Cabinet Meeting Highlights-ಸಚಿವ ಸಂಪುಟ ಸಭೆಯಲ್ಲಿ ಮಹ್ವತದ ನಿರ್ಣಯ! ಕೆರೆ ತುಂಬಿಸುವ ಯೋಜನೆಗೆ 32 ಕೋಟಿ ಅನುದಾನ!

February 8, 2026 | Siddesh
Cabinet Meeting Highlights-ಸಚಿವ ಸಂಪುಟ ಸಭೆಯಲ್ಲಿ ಮಹ್ವತದ ನಿರ್ಣಯ! ಕೆರೆ ತುಂಬಿಸುವ ಯೋಜನೆಗೆ 32 ಕೋಟಿ ಅನುದಾನ!
Share Now:

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 5, 2026ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಮುಖ್ಯವಾಗಿ ನೀರಾವರಿ, ಶಿಕ್ಷಣ, ಮೂಲಸೌಕರ್ಯ, ಮತ್ತು ಸಾಮಾಜಿಕ ಭದ್ರತೆಗೆ ಸಂಬಂಧಿಸಿದಂತೆ ಬೃಹತ್ ಮೊತ್ತದ ಅನುದಾನವನ್ನು(Cabinet Meeting Details) ಘೋಷಣೆ ಮಾಡಲಾಗಿದ್ದು, ರೈತರು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಜನರ ಹಿತದೃಷ್ಟಿಯಿಂದ ಹಲವು ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಈ ಬಾರಿಯ ಸಂಪುಟ ಸಭೆಯು(Karnataka Cabinet Meeting) ಕೇವಲ ಮೂಲಸೌಕರ್ಯಕ್ಕೆ ಸೀಮಿತವಾಗದೆ, ತಂತ್ರಜ್ಞಾನದ ಬಳಕೆಯ ಮೂಲಕ ಸಾಮಾಜಿಕ ಅನಿಷ್ಟಗಳನ್ನು ತಡೆಯುವ ನಿಟ್ಟಿನಲ್ಲಿಯೂ ದಿಟ್ಟ ಹೆಜ್ಜೆ ಇರಿಸಿದೆ. ವಿಶೇಷವಾಗಿ ಸುಳ್ಳು ಸುದ್ದಿಗಳನ್ನು ಪತ್ತೆಹಚ್ಚಲು ಎಐ (AI) ತಂತ್ರಜ್ಞಾನದ ಬಳಕೆ ಹಾಗೂ ಪರಿಸರ ಸಂರಕ್ಷಣೆಗಾಗಿ ನಾಗರಹೊಳೆ ವ್ಯಾಪ್ತಿಯಲ್ಲಿ ವನ್ಯಜೀವಿ ಸಂಘರ್ಷ ತಡೆಗೆ ಕೈಗೊಂಡಿರುವ ಕ್ರಮಗಳು ಗಮನಾರ್ಹವಾಗಿವೆ. ಹಳೆ ಮೈಸೂರು ಭಾಗದ ನೀರಾವರಿ ಸಮಸ್ಯೆ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೂ ಸಭೆಯಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ.

ಇದನ್ನೂ ಓದಿ: Bele Parihara List-ಬೆಳೆ ಹಾನಿ ಪರಿಹಾರ ಪಡೆದ ಅರ್ಹ ರೈತರ ಪಟ್ಟಿ ಬಿಡುಗಡೆ!

ಕೆರೆ ತುಂಬಿಸುವ ಯೋಜನೆಗಳು(Cabinet Meeting), ಸರ್ಕಾರಿ ಶಾಲಾ-ಕಾಲೇಜುಗಳಿಗೆ ಕಂಪ್ಯೂಟರ್ ಲ್ಯಾಬ್ ಹಾಗೂ ಮಹಿಳಾ ಆರೋಗ್ಯಕ್ಕೆ ಸಂಬಂಧಿಸಿದ 'ಶುಚಿ' ಯೋಜನೆಯ ಮುಂದುವರಿಕೆಯು ಸರ್ಕಾರದ ಅಭಿವೃದ್ಧಿಯ ದೂರದೃಷ್ಟಿಯನ್ನು ಪ್ರತಿಬಿಂಬಿಸುತ್ತದೆ. ಈ ಲೇಖನದಲ್ಲಿ ಸಂಪುಟ ಸಭೆಯ ಪ್ರಮುಖ ನಿರ್ಧಾರಗಳು, ಮೀಸಲಿಡಲಾದ ಅನುದಾನ ಮತ್ತು ಆ ಯೋಜನೆಗಳ ಸವಿಸ್ತಾರವಾದ ಮಾಹಿತಿಯನ್ನು ನೀಡಲಾಗಿದೆ.

Karnataka Cabinet Meeting Highlights-ಸಂಪುಟ ಸಭೆಯ ಪ್ರಮುಖ ನಿರ್ಧಾರಗಳು:

ಯೋಜನೆಯ ವಿವರಮೀಸಲಿಡಲಾದ ಅನುದಾನ (ಕೋಟಿಗಳಲ್ಲಿ)
ಹೇಮಾವತಿ ಯೋಜನೆಯಡಿ ಅರಸೀಕೆರೆ ತಾಲೂಕಿನ 20 ಕೆರೆಗಳನ್ನು ತುಂಬಿಸುವ ಯೋಜನೆ₹32 ಕೋಟಿ
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷದ ಪೋಸ್ಟ್ ಪತ್ತೆಹಚ್ಚಲು AI ತಂತ್ರಜ್ಞಾನ ಖರೀದಿ₹67.26 ಕೋಟಿ
ಕಲ್ಯಾಣ ಕರ್ನಾಟಕ (KKRDB) ಅನುದಾನದಡಿ ವಿವಿಧ ಅರಣ್ಯ ವಿಭಾಗಗಳ ಕಾಮಗಾರಿಗಳು₹100 ಕೋಟಿ
ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಹೊಸ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ₹73.75 ಕೋಟಿ
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳಿಗೆ ಕಂಪ್ಯೂಟರ್ ಲ್ಯಾಬ್ ಸ್ಥಾಪನೆ₹37.80 ಕೋಟಿ
ಕಲಬುರಗಿಯಲ್ಲಿ ನೂತನ ಜಿಲ್ಲಾ ಪಂಚಾಯತ್ ಕಟ್ಟಡ ನಿರ್ಮಾಣ₹49.65 ಕೋಟಿ
ಚಿಕ್ಕಬಳ್ಳಾಪುರ, ಕೆಜಿಎಫ್ ಮತ್ತು ವಿಜಯಪುರ ಎಪಿಎಂಸಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ₹60 ಕೋಟಿ
ಬೆಂಗಳೂರಿನ ಯಲಹಂಕ ಪವರ್ ಪ್ಲಾಂಟ್‌ಗೆ ತೃತೀಯ ಹಂತದ ಸಂಸ್ಕರಿಸಿದ ನೀರು ಪೂರೈಕೆ ನಿರ್ವಹಣೆ₹39.10 ಕೋಟಿ
ಜಿಬಿಎ ವ್ಯಾಪ್ತಿಯಲ್ಲಿ 'ಸಾರಥಿ' ಯೋಜನೆಯಡಿ ಆಟೋ, ಕಾರು ಮತ್ತು ಇ-ವೆಂಡಿಂಗ್ ವಾಹನಗಳಿಗೆ ಸಹಾಯಧನ₹62.02 ಕೋಟಿ
ನಾಗರಹೊಳೆ ವ್ಯಾಪ್ತಿಯಲ್ಲಿ ವನ್ಯಜೀವಿ ಸಂಘರ್ಷ ತಡೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಾಣ₹11.65 ಕೋಟಿ
ಉಡುಪಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸೌಪರ್ಣಿಕಾ ಅತಿಥಿಗೃಹ ನಿರ್ಮಾಣ₹16 ಕೋಟಿ
ರಾಜ್ಯದ 328 ದೇವಸ್ಥಾನಗಳ ಆಸ್ತಿ ಸಂರಕ್ಷಣೆಗೆ 'ಭೂ ವರಾಹ' ಯೋಜನೆ₹15 ಕೋಟಿ

ಇದನ್ನೂ ಓದಿ: Birth And Death Certificate-ಜನನ-ಮರಣ ಪ್ರಮಾಣಪತ್ರಕ್ಕಾಗಿ ಅಲೆದಾಟಕ್ಕೆ ಬಿತ್ತು ಬ್ರೇಕ್: ಈಗ ಎಲ್ಲವೂ ನಿಮ್ಮ ಬೆರಳ ತುದಿಯಲ್ಲಿ!

Cabinet Meeting

ಇದನ್ನೂ ಓದಿ: SBI Women Loan-ಮಹಿಳೆಯರ ಸ್ವಂತ ಉದ್ಯಮಕ್ಕೆ"ಸ್ತ್ರೀ ಶಕ್ತಿ ಪ್ಯಾಕೇಜ್"! ಇಲ್ಲಿದೆ ಸಂಪೂರ್ಣ ಮಾಹಿತಿ!

Cabinet Meeting Highlights-2026: ಯೋಜನೆವಾರು ಪ್ರಮುಖ ಮಾಹಿತಿ ಹೀಗಿದೆ:

ನೀರಾವರಿ ಮತ್ತು ರೈತರ ಹಿತ: ಹೇಮಾವತಿ ಯೋಜನೆಯ ತುಮಕೂರು ಶಾಖಾ ನಾಲೆಯಿಂದ ನೀರನ್ನು ಎತ್ತಿ ಅರಸೀಕೆರೆ ತಾಲೂಕಿನ ಕಂಕೇರಿ ಸೇರಿದಂತೆ 20 ಕೆರೆಗಳನ್ನು ತುಂಬಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ. ಇದರಿಂದ ಈ ಭಾಗದ ಅಂತರ್ಜಲ ಮಟ್ಟ ಹೆಚ್ಚಲಿದ್ದು ರೈತರಿಗೆ ಅನುಕೂಲವಾಗಲಿದೆ.

ತಂತ್ರಜ್ಞಾನದ ಬಳಕೆ: ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುವ ಸುಳ್ಳು ಸುದ್ದಿ, ತಪ್ಪು ಮಾಹಿತಿ ಮತ್ತು ದ್ವೇಷದ ಪೋಸ್ಟ್‌ಗಳನ್ನು ಪತ್ತೆಹಚ್ಚಲು ಸರ್ಕಾರವು ಕೃತಕ ಬುದ್ಧಿಮತ್ತೆ (AI) ಆಧಾರಿತ ತಂತ್ರಾಂಶವನ್ನು ಖರೀದಿಸಲು ನಿರ್ಧರಿಸಿದೆ.

ಇದನ್ನೂ ಓದಿ: Diploma Scholarship-ಡಿಪ್ಲೊಮಾ ವಿದ್ಯಾರ್ಥಿನಿಯರಿಗೆ 10,000 ವಿದ್ಯಾರ್ಥಿವೇತನ! ಇನ್ನು 4 ದಿನ ಬಾಕಿ!

ಮಹಿಳಾ ಮತ್ತು ಮಕ್ಕಳ ಕಲ್ಯಾಣ: 2025-26ನೇ ಸಾಲಿನಲ್ಲಿ 'ಶುಚಿ' ಕಾರ್ಯಕ್ರಮದಡಿ ಸರ್ಕಾರಿ ಮತ್ತು ಅನುದಾನಿತ ಶಾಲೆ, ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್‌ಕಿನ್ ಮತ್ತು ಮೆನ್ಸ್‌ಟ್ರುವಲ್ ಕಪ್‌ಗಳನ್ನು ವಿತರಿಸುವ ಮಹತ್ವದ ನಿರ್ಧಾರಕ್ಕೆ ಅಸ್ತು ಎನ್ನಲಾಗಿದೆ.

ಕಲ್ಯಾಣ ಕರ್ನಾಟಕಕ್ಕೆ ಬಲ: ಕಲಬುರಗಿ ಮತ್ತು ನೆರೆಯ ಜಿಲ್ಲೆಗಳಲ್ಲಿ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಹಾಗೂ ಅರಣ್ಯೀಕರಣಕ್ಕೆ ನೂರಾರು ಕೋಟಿ ರೂಪಾಯಿಗಳ ಅನುದಾನ ನೀಡುವ ಮೂಲಕ ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ಒತ್ತು ನೀಡಲಾಗಿದೆ.

ಇದನ್ನೂ ಓದಿ: Bele Vime Status-ರೈತರ ಖಾತೆಗೆ ಬೆಳೆ ವಿಮೆ ಪರಿಹಾರ!ಮೊಬೈಲ್ ನಲ್ಲೇ ಹಣ ಜಮಾ ವಿವರ ತಿಳಿಯಿರಿ!

ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ: ರಾಜ್ಯದ ದೇವಸ್ಥಾನಗಳ ಆಸ್ತಿಯನ್ನು ಡಿಜಿಟಲೀಕರಣಗೊಳಿಸಲು 'ಭೂ ವರಾಹ' ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಜೊತೆಗೆ ಕೊಲ್ಲೂರಿನಲ್ಲಿ ಪ್ರವಾಸಿಗರಿಗೆ ಅನುಕೂಲವಾಗಲು ಹೊಸ ಅತಿಥಿಗೃಹ ನಿರ್ಮಿಸಲಾಗುತ್ತಿದೆ.

ಪೊಲೀಸ್ ಇಲಾಖೆ ಸುಧಾರಣೆ: 'ಕರ್ನಾಟಕ ಪೊಲೀಸ್ ಮಸೂದೆ'ಗೆ ಅಗತ್ಯ ತಿದ್ದುಪಡಿ ತರಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: