BPL Card-14 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ಕಾರ್ಯ ಚುರುಕು! ಇಲ್ಲಿದೆ ರದ್ದಾದ ಕಾರ್ಡ ಪಟ್ಟಿ!

April 11, 2026 | Siddesh
BPL Card-14 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ಕಾರ್ಯ ಚುರುಕು! ಇಲ್ಲಿದೆ ರದ್ದಾದ ಕಾರ್ಡ ಪಟ್ಟಿ!
Share Now:

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (BPL Card) ಪಡಿತರ ಚೀಟಿಗಳ ದುರ್ಬಳಕೆಗೆ ಬ್ರೇಕ್ ಹಾಕಲು ಆಹಾರ ಮತ್ತು ನಾಗರಿಕ ಸರಬರಾಜು(Karnataka Food Department) ಇಲಾಖೆಯು ಭರ್ಜರಿ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರದ ಮಾನದಂಡಗಳನ್ನು ಮೀರಿ ಬಿಪಿಎಲ್ ಸೌಲಭ್ಯ ಪಡೆಯುತ್ತಿದ್ದ ಸುಮಾರು 14 ಲಕ್ಷ ಅನರ್ಹ ಕಾರ್ಡ್‌ಗಳನ್ನು ಪತ್ತೆಹಚ್ಚಲಾಗಿದ್ದು, ಅವುಗಳನ್ನು ರದ್ದುಪಡಿಸುವ ಪ್ರಕ್ರಿಯೆಯು ಪ್ರಸ್ತುತ ರಾಜ್ಯಾದ್ಯಂತ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಅನರ್ಹರು ಬಿಪಿಎಲ್ ಕಾರ್ಡ್ ಹೊಂದುವುದರಿಂದ ನಿಜವಾದ ಬಡವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯಗಳು ವಂಚಿತವಾಗುತ್ತಿವೆ ಎಂಬ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಈ ಪರಿಷ್ಕರಣೆ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಮಹತ್ವದ ಪರಿಷ್ಕರಣೆ ಪ್ರಕ್ರಿಯೆಯ ನಡುವೆ ಸಾರ್ವಜನಿಕರಲ್ಲಿ ಉಂಟಾಗಿರುವ ಆತಂಕವನ್ನು ಹೋಗಲಾಡಿಸಲು ಸಚಿವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಒಂದು ವೇಳೆ ಇಲಾಖೆಯ ತಾಂತ್ರಿಕ ಕಾರಣಗಳಿಂದಾಗಿ ಅಥವಾ ಪರಿಷ್ಕರಣೆಯ ವೇಳೆ ಅರ್ಹ ಕುಟುಂಬಗಳ ಕಾರ್ಡ್‌ಗಳು(Ration Card) ರದ್ದಾಗಿದ್ದರೆ, ಅಂತಹವರು ಆತಂಕ ಪಡುವ ಅಗತ್ಯವಿಲ್ಲ. ಅಂಥವರು ಕೂಡಲೇ ತಮ್ಮ ವ್ಯಾಪ್ತಿಯ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಮರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಗತ್ಯ ದಾಖಲೆಗಳೊಂದಿಗೆ ಅರ್ಹತೆಯನ್ನು ಸಾಬೀತುಪಡಿಸಿದರೆ, ಕೂಡಲೇ ಅಂತಹ ಕುಟುಂಬಗಳಿಗೆ ಪಡಿತರ ಚೀಟಿಯನ್ನು ಮರುಸ್ಥಾಪಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: PUC Marks Card-ಪಿಯುಸಿ ಅಂಕಪಟ್ಟಿಯನ್ನು ಮೊಬೈಲ್‌ನಲ್ಲೇ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ!

ಇನ್ನು ಪಡಿತರ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಇಲಾಖೆಯು ಆಧುನಿಕ ತಂತ್ರಜ್ಞಾನಕ್ಕೆ ಮೊರೆ ಹೋಗಿದೆ. ಸಾರ್ವಜನಿಕರು ತಮ್ಮ ಪಡಿತರ ಚೀಟಿಯ(Ration Card Status) ಸ್ಥಿತಿಗತಿಯನ್ನು ಹಾಗೂ ರದ್ದಾದ ಕಾರ್ಡ್‌ಗಳ ಪಟ್ಟಿಯನ್ನು ಕಚೇರಿಗಳಿಗೆ ಅಲೆಯದೆ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ಮೂಲಕ ಪರಿಶೀಲಿಸಿಕೊಳ್ಳಬಹುದು. ಆಹಾರ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಜಿಲ್ಲೆ ಮತ್ತು ತಾಲೂಕುವಾರು ರದ್ದಾದ ಕಾರ್ಡ್‌ಗಳ ವಿವರಗಳನ್ನು ಪ್ರಕಟಿಸಲಾಗುತ್ತಿದ್ದು, ಪಾರದರ್ಶಕ ಆಡಳಿತದತ್ತ ಇಲಾಖೆ ಹೆಜ್ಜೆ ಇಟ್ಟಿದೆ. ಅಲ್ಲದೆ, ಕಪ್ಪು ಮಾರುಕಟ್ಟೆಯಲ್ಲಿ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಲು ಪೊಲೀಸರ ಸಹಕಾರದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

Ration Card Application-ಪರಿಷ್ಕರಣೆಯಲ್ಲಿ ಅರ್ಹರಿದ್ದರು ರದ್ದಾದರೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ:

ಒಂದೊಮ್ಮೆ ಪ್ರಸ್ತುತ ಆಹಾರ ಇಲಾಖೆಯಿಂದ ನಡೆಸುತ್ತಿರುವ ಬಿಪಿಎಲ್ ಕಾರ್ಡ ಪರಿಷ್ಕರಣೆಯಲ್ಲಿ ಅರ್ಹರಿದ್ದರು ನಿಮ್ಮ ಬಿಪಿಎಲ್ ಕಾರ್ಡ ರದ್ದಾದರೆ ಮತ್ತೆ ಪುನಃ ರೇಶನ್ ಕಾರ್ಡ್ ಪಡೆಯಲು ನಾಗರಿಕರು ತಹಸೀಲ್ದಾರರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಆಹಾರ ಇಲಾಖೆಯ ಸಚಿವ ಕೆ.ಎಚ್ ಮುನಿಯಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: 2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

Cancelled Ration Card List-ರದ್ದಾ ಪಟ್ಟಿಯನ್ನು ಮೊಬೈಲ್ ನಲ್ಲಿ ನೋಡಬಹುದು:

ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ಕೇವಲ ಒಂದೆರಡು ಕ್ಲಿಕ್ ನಲ್ಲಿ ತಾಲ್ಲೂಕುವಾರು ರದ್ದಾದ ಬಿಪಿಎಲ್ ಕಾರ್ಡ ಪಟ್ಟಿಯನ್ನು ಪಡೆಯಬಹುದಾಗಿದೆ.

Step-1: ಸಾರ್ವಜನಿಕರು ಪ್ರಥಮದಲ್ಲಿ ಇಲ್ಲಿ ಕ್ಲಿಕ್ Cancelled Ration Card List ಮಾಡಿ ಅಧಿಕೃತ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ತಂತ್ರಾಂಶವನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Toll Plazas New Rules-ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ನಗದು ವ್ಯವಹಾರಕ್ಕೆ ಬ್ರೇಕ್: ಏಪ್ರಿಲ್ 10 ರಿಂದ ಹೊಸ ನಿಯಮ ಜಾರಿ!

Cancelled Ration Card List

ಇದನ್ನೂ ಓದಿ: SSLC Key Answer-SSLC ಪರೀಕ್ಷೆ 1ರ ಕೀ ಉತ್ತರಗಳು ಬಿಡುಗಡೆ: ಏಪ್ರಿಲ್ 24ಕ್ಕೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ!

Step-2: ಇದಾದ ಬಳಿಕ ಈ ಪುಟದಲ್ಲಿ "ಇ-ಪಡಿತರ ಚೀಟಿ" ಬಟನ್ ಮೇಲೆ ಕ್ಲಿಕ್ ಮಾಡಿ "ರದ್ದುಗೊಳಿಸಲಾದ/ತಡೆಹಿಡಿಯಲಾದ ಪಟ್ಟಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

Step-3: ನಂತರ ಈ ವಿಭಾಗದಲ್ಲಿ ನಿಮ್ಮ ಜಿಲ್ಲೆ/ತಾಲ್ಲೂಕು/ತಿಂಗಳು ಮತ್ತು ವರ್ಷವನ್ನು ಆಯ್ಕೆ ಮಾಡಿಕೊಂದು Enter Captcha ಆಯ್ಕೆಯಲ್ಲಿ ಕ್ಯಾಪ್ಚ್ ಕೋಡ್ ಅನ್ನು ನಮೂದಿಸಿ "Go" ಬಟನ್ ಮೇಲೆ ಕ್ಲಿಕ್ ಮಾಡಿದರೆ ಸಾಕು ಇಲ್ಲಿ ರದ್ದಾದ ರೇಶನ್ ಕಾರ್ಡ ಪಟ್ಟಿ ತೋರಿಸುತ್ತದೆ ಪಟ್ಟಿಯಲ್ಲಿ ಪಡಿತರ ಚೀಟಿಯ RC Number ರೇಶನ್ ಕಾರ್ಡದಾರರ ಹೆಸರು, ರದ್ದಾದ ದಿನಾಂಕದ ವಿವರವನ್ನು ನೋಡಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: