Car Subsidy Scheme-ಸ್ವಾವಲಂಬಿ ಸಾರಥಿ ಯೋಜನೆಯಡಿ ಕಾರು ಖರೀದಿಗೆ ₹4.00 ಲಕ್ಷ ಸಹಾಯಧನಕ್ಕೆ ಅರ್ಜಿ!

August 18, 2025 | Siddesh
Car Subsidy Scheme-ಸ್ವಾವಲಂಬಿ ಸಾರಥಿ ಯೋಜನೆಯಡಿ ಕಾರು ಖರೀದಿಗೆ ₹4.00 ಲಕ್ಷ ಸಹಾಯಧನಕ್ಕೆ ಅರ್ಜಿ!
Share Now:

ನಿರುದ್ಯೋಗಿ ಯುವಕರಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಂದ ಟಾಕ್ಸಿ ವಾಹನವನ್ನು(Swavalambi sarathi yojane) ಖರೀದಿ ಮಾಡಲು ಶೇ 75% ಅಥವಾ ಗರಿಷ್ಠ ರೂ ₹4.00 ಲಕ್ಷ ಸಬ್ಸಿಡಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನಮ್ಮ ದೇಶದಲ್ಲಿ ಹೆಚ್ಚುತ್ತಿರುವ ಜನ ಸಂಖ್ಯೆಗೆ ಅನುಗುಣವಾಗಿ ಉದ್ಯೋಗಗಳು ಲಭ್ಯವಿಲ್ಲದ ಕಾರಣ ಅನೇಕ ಯುವಕರು ಉದ್ಯೋಗ ಸಿಗದೇ ಆರ್ಥಿಕವಾಗಿ ಹಿಂದುಳಿಯುತ್ತಿದ್ದಾರೆ ಈ ನಿಟ್ಟಿನಲ್ಲಿ ನಿರುದ್ಯೋಗ ಯುವಕರಿಗೆ ಸ್ವಾವಲಂಬನೆ ಜೀವನವನ್ನು ಸಾಗಿಸಲು "ಸ್ವಾವಲಂಬಿ ಸಾರಥಿ ಯೋಜನೆಯಡಿ" ಸರಕು ವಾಹನ/ಹಳದಿ ಬೋರ್ಡ್ ಟ್ಯಾಕ್ಸಿ ಖರೀದಿ(Car Subsidy Scheme) ಮಾಡಲು ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ಇದನ್ನೂ ಓದಿ: Whatsapp Chatbot-ನಾಗರಿಕರಿಗೆ ಗ್ರಾಮ ಪಂಚಾಯತಿ ಯೋಜನೆಗಳನ್ನು ತಲುಪಿಸಲು ಇನ್ಮುಂದೆ ವಾಟ್ಸಾಪ್ ಚಾಟ್‌ಬಾಟ್‌ ಬಳಕೆ!

ಸಮಾಜ ಕಲ್ಯಾಣ ಇಲಾಖೆಯಡಿ(Samaja kalyana Ilake)ಬರುವ ನಿಗಮಗಳಿಂದ ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ವಾಹನ/ಹಳದಿ ಬೋರ್ಡ್ ಟ್ಯಾಕ್ಸಿ ಖರೀದಿಗೆ ಸಬ್ಸಿಡಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Swawlambi Sarati Scheme Eligibility-ಸ್ವಾವಲಂಬಿ ಸಾರಥಿ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಅರ್ಜಿದಾರರು ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮದಿಂದ ನಿಗದಿಪಡಿಸಿರುವ ಸಮುದಾಯಕ್ಕೆ ಸೇರಿರಬೇಕು.
  • ಅಭ್ಯರ್ಥಿಯ ವಯಸ್ಸು 21 ರಿಂದ 56 ವರ್ಷದೊಳಗಿರಬೇಕು.
  • ಅಭ್ಯರ್ಥಿಯ ಕುಟುಂಬದ ಯಾವುದೇ ಸದಸ್ಯರು, ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರಬಾರದು.
  • ಅಭ್ಯರ್ಥಿಯ ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು.
  • ಅಭ್ಯರ್ಥಿಯಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಭಾಗಕ್ಕೆ ರೂ 1.5 ಲಕ್ಷ ಹಾಗೂ ನಗರ ಪ್ರದೇಶದಲ್ಲಿರುವವರಿಗೆ ರೂ 2.00 ಲಕ್ಷ ಮೀರಿರಬಾರದು.

ಇದನ್ನೂ ಓದಿ: Borewell Subsidy-ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಹಾಯಧನಕ್ಕೆ ಅರ್ಜಿ ಅಹ್ವಾನ!

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಸ್ವಾವಲಂಬಿ ಸಾರಥಿ ಯೋಜನೆಯಡಿ ಸಹಾಯಧನದಲ್ಲಿ ಸರಕು ವಾಹನ/ಹಳದಿ ಬೋರ್ಡ್ ಟ್ಯಾಕ್ಸಿ ವಾಹನವನ್ನು ಖರೀದಿ ಮಾಡಲು ಅರ್ಹ ಅಭ್ಯರ್ಥಿಗಳು 10 ಸೆಪ್ಟೆಂಬರ್ 2025 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

Swawlambi Sarati Subsidy Amount-ಎಷ್ಟು ಸಬ್ಸಿಡಿ ನೀಡಲಾಗುತ್ತದೆ?

ನೀರುದ್ಯೋಗಿ ಯುವಕರು ಸ್ವಂತ ಉದ್ಯೋಗವನ್ನು ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆ ಮೂಲಕ ಸಬ್ಸಿಡಿಯಲ್ಲಿ ಸರಕು ವಾಹನ/ಹಳದಿ ಬೋರ್ಡ್ ಟ್ಯಾಕ್ಸಿ ಅನ್ನು ಖರೀದಿ ಮಾಡಲು ಶೇ 75% ಅಥವಾ ಗರಿಷ್ಠ ರೂ ₹4.00 ಲಕ್ಷ ಸಬ್ಸಿಡಿಯನ್ನು ನೀಡಲಾಗುತ್ತದೆ.

ಇದನ್ನೂ ಓದಿ: UPSC Free Coaching-ಉಚಿತ UPSC ಮತ್ತು KAS ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ!

How To Apply-ಅರ್ಜಿ ಹಾಕುವುದು ಹೇಗೆ?

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಅರ್ಜಿದಾರರು ಎರಡು ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು ಒಂದು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಿನ ವಿಧಾನವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

Swawlambi Sarati Online Application-ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುಹುದು ಹೇಗೆ?

ಹಂತ-1: ಅರ್ಜಿದಾರರು ಮೊದಲಿಗೆ ಇಲ್ಲಿ ಕ್ಲಿಕ್ "Swawlambi Sarati Online Application" ಮಾಡಿ ರಾಜ್ಯ ಸರಕಾರದ ಇ-ಆಡಳಿತ ಇಲಾಖೆಯಿಂದ ಅಭಿವೃದ್ದಿಪಡಿಸಿರುವ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.

ಹಂತ-2: ಇಲ್ಲಿ ಮುಖಪುಟದಲ್ಲಿ ಕಾಣುವ "ಇಲಾಖೆಗಳು ಮತ್ತು ಸೇವೆಗಳು" ಆಯ್ಕೆಯ ಮೇಲೆ ಒತ್ತಿ ನಂತರ ಇಲ್ಲಿ ಬಲಬದಿಯಲ್ಲಿ ಕಾಣುವ ಸರ್ವ್ ಕಾಲಂ ನಲ್ಲಿ "ಸ್ವಾವಲಂಬಿ ಸಾರಥಿ ಯೋಜನೆ" ಎಂದು "Search" ಮಾಡಿದರೆ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

ಇದನ್ನೂ ಓದಿ: Hero Scholarship-ಹೀರೋ ಕಂಪನಿ ವತಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

ಹಂತ-3: ಅರ್ಜಿ ನಮೂನೆಯ ಮೇಲೆ ಕ್ಲಿಕ್ ಮಾಡಿದರೆ ಕೊನೆಯಲ್ಲಿ "ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ" ಎಂದು ಗೋಚರಿಸುತ್ತದೆ ಇದರ ಮೇಲೆ ಒತ್ತಿ ನಿಮ್ಮ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು ಅದನ್ನು ನಮೂದಿಸಿ ಲಾಗಿನ್ ಅಗಬೇಕು.

ಹಂತ-4: ಲಾಗಿನ್ ಅಗಿ ನಂತರ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

Documents For Swawlambi Sarati Yojana-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

  • ಅಭ್ಯರ್ಥಿಯ ಆಧಾರ್‌ ಕಾರ್ಡ್‌
  • ಅಭ್ಯರ್ಥಿಯ ಪಡಿತರ ಚೀಟಿ
  • ಅಭ್ಯರ್ಥಿಯ ಗುರುತಿನ ಚೀಟಿ
  • ಜಾತಿ ಮತ್ತು ಆದಾಯ ಪ್ರಮಾಣಪತ್ರ
  • ವಾಹನದ ದರಪಟ್ಟಿ
  • ಈ ಹಿಂದೆ ನಿಗಮದಿಂದ ಯಾವುದೇ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದಿಲ್ಲವೆಂದು ಎಲ್ಲಾ ಅರ್ಜಿದಾರರ ಸ್ವಯಂ ಘೋಷಣೆ.
  • ಅಭ್ಯರ್ಥಿಯ ಇತ್ತೀಚಿನ ಭಾವಚಿತ್ರ
  • ಅಭ್ಯರ್ಥಿಯ ಬ್ಯಾಂಕ್‌ ಪಾಸ್‌ ಪುಸ್ತಕ.
  • ಅಭ್ಯರ್ಥಿಯ ವಾಹನ ಚಾಲನಾ ಪರವಾನಗಿ ಪತ್ರ.

ಇದನ್ನೂ ಓದಿ: Free Phenyl Soap Making Training-ಉಚಿತ ಫಿನಾಯಿಲ್,ಸೋಪ್ ಗೃಹ ಬಳಕೆ ವಸ್ತು ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

More Information-ಈ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಉಪಯುಕ್ತ ಲಿಂಕ್ ಗಳು:

Helpline Number- ಸಹಾಯವಾಣಿ ಸಂಖ್ಯೆ: 9482300400
Official Website- ಅಧಿಕೃತ ವೆಬ್ಸೈಟ್: Click Here
Application Link-ಅರ್ಜಿ ಸಲ್ಲಿಸಲು ಲಿಂಕ್-Apply Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: