Bembala Bele Yojane- ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ!

May 17, 2025 | Siddesh
Bembala Bele Yojane- ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ!
Share Now:

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು(Sunflower MSP) ಖರೀದಿ ಮಾಡಲು ಸರ್ಕಾರ ಮುಂದಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ(Karnataka APMC) ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಸೂರ್ಯಕಾಂತಿ ಖರೀದಿ(Suryakanti Kharidi Kendra) ಕೇಂದ್ರಗಳನ್ನು ತೆರೆದು ರೈತರಿಂದ ನೋಂದಣಿಯನ್ನು ಮಾಡಿಕೊಂಡು ಕನಿಷ್ಠ ಬೆಂಬಲ ಬೆಲೆ ದರವನ್ನು ನೀಡಿ ರೈತರಿಂದ ನೇರವಾಗಿ ಸೂರ್ಯಕಾಂತಿಯನ್ನು ಖರೀದಿ ಮಾಡುವ ದೇಸೆಯಲ್ಲಿ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ.

ಇದನ್ನೂ ಓದಿ: DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

ರೈತರು ತಾವು ಬೆಳೆದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ(Suryakanti Bembala Bele) ಮಾರಾಟ ಮಾಡಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಸರ್ಕಾರದಿಂದ ಎಷ್ಟು ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದೆ? ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು ಮಾರಾಟ ಮಾಡಲು ಒದಗಿಸಬೇಕಾದ ದಾಖಲಾತಿ ಮಾಹಿತಿ ಹಾಗೂ ಯಾವೆಲ್ಲ ಜಿಲ್ಲೆಗಳಲ್ಲಿ ಸೂರ್ಯಕಾಂತಿಯನ್ನು ಖರೀದಿ ಮಾಡಲಾಗುತ್ತದೆ?ಇನ್ನಿತರೆ ಎಲ್ಲಾ ಅಗತ್ಯ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Suryakanti Kharidi Kendra-ರಾಜ್ಯದಲ್ಲಿ ಯಾವೆಲ್ಲ ಜಿಲ್ಲೆಗಳಲ್ಲಿ ಖರೀದಿ ಮಾಡಲು ಸಿದ್ದತೆ ನಡೆಸಿದೆ?

ರಾಜ್ಯ ಸರ್ಕಾರದಿಂದ 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬೆಳೆದ ಸೂರ್ಯಕಾಂತಿಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಉತ್ಪನ್ನವನ್ನು ಖರೀದಿ ಮಾಡಲು ಬಾಗಲಕೋಟೆ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ,ಗದಗ,ಕಲಬುರ್ಗಿ,ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ತೆರೆಯಲಾಗುತ್ತದೆ ಎಂದು ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ.

ಇದನ್ನೂ ಓದಿ: Guest Teacher Salary Hike-ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವಧನ ಹೆಚ್ಚಳ! ಇಲ್ಲಿದೆ ಅಧಿಕೃತ ಆದೇಶದ ಪ್ರತಿ!

Suryakanti MSP Price-ಪ್ರತಿ ಕ್ವಿಂಟಾಲ್ ಗೆ ಬೆಂಬಲ ಬೆಲೆ ಎಷ್ಟು?

ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ರೈತರಿಂದ ನೇರವಾಗಿ ಖರೀದಿ ಮಾಡಲು ಪ್ರತಿ ಕ್ವಿಂಟಾಲ್ ಗೆ ರೂ 7,280/- ಬೆಲೆಯನ್ನು ನಿಗದಿಪಡಿಸಲಾಗಿದೆ.

Suryakanti Bembala Bele Yojana Guidelines-ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಸರ್ಕಾರದ ನಿಯಮಗಳು:

ರೈತರು ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು ಮಾರಾಟ ಮಾಡಲು ಹಿಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿಯನ್ನು ತಮ್ಮ ಜಮೀನಿನಲ್ಲಿ ಬೆಳೆದಿರಬೇಕು ಹಾಗೂ ಬೆಳೆ ಸಮೀಕ್ಷೆಯಲ್ಲಿ ಬೆಳೆ ವಿವರ ದಾಖಲಾಗಿರಬೇಕು.

ಪ್ರತಿ ಎಕರೆಗೆ 04 ಕ್ವಿಂಟಾಲ್ ನಂತೆ ಒಬ್ಬ ರೈತರಿಂದ 20 ಕ್ವಿಂಟಾಲ್ ವರೆಗೆ ಪ್ರತಿ ರೈತರಿಂದ ಖರೀದಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರೈತರು ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು ಮಾರಾಟ ಮಾಡಲು ಅಗತ್ಯ ವಿವರ ಮತ್ತು FID ನಂಬರ್ ಅನ್ನು ನೀಡಿ ತಮ್ಮ ತಾಲ್ಲೂಕಿನ ಖರೀದಿ ಕೇಂದ್ರದಲ್ಲಿ ನೋಂದಣಿಯನ್ನು ಮಾಡಿಕೊಂಡ ನಂತರ ತಮ್ಮ ಉತ್ಪನ್ನವನ್ನು ಮಾರಾಟ ಮಾಡಬೇಕು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Flipkart Scholarship-ಫ್ಲಿಪ್‌ಕಾರ್ಟ್ ಫೌಂಡೇಶನ್ ನಿಂದ 50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

MSP Scheme

Suryakanti Kharidi Kendra-ಸೂರ್ಯಕಾಂತಿಯನ್ನು ಮಾರಾಟ ಮಾಡಲು ರೈತರು ಅನುಸರಿಸಬೇಕಾದ ಕ್ರಮ ಹೀಗಿದೆ:

ರೈತರು ಹಿಂಗಾರು ಹಂಗಾಮಿನಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ಮೊದಲಿಗೆ ತಮ್ಮ ತಾಲ್ಲೂಕಿನಲ್ಲಿ ಖರೀದಿ ಕೇಂದ್ರ ತೆರೆದ ಬಳಿಕ ಜಮೀನಿನ ಪಹಣಿ, ರೈತರ ಆಧಾರ್ ಕಾರ್ಡ, ಬ್ಯಾಂಕ್ ಪಾಸ್ ಬುಕ್, FID ನಂಬರ್/ಫೂಟ್ಸ್ ಐ.ಡಿ. ಅನ್ನು ತೆಗೆದುಕೊಂಡು ಖರೀದಿ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ನೋಂದಣಿಯನ್ನು ಮಾಡಿಕೊಂಡು ಬಳಿಕ ನಿಗದಿಪಡಿಸಿದ ದಿನಾಂಕದಂದು ತಮ್ಮ ಉತ್ಪನ್ನವನ್ನು ತೆಗೆದುಕೊಂಡು ಹೋಗಿ ಮಾರಾಟ ಮಾಡಬೇಕು.

Documents For Bembala Bele Yojana-ಮುಂಚಿತವಾಗಿ ನೋಂದಣಿಗೆ ಅಗತ್ಯ ದಾಖಲೆಗಳು:

ಸೂರ್ಯಕಾಂತಿ ಖರೀದಿ ಕೇಂದ್ರದಲ್ಲಿ ರೈತರು ಬೆಂಬಲ ಬೆಲೆಯಲ್ಲಿ ತಮ್ಮ ಉತ್ಪನ್ನವನ್ನು ಮಾರಾಟ ಮಾಡಲು ಮುಂಚಿತವಾಗಿ ನೋಂದಣಿಯನ್ನು ಮಾಡಿಕೊಳ್ಳಲು ಈ ದಾಖಲೆಗಳನ್ನು ಸಲ್ಲಿಸುವುದು ಅವಶ್ಯವಾಗಿರುತ್ತದೆ.

  • ರೈತರ ಆಧಾರ್ ಕಾರ್ಡ ಪ್ರತಿ
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ಸೂರ್ಯಕಾಂತಿ ಬೆಳೆದ ಜಮೀನಿನ ಪಹಣಿ/RTC
  • ಮೊಬೈಲ್ ಸಂಖ್ಯೆ

ಇದನ್ನೂ ಓದಿ: Borewell Permission-ಇನ್ಮುಂದೆ ಬೋರ್ ವೆಲ್ ಕೊರೆಸಲು ಈ ಅನುಮತಿ ಕಡ್ಡಾಯ!

MSP Scheme DBT Amount-ಮಾರಾಟ ಮಾಡಿದ ಉತ್ಪನ್ನದ ಹಣವನ್ನು ಹೇಗೆ ಪಾವತಿ ಮಾಡಲಾಗುತ್ತದೆ?

ರೈತರು ತಾವು ಬೆಳೆದ ಸೂರ್ಯಕಾಂತಿಯನ್ನು ಖರೀದಿ ಕೇಂದ್ರಗಳಲ್ಲಿ ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಿದ ಬಳಿಕ 15-20 ದಿನದ ಒಳಗಾಗಿ ರೈತರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ಮಾರಾಟ ಮಾಡಿದ ಉತ್ಪನ್ನದ ಹಣವನ್ನು ಜಮಾ ಮಾಡಲಾಗುತ್ತದೆ.

MSP Scheme Helpline- ಸೂರ್ಯಕಾಂತಿ ಉತ್ಪನ್ನವನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ರೈತರು ಹೆಚ್ಚಿನ ಮಾಹಿತಿಯನ್ನು ಪಡೆಯಲು ಕಚೇರಿ ಸಮಯದಲ್ಲಿ ಉಚಿತ ಸಹಾಯವಾಣಿ ಸಂಖ್ಯೆಗೆ 1800 425 1552 ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

WhatsApp Group Join Now
Telegram Group Join Now
Share Now: