Business Loan Subsidy-ಮಹಿಳಾ ನಿಗಮದಿಂದ ಮಹಿಳೆಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ₹1.5 ಲಕ್ಷ ಸಬ್ಸಿಡಿ!

December 8, 2025 | Siddesh
Business Loan Subsidy-ಮಹಿಳಾ ನಿಗಮದಿಂದ ಮಹಿಳೆಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ₹1.5 ಲಕ್ಷ ಸಬ್ಸಿಡಿ!
Share Now:

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ 2025-26 ನೇ ಸಾಲಿನ ಉದ್ಯೋಗಿನಿ ಯೋಜನೆಯ(Udyogini Scheme In Karnataka) ಅಡಿಯಲ್ಲಿ ತಮ್ಮದೇ ಅದ ಸ್ವಂತ ಆದಾಯ ಉತ್ಪನ್ನಕರ ಚಟುವಟಿಕೆಗಳನ್ನು ಅಥವಾ ಸ್ವಂತ ಉದ್ದಿಮೆಯನ್ನು ಆರಂಭಿಸಲು ಶೇ 50% ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಉದ್ಯೋಗಿನಿ ಯೋಜನೆಯಡಿ(Udyogini Scheme) ಪ್ರತಿ ವರ್ಷದಂತೆ ಈ ವರ್ಷವು ಸಹ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಸಬ್ಸಿಡಿಯನ್ನು ಒದಗಿಸಲು ಅರ್ಹ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇಂದಿನ ಅಂಕಣದಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಪ್ರಕಟಿಸಲಾಗಿದೆ.

ಇದನ್ನೂ ಓದಿ: Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

ಉದ್ಯೋಗಿನಿ ಯೋಜನೆಯ(Udyogini Scheme Application) ಕುರಿತು ಈಗಾಗಲೇ ನಮ್ಮ ಪುಟದಿಂದ ಹಿಂದಿನ ಅಂಕಣದಲ್ಲಿ ಪ್ರಕಟಿಸಲಾಗಿದ್ದು ಪ್ರಸ್ತುತ ಅರ್ಜಿ ಸಲ್ಲಿಸಲು ಇನ್ನು 8 ದಿನ ಮಾತ್ರ ಬಾಕಿಯಿರುವುದರಿಂದ ಮತ್ತೊಮ್ಮೆ ಯೋಜನೆಗ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದ್ದು, ಯಾರ‍ೆಲ್ಲ ಅರ್ಜಿ ಸಲ್ಲಿಸಿ ಉದ್ಯೋಗಿನಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳು ಯಾವುವು? ಎಲ್ಲಿ ಅರ್ಜಿ ಸಲ್ಲಿಸಬೇಕು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

What Is Udyogini Scheme-ಏನಿದು ಉದ್ಯೋಗಿನಿ ಯೋಜನೆ?

ರಾಜ್ಯ ಸರಕಾರದಿಂದ ಮಹಿಳೆಯರಿಗೆ ಸ್ವಾವಲಂಬನೆ ಜೀವನವನ್ನು ಕಟ್ಟಿಕೊಂಡು ಆರ್ಥಿಕವಾಗಿ ಸಬಲರಾಗಲು ಆದಾಯ ಬರುವಂತಹ ತಮ್ಮದೇ ಆದ ಸ್ವಂತ ಉದ್ದಿಮೆ (ಉದಾಹರಣೆಗೆ: Beauty Parlour / Home Salon, Soap, Candle, Agarbathi Making, Home Made Food Business, Homemade Beauty Products, Bakery & Snacks Unit, Tailoring / Boutique, Embroidery / Aari Work Training & Order) ಅನ್ನು ಪ್ರಾರಂಭಿಸಲು ಆರಂಭಿಕ ಹಂತದಲ್ಲಿ ಬಂಡವಾಳವನ್ನು ಹೂಡಿಕೆ ಮಾಡಲು ಮಹಿಳೆಯರಿಗೆ ಆರ್ಥಿಕವಾಗಿ ನೆರವನ್ನು ಒದಗಿಸಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಸಾಮಾನ್ಯ ವರ್ಗದ ಮಹಿಳೆಯರಿಗೆ ಗರಿಷ್ಟ ₹1.0 ಲಕ್ಷ ಮತ್ತು ಪರಿಶಿಷ್ಟ ಜಾತಿ/ಪಂಗಡ ವರ್ಗದ ಮಹಿಳೆಯರಿಗೆ ಗರಿಷ್ಟ ₹1.5 ಲಕ್ಷ ಸಹಾಯಧನವನ್ನು ಒದಗಿಸುವ ಯೋಜನೆ ಇದಾಗಿದೆ.

ಇದನ್ನೂ ಓದಿ: Kotak Scholarship-ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ₹1.5 ಲಕ್ಷ ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

Udyogini Scheme Eligibility-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಸ್ವಂತ ಉದ್ಯಮವನ್ನು ಆರಂಭಿಸಲು ಒಟ್ಟು ಘಟಕ ವೆಚ್ಚಕ್ಕೆ ಶೇ 30% ನಿಂದ ಶೇ 50% ವರೆಗೆ ಸಹಾಯಧನವನ್ನು ಪಡೆದುಕೊಳ್ಳಲು ಕೆಳಗೆ ತಿಳಿಸಿರುವ ಅರ್ಹತಾ ಮಾನದಂಡಗಳನ್ನು ಹೊಂದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿದಾರ ಮಹಿಳೆಯು 18 ರಿಂದ 55 ವರ್ಷದ ಒಳಗಿರಬೇಕು.
ಸ್ವಂತ ಉದ್ದಿಮೆಯನ್ನು ಪ್ರಾರಂಭಿಸಲು ಆಸಕ್ತಿಯನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಈಗಾಗಲೇ ಈ ಯೋಜನೆಯಡಿ ಸೌಲಭ್ಯವನ್ನು ಪಡೆದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Best Organic Farmer-ಉತ್ತಮ ಸಾವಯವ ಕೃಷಿ ಪದ್ದತಿ ಅಳವಡಿಸಿಕೊಂಡ ರೈತರಿಗೆ 50,000/- ಮೊತ್ತದ ಪ್ರಶಸ್ತಿ!

Udyogini Scheme Subsidy-ಉದ್ಯೋಗಿನಿ ಯೋಜನೆ ಸಬ್ಸಿಡಿ ವಿವರ ಹೀಗಿದೆ:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಒಟ್ಟೂ ಘಟಕ ವೆಚ್ಚ ₹3.0 ಲಕ್ಷಕ್ಕೆ ಬ್ಯಾಂಕ್ ಮೂಲಕ ಸಾಲವನ್ನು ಪಡೆದುಕೊಂಡಲ್ಲಿ ಗರಿಷ್ಟ ₹.5 ಲಕ್ಷ ಸಬ್ಸಿಡಿಯನ್ನು ಈ ಯೋಜನೆಯಡಿ ಒದಗಿಸಲಾಗುತ್ತದೆ.

ಇದೇ ಮಾದರಿಯಲ್ಲಿ ಸಾಮಾನ್ಯ ವರ್ಗದ ಮಹಿಳೆಯರು ಸ್ವಂತ ಉದ್ದಿಮೆಯನ್ನು ಆರಂಭಿಸಲು ಬ್ಯಾಂಕ್ ಮೂಲಕ ಒಟ್ಟು ₹3.0 ಲಕ್ಷ ಸಾಲವನ್ನು ಪಡೆದರೆ ಈ ಯೋಜನೆಯಿಂದ ಗರಿಷ್ಠ ₹1.0 ಲಕ್ಷ ಸಬ್ಸಿಡಿಯನ್ನು ಒದಗಿಸಲಾಗುತ್ತದೆ.

Udyogini Yojane Application Last Date-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಡಿಸೆಂಬರ್ 2025

ಇದನ್ನೂ ಓದಿ: Solar Pumpset Subsidy-ಶೇ 80% ಸಬ್ಸಿಡಿಯಲ್ಲಿ ಸೋಲಾರ್ ಪಂಪ್ ಸೆಟ್ ಇಂದೇ ಅರ್ಜಿ ಸಲ್ಲಿಸಿ!

Udyogini Application

ಇದನ್ನೂ ಓದಿ: TATA Scholarship-ಟಾಟಾ ಗ್ರೂಪ್‌ ಕಂಪನಿ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ 15,000/- ವಿದ್ಯಾರ್ಥಿವೇತನ!

Udyogini Yojana Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಮಹಿಳಾ ಅರ್ಜಿದಾರರು ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಮುಗಿಯುವುದರ ಒಳಗಾಗಿ ಈ ಕೆಳಗಿನ ಹಂತಗಳನ್ನು ಅನುಸರಿಸಿ ನೇರವಾಗಿ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ತಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್ ಕೇಂದ್ರವನ್ನು ಭೇಟಿ ಮಾಡಿಯು ಸಹ ಅರ್ಜಿ ಸಲ್ಲಿಸಬಹುದು.

Step-1: ಮೊದಲಿಗೆ ಇಲ್ಲಿ ಕ್ಲಿಕ್ Udyogini Online Application ಮಾಡಿ ಅಧಿಕೃತ ಸೇವಾ ಸಿಂಧು ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಮೊದಲ ಬಾರಿಗೆ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡುತ್ತಿರುವವರು ಈ ಪೇಜ್ ನಲ್ಲಿ "New user ? Register here" ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಕಾರ್ಡ್ ವಿವರವನ್ನು ಭರ್ತಿ ಮಾಡಿ ನೋಂದಣಿ ಮಾಡಿಕೊಂಡು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

Step-3: ಲಾಗಿನ್ ಅದ ನಂತರ Search ಐಕಾನ್ ಬಟನ್ ಮೇಲೆ ಕ್ಲಿಕ್ ಮಾಡಿ ಉದ್ಯೋಗಿನಿ ಯೋಜನೆ ಎಂದು ಸರ್ಚ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ದಾಖಲಾತಿಗಳನ್ನು ಅಪ್ಲೋಡ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

ಇದನ್ನೂ ಓದಿ: Indira Kit-ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಕೋಡ್!

Required Documents For Udyogini Application-ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಉದ್ಯೋಗಿನಿ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಶ್ಯವಿರುವ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ:

ಅಭ್ಯರ್ಥಿಯ ಆಧಾರ್ ಕಾರ್ಡ್
ಅಭ್ಯರ್ಥಿಯ ಪಡಿತರ ಚೀಟಿ
ಅಭ್ಯರ್ಥಿಯ ಜಾತಿ & ಆದಾಯ ಪ್ರಮಾಣಪತ್ರ (SC ಮತ್ತು ST ಅರ್ಜಿದಾರರಿಗೆ ಮಾತ್ರ ಅನ್ವಯಿಸುತ್ತದೆ)
ಅಭ್ಯರ್ಥಿಯ ಬ್ಯಾಂಕ್ ಪಾಸ್‌ಬುಕ್
ಅಭ್ಯರ್ಥಿಯ ಪಾಸ್ಪೋರ್ಟ್ ಗಾತ್ರದ ಫೋಟೋಗಳು
ಅಭ್ಯರ್ಥಿಯ ಯೋಜನಾ ವರದಿ (ನಿಮ್ಮ ಹತ್ತಿರದ ಕಂಪ್ಯೂಟರ್ ಸೆಂಟರ್ ಸಂಪರ್ಕಿಸಿ)

ಇದನ್ನೂ ಓದಿ: E- Swathu Website-ಪಂಚಾಯತ್ ರಾಜ್ ಇಲಾಖೆಯಿಂದ ಇ-ಸ್ವತ್ತು 2.0 ತಂತ್ರಾಂಶ ಜಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

Udyogini Yojana Helpline-ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಂಪರ್ಕಿಸಿ:

ಮಹಿಳಾ ನಿಗಮದ ವೆಬ್ಸೈಟ್- Click Here
ಯೋಜನೆಯ ಅಧಿಕೃತ ಪ್ರಕಟಣೆ ಪ್ರತಿ-Download Now
ಅರ್ಜಿ ಸಲ್ಲಿಸಲು ಲಿಂಕ್- Apply Now
ಸಹಾಯವಾಣಿ- 080-26632792

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: