Breaking News:
Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ! Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ! LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
HomeNew postsCrop Insurance- ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಸಲ್ಲಿಸಬೇಕಾದ ದಾಖಲೆಗಳೇನು?

Crop Insurance- ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಸಲ್ಲಿಸಬೇಕಾದ ದಾಖಲೆಗಳೇನು?

ಎಲ್ಲಾ ರೈತ ಮಿತ್ರರಿಗೆ ನಮಸ್ಕಾರಗಳು ಇಂದು ಈ ಲೇಖನದಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಎಲ್ಲಿ ಅರ್ಜಿ(Crop insurance application-2024)ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಇತ್ಯಾದಿ ಅಗತ್ಯ ಮಾಹಿತಿಯನ್ನು ತಿಳಿಸಲಾಗಿದೆ.

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಅವಕಾವಿದ್ದು ಸರಕಾರದಿಂದ ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆಯಬಹುದು.

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಬೇಕಾಗುವ ದಾಖಲೆಗಳೇನು? ಈ ಕುರಿತು ಸಂಪೂರ್ಣ ವಿವರವನ್ನುಈ ಕೆಳಗೆ ತಿಳಿಸಲಾಗಿದ್ದು ಮಾಹಿತಿಯು ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

ಇದನ್ನೂ ಓದಿ: MSP Price-2024: ದೇಶದ ರೈತರಿಗೆ ಗುಡ್ ನ್ಯೂಸ್ ಭತ್ತ,ರಾಗಿ ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ ಏರಿಕೆ!

How to apply for crop insurance-ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು?

ರೈತರು ತಮ್ಮ ಹಳ್ಳಿಗೆ ಸಂಬಂದಪಟ್ಟ ಬೆಳೆಗೆ ವಿಮೆಯನ್ನು ಮಾಡಿಕೊಳ್ಳಲು ಈ ಯೋಜನೆಯಡಿ ಅವಕಾಶವಿದ್ದು ಅಗತ್ಯ ದಾಖಲೆಗಳ ಸಮೇತ ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ್ ಒನ್, CSC ಕಂಪ್ಯೂಟರ್ ಸೆಂಟರ್ ಅನ್ನು ನೇರವಾಗಿ ಭೇಟಿ ಮಾಡಿ ಆನ್ಲೈನ್ ಮೂಲಕ ವಿಮೆ ಪ್ರೀಮಿಯಂ ಅನ್ನು ಪಾವತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Required Documets for application-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

1) ಅರ್ಜಿದಾರರ ಆಧಾರ್ ಕಾರ್ಡ.
2) ಆಧಾರ್ ಲಿಂಕ್ ಅಗಿರುವ ಬ್ಯಾಂಕ್ ಖಾತೆ.
3) ಜಮೀನಿನ ಪಹಣಿ/ಉತಾರ್/RTC.

ಇದನ್ನೂ ಓದಿ: karnataka dam water level-2024: ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಮತ್ತು ಸಂಗ್ರಹಣೆ ಮತ್ತು ಒಳ ಮತ್ತು ಹೊರ ಹರಿವು ಮಾಹಿತಿ ಹೀಗಿದೆ!

Frutis ID-FID ಅಲ್ಲಿ ಎಲ್ಲಾ ಸರ್ವೆ ನಂಬರ್ ಮತ್ತು ವಿಸ್ತೀರ್ಣ ಸರಿಯಾಗಿರಬೇಕು:

ರೈತರು ತಾವು ಬೆಳೆದಿರುವ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಪ್ರೂಟ್ಸ್ ಐಡಿಯಲ್ಲಿ/FID  ಅಲ್ಲಿ ನಿಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಮತ್ತು ಜಮೀನಿನ ವಿಸ್ತೀರ್ಣ ಸರಿಯಾಗಿ ಸೇರ್ಪಡೆಯಾಗಿರುವ ಅತೀ ಮುಖ್ಯವಾಗಿದೆ ಈ ತಂತ್ರಾಂಶದಲ್ಲಿ ಸರ್ವೆ ನಂಬರ್ ಸೇರ್ಪಡೆಯಾಗಿಲ್ಲದಿದ್ದಲ್ಲಿ ಬೆಳೆ ವಿಮೆ ಮಾಡಿಸಲು ಅಗುವುದಿಲ್ಲ.

ಪ್ರೂಟ್ಸ್ ಐಡಿ ವಿವರವನ್ನು ಸರಿಪಡಿಸಿಕೊಳ್ಳಲು ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Crop survey- ನಿಮ್ಮ ಜಮೀನಿನ ಬೆಳೆ ಸಮೀಕ್ಷೆಯ ವರದಿ ಬಿಡುಗಡೆ! ಇಲ್ಲಿದೆ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್

last date for application- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರವನ್ನು ರೈತರು ಈ ಅಧಿಕೃತ www.samrakshane.karnataka.gov.in ವೆಬ್ಸೈಟ್ ಅನ್ನು ಪ್ರವೇಶ ಮಾಡಿ ತಮ್ಮ ತಮ್ಮ ಮೊಬೈಲ್ ನಲ್ಲೇ ಈ ಕೆಳಗಿನ ವಿಧಾನವನ್ನು ಅನುಸರಿಸಿ ತಿಳಿದುಕೊಳ್ಳಬಹುದು.

Step-1: ಪ್ರಥಮದಲ್ಲಿ ಈ insurance last date ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು. ತದನಂತರ ಈ ಪೇಜ್ ನಲ್ಲಿ “ವರ್ಷ/Year: 2024-25” ಮತ್ತು “ಋತು: Kharif/ಮುಂಗಾರು” ಎಂದು ಆಯ್ಕೆ ಮಾಡಿಕೊಂಡು “ಮುಂದೆ/Go” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: ಬಳಿಕ “Farmers’ ವಿಭಾಗದಲ್ಲಿ “View Cut Off Dates” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ತದನಂತರ ಇಲ್ಲಿ ಆಯ್ಕೆ ವಿಭಾಗದಲ್ಲಿ “District/ಜಿಲ್ಲೆ” ಮೇಲೆ ಕ್ಲಿಕ್ ಮಾಡಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡರೆ ನಿಮ್ಮ ಜಿಲ್ಲೆಯಲ್ಲಿ ಬೆಳೆಯುವ ಬೆಳೆವಾರು ಬೆಳೆ ವಿಮೆ ಪ್ರಿಮಿಯಂ ಪಾವತಿ ಮಾಡಲು ಅಥವಾ ಕಟ್ಟಲು ಕೊನೆಯ ದಿನಾಂಕದ ಪಟ್ಟಿ ತೋರಿಸುತ್ತದೆ.

ಇದನ್ನು ನೋಡಿ ರೈತರು ಸರಕಾರದಿಂದ ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Most Popular

Latest Articles

- Advertisment -

Related Articles