- Advertisment -
HomeAgricultureBele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್!

Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್!

Last updated on December 9th, 2024 at 12:53 pm

ಅಡಿಕೆ ಸೇರಿದಂತೆ ಇತರೆ ತೋಟಗಾರಿಕೆ ಬೆಳೆಗಳ ಬೆಳೆ ವಿಮೆ(Bele vime hana) ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು, 2023-24 ನೇ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ ರೈತರು ಈ ಅಂಕಣದಲ್ಲಿ ತಿಳಿಸಿರುವ ವಿಧಾನವನ್ನು ಅನುಸರಿಸಿ ಸಂರಕ್ಷಣೆ ವೆಬ್ಸೈಟ್ ಅನ್ನು ಭೇಟಿ ಮಾಡಿ ಜಮಾ ವಿವರವನ್ನು ಪಡೆಯಬಹುದು.

ಕಳೆದ ವಾರ ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ಮತ್ತು ಮಾವು, ಶುಂಠಿ, ಮೆಣಸು ಬೆಳೆಗಳಿಗೆ ಕಳೆದ ವರ್ಷ ಬೆಳೆ ವಿಮೆಗೆ(Horticulture Crop insurance) ಅರ್ಜಿ ಸಲ್ಲಿಸಿದ ಸುಮಾರು 71,000 ಸಾವಿರ ರೈತರ ಖಾತೆಗೆ 156.14 ಲಕ್ಷ ಬೆಳೆ ವಿಮೆ ಪರಿಹಾರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿತ್ತು ಇದೆ ಮಾದರಿಯಲ್ಲಿ ಇತರೆ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಿದ ರೈತರಿಗೂ ಬೆಳೆ ವಿಮೆ ಹಣವನ್ನು ಜಮಾ ಮಾಡಲಾಗುತ್ತಿದೆ.

ಇದನ್ನೂ ಓದಿ: Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ!

ಕಳೆದ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ(Faasl bhime yojana) ಅರ್ಜಿ ಸಲ್ಲಿಸಿದವರು ರಾಜ್ಯ ಸರಕಾರದ ಅಧಿಕೃತ www.samrakshane.gov.in ಪೋರ್ಟಲ್ ಅನ್ನು ಪ್ರವೇಶ ಮಾಡಿ ಬೆಳೆ ವಿಮೆ ಹಣ ಜಮಾ ವಿವರವನ್ನು ಮತ್ತು ಅರ್ಜಿ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬಹುದು.

Crop Insurance Status check- ಮೊಬೈಲ್ ನಲ್ಲೇ ಬೆಳೆ ವಿಮೆ ಅರ್ಜಿ ಸ್ಥಿತಿ ಮತ್ತು ಜಮಾ ವಿವರವನ್ನು ಪಡೆಯುವ ವಿಧಾನ:

ರಾಜ್ಯ ಸರಕಾರದಿಂದ ರೈತರಿಗೆ ಬೆಳೆ ವಿಮೆ ಅರ್ಜಿ ವಿಲೇವಾರಿಯಲ್ಲಿ ಮತ್ತು ಪರಿಹಾರದ ಹಣ ಜಮಾ ಮಾಡುವ ಪದ್ದತಿಯಲ್ಲಿ ಪಾರದರ್ಶಕತೆಯನ್ನು ಒದಗಿಸಲು www.samrakshane.karnataka.gov.in ತಂತ್ರಾಂಶವನ್ನು ಅಭಿವೃದ್ದಿಪಡಿಸಿದ್ದು ಈ ತಂತ್ರಾಂಶದ ಮೂಲಕವೇ ಎಲ್ಲಾ ವಿಮಾ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತದೆ.

ರೈತರು ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಸಂರಕ್ಷಣೆ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಬೆಳೆ ವಿಮೆ ಪರಿಹಾರದ ಹಣ ಜಮಾ ವಿವರವನ್ನು ತಮ್ಮ ಮೊಬೈಲ್ ನಲ್ಲೇ ಪಡೆಯಬಹುದು.

ಇದನ್ನೂ ಓದಿ: Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Step-1: ಮೊದಲು Crop Insurance application Status check ಇಲ್ಲಿ ಕ್ಲಿಕ್ ಮಾಡಿ ಅಧಿಕೃತ samrakshane ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಸಂರಕ್ಷಣೆ ವೆಬ್ಸೈಟ್ ಅನ್ನು ಪ್ರವೇಶ ಮಾಡಿದ ಬಳಿಕ ಇಲ್ಲಿ ವರ್ಷವನ್ನು ಆಯ್ಕೆ ಮಾಡಿಕೊಳ್ಳಬೇಕು “2023-24” ಎಂದು ಆಯ್ಕೆ ಮಾಡಿ ನಂತರ ಹಂಗಾಮು: “Kharif” ಎಂದು ಸೆಲೆಕ್ಟ್ ಮಾಡಿಕೊಂಡು “ಮುಂದೆ/Go” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಮೇಲಿನ ಹಂತವನ್ನು ಪೂರ್ಣಗೊಳಿಸಿ ಈ ಪೇಜ್ ನಲ್ಲಿ ಕೆಳಗೆ ಕಾಣುವ “Farmers” ಕಾಲಂ ನಲ್ಲಿ “Crop Insurance Details on Survey no” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ಜಿಲ್ಲೆ,ತಾಲ್ಲೂಕು, ಹೋಬಳಿ, ಗ್ರಾಮ ಮತ್ತು ಸರ್ವೆ ನಂಬರ್ ಅನ್ನು ಹಾಕಿ “Search” ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000!

Step-4: “Search” ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ಇಲ್ಲಿ ಆ ಸರ್ವೆ ನಂಬರ್ ನಲ್ಲಿರುವ ಎಲ್ಲಾ ರೈತರ ಹೆಸರುಗಳು ತೋರಿಸುತ್ತವೆ ನಿಮ್ಮ ಹೆಸರು ತೋರಿಸುವ ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ ಈ ಪೇಜ್ ನ ಕೊನೆಯಲ್ಲಿ ಕಾಣುವ ಬೆಳೆ ವಿಮೆ ಅರ್ಜಿಯ(Application No) ಸಂಖ್ಯೆಯ ನ್ನು ಒಂದು ಕಡೆ ಬರೆದುಕೊಳ್ಳಬೇಕು.

crop insurance

ಇದನ್ನೂ ಓದಿ: SSP scholarship 2024-ವಿದ್ಯಾರ್ಥಿ ವೇತನ ಪಡೆಯಲು ಹೊಸ ಆದೇಶ ಪ್ರಕಟ!

Step-5: ಇದಾದ ಬಳಿಕ ಎಡ ಭಾಗದಲ್ಲಿ ಮೇಲೆ ಕಾಣುವ “Home” ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತೆ “Farmers” ಕಾಲಂ ನಲ್ಲಿ “Check Status” ಬಟನ್ ಮೇಲೆ ಕ್ಲಿಕ್ ಮಾಡಿ ನೀವು ಬರೆದುಕೊಂಡಿರುವ ವಿಮಾ ಅರ್ಜಿಯ ಸಂಖ್ಯೆಯನ್ನು ನಮೂದಿಸಿ ಕೆಳಗಿರುವ ಕ್ಯಾಪ್ಚ್ ಕೋಡ್ ಅನ್ನು ನಮೂದಿಸಿ Serach ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಬೆಳೆ ವಿಮೆ ಜಮಾ ಅಗಿದ್ದರೆ ಈ ಕೆಳಗಿನ ಚಿತ್ರದಲ್ಲಿ ತೋರಿಸಿದ ಕಾಲಂ ನಲ್ಲಿ ಬೆಳೆ ವಿಮೆ ಪರಿಹಾರ ಹಣ ಜಮಾ ಅಗಿರುವ ಬ್ಯಾಂಕ್ ಖಾತೆಯ ಕೊನೆಯ ನಾಲ್ಕು ಸಂಖ್ಯೆ, UTR ನಂಬರ್ಮ್ ಒಟ್ಟು ಹಣ ಎಷ್ಟು? ಹಾಗೂ ಹಣ ಜಮಾ ಅದ ದಿನಾಂಕದ ಮಾಹಿತಿ ತೋರಿಸುತ್ತದೆ.

ಇದನ್ನೂ ಓದಿ: Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!

adike bele vime status
- Advertisment -
LATEST ARTICLES

Related Articles

- Advertisment -

Most Popular

- Advertisment -