Free computer training- 45 ದಿನದ ಉಚಿತ ಕಂಪ್ಯೂಟರ್ ಡಿ.ಟಿ.ಪಿ ಕಲಿಕೆ ತರಬೇತಿಗೆ ಅರ್ಜಿ ಆಹ್ವಾನ!

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಉಚಿತ ಕಂಪ್ಯೂಟರ್ ಡಿ.ಟಿ.ಪಿ ತರಬೇತಿ(Free computer training) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

Free computer training- 45 ದಿನದ ಉಚಿತ ಕಂಪ್ಯೂಟರ್ ಡಿ.ಟಿ.ಪಿ ಕಲಿಕೆ ತರಬೇತಿಗೆ ಅರ್ಜಿ ಆಹ್ವಾನ!
computer training

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಉಚಿತ ಕಂಪ್ಯೂಟರ್ ಡಿ.ಟಿ.ಪಿ ತರಬೇತಿ(Free computer training) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿ ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ತರಬೇತಿ ಪ್ರಾರಂಭವಾಗುವ ಮೊದಲು ಈ ಲೇಖನದಲ್ಲಿ ವಿವರಿಸಿರುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ ಈ ತರಬೇತಿಯ ಪ್ರಯೋಜನ ಪಡೆದುಕೊಳ್ಳಬಹುದು.

ತರಬೇತಿಯಲ್ಲಿ ಭಾಗವಹಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

ಇದನ್ನೂ ಓದಿ: Lok sabha election-2024: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ? ಎಂದು ಪರಿಶೀಲಿಸಲು ವೆಬ್ಸೈಟ್ ಲಿಂಕ್ ಬಿಡುಗಡೆ.

How can Apply- ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ನಡುವೆ ಇರಬೇಕು.
  • ಅಭ್ಯರ್ಥಿಗೆ ಕನ್ನಡ ಮತ್ತು ಇಂಗ್ಲಿಷ್ ಓದು-ಬರಹ ಬಲ್ಲವರಾಗಿರಬೇಕು.
  • ತರಬೇತಿ ಪಡೆದ ನಂತರ ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತಿ ಹೊಂದಿರಬೇಕು.
  • ಅಭ್ಯರ್ಥಿಯು ಗ್ರಾಮೀಣ ಭಾಗದರಾಗಿದ್ದು ಬಿಪಿಎಲ್ ಕಾರ್ಡ ಹೊಂದಿರುವವರಿಗೆ ತರಬೇತಿಯಲ್ಲಿ ಭಾಗವಹಿಸಲು ಮೊದಲ ಅದ್ಯತೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Training date and time- ತರಬೇತಿ ನಡೆಯುವ ಅವಧಿ ಮತ್ತು ದಿನಾಂಕ:

ತರಬೇತಿಯು ದಿನಾಂಕ 25 ಏಪ್ರಿಲ್ 2024 ರಿಂದ ಪ್ರಾರಂಭವಾಗಿ 08 ಜೂನ್ 2024 ರವರೆಗೆ ನಡೆಯಲಿದೆ.

Computer training details- ಈ ತರಬೇತಿಯಲ್ಲಿ ಏನೆಲ್ಲ ಕಳುಹಿಸಲಾಗುತ್ತದೆ?

ಕೋರೆಲ್ ಡ್ರಾ, 
ಪೋಟೋಶಾಪ್, 
ಪೇಜ್ ಮೇಕರ್, 
ಬೆಸಿಕ್ ಕಂಪ್ಯೂಟರ್ ಕೌಶಲ್ಯವನ್ನು ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಕಳುಹಿಸಲಾಗುತ್ತದೆ.

ಇದನ್ನೂ ಓದಿ: Voter ID- ವೋಟರ್ ಐಡಿ ತಿದ್ದುಪಡಿಗೆ ಕೊನೆಯ ಅವಕಾಶ! ಇಲ್ಲಿದೆ ನೀವೇ ಅರ್ಜಿ ಸಲ್ಲಿಸುವ ವಿಧಾನ.

Application process- ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಗೂಗಲ್ ಪಾರ್ಮ್ ಭರ್ತಿ ಮಾಡಿ ನಿಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಬಹುದಾಗಿದೆ.

Required Documents for this training- ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

1) ಅರ್ಜಿದಾರ  ಅಭ್ಯರ್ಥಿಯ ನಾಲ್ಕು(4) ಪಾಸ್ 
2) ಪೋರ್ಟ್ ಸೈಜ್ ಫೋಟೋ
3) ಬ್ಯಾಂಕ್ ಪಾಸ್ ಬುಕ್ ಪ್ರತಿ
4) ರೇಶನ್ ಕಾರ್ಡ
5) ಆಧಾರ್ ಕಾರ್ಡ
6) ಪಾನ್ ಕಾರ್ಡ 

Training center address- ತರಬೇತಿ ನಡೆಯುವ ಕೇಂದ್ರದ ವಿಳಾಸ ಹೀಗಿದೆ:

ಈ ಉಚಿತ 45 ದಿನದ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಯು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಇಂಡಿಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ ಆಸಕ್ತ ಅಭ್ಯರ್ಥಿಗಳು ತರಬೇತಿ ಪಡೆಯಲು ಈ ಕೇಂದ್ರ ಭೇಟಿ ಮಾಡಬೇಕು.

ಇದನ್ನೂ ಓದಿ: NVS Recruitment- ನವೋದಯ ವಿದ್ಯಾಲಯ ಸಮಿತಿಯಲ್ಲಿ ಬೋದಕೇತರ ಹುದ್ದೆಗಳ ಭರ್ಜರಿ ನೇಮಕಾತಿ! 1377 ಹುದ್ದೆಗಳಿಗೆ ಅರ್ಜಿ ಆಹ್ವಾನ.

ತರಬೇತಿಯು ಸಂಪೂರ್ಣ ಉಚಿತ:

ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ಊಟ ಸಹಿತ ಉಳಿದುಕೊಳ್ಳಲು ವಸತಿ ವ್ಯವಸ್ಥೆಯು ಸಹ ಸಂಪೂರ್ಣ ಉಚಿತವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಹೆಚ್ಚಿನ ಮಾಹಿತಿ ಪಡೆಯಲು ಈ 9449860007, 9538281989, 9916783825, 8880444612 ಮೊಬೈಲ್ ಸಂಖ್ಯೆಗೆ ಅಸಕ್ತ ಅಭ್ಯರ್ಥಿಗಳು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸಲು ಲಿಂಕ್: Apply Now

ಇದನ್ನೂ ಓದಿ: Free electronics repair training- ಉಚಿತ ಟಿ ವಿ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!