Breaking News:
Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ! Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ! LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
HomeGovt Schemesbele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ...

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ರಾಜ್ಯಾದ್ಯಂತ ಒಟ್ಟು 80 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದ್ದು ಒಂದು ವಾರದೊಳಗಾಗಿ ಈ ರೈತರ ಖಾತೆಗೆ ಬೆಳೆ ಪರಿಹಾರವನ್ನು(bele parihara dbt status check) ವರ್ಗಾವಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ಕಳೆದ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಒಂದೇ ಬಾರಿಗೆ ಬಂದ ಕಾರಣ ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್ ಮತ್ತು ತೋಟಗಾರಿಕೆ ಬೆಳೆ 2,294 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿರುತ್ತದೆ(bele parihara ) ರೈತರಿಗೆ ಇಂತಹ ಸನ್ನಿವೇಶದಲ್ಲಿ ಅರ್ಥಿಕವಾಗಿ ಸಹಾಯ/ನೆರವು(Crop loss DBT amount-2024) ನೀಡಲು ರಾಜ್ಯ ಸರಕಾರದಿಂದ ರೈತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಳೆ ನಾಶ/ಹಾನಿಯಾಗಿರುವ ರೈತರು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ? ಯಾರಿಗೆಲ್ಲ ಬೆಳೆ ಹಾನಿ ಪರಿಹಾರ ದೊರೆಯಲಿದೆ? ಎನ್ನುವ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ:  karmika elake yojane-ತಾಯಿ ಮಗು ಸಹಾಯ ಹಸ್ತ ಯೋಜನೆ, ರೂ 6,000 ಅರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ!

crop loss payment- 80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ: 

ಅತಿವೃಷ್ಟಿಯಿಂದ ಕೃಷಿ ಬೆಳೆ ಮತ್ತು ತೋಟಗಾರಿಕೆ ಬೆಳೆ ಎರಡನ್ನು ಸೇರಿ ಒಟ್ಟು ರಾಜ್ಯದಲ್ಲಿ 80,000 ಹೆಕ್ತೇರ್ ಅಂದರೆ 2,00,000 ಎಕರೆ ಬೆಳೆ ನಾಶವಾಗಿದ್ದು, ಒಂದು ವಾರ ಒಳಗಾಗಿ ಯಾವ ಯಾವ ಬೆಳೆಗಳು ನಾಶ/ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಲಭ್ಯವಾಗಲಿದ್ದು, ನಂತರ ರೈತರಿಗೆ ಪರಿಹಾರ ವರ್ಗಾವಣೆ ಮಾಡುವ ಕಾರ್ಯಕ್ಕೂ ಚಾಲನೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ತಿಳಿಸಿದ್ದಾರೆ.

crop loss relief- ರಾಜ್ಯ ಸರಕಾರದಿಂದಲೇ ಪರಿಹಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಸದ್ಯ ರಾಜ್ಯ ಸರಕಾರ ಬಳಿ ಲಭ್ಯವಿರುವ ಸಂಪನ್ಮೂಲದಲ್ಲೇ/ಅನುದಾನದಲ್ಲೇ ಅರ್ಹ ರೈತರಿಗೆ SDRF ಮಾರ್ಗಸೂಚಿ ಪ್ರಕಾರ ಬೆಳೆ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಇನ್ನೂ ಒಂದೂವರೆ ತಿಂಗಳು ಉತ್ತಮ ಮುಂಗಾರು ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು ನಂತರ ಪರಿಹಾರಕ್ಕಾಗಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಕಂದಾಯ ಸಚಿವರು ಎಂದು ತಿಳಿಸಿದ್ದಾರೆ.

ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್‌ ಹಾನಿಯಾಗಿದ್ದರೆ, ತೋಟಗಾರಿಕಾ ಬೆಳೆ 2,294 ಹೆಕ್ಟೇರ್‌ ಪ್ರದೇಶ ಹಾನಿಯಾಗಿದೆ. ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು.

ಇದನ್ನೂ ಓದಿ:  Marriage incentive yojana-ಈ ಯೋಜನೆಯಡಿ ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದಿಂದ 2.50 ಲಕ್ಷ ರೂ.ಪ್ರೋತ್ಸಾಹ ಧನ!

ಪ್ರಸ್ತುತ ರಾಜ್ಯ ಸರ್ಕಾರದ ಬಳಿ ಇರುವ ಸಂಪನ್ಮೂಲದಲ್ಲೇ ಪರಿಹಾರ ನೀಡಲಾಗುವುದು. ಇನ್ನೂ ಒಂದೂವರೆ ತಿಂಗಳು ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು ತದನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: tmc water means- ಒಂದು ಟಿಎಂಸಿ ನೀರು ಎಂದರೆ ಎಷ್ಟು? TB Dam ಕುರಿತು ಇಲ್ಲಿದೆ ಮಾಹಿತಿ!

bele parihara payment-ಬೆಳೆ ನಾಶ/ಹಾನಿಯಾಗಿರುವ ರೈತರು ಎಲ್ಲಿ ಅರ್ಜಿ ಸಲ್ಲಿಸಬೇಕು?

ಕಳೆದ ತಿಂಗಳು ಅತೀಯಾದ ಮಳೆಯಿಂದ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆ ನಾಶವಾಗಿದಲ್ಲಿ ನಿಮ್ಮ ಹಳ್ಳಿಯ ಗ್ರಾಮ ಲೆಕ್ಕಾಧಿಕಾರಿಯನ್ನು ಕಚೇರಿ ಸಮಯದಲ್ಲಿ ಅಗತ್ಯ ದಾಖಲೆಗಳ ಸಮೇತ ಭೇಟಿ ಮಾಡಿ ಅರ್ಜಿ ಸಲ್ಲಿಸಬೇಕು.

Documents for bele parihara -ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

1) ಅರ್ಜಿದಾರರ ಆಧಾರ್ ಕಾರ್ಡ/Aadhar card
2) ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ/Bank pass book
3) ಬೆಳೆ ಹಾನಿಗೆ ಒಳಗಾಗಿರುವ ಜಮೀನಿನ ಪಹಣಿ/RTC.
4) ಮೊಬೈಲ್ ಸಂಖ್ಯೆ/Mobile number

ಇದನ್ನೂ ಓದಿ: bele vime last date- ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!

bele parihara application process-ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ? 

ಒಮ್ಮೆ ರೈತರು ಬೆಳೆ ಹಾನಿ ಅರ್ಜಿಯನ್ನುಗ್ರಾಮ ಲೆಕ್ಕಾಧಿಕಾರಿಗಳ/ಹೋಬಳಿ ಕೃಷಿ ಅಧಿಕಾರಿ ಕಛೇರಿಗೆ ಸಲ್ಲಿಸಿದ ನಂತರ ಅಧಿಕಾರಿಗಳು ಅರ್ಜಿ ಪರಿಶೀಲನೆ ಮಾಡಿ ಹಾನಿಯಾಗಿರುವ ಜಮೀನಿನ ಹಾನಿಯನ್ನು ಖಚಿತಪಡಿಸಿಕೊಳ್ಳಲು ಕ್ಷೇತ್ರ ಭೇಟಿ ಮಾಡಿ ಸ್ಥಳ ಪರಿಶೀಲನೆ ಮಾಡಿ parihara ತಂತ್ರಾಂಶದಲ್ಲಿ ರೈತರ ವೈಯಕ್ತಿಕ ವಿವರ ಮತ್ತು ಬ್ಯಾಂಕ್ ಅಕೌಂಟ್ ಹಾಗೂ ಜಮೀನಿನ ಮಾಹಿತಿಯನ್ನು ಆನ್ಲೈನ್ ನಲ್ಲಿ ಭರ್ತಿ ಮಾಡಲಾಗುತ್ತದೆ.

ತದನಂತರ ನೇರ ನಗದು ವರ್ಗಾವಣೆ(DBT) ಮೂಲಕ ಏಕ ಕಾಲಕ್ಕೆ ಎಲ್ಲಾ ಅರ್ಹ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ.

Who can apply for bele parihara-ಯಾರಿಗೆಲ್ಲ ಬೆಳೆ ಹಾನಿ ಪರಿಹಾರ ದೊರೆಯಲಿದೆ? 

ಬೆಳೆ ಹಾನಿ ಪರಿಹಾರವನ್ನು ಪಡೆಯಲು ಮುಖ್ಯವಾಗಿ ಜಮೀನಿನ ದಾಖಲೆಗಳು ಸರಿಯಾಗಿರಬೇಕಾಗುತ್ತದೆ ಅಂದರೆ ಅರಣ್ಯ ಖಾತೆ/ಒತ್ತುವರಿ ಜಮೀನಿನ ಪಹಣಿಗೆ ಪರಿಹಾರ ಪಡೆಯಲು ಬರುವುದಿಲ್ಲ.

FID ಅಲ್ಲಿ ಜಮೀನಿನ ಎಲ್ಲಾ ಸರ್ವೆ ನಂಬರ್ ಗಳು ಸೇರ್ಪಡೆಯಾಗಿರಬೇಕು.

Bele parihara status-ಬೆಳೆ ಹಾನಿ ಪರಿಹಾರದ ಎಲ್ಲಾ ವಿವರ ಈ ವೆಬ್ಸೈಟ್ ನಲ್ಲಿ ಪಡೆಯಬಹುದು:

ಒಮ್ಮೆ ಬೆಳೆ ಹಾನಿಗೆ ಅರ್ಜಿ ಸಲ್ಲಿಸಿದ ಬಳಿಕ ರೈತರು parihara ಜಾಲತಾಣವನ್ನು ತಮ್ಮ ಮೊಬೈಲ್ ಮೂಲಕ ಪ್ರವೇಶ ಮಾಡಿ ಬೆಳೆ ಹಾನಿ ಅರ್ಜಿ ಸಲ್ಲಿಕೆಯಾಗಿದಿಯೇ ಇಲ್ಲವೇ? ಸಲ್ಲಿಕೆಯಾಗಿದ್ದರೆ ಯಾವ ಹಂತದಲ್ಲಿದೆ? ಪರಿಹಾರ ಜಮಾ ಅಗಿದ್ದರೆ ಎಷ್ಟು ಜಮಾ ಅಗಿದೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಪಡೆಯಬಹುದು.

STEP-1: ಪ್ರಥಮದಲ್ಲಿ ಈ parihara webisite ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಕಂದಾಯ ಇಲಾಖೆಯ ಜಾಲತಾಣವನ್ನು ಪ್ರವೇಶ ಮಾಡಬೇಕು.

STEP-2: ಇದಾದ ಬಳಿಕ ಈ ಪೇಜ್ ನಲ್ಲಿ ಅಧಾರ್ ಸಂಖ್ಯೆ/Aadhar number ಆಯ್ಕೆಯನ್ನು ಕ್ಲಿಕ್ ಮಾಡಿಕೊಂಡು “Calamity Type” ನಲ್ಲಿ Flood ಎಂದು ಆಯ್ಕೆ ಮಾಡಿಕೊಂಡು “year” “2024-25” ಎಂದು ಆಯ್ಕೆ ಮಾಡಿ ನಂತರ “Enter Aadhar” ಕಾಲಂ ನಲ್ಲಿ ಅರ್ಜಿದಾರರ ಅಧಾರ್ ಸಂಖ್ಯೆಯನ್ನು ಹಾಕಿ ಪಕ್ಕದಲ್ಲಿ ಕಾಣುವ “Captcha” ಕೊಡ್ ಅನ್ನು ನಮೂದಿಸಿ “ವಿವರಗಳನ್ನು ಪಡೆಯಿರಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು.

STEP-3: “ವಿವರಗಳನ್ನು ಪಡೆಯಿರಿ” ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ ನಿಮ್ಮ್ ಅರ್ಜಿ ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತೋರಿಸುತ್ತದೆ. ಒಂದೊಮ್ಮೆ ಬೆಳೆ ಪರಿಹಾರದ ಹಣ ಜಮಾ ಅಗಿದ್ದರೆ ಹಣ ಪಾವತಿ ವಿವರ ಅಂದರೆ ಬೆಳೆ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಅಗಿದೆ ಎನ್ನುವ ವಿವರವನ್ನು ಇಲ್ಲಿ ನೋಡಬಹುದು.

Most Popular

Latest Articles

- Advertisment -

Related Articles