Breaking News:
LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ! Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000! Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!
HomeNew postsCopra msp price- ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಪುನಃ ನೋಂದಣಿಗೆ ಅವಕಾಶ! ಎಷ್ಟು ದಿನ...

Copra msp price- ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಪುನಃ ನೋಂದಣಿಗೆ ಅವಕಾಶ! ಎಷ್ಟು ದಿನ ಅವಕಾಶ ನೀಡಲಾಗಿದೆ?

ಕೃಷಿ ಮಾರಾಟ ಇಲಾಖೆಯ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿವತಿಯಿಂದ ಬೆಂಬಲ ಬೆಲೆಯಲ್ಲಿ(Copra msp price) ಉಂಡೆ ಕೊಬ್ಬರಿಯನ್ನು ಖರೀದಿಸಲು ರೈತರ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ.

ಎಷ್ಟು ದಿನ ರೈತರಗೆ  ನೋಂದಣಿಗೆ ಅವಕಾಶ ನೀಡಲಾಗಿದೆ? ಯಾವೆಲ್ಲ ಜಿಲ್ಲೆಗಳಲ್ಲಿ ಅವಕಾಶ? ಎಲ್ಲಿ ನೋಂದಣಿ ಮಾಡಿಕೊಳ್ಳಬೇಕು ಇತ್ಯಾದಿ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಎಲ್ಲಾ ರೈತ ಭಾಂದವರಿಗೆ ಈ ಮಾಹಿತಿ ತಿಳಿಸಲು ಸಹಕರಿಸಿ.

ಇದನ್ನೂ ಓದಿ: Bara Parihara status- ಮೊದಲ ಕಂತಿನ ಬರ ಪರಿಹಾರ ನಿಮಗೆ ಬಂದಿಲ್ಲವೇ? ಇಲ್ಲಿದೆ ಸೂಕ್ತ ಪರಿಹಾರ ಕ್ರಮ!

Kobbari Kharidi kendra-45 ದಿನಗಳವರೆಗೆ ರೈತರ ನೋಂದಣಿ ಅವಕಾಶ:

ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ನೂತನ ಆದೇಶದ ಪ್ರಕಾರ 2024 ನೇ ಸಾಲಿನ ಕೇಂದ್ರ ಸರ್ಕಾರದ ಎಫ್.ಎ.ಕ್ಯೂ.ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿ ಸಂಬಂಧ ರೈತರ ನೋಂದಣಿಯನ್ನು ದಿನಾಂಕ: 04.03.2024 ರಿಂದ ರಜಾ ದಿನಗಳು ಸೇರಿದಂತೆ ಮುಂದಿನ 45 ದಿನಗಳವರೆಗೆ ಗರಿಷ್ಠ ಮಿತಿ ಮುಕ್ತಾಯವಾಗುವವರೆಗೆ ಬೆಳಿಗ್ಗೆ 8.00 ಗಂಟೆಯಿಂದ ಸಾಯಂಕಾಲ 6.00 ಗಂಟೆಯವರೆಗೆ ಪ್ರಾರಂಭಿಸಲು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ರವರ ಅವಗಾಹನೆಗೆ ತಂದು ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

ಇದನ್ನೂ ಓದಿ: How to link rtc to aadhar- ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಜೋಡಣೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

Copra msp farmer registration- ರೈತರು ಎಲ್ಲಿ ನೋಂದಣಿ ಮಾಡಿಕೊಳ್ಳಬೇಕು:

ಉಂಡೆ ಕೊಬ್ಬರಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ಇಚ್ಚಿಸುವ ರೈತರು ಪ್ರೂಟ್ಸ್ ಐಡಿ(FID) ಯನ್ನು ನೀಡಿ ನಿಮ್ಮ ಜಿಲ್ಲೆಯ ಹತ್ತಿರದ  ಕೊಬ್ಬರಿ ಖರೀದಿ ಕೇಂದ್ರವನ್ನು ಭೇಟಿ ಮಾಡಿ ನೋಂದಣಿ ಮಾಡಿಕೊಳ್ಳಬೇಕು.

Copra msp price- ಉಂಡೆ ಕೊಬ್ಬರ ಖರೀದಿ ಬೆಂಬಲ ಬೆಲೆ ಎಷ್ಟು?

2024 ನೇ ಸಾಲಿನ ಕೇಂದ್ರ ಸರ್ಕಾರ ನಿಗದಿಪಡಿಸಲಾದ ಉಂಡೆ ಕೊಬ್ಬರಿ ಬೆಲೆ ಪ್ರತಿ ಕ್ವಿಂಟಾಲ್ ಗೆ ರೂ 12,000/- ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ರೂ 1,500 ಸೇರಿ ಒಟ್ಟಾರೆ ಪ್ರತಿ ಕ್ವಿಂಟಾಲ್ಗೆ ರೂ 13,500/- ನಿಗದಿಪಡಿಸಲಾಗಿರುತ್ತದೆ.

ಇದನ್ನೂ ಓದಿ: PM-Surya Ghar yojana- ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನದ ವಿವರ.

ನೋಂದಣಿ ಪ್ರಕ್ರಿಯ ಜೊತೆಗೆ ಖರೀದಿ ಅವಧಿಯನ್ನು ಮೂರು ತಿಂಗಳವರೆಗೆ:

ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಆದೇಶದಲ್ಲಿ ಖರೀದಿ ಪ್ರಕ್ರಿಯೆಗೆ ನಿಯಮಾನುಸಾರ ಅವಶ್ಯವಿರುವ ಪ್ರಕ್ರಿಯೆಗಳನ್ನು ಜಿಲ್ಲಾಡಳಿತ ಮತ್ತು ಖರೀದಿ ಸಂಸ್ಥೆಗಳು ಪೂರ್ವಭಾವಿ ಸಿದ್ಧತೆಗಳನ್ನು, ಅವಶ್ಯವಿರುವ ತಂತ್ರಾಂಶವನ್ನು ಅಳವಡಿಸಿಕೊಂಡ ತಕ್ಷಣದಿಂದ ಜಾರಿಗೆ ಬರುವಂತೆ 45 ದಿನಗಳವರೆಗೆ ರೈತರ ನೋಂದಣಿ ಹಾಗೂ ನೋಂದಣಿ ಪ್ರಕ್ರಿಯ ಜೊತೆಗೆ ಖರೀದಿ ಅವಧಿಯನ್ನು ಮೂರು ತಿಂಗಳವರೆಗೆ ನಿಗಧಿಪಡಿಸಿ ಆದೇಶಿಸಲಾಗಿರುತ್ತದೆ.

ಜಿಲ್ಲಾವಾರು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವ ಉಂಡೆ ಕೊಬ್ಬರಿ ವಿವರ ಹೀಗಿದೆ:

ತುಮಕೂರು- 3,50,000 (ಕ್ವಿಂಟಾಲ್ ನಲ್ಲಿ)
ಮಂಡ್ಯ- 40,000
ಮೈಸೂರು- 5,000
ದಕ್ಷಿಣಕನ್ನಡ- 1,000
ರಾಮನಗರ- 25,000
ಚಾಮರಾಜನಗರ- 1,500
ಚಿತ್ರದುರ್ಗ- 40,000
ಹಾಸನ- 1,75,000
ಚಿಕ್ಕಮಗಳೂರು- 55,000
ಒಟ್ಟು- 6,92,500

ಇದನ್ನೂ ಓದಿ: RTC adhar link- ಪಹಣಿ/RTC ಮತ್ತು ಆಧಾರ್ ಜೋಡಣೆಗೆ ಕಂದಾಯ ಇಲಾಖೆಯಿಂದ ನೂತನ ಕ್ರಮ: ಸಚಿವ ಕೃಷ್ಣಬೈರೇಗೌಡ.

ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಮ್ತೆ ಯಾವುದೇ ಸಮಸ್ಯೆಗಳು ಉದ್ಬವಿಸಿದಲ್ಲಿ ಸಹಾಯವಾಣಿ ಸಂಖ್ಯೆಗಳು: 80 22253968 ಅಥವಾ ಉಚಿತ ದೂರವಾಣಿ ಸಂಖ್ಯೆ: 1800-425-1552 ಗೆ ಸಂಪರ್ಕಿಸಬಹುದು.

ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಅಧಿಕೃತ ವೆಬ್ಸೈಟ್: Click here

Most Popular

Latest Articles

- Advertisment -

Related Articles