Birth Certificate-ಇನ್ನೂ ಮುಂದೆ ಜನನ ಪ್ರಮಾಣ ಪತ್ರ ಪಡೆಯುವುದು ಭಾರಿ ಸುಲಭ!

May 9, 2025 | Siddesh
Birth Certificate-ಇನ್ನೂ ಮುಂದೆ ಜನನ ಪ್ರಮಾಣ ಪತ್ರ ಪಡೆಯುವುದು ಭಾರಿ ಸುಲಭ!
Share Now:

ಇಂದಿನ ಕಾಲದ ತಂತ್ರಜ್ಞಾನ ಅಭಿವೃದ್ಧಿಯ ಯುಗದಲ್ಲಿ ಸರ್ಕಾರದಿಂದ ಒದಗುವ ಸೇವೆಗಳನ್ನು ಆನ್ಲೈನ್ ಅಲ್ಲಿ ಪಡೆಯುವುದು ಅತ್ಯಂತ ಸುಲಭವಾಗಿದೆ. ಜನನ ಪ್ರಮಾಣ ಪತ್ರವು(Birth Certificate Application) ಅತ್ಯಂತ ಮಹತ್ವದ ದಾಖಲೆಯಾಗಿದ್ದು, ಇದನ್ನು ನಿಮ್ಮ ಮೊಬೈಲ್ ನಲ್ಲೆ ಹೇಗೆ ಪಡೆದುಕೊಳ್ಳಬಹುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ.

ಜನನ ಪ್ರಮಾಣ ಪತ್ರವು ಕೇವಲ ಒಬ್ಬ ವ್ಯಕ್ತಿಯ ಜನನದ ದಾಖಲೆಯಾಗಿBirth Certificate) ಮಾತ್ರ ಉಳಿಯದೆ, ಆಧಾರ್ ಕಾರ್ಡ್, ಪಾಸ್‌ಪೋರ್ಟ್, ಶಿಕ್ಷಣ ಪ್ರವೇಶ ಸೇರಿದಂತೆ ಹಲವಾರು ಪ್ರಮುಖ ದಾಖಲೆಗಳಿಗೆ ಮೂಲ ಆಧಾರವಾಗಿರುತ್ತದೆ. ಹಿಂದಿನ ದಿನಗಳಲ್ಲಿ ಈ ಪ್ರಮಾಣ ಪತ್ರ ಪಡೆಯಲು ಗ್ರಾಮ ಪಂಚಾಯತ್, ಪುರಸಭೆ ಅಥವಾ ಆರೋಗ್ಯ ಇಲಾಖೆಯ ಕಚೇರಿಗಳಿಗೆ ಭೇಟಿ ನೀಡಬೇಕಾಗಿತ್ತು.

ಇದನ್ನೂ ಓದಿ: Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

ಆದರೆ ಇಂದಿನ ಡಿಜಿಟಲ್ ಯುಗದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒದಗಿಸಿರುವ ಆನ್‌ಲೈನ್ ವೇದಿಕೆಗಳ ಮೂಲಕವೇ ಅರ್ಜಿ ಸಲ್ಲಿಸಲು ಸುಲಭವಾಗಿದ್ದು, ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಜನನ ಪ್ರಮಾಣ ಪತ್ರದ(Online Birth Certificate) ಮಹತ್ವವೇನು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

Where to apply for birth certificate- ಜನನ ಪ್ರಮಾಣ ಪತ್ರವನ್ನು ಪಡೆಯಲು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ನಾಗರಿಕರು ಜನನ ಪ್ರಮಾಣ ಪತ್ರವನ್ನು ಪಡೆಯಲು ಎರಡು ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು ಒಂದನೇಯ ವಿಧಾನ ನೇರವಾಗಿ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರವನ್ನು ಅಗತ್ಯ ದಾಖಲಾತಿಗಳ ಸಮೇತ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಖುದ್ದು ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: PM Kisan-2025: ಪಿ ಎಂ ಕಿಸಾನ್ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಪ್ರಕಟ!

How to apply for Birth Certificate- ಜನನ ಪ್ರಮಾಣ ಪತ್ರವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಜನನ ಪ್ರಮಾಣ ಪತ್ರವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಅರ್ಜಿದಾರರು ಈ ಕೆಳಗಿನ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದು.

Step-1: ಮೊದಲಿಗೆ Apply Now ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

birth certificate application

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ ಅನ್ನು ಹಾಕಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಲಾಗಿನ್ ಅಗಬೇಕು.

Step-3: ಇಲ್ಲಿ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲ ಅಗತ್ಯ ವಿವರ ಮತ್ತು ದಾಖಲೆಗಳನ್ನು ಭರ್ತಿ ಮಾಡಿ ಕೊನೆಯಲ್ಲಿ"Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Diploma Admission-2025: ಸರ್ಕಾರಿ ಕೋಟಾದಡಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Whate are the Documents-ಜನನ ಪ್ರಮಾಣ ಪತ್ರವನ್ನು ಪಡೆಯಲು ಅಗತ್ಯ ದಾಖಲೆಗಳಾವುವು?

  • ಪೋಷಕರ ಆಧಾರ್ ಕಾರ್ಡ್ ಪ್ರತಿ
  • ಜನನದ ವಿವರಗಳು: ಜನನ ದಿನಾಂಕ, ಸ್ಥಳ, ಆಸ್ಪತ್ರೆಯ ಹೆಸರು
  • ಪೋಷಕರ ಗುರುತಿನ ಚೀಟಿ
  • ಆಸ್ಪತ್ರೆಯ ದಾಖಲೆ
  • ರೇಷನ್ ಕಾರ್ಡ್
  • ಪೋಟೋ

ಇದನ್ನೂ ಓದಿ: Gruhalakshmi Pending Amount-ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ವರ್ಗಾವಣೆಗೆ ಡೇಟ್ ಫಿಕ್ಸ್!

Birth Certificate Application Status Check -ಅರ್ಜಿ ಸ್ಥಿತಿಯನ್ನು ಆನ್ಲೈನ್ ನಲ್ಲಿ ಚೆಕ್ ಮಾಡುವ ವಿಧಾನ:

ಒಮ್ಮೆ ಜನನ ಪ್ರಮಾಣ ಪತ್ರವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ ಬಳಿಕ ಈ ಕೆಳಗಿನ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಲು ಅವಕಾಶವಿರುತ್ತದೆ.

Step-1: ಮೊದಲಿಗೆ Birth Certificate Application Status Check ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ತಂತ್ರಾಂಶವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Free Computer Training-ಉಚಿತ ವಸತಿಸಹಿತ 45 ದಿನಗಳ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಗೆ ಅರ್ಜಿ ಆಹ್ವಾನ!

Step-2: ಇದಾದ ನಂತರ ಇಲ್ಲಿ ನಿಮ್ಮ ಅರ್ಜಿಯ ಸ್ವೀಕೃತ ಸಂಖ್ಯೆಯನ್ನು ನಮೂದಿಸಿ "Search/Go" ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ನಿಮ್ಮ ಮೊಬೈಲ್ ನಲ್ಲೇ ಪಡೆಯಬಹುದು.

Birth Certificate Importance-ಜನನ ಪ್ರಮಾಣ ಪತ್ರ ಪಡೆಯುವುದು ಏಕೆ ಅತೀ ಮುಖ್ಯ?

ಮಗುವಿನ ಆಧಾರ್ ಕಾರ್ಡ ಅನ್ನು ಪಡೆಯಲು ಜನನ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ.

ರೇಷನ್ ಕಾರ್ಡಗೆ ಸೇರ್ಪಡೆ ಮಾಡಿಕೊಳ್ಳಲು ಸಹ ಮಗುಗೆ ಈ ಪ್ರಮಾಣ ಪತ್ರ ಅಗತ್ಯ.

ಹುಟ್ಟಿದ ದಿನಾಂಕವನ್ನು ಖಚಿತಪಡಿಸಿಕೊಳ್ಳಲು ಅಗತ್ಯವಾಗಿದೆ.

ಶಾಲೆಗೆ ದಾಖಲಿಸಲು ಜನನ ಪ್ರಮಾಣ ಪತ್ರ ಕಡ್ಡಾಯವಾಗಿದೆ.

ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಈ ಪ್ರಮಾಣ ಪತ್ರವು ಕಡ್ಡಾಯವಾಗಿದೆ.

WhatsApp Group Join Now
Telegram Group Join Now
Share Now: