Chaff cutter subsidy: ಶೇ 50% ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.

ಹೈನುಗಾರಿಕೆಯಲ್ಲಿ ತೊಡಗಿಕೊಂದಿರುವ ರೈತರಿಗೆ ಮೇವು ಕತ್ತರಿಸುವ ಯಂತ್ರವನ್ನು(chaff cutter subsidy) ಖರೀದಿಸಲು ಅರ್ಥಿಕವಾಗಿ ಸಹಾಯ ಧನ ಒದಗಿಸುವ ನಿಟ್ಟಿನಲ್ಲಿ ಶೇ 50% ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ವಿತರಣೆಗೆ ಪಶುಪಾಲನಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. 

ಈ ಕುರಿತು ಪ್ರಕಟಣೆ ವಿವರ ಹೀಗಿದೆ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖಾ ವತಿಯಿಂದ 2023-24 ನೇ ಸಾಲಿನ ರಾಷ್ಠಿಯ ಕೃಷಿ ವಿಕಾಸ ಯೋಜನೆಯಡಿ ಮೇವು ಕತ್ತರಿಸುವ ಯಂತ್ರಗಳನ್ನು ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಈ ಯೋಜನೆಯಡಿಯಲ್ಲಿ ಆಯ್ಕೆಯಾಗುವ ಪ್ರತಿ ಫಲಾನುಭವಿಗೆ 2HP ಮೇವು ಕತ್ತರಿಸುವ ಯಂತ್ರವನ್ನು ವಿತರಣೆ ಮಾಡಲಾಗುವುದು. ಘಟಕದ ವೆಚ್ಚ ರೂ 33, 000 ಇದ್ದು ಶೇ.50 ರ ಸಹಾಯಧನ ರೂ 16,500 ಮತ್ತು ಶೇ.50 ಫಲಾನುಭವಿ ವಂತಿಗೆ ರೂ 16, 500 ಯೊಂದಿಗೆ ಯೋಜನೆ ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಯಡಿ ಪ್ರತಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ನಿಗದಿತ ಗುರಿಗಳನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Electricity bill download: ಪ್ರತಿ ತಿಂಗಳ ಕರೆಂಟ್ ಬಿಲ್ ಅನ್ನು ನಿಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬವುದು! ಇಲ್ಲಿದೆ ವೆಬ್ಸೈಟ್ ಲಿಂಕ್.

ಅರ್ಜಿ ನಮೂನೆಗಳನ್ನು ನಿಮ್ಮ ಹತ್ತಿರದ ಪಶುವೈದ್ಯ ಆಸ್ಪತ್ರೆಯಿಂದ  ಪಡೆದು ಭರ್ತಿ ಮಾಡಿ ಆಧಾರ ಕಾರ್ಡ, ಸ್ಥಳಿಯ ಪಶುವೈದ್ಯರಿಂದ  ಪಡೆದ ಜಾನುವಾರು ದೃಡಿಕರಣ ಪತ್ರ, ಪಡಿತರ ಚೀಟಿ ಹಾಗೂ ಜಾತಿ ಪ್ರಮಾಣ (ಪ.ಜಾ ಮತ್ತು ಪ.ಪಂ ಫಲಾನುಭವಿಗಳಿಗೆ ಮಾತ್ರ) ಪತ್ರಗಳ ನಕಲು ಪ್ರತಿಗಳೊಂದಿಗೆ ತಾಲೂಕಿನ ಪಶು ಆಸ್ಪತ್ರೆಯಲ್ಲಿ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದರಿಂದ ಈ ಯಂತ್ರದ ಅಗತ್ಯವಿರುವವರು ಅಗತ್ಯ ದಾಖಲೆಗಳ ಸಮೇತ ನಿಮ್ಮ ತಾಲ್ಲೂಕಿನ ಪಶುವೈದ್ಯ ಆಸ್ಪತ್ರೆಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಲು ಕೋರಿದೆ.

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖಾ ಜಾಲತಾಣದ ವಿಳಾಸ: https://ahvs.karnataka.gov.in/

ಇದನ್ನೂ ಓದಿ: Gruhalakshmi 1st instalment: ಆಗಸ್ಟ್ 27 ರಂದು “ಗೃಹಲಕ್ಷ್ಮೀ” ಯೋಜನೆಯ ಮೊದಲ ಕಂತಿನ ಹಣ ವರ್ಗಾವಣೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯೇ ಚೆಕ್ ಮಾಡಿ.