Borewell Subsidy- ಬೋರ್ವೆಲ್ ಕೊರೆಸಲು ರೂ 4.25 ಲಕ್ಷ ಸಬ್ಸಿಡಿ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನ!

August 7, 2024 | Siddesh

ರಾಜ್ಯದ ವಿವಿಧ ನಿಗಮಗಳಿಂದ ಬೋರ್ವೆಲ್ ಕೊರೆಸಲು ರೂ 4.25 ಲಕ್ಷ ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ(Ganga kalyana yojane arji) ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಅರ್ಜಿ ಸಲ್ಲಿಕೆ ವಿಧಾನ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

ಕಳೆದ ವರ್ಷದಂತೆ ಈ ವರ್ಷವು ರಾಜ್ಯದ ವಿವಿಧ ವರ್ಗಗಳ ಅಭಿವೃದ್ದಿ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆಯಡಿ(Borewell Subsidy scheme) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಈ ಯೋಜನೆಯ ಲಾಭವನ್ನು ಪಡೆಯಲು ಈ ಲೇಖನದಲ್ಲಿ ನೀಡಿರುವ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದು.

ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ರೈತರು ಕೊಳವೆ ಭಾವಿ/ಬೋರ್ವೆಲ್ ಅನ್ನು ಕೊರೆಸಲು ಅರ್ಥಿಕವಾಗಿ ಸಹಾಯಧನ(Borewell loan) ನೀಡಿ ಬೆಂಬಲ ನೀಡಲಾಗುತ್ತದೆ. ಇದ್ದರಿಂದ ಕೃಷಿ ಜೊತೆಗೆ ಅಧಿಕ ಲಾಭ ಬರುವಂತಹ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಗೆ ಅನುಕೂಲವಾಗುತ್ತದೆ.

ಇದನ್ನೂ ಓದಿ: Tourist car loan- ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ganga kalyana subsidy amount details-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಎಷ್ಟು ಸಹಾಯಧನ ಪಡೆಯಬಹುದು?

ಈ ಯೊಜನೆಯಡಿ ಅರ್ಜಿ ಸಲ್ಲಿಸಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚ ರೂ.4,75,000ಗಳು ಇದರಲ್ಲಿ ರೂ.4,25,000/- ಸಹಾಯಧನ ನೀಡಲಾಗುತ್ತದೆ, ಉಳಿಕೆ ಮೊತ್ತ ರೂ.50,000/- ಸಾಲವಾಗಿ ಶೇ.4 ಬಡ್ಡಿ ದರದಲ್ಲಿ ನೀಡಲಾಗುತ್ತದೆ.

ಉಳಿದ 25 ಜಿಲ್ಲೆಗಳಿಗೆ ಒಟ್ಟು ಘಟಕ ವೆಚ್ಚ ರೂ. 3,75,000/- ಇದರಲ್ಲಿ ರೂ. 3,25,000/- ಸಹಾಯಧನ, ಉಳಿಕೆ ಮೊತ್ತ ರೂ.50,000 ಸಾಲವಾಗಿ ಶೇ.4 ಬಡ್ಡಿ ದರದಲ್ಲಿ ನೀಡಲಾಗುತ್ತದೆ ಜೊತೆಗೆ "ಸಹಾಯಧನ ಮೊತ್ತದಲ್ಲಿ ರೂ.75,000ಗಳನ್ನು ವಿದ್ಯುದ್ದೀಕರಣಕ್ಕೆ ಪಾವತಿಸಲಾಗುತ್ತದೆ"

ಇದನ್ನೂ ಓದಿ: handicapped certificate- ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ!

ganga kalyana online application-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಹ ಆಸಕ್ತ ಅರ್ಜಿದಾರರು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹತ್ತಿರದ ಗ್ರ‍ಾಮ ಒನ್/ಕರ್ನಾಟಕ ಒನ್/ಕಂಪ್ಯೂಟರ್ ಸೆಂಟರ್ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ಯೋಜನೆಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Required Documents for Ganga kalyana yojana-ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲಾತಿಗಳು ಅವಶ್ಯಕ?

1) ಜಾತಿ ಮತ್ತು ಆದಾಯ ಪ್ರಮಾಣ ಪತ್ರ. 
2) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ.
3) ಬ್ಯಾಂಕ್ ಖಾತೆಯ ಪ್ರತಿ.
4) ಜಮೀನಿನ ಪಹಣಿ. 
5) ಪಾಸ್ ಪೋರ್ಟ್ ಅಳತೆಯ ಭಾವಚಿತ್ರ .
6) ಸಣ್ಣ/ಅತಿ ಸಣ್ಣ ರೈತರ ಪ್ರಮಾಣ ಪತ್ರ.
7) ಕುಟುಬದ ಪಡಿತರ ಚೀಟಿ/ರೇಷನ್ ಕಾರ್ಡ ಪ್ರತಿ.
8) ಮೊಬೈಲ್ ಸಂಖ್ಯೆ.

ಇದನ್ನೂ ಓದಿ: E-swathu mahiti-ಮನೆ ಇ-ಸ್ವತ್ತು ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ!

How can apply- ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು?

1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.98,000/-ಗಳ ಮಿತಿಯೊಳಗಿರಬೇಕು. 

2) ಅರ್ಜಿದಾರರು 18 ವರ್ಷ ಮೇಲ್ಪಟ್ಟಿರಬೇಕು. 

3) ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.

4) ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು.
 
5) ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. 

6) ಆಯಾ ನಿಗಮಕ್ಕೆ ಸಂಬಂಧಪಟ್ಟ ವರ್ಗಕ್ಕೆ ಸೇರಿದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಇದನ್ನೂ ಓದಿ: veterinary doctor application-400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

Karnataka state nigama list-ಯಾವೆಲ್ಲ ನಿಗಮಗಳಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ?

1) ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ 

2) ಉಪ್ಪಾರ ಅಭಿವೃದ್ಧಿ ನಿಗಮ

3) ಮರಾಠ ಅಭಿವೃದ್ಧಿ ನಿಗಮ

4) ವಿಶ್ವಕರ್ಮ ಅಭಿವೃದ್ಧಿ ನಿಗಮ

5) ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ

6) ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ

7) ಸವಿತಾ ಸಮಾಜ ಅಭಿವೃದ್ಧಿ ನಿಗಮ

8) ಅಲೆಮಾರಿ ಅರೆ-ಅಲೆಮಾರಿ ಅಭಿವೃದ್ಧಿ ನಿಗಮ

9) ಒಕ್ಕಲಿಗ ಅಭಿವೃದ್ಧಿ ನಿಗಮ

last for ganga kalyana yojana application- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಹುತೇಕ ಎಲ್ಲಾ ನಿಗಮಗಳಲ್ಲಿ 31 ಆಗಸ್ಟ್ 2024 ನಿಗದಿಪಡಿಸಲಾಗಿರುತ್ತದೆ ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಿ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: