Bussiness Loan Subsidy-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ ₹1.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

October 18, 2025 | Siddesh
Bussiness Loan Subsidy-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ ₹1.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!
Share Now:

2025-26 ನೇ ಸಾಲಿನ ವೃತ್ತಿ ಪ್ರೋತ್ಸಾಹ ಸಾಲ ಯೋಜನೆ(Bussiness Loan Subsidy Yojane) ಅಡಿಯಲ್ಲಿ ಸಣ್ಣ ಉದ್ದಿಮೆಗಳಿಗೆ ಆರ್ಥಿಕ ನೆರವನ್ನು ಒದಗಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Alpasankyatha Nigama Yojanegalu) ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು "ವೃತ್ತಿ ಪ್ರೋತ್ಸಾಹ ಸಾಲ ಯೋಜನೆ" ಮೂಲಕ ವಿವಿಧ ಬಗ್ಗೆಯ ಸಣ್ಣ ಉದ್ದಿಮೆಗಳಲ್ಲಿ ತೊಡಗಿಕೊಂಡಿರುವ ಅಭ್ಯರ್ಥಿಗಳಿಗೆ ಶೇ 50% ಸಬ್ಸಿಡಿಯಲ್ಲಿ ಸಾಲವನ್ನು ಒದಗಿಸಲಾಗುತ್ತಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

ವೃತ್ತಿ ಪ್ರೋತ್ಸಾಹ ಸಾಲ ಯೋಜನೆ ಅಡಿಯಲ್ಲಿ(Vruti Prothsaha Sala Yojane)ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಲಾತಿಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಇತ್ಯಾದಿ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ.

Government subsidy loan scheme-ವೃತ್ತಿ ಪ್ರೋತ್ಸಾಹ ಸಾಲ ಯೋಜನೆ ಅಡಿಯಲ್ಲಿ ಎಷ್ಟು ಸಬ್ಸಿಡಿ ಪಡೆಯಬಹುದು?

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವೃತ್ತಿ ಪ್ರೋತ್ಸಾಹ ಸಾಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಫಲಾನುಭವಿಗಳಿಗೆ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಒಟ್ಟು 1,00,000/- ಸಾಲವನ್ನು ಒದಗಿಸಲಾಗುತ್ತದೆ ಈ ಸಾಲಕ್ಕೆ 50% ಸಹಾಯಧನ ಅಂದರೆ ರೂ 50,000 ಸಬ್ಸಿಡಿಯನ್ನು ಒದಗಿಸಲಾಗುತ್ತದೆ.

Last Date For Vruti Prothsaha Sala Yojana-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ವೃತ್ತಿ ಪ್ರೋತ್ಸಾಹ ಸಾಲ ಯೋಜನೆ ಸಣ್ಣ ವ್ಯಾಪಾರವನ್ನು ಆರಂಭಿಸಲು ಸಾಲದ ಮೇಲೆ ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು "21 ಅಕ್ಟೋಬರ್ 2025" ಅಂತಿಮ ದಿನಾಂಕವಾಗಿದೆ.

ಇದನ್ನೂ ಓದಿ: Bele Parihara 2025-ಮಳೆ ಮತ್ತು ಪ್ರವಾಹ ಸಂತ್ರಸ್ತ ರೈತರಿಗೆ ಬೆಳೆ ಹಾನಿ ಪರಿಹಾರ ₹ 31,000ಗೆ ಹೆಚ್ಚಿಸಿದ ರಾಜ್ಯ ಸರಕಾರ!

How To Apply For Bussiness Loan Subsidy-ಅರ್ಜಿ ಸಲ್ಲಿಸುವುದು ಹೇಗೆ?

ನಿಗಮದಿಂದ ಎಲ್ಲಾ ಯೋಜನೆ ಅಡಿಯಲ್ಲಿ ಲಾಭವನ್ನು ಪಡೆಯಲು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಕಂಪ್ಯೂಟರ್ ಸೆಂಟರ್ ಅನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಈ ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಲ್ಲಿ ಸ್ವಂತ ಮನೆಯಲ್ಲೇ ಕುಳಿತು ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

Government subsidy loan for business in karnataka-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ವೃತ್ತಿ ಪ್ರೋತ್ಸಾಹ ಸಾಲ ಯೋಜನೆ ಅಡಿಯಲ್ಲಿ ಸಾಲ ಮತ್ತು ಸಾಲದ ಮೇಲೆ ಸಬ್ಸಿಡಿಯನ್ನು ಪಡೆಯಲು ಈ ಕೆಳಗಿನ ಪಟ್ಟಿಯಲ್ಲಿರುವ ನಿಯಮಗಳನ್ನು ರೂಪಿಸಲಾಗಿದೆ.

  • ಅಭ್ಯರ್ಥಿಯು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
  • ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಅಭ್ಯರ್ಥಿಯ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.
  • ಅಭ್ಯರ್ಥಿಯ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ರೂ.6,00,000/- ಕ್ಕಿಂತ ಕಡಿಮೆ ಇರಬೇಕು.
  • ಅಭ್ಯರ್ಥಿಯ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು.
  • ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಮತ್ತು ವಿದೇಶ ವಿದ್ಯಾಭ್ಯಾಸ ಸಾಲ ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.

ಇದನ್ನೂ ಓದಿ: Gram Sumangal Scheme-ಪ್ರತಿ ತಿಂಗಳು 95 ಪಾವತಿಸಿದರೆ, 14 ಲಕ್ಷ ರೂಪಾಯಿ ಪಡೆಯಿರಿ!

How To Apply For Vruti Prothsaha Sala Yojane-ಅರ್ಜಿ ಸಲ್ಲಿಸುವುದು ಹೇಗೆ?

Step-1: ಅಭ್ಯರ್ಥಿಗಳು ಪ್ರಥಮದಲ್ಲಿ ಇಲ್ಲಿ ಕ್ಲಿಕ್ "Bussiness Loan Subsidy Online Application" ಮಾಡಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ.

ಇದನ್ನೂ ಓದಿ: Land Owners Details-ಉಚಿತವಾಗಿ ಜಮೀನಿನ ಮಾಲೀಕರ ವಿವರವನ್ನು ಚೆಕ್ ಮಾಡಲು ವೆಬ್ಸೈಟ್ ಬಿಡುಗಡೆ!

Bussiness Loan Subsidy Application

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಗೋಚರಿಸುವ "ವೃತ್ತಿ ಪ್ರೋತ್ಸಾಹ ಸಾಲ ಯೋಜನೆ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

Step-3: ತದನಂತರ ಈ ಪೇಜ್ ನಲ್ಲಿ ಗೋಚರಿಸುವ "ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿಬೇಕು.

ಇದನ್ನೂ ಓದಿ: B-Khata to A-Khata-ರಾಜ್ಯ ಸರಕಾರದಿಂದ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಆನ್‍ಲೈನ್ ವ್ಯವಸ್ಥೆ!

Required Documents For Bussiness Loan Subsidy Yojane-ಅರ್ಜಿ ಯಾವೆಲ್ಲ ದಾಖಲೆಗಳು ಬೇಕಾಗುತ್ತದೆ?

ಆಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಈ ಕೆಳಗಿನಂತಿದೆ:

  • ಆಭ್ಯರ್ಥಿಯ ಆಧಾರ್ ಕಾರ್ಡ್ ಪ್ರತಿ.
  • ಆಭ್ಯರ್ಥಿಯ ಬ್ಯಾಂಕ್ ಪಾಸ್ ಬುಕ್.
  • ಆಭ್ಯರ್ಥಿಯ ಜಾತಿ ಮತ್ತು ಆದಾಯ ಪ್ರಮಾಣಪತ್ರ.
  • ಆಭ್ಯರ್ಥಿಯ ಅರ್ಜಿದಾರರ ಪೋಟೋ.
  • ಸಾಲಕ್ಕೆ ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ.
  • ಉದ್ದಿಮೆ ಯೋಜನಾ ವರದಿ.
  • ಸ್ವಯಂ ಘೋಷಣೆ ಪತ್ರ.

ಇದನ್ನೂ ಓದಿ: Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದ ತಿಂಗಳ ಹಣ ಬಿಡುಗಡೆ!

Alpasankyata Nigama Helpline-ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ-8277799990
Alpasankyata Nigama Website-ನಿಗಮದ ಅಧಿಕೃತ ಜಾಲತಾಣ-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: