Bike Repair Training-ಉಚಿತ 30 ದಿನದ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ!

November 11, 2025 | Siddesh
Bike Repair Training-ಉಚಿತ 30 ದಿನದ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ!
Share Now:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Bike Repair Training) ಸಂಸ್ಥೆಯ ವತಿಯಿಂದ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಗ್ರಾಮೀಣ ಯುವಕರಿಗೆ ಸ್ವಯಂ ಉದ್ಯೋಗವನ್ನು ನೆಡೆಸಲು ಕೌಶಲ್ಯ ತರಬೇತಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ದಿನೇ ದಿನೇ ಹೆಚ್ಚುತ್ತಿರುವ ದ್ವಿಚಕ್ರ ವಾಹನಗಳ(Bike Repair Training Application) ಸಂಖ್ಯೆಗೆ ಅನುಗುಣವಾಗಿ ಈ ಕ್ಷೇತ್ರದಲ್ಲಿ ರಿಪೇರಿ ಮತ್ತು ಸರ್ವಿಸಿಂಗ್ ವಿಭಾಗದಲ್ಲಿ ಹೆಚ್ಚು ಉದ್ಯೋಗ ಅವಕಾಶಗಳಿದ್ದು, ಈ ವಿಭಾಗದಲ್ಲಿ ಸ್ವಂತ ಉದ್ದಿಮೆಯನ್ನು ಆರಂಭಿಸುವವರಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೊಣ್ಣಹಳ್ಳಿಪುರ ಕೇಂದ್ರದಿಂದ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: PM Kisan Installment-2025: ಪಿಎಂ ಕಿಸಾನ್ 21ನೇ ಕಂತಿನ ಹಣ ಬಿಡುಗಡೆ ಯಾವಾಗ? ಕೆವೈಸಿ ಮಾಡದವರಿಗಿಲ್ಲ ಆರ್ಥಿಕ ನೆರವು!

ಈ ಅಂಕಣದಲ್ಲಿ ಉಚಿತ ದ್ವಿಚಕ್ರ ವಾಹನ ರಿಪೇರಿ(Bike Repair) ಮತ್ತು ಸರ್ವಿಸಿಂಗ್ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ತರಬೇತಿಯು ನೆಡೆಯುವ ಸ್ಥಳ? ತರಬೇತಿಯಲ್ಲಿ ಭಾಗವಹಿಸಲು ಅಗತ್ಯವಿರುವ ದಾಖಲಾತಿಗಳಾವುವು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Bike Repair Training Eligibility Criteria-ಅರ್ಜಿ ಸಲ್ಲಿಸಲು ಅರ್ಹರು:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಯನ್ನು ಪಡೆಯಲು ಈ ಕೆಳಗಿನ ಪಟ್ಟಿಯಲ್ಲಿರುವ ಅರ್ಹತಾ ಮಾನದಂಡಗಳನ್ನು ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಸ್ವಂತ ಉದ್ದಿಮೆಯನ್ನು ಆರಂಭಿಸುವ ಇಚ್ಚೆಯನ್ನು ಹೊಂದಿರುವವರಿಗೆ ಮೊದಲ ಆದ್ಯತೆ ಇರುತ್ತದೆ.
ಅಭ್ಯರ್ಥಿಯ ವಯಸ್ಸು18 ರಿಂದ 45 ವರ್ಷದ ಒಳಗಿರಬೇಕು.
ಕನ್ನಡ ಓದಲು ಮತ್ತು ಬರವಣಿಗೆ ಬರುವಂತಹ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯಿರುತ್ತದೆ.
ಬಿಪಿಎಲ್ ಕಾರ್ಡ ಹೊಂದಿರುವವರಿಗೆ ಪ್ರಥಮ ಆದ್ಯತೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Sarojini Damodaran Scholarship-ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Free Bike Repair Training Duration-ತರಬೇತಿ ಅವಧಿ:

ಉಚಿತ ಬೈಕ್ ರಿಪೇರಿ ತರಬೇತಿಯು 20 ನವೆಂಬರ್ 2025 ರಿಂದ ಪ್ರಾರಂಭವಾಗಿ 12 ಒಟ್ಟು 30 ದಿನ ನಡೆಯಲಿದೆ.

Bike Repair Training

ಇದನ್ನೂ ಓದಿ: Indira Kit-ರೇಶನ್ ಕಾರ್ಡದಾರರಿಗೆ ಸಿಹಿ ಸುದ್ದಿ! ಇನ್ಮುಂದೆ ಸಿಗಲಿದೆ ಪ್ರತಿ ತಿಂಗಳು ತೊಗರಿ ಬೇಳೆ!

How To Apply For Bike Repair Training-ಆನ್ಲೈನ್ ನಲ್ಲಿ ನೋಂದಣಿ ಮಾಡುವುದು ಹೇಗೆ?

ಆಸಕ್ತಿಯನ್ನು ಹೊಂದಿರುವ ಆಭ್ಯರ್ಥಿಗಳು ಉಚಿತ ಬೈಕ್ ರಿಪೇರಿ ತರಬೇತಿಯಲ್ಲಿ ಪಾಲ್ಗೊಳಲು ತರಭೇತಿ ಆರಂಭವಾಗುವ ಮುಂಚಿತವಾಗಿ ಕೆಳಗಿನ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಗೂಗಲ್ ಪಾರ್ಮ್ ಅನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

Step-1: ಪ್ರಥಮದಲ್ಲಿ ಈ Register Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಅರ್ಜಿ ನಮೂನೆಯನ್ನು ಪ್ರವೇಶ ಮಾಡಿ.

Step-2: ತದನಂತರ ಈ ಪುಟದಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ತರಬೇತಿಯಲ್ಲಿ ಭಾಗವಹಿಸಲು ಮುಂಚಿತವಾಗಿ ನೋಂದಣಿಯನ್ನು ಮಾಡಿ.

ಇದನ್ನೂ ಓದಿ: Mobile Phone Trace-ನಿಮ್ಮ ಮೊಬೈಲ್ ಕಳುವಾದರೆ ಟ್ರೇಸ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

Documents For Bike Repair Training-ತರಬೇತಿಯಲ್ಲಿ ಭಾಗವಹಿಸಲು ಅಗತ್ಯ ದಾಖಲೆಗಳು:

ನೋಂದಣಿಯನ್ನು ಮಾಡಿಕೊಂಡಿರುವ ಅಭ್ಯರ್ಥಿಗಳು ಬೈಕ್ ರಿಪೇರಿ ತರಬೇತಿ ಪ್ರಾರಂಭವಾಗುವ ದಿನದಂದು ತರಬೇತಿಯಲ್ಲಿ ಭಾಗವಹಿಸಲು ಅಗತ್ಯವಾಗಿ ತೆಗೆದುಕೊಂಡು ಹೋಗಬೇಕಾಗುವ ಅಗತ್ಯ ದಾಖಲಾತಿಗಳ ಪಟ್ಟಿ ಹೀಗಿದೆ:

  • ಆಧಾರ್ ಕಾರ್ಡ/Aadhar.
  • ಬ್ಯಾಂಕ್ ಪಾಸ್ ಬುಕ್/Bank Pass Book.
  • ರೇಶನ್ ಕಾರ್ಡ/Ration Card.
  • ಪಾನ್ ಕಾರ್ಡ/Pan Card.
  • ಅಭ್ಯರ್ಥಿಯ ಪೋಟೋ/Photo.

ಇದನ್ನೂ ಓದಿ: Bima Sakhi-ಬಿಮಾ ಸಖಿ ಯೋಜನೆ: ಎಲ್ಐಸಿ ಯಿಂದ ಮಹಿಳಾ ಏಜೆಂಟರಿಗೆ ತಿಂಗಳಿಗೆ ರೂ 7,000/- ಸ್ಟೈಪೆಂಡ್!

Training Center Address-ತರಬೇತಿ ಕೇಂದ್ರದ ವಿಳಾಸ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮ.

Training Center Location-ತರಬೇತಿ ಸಂಸ್ಥೆಯ ಲೋಕೇಶನ್- Location

Free Bike Repair Training-ಸಂಪೂರ್ಣ ಉಚಿತ ತರಬೇತಿ:

ಬೈಕ್ ರಿಪೇರಿ ತರಬೇತಿಯು ಸಂಪೂರ್ಣ ಉಚಿತವಾಗಿದ್ದು ಇದಕ್ಕಾಗಿ ಅಭ್ಯರ್ಥಿಗಳು ಯಾವುದೇ ಬಗ್ಗೆಯ ಶುಲ್ಕವನ್ನು ಪಾವತಿಸುವ ಅವಶ್ಯಕತೆ ಇರುವುದಿಲ್ಲ, ಇದಲ್ಲದೇ ತರಬೇತಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿ ಮತ್ತು ಊಟದ ವ್ಯವಸ್ಥೆಯನ್ನು ತರಬೇತಿ ಕೇಂದ್ರದಲ್ಲೇ ಏರ್ಪಡಿಸಲಾಗಿರುತ್ತದೆ.

Contact Number-ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ ಸಂಪರ್ಕಿಸಿ- 9505894247/9591514154/8970476050

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: