Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

January 11, 2026 | Siddesh
Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!
Share Now:

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೆ(Bele Parihara) ಒಳಗಾಗಿತ್ತು ಅದರಲ್ಲಿಯು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ದೊಡ್ಡ ಮಟ್ಟದ ಬೆಳೆಯು ಹಾನಿಯಾಗಿದ್ದು ಅತೀಯಾದ ಮಳೆಯಿಂದಾಗಿ ಹಾನಿಗೆ ಒಳಗಾದ ಅರ್ಹ ರೈತರ ಬ್ಯಾಂಕ್ ಖಾತೆಗೆ ಪರಿಹಾರದ ಹಣವನ್ನು ಬಿಡುಗಡ ಮಾಡಲಾಗಿದ್ದು ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಟ್ವಿಟರ್/ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ.

ಅತೀಯಾದ ಮಳೆಯಿಂದ ಉಂಟಾಗುವ ಬೆಳೆ ಹಾನಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ NDRF ಮತ್ತು SDRF ಮಾರ್ಗಸೂಚಿಯನ್ವಯ ರೈತರ ಬ್ಯಾಂಕ್ ಖಾತೆಗೆ ನೇರವಾಗಿ DBT ಮೂಲಕ ಬೆಳೆ ಪರಿಹಾರ ಹಣವನ್ನು ಜಮಾ ಮಾಡಲಾಗುತ್ತದೆ ಈ ನಿಟ್ಟಿನಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬೆಳೆ ನಷ್ಟಕ್ಕೆ ಪ್ರಸ್ತುತ ಅರ್ಹ ರೈತರಿಗೆ ಮಾರ್ಗಸೂಚಿಯನ್ವಯ ಪರಿಹಾರವನ್ನು ಒದಗಿಸಲಾಗಿದೆ.

ಇದನ್ನೂ ಓದಿ: Dairy Shed Subsidy-ಗ್ರಾಮ ಪಂಚಾಯಿತಿಯಿಂದ ದನದ ಶೆಡ್ ನಿರ್ಮಾಣಕ್ಕೆ ರೂ 57,000 ಪಡೆಯುವುದು ಹೇಗೆ!

ಪ್ರಸ್ತುತ ಅಂಕಣದಲ್ಲಿ ಕಲಬುರಗಿ ಜಿಲ್ಲೆಯ ರೈತರಿಗೆ ಖಾತೆಗೆ ಈ ಬಾರಿಯ ಮುಂಗಾರು ಹಂಗಾಮಿನ ಬೆಳೆ ನಷ್ಟಕ್ಕೆ(Crop Loss Amount) ಎಷ್ಟು ಮೊತ್ತದ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ? ಬೆಳೆ ಹಾನಿ ಪರಿಹಾರ ಹಣ ಜಮಾ ವಿವರವನ್ನು ರೈತರು ಮನೆಯಲ್ಲೇ ಇದ್ದು ತಮ್ಮ ಮೊಬೈಲ್ ಮೂಲಕ ಹೇಗೆ ಚೆಕ್ ಮಾಡಿಕೊಳ್ಳಬಹುದು? ಇತರೆ ಯಾವೆಲ್ಲ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ಸಹ ತಿಳಿಸಲಾಗಿದೆ.

Parihara Amount Details-ಕಲಬುರಗಿ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಜಿಲ್ಲೆಯ ರೈತರಿಗೆ ಖಾತೆಗೆ ಈ ಬಾರಿಯ ಮುಂಗಾರು ಹಂಗಾಮಿನ ಬೆಳೆ ನಷ್ಟಕ್ಕೆ ಬೆಳೆ ಪರಿಹಾರದ ಹಣ ವರ್ಗಾವಣೆ ಮಾಡಿರುವ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆಅವರು ತಮ್ಮ ಟ್ವಿಟರ್/ಎಕ್ಸ್ ಖಾತೆಯಲ್ಲಿ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ವಿವರ ಈ ಕೆಳಗಿನಂತಿದೆ:

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಹಾನಿಯಾದ ಜಿಲ್ಲೆಯ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೇಯ ವರದಿಯಂತೆ ಒಟ್ಟು 3.24 ಲಕ್ಷ ಹೇಕ್ಟರ್ ಹಾನಿ ಪ್ರದೇಶದ ಕುರಿತು ಸರಕಾರಕ್ಕೆ, ಪರಿಹಾರ ಮಂಜೂರು ಮಾಡಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು.

ಸದರಿ ಪ್ರಸ್ತಾವನೆಯಂತೆ ಈಗಾಗಲೇ ಪರಿಹಾರ ತಂತ್ರಂಶದಲ್ಲಿ ಅರ್ಹ ರೈತರ ಹಾಗೂ ಹಾನಿ ಪ್ರದೇಶದ ಮಾಹಿತಿಯನ್ನು ಅಳವಡಿಸಲಾಗಿದ್ದು, ಅದರಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 3,23,318 ರೈತರು ಪರಿಹಾರ ಪಡೆದ ಫಲಾನುಭವಿಗಳಾಗಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಈಗಾಗಲೇ SDRF ನಿಯಮಗಳ ಪ್ರಕಾರ ಪಾವತಿಸಲಾದ ಮೊತ್ತ ₹25,097.21 ಲಕ್ಷಗಳು.

ಇದನ್ನೂ ಓದಿ: Free Pumpset Repair-ಉಚಿತ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

ಕಲಬುರ್ಗಿ ಜಿಲ್ಲೆಗೆ ದೊರಕಿರುವ ರಾಜ್ಯ ಸರ್ಕಾರ ಘೋಷಿಸಿದ ಹೆಚ್ಚುವರಿ ಇನ್ ಪುಟ್ ಸಬ್ಸಿಡಿ (ಪ್ರತಿ ಹೆಕ್ಟೇರ್ ಗೆ ₹8,500 ರಂತೆ) ಪಾವತಿಸಲಾದ ಮೊತ್ತ ₹24,775.82 ಲಕ್ಷಗಳು. ಕಲಬುರಗಿ ಜಿಲ್ಲೆಗೆ ಈಗಾಗಲೇ ವಿತರಿಸಲಾಗಿರುವ ಪರಿಹಾರ ಒಟ್ಟು ಮೊತ್ತ ₹49,873.03 ಲಕ್ಷಗಳು.

2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಒಟ್ಟು 12313 ರೈತರಿಗೆ ಬೇರೆ ಬೇರೆ ಕಾರಣಗಳಿಂದಾಗಿ ಪರಿಹಾರ ಪಾವತಿಸಲು ಆಗಿಲ್ಲ. ಹಾಗಾಗಿ, ಬೆಳೆ ಪರಿಹಾರ ಬರದೇ ಇರುವ ರೈತರು ದೂರು ಸಲ್ಲಿಸುತ್ತಿದ್ದು, ಅದನ್ನು ಸರ್ಕಾರದ ಮಾರ್ಗಸೂಚಿಗಳ ಅನ್ವಯ ಪರಿಶೀಲಿಸಿ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

2025-26 ನೆ ಸಾಲಿನಲ್ಲಿ ಅತಿವೃಷ್ಟಿಯಿಂದ ಚಿತ್ತಾಪುರ ತಾಲೂಕಿನಲ್ಲಿ ಬೆಳೆ ಹಾನಿ ಅನುಭವಿಸಿದ 1178 ರೈತರ ಮಾಹಿತಿಯನ್ನು ಕೈಬಿಡಲಾಗಿತ್ತು. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಕ್ರಮಕೈಗೊಂಡಿದ್ದು, ಜೊತೆಗೆ 1178 ಕೈಬಿಟ್ಟ ರೈತರ ಮಾಹಿತಿಯನ್ಮು ಸರ್ಕಾರದ ಅನುಮತಿ ಪಡೆದು ದಿನಾಂಕ 02/01/2026 ರಿಂದ 05/01/2026 ರವರೆಗೆ ಪರಿಹಾರ ತಂತ್ರಾಂಶದಲ್ಲಿ ನಮೂದು ಮಾಡಲಾಗಿದೆ.

ಅದರಂತೆ ಒಟ್ಟು 12,313 ಪರಿಹಾರ ಹಣ ಪಾವತಿಸಲು ವಿವಿಧ ಕಾರಣಗಳಿಂದ ವೈಫಲ್ಯವಾದ ಅರ್ಹ ರೈತರಲ್ಲಿ ಇಲ್ಲಿಯವರೆಗೆ ಒಟ್ಟು 10,542 ಅರ್ಹ ರೈತರುಗಳು ಸಮಸ್ಯೆ ಸರಿಪಡಿಸಿಕೊಂಡಿರುತ್ತಾರೆ. ಇನ್ನು 1,771 ರೈತರ ಪರಿಹಾರ ಹಣ ಪಾವತಿಸಲು ಕೆವೈಸಿ ಪೆಂಡಿಂಗ್, ನಿಷ್ಟ್ರೀಯ ಖಾತೆ, ಖಾತೆ ರದ್ದು, ನಿಖರವಲ್ಲದ ಖಾತೆ, ನಿಷ್ಕ್ರಿಯ ಆಧಾರ್ ಜೋಡಣೆಯಿಂದ ಹೀಗೆ ಅನೇಕ ತಾಂತ್ರಿಕ ಕಾರಣಗಳಿಂದ ವೈಫಲ್ಯವಾದ ರೈತರು ಕೊಡಲೇ ತಮ್ಮ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಲು ಸೂಚಿಸಲಾಗಿದೆ.

ಇದನ್ನೂ ಓದಿ: Gruhalakshmi Amount-ಗೃಹಲಕ್ಷ್ಮಿ 2 ತಿಂಗಳ ಬಾಕಿ ಹಣ ಬಿಡುಗಡೆ ನೂತನ ಮಾಹಿತಿ ಪ್ರಕಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿದ್ದ ಸೇತುವೆಗಳು, ಕಲ್ವರ್ಟ್ ಗಳು ಹಾಗೂ ರಸ್ತೆಗಳ ದುರಸ್ತಿ ಹಾಗೂ ಪುನರ್ ನಿರ್ಮಾಣಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕ್ರಮವಹಿಸಿದೆ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಅಡಿಯಲ್ಲಿ ಸುಮಾರು ₹ 88.80 ಕೋಟಿ ವೆಚ್ಚದಲ್ಲಿ 90 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ.

Parihara Amount-ಹಾನಿ ಅನುಗುಣವಾಗಿ ಇತರೆ ಜಿಲ್ಲೆಯ ರೈತರ ಖಾತೆಗೂ ಬೆಳೆ ಹಾನಿ ಪರಿಹಾರ ಬಿಡುಗಡೆ:

ಕಲಬುರಗಿ ಜಿಲ್ಲೆಯನ್ನು ಹೊರತುಪಡಿಸಿ ಹಾನಿ ಪ್ರಮಾಣದ ಅನುಗುಣವಾಗಿ ರಾಜ್ಯದ ಉಳಿದ ಜಿಲ್ಲೆಯ ರೈತರ ಖಾತೆಗೂ ಸಹ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿ ಪರಿಹಾರವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: Kuri Shed Subsidy-ನರೇಗಾ ಯೋಜನೆಯಡಿ ಕುರಿ ಶೆಡ್ ನಿರ್ಮಾಣಕ್ಕೆ ರೂ 70,000 ಪಡೆಯುವುದು ಹೇಗೆ!

Bele Parihara Status Check On Mobile-ಮೊಬೈಲ್ ನಲ್ಲೇ ಬೆಳೆ ಪರಿಹಾರದ ಹಣ ಜಮಾ ವಿವರವನ್ನು ತಿಳಿಯಬಹುದು:

ರೈತರು ಈ ಕೆಳಗಿನ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಗಿರುವ ಬೆಳೆ ಹಾನಿಯ ಪರಿಹಾರದ ಜಮಾ ವಿವರವನ್ನು ಒಂದೆರಡು ಕ್ಲಿಕ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.

Step-1: ರೈತರು ಪ್ರಥಮ ಹಂತದಲ್ಲಿ "Bele Parihara Status" ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಬೆಳೆ ಪರಿಹಾರ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: A-Khata-ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆಗೆ ಸಚಿವ ಸಂಪುಟದಲ್ಲಿ ನಿರ್ಣಯ!

Parihara Amount

ಇದನ್ನೂ ಓದಿ: SIM Card-ಹೊಸ ಸಿಮ್ ಕಾರ್ಡ ಖರೀದಿಗೆ ಈ ನಿಯಮ ಪಾಲಿಸುವುದು ಕಡ್ದಾಯ!

Step-2: ನಂತರ ಈ ಪೇಜ್ ನಲ್ಲಿ ಕಾಣುವ "Citizen Login" ಬಟನ್ ಮೇಲೆ ಕ್ಲಿಕ್ ಮಾಡಿ ಮುಂದಿನ ಪುಟ ಭೇಟಿ ಮಾಡಬೇಕು.

Step-3: ಬಳಿಕ ಈ ಪೇಜ್ ನಲ್ಲಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಮತ್ತು ಕ್ಯಾಪ್ಚ್ ಕೋಡ್ ಅನ್ನು ನಮೂದಿಸಿ "Send OTP" ಬಟನ್ ಮೇಲೆ ಕ್ಲಿಕ್ ಮಾಡಿ ನಂತರ "Login" ಬಟನ್ ಮೇಲೆ ಕ್ಲಿಕ್ ಮಾಡಿ. ಈ ರೀತಿಯ ವಿಧಾನವನ್ನು ಅನುಸರಿಸಿ ಲಾಗಿನ್ ಅಗುವ ಸಮಯದಲ್ಲಿ ಇ-ಕೆವೈಸಿ/ e-KYC ಅಗಿರುವುದಿಲ್ಲ ಎಂದು ಸೂಚನೆ ಬಂದರೆ ನಿಮ್ಮ 12 ಅಂಕಿಯ ಆಧಾರ್ ಕಾರ್ಡ ನಂಬರ್ ಮತ್ತು ಹೆಸರು ಹಾಗೂ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಅನ್ನು ಹಾಕಿ ಲಾಗಿನ್ ಅಗಬೇಕು.

Step-4: ಲಾಗಿನ್ ಅಗಿ ಪರಿಹಾರದ ಹಣ ಜಮಾ ವಿವರವನ್ನು ಚೆಕ್ ಮಾಡಿಕೊಳ್ಳಬಹುದು ಜೊತೆಗೆ ಈ ಕುರಿತು ಆಕ್ಷೇಪಣೆ ಇದ್ದರು ಸಹ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದರ ಜೊತೆಗೆ ಈ ಪೇಜ್ ನಲ್ಲಿ ಕಾಣುವ "Village Wise List" ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹಳ್ಳಿಯಲ್ಲಿ ಯಾರಿಗೆಲ್ಲ ಬೆಳೆ ಹಾನಿ ಪರಿಹಾರದ ಹಣ ಜಮಾ ಅಗಿದೆ ಎನ್ನುವ ವಿವರವನ್ನು ಚೆಕ್ ಮಾಡಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: