೆಟ್ ಸೌಲಭ್ಯವಿಲ್ಲದ ವಿದ್ಯಾರ್ಥಿಗಳು ತಮ್ಮ ಹತ್ತಿರದ 'ಗ್ರಾಮ ಒನ್' ಕೇಂದ್ರಗಳಿಗೆ ನೇರವಾಗಿ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಲಾಖೆಯು ಮುಕ್ತ ಅವಕಾಶ ಕಲ್ಪಿಸಿದೆ.

Who Can Apply-ಅರ್ಜಿ ಸಲ್ಲಿಸಲು ಅರ್ಹರು:

  • ಅರ್ಜಿದಾರ ವಿದ್ಯಾರ್ಥಿಯು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  • ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ಪಂಗಡ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Prize Money Scholarship-ಸಮಾಜ ಕಲ್ಯಾಣ ಇಲಾಖೆ ಬಿಗ್ ಅಪ್ಡೇಟ್: ವಿವಿಧ ತರಗತಿಗಳಲ್ಲಿ ಪಾಸಾದ SC/ST ವಿದ್ಯಾರ್ಥಿಗಳಿಗೆ ₹35,000 ವರೆಗೆ ಸಿಗಲಿದೆ ಪ್ರೋತ್ಸಾಹಧನ!

Application Last Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08 ಜೂನ್ 2026

"ಹಿಂದುಳಿದ ವರ್ಗಗಳ ಹಾಗೂ ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸುಲಭವಾಗಿ ಸಿಗಬೇಕೆಂಬ ಉದ್ದೇಶದಿಂದ ಇಲಾಖೆಯು ಸಕಲ ಸೌಲಭ್ಯವುಳ್ಳ ಹಾಸ್ಟೆಲ್ ಪ್ರವೇಶಾತಿಯನ್ನು ಆರಂಭಿಸಿದೆ. ಅರ್ಹ ವಿದ್ಯಾರ್ಥಿಗಳು ಕೊನೆಯ ದಿನದ ರಶ್ ತಪ್ಪಿಸಲು ಇಂದೇ ಆನ್‌ಲೈನ್ ಅಥವಾ ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ಅಥವಾ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ಸಹಾಯವಾಣಿ ಸಂಖ್ಯೆಗಳಾದ 080-22340320 ಅಥವಾ 080-22340321 ಅನ್ನು ಸಂಪರ್ಕಿಸಬಹುದು." – ಇಲಾಖಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಇದನ್ನೂ ಓದಿ: Life Insurance-₹456 ಇದ್ದರೆ ಸಾಕು ಕುಟುಂಬಕ್ಕೆ ₹4 ಲಕ್ಷದ ಭದ್ರತೆ! ಈ ವಿಮಾ ಯೋಜನೆಯ ಬಗ್ಗೆ ತಪ್ಪದೇ ತಿಳಿಯಿರಿ!

BCM Hostel Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ:

BCM ಹಾಸ್ಟೆಲ್ ಪ್ರವೇಶ ಪಡೆಯಲು ಆಸಕ್ತಿಯನ್ನು ಹೊಂದಿರುವ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದ್ದು ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು ಅಥವಾ ಗ್ರಾಮ ಒನ್ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

Step-1: ಅರ್ಜಿದಾರ ವಿದ್ಯಾರ್ಥಿಯು ಮೊದಲಿಗೆ ಈ "Hostel Admission Online Application" ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ SHP-State Hostel Portal ಅನ್ನು ಪ್ರವೇಶ ಮಾಡಬೇಕು.

BCM Hostel Admission Online Applicatin

Step-2: ಇದಾದ ಬಳಿಕ ಇಲ್ಲಿ ಎರಡು ಆಯ್ಕೆಗಳು ಕಾಣಿಸುತ್ತವೆ Pre Matric ಮತ್ತು Post Matric ಇದರಲ್ಲಿ ತರಗತಿವಾರು ಒಂದನ್ನು ಆಯ್ಕೆ ಮಾಡಿಕೊಂಡು Apply ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ನಂತರ ಇಲ್ಲಿ ಕೇಳುವ ಒಂದೊಂದೇ ವಿವರವನ್ನು ಸಮರ್ಪಕವಾಗಿ ಭರ್ತಿ ಮಾಡಿ ಕೊನೆಯಲ್ಲಿ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ "Submit" ಬಟನ್ ಮೇಲೆ ಒತ್ತಿ ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಓದಿ: Free Hostel Admission-2026: ಉಚಿತ ಹಾಸ್ಟೇಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Documents-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಎಸ್.ಟಿ.ಎಸ್ ನಂಬರ್(STS Number)
  • ಹಿಂದಿನ ವರ್ಷದ ಅಂಕಪಟ್ಟಿ(Marks Card)
  • ವಿದ್ಯಾರ್ಥಿಯ ಆಧಾರ್ ಕಾರ್ಡ(Aadhar Card)
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ(Caste And Income Certificate)
  • ಭಾವಚಿತ್ರ(Student Photo)

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿಯಲು ಹಾಗೂ ಯಾವುದೇ ಬಗ್ಗೆ ತಾಂತ್ರಿಕ ಸಮಸ್ಯೆಯಾದಲ್ಲಿ ಈ 080-22340320 / 080-22340321 ಸಹಾಯವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: