DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

May 17, 2025 | Siddesh
DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!
Share Now:

ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದ್ದು ರೈತರು ಬಿತ್ತನೆಗಾಗಿ ರಸಗೊಬ್ಬರವನ್ನು(DAP Fertilizer) ಶೇಖರಣೆ ಮಾಡಿಕೊಳ್ಳಲು ಶುರು ಮಾಡಲಿರುವ ಸಮಯದಲ್ಲಿ ಕೃಷಿ ಇಲಾಖೆಯಿಂದ ಡಿಎಪಿ ರಸಗೊಬ್ಬರ ಬಳಕೆ ಕುರಿತು ಮಹತ್ವದ ಪ್ರಕಟಣೆಯನ್ನು ಹೊರಡಿಸಲಾಗಿದೆ.

ಡಿಎಪಿ ರಸಗೊಬ್ಬರ(Fertilizer) ಬಳಕೆ ಕುರಿತು ರೈತರಲ್ಲಿ ಜಾಗ್ರತೆಯನ್ನು ಮೂಡಿಸಲು ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಸಾಮಾನ್ಯವಾಗಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ರೈತರು ಅತೀ ಹೆಚ್ಚಿನ ಪ್ರಮಾಣದಲ್ಲಿ ಈ ಗೊಬ್ಬರವನ್ನು ಬಳಕೆ ಮಾಡುತ್ತಾರೆ ಇದಕ್ಕಾಗಿ ಕೆಲವು ಪ್ರಮುಖ ಸಲಹೆಗಳನ್ನು ಇಲಾಖೆಯಿಂದ ನೀಡಲಾಗಿದೆ.

ಇದನ್ನೂ ಓದಿ: Guest Teacher Salary Hike-ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವಧನ ಹೆಚ್ಚಳ! ಇಲ್ಲಿದೆ ಅಧಿಕೃತ ಆದೇಶದ ಪ್ರತಿ!

ಪ್ರಸ್ತುತ ಈ ಅಂಕಣದಲ್ಲಿ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ(Karnataka Agriculture Department) ಹೊರಡಿಸಿರುವ ಪ್ರಕಟಣೆ ವಿವರ ಮತ್ತು ಸಸ್ಯಗಳಿಗೆ ಅವಶ್ಯವಿರುವ ಪೋಷಕಾಂಶದ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

DAP Fertilizer-ಡಿಎಪಿ ಗೊಬ್ಬರದ ಬದಲಾಗಿ ಪರ್ಯಾಯ ಗೊಬ್ಬರ ಬಳಸಲು ಸೂಚನೆ:

ಸಾಮಾನ್ಯವಾಗಿ ರೈತರು ಬಿತ್ತನೆ ಸಮಯದಲ್ಲಿ ಡಿಎಪಿ ಗೊಬ್ಬರವನ್ನೇ ಹೆಚ್ಚು ಪ್ರಮಾಣದಲ್ಲಿ ಬಳಕೆ ಮಾಡುತ್ತಾರೆ ಅದರೆ ಬೆಳೆಗಳಿಗೆ ಸಮತೋಲನವಾಗಿ ಪೋಷಕಾಂಶಗಳನ್ನು ಒದಗಿಸಲು ವಿವಿಧ ಬಗ್ಗೆಯ ಸಂಯುಕ್ತ ಗೊಬ್ಬರವನ್ನು ಬಳಕೆ ಮಾಡುವುದು ಅವಶ್ಯಕವಾಗಿ ಈ ನಿಟ್ಟಿನಲ್ಲಿ ಇತರೆ ಸಂಯುಕ್ತ ಗೊಬ್ಬರಗಳನ್ನು ಬಳಕೆ ಮಾಡುವಂತೆ ರಾಜ್ಯದ ಎಲ್ಲಾ ರೈತರಿಗೆ ಕೃಷಿ ಇಲಾಖೆಯಿಂದ ಸಲಹೆಯನ್ನು ನೀಡಲಾಗಿದೆ.

ಇದನ್ನೂ ಓದಿ: Flipkart Scholarship-ಫ್ಲಿಪ್‌ಕಾರ್ಟ್ ಫೌಂಡೇಶನ್ ನಿಂದ 50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Fertilizer-ಒಂದು ಬೆಳೆ ಬೆಳೆಯಲು 17 ಪೋಷಕಾಂಶಗಳು ಅವಶ್ಯಕ:

ಯಾವುದೇ ಒಂದು ಬೆಳೆಯನ್ನು ಬೆಳೆಯಲು ಸಾರಜನಕ,ರಂಜಕ,ಪೋಟ್ಯಾಶ್ ಪೋಷಕಾಂಶಗಳನ್ನು ಸೇರಿ ಒಟ್ಟೂ 17 ಪೋಷಕಾಂಶಗಳು ಅವಶ್ಯವಾಗಿರುತ್ತದೆ ಇವುಗಳಲ್ಲಿ ಒಟ್ಟೂ 3 ವಿಭಾಗವನ್ನು ಮಾಡಲಾಗಿದ್ದು ಅವುಗಳ ವಿವರ ಈ ಕೆಳಗಿನಂತಿದೆ:

ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ.

ಇದನ್ನೂ ಓದಿ: Borewell Permission-ಇನ್ಮುಂದೆ ಬೋರ್ ವೆಲ್ ಕೊರೆಸಲು ಈ ಅನುಮತಿ ಕಡ್ಡಾಯ!

DAP Fertilizer

1) ಪ್ರಧಾನ ಪೋಷಕಾಂಶಗಳು(Macronutrients):

ನೈಟ್ರೋಜನ್ (N) – ಸಸ್ಯಗಳ ಬೆಳವಣಿಗೆಗೆ ಅಗತ್ಯವಿರುವ ಪ್ರಮುಖ ಅಂಶ.

ಫಾಸ್ಪರಸ್ (P) – ಬೇರುಗಳ ಬೆಳವಣಿಗೆಗೆ ಸಹಾಯಕ.

ಪೊಟ್ಯಾಷಿಯಂ (K) – ಸಸ್ಯದ ಒತ್ತಡ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಹಣ್ಣುಗಳು, ಬೀಜಗಳ ಗುಣಮಟ್ಟ ಸುಧಾರಿಸುತ್ತದೆ.

2) ಮಧ್ಯಮ ಪೋಷಕಾಂಶಗಳು(Secondary Nutrients):

ಕ್ಯಾಲ್ಸಿಯಂ (Ca) , ಮ್ಯಾಗ್ನೀಶಿಯಂ (Mg), ಸಲ್ಫರ್ (S)

3) ಲಘು ಪೋಷಕಾಂಶಗಳು (Micronutrients):

ಜಿಂಕ್ (Zn), ಮ್ಯಾಂಗನೀಸ್ (Mn), ಬೋರೆನ್ (B), ಫೆರಸ್ ಅಥವಾ ಲೋಹ (Fe), ಕಾಪರ್ (Cu), ಮೋಲಿಬ್ಡಿನಮ್ (Mo), ಕ್ಲೋರಿನ್ (Cl)

ಇದನ್ನೂ ಓದಿ: E-Swathu Documents-ಗ್ರಾಮ ಪಂಚಾಯತಿಯಲ್ಲಿ ಇ ಸ್ವತ್ತು ವಿತರಣೆಗೆ ನೂತನ ಆದೇಶ ಪ್ರಕಟ!

ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಹೊರಡಿಸಿರುವ ಪ್ರಕಟಣೆ ವಿವರ:

ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ. ಉಳಿದ 14 ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು, ಕ್ಯಾಲ್ಸಿಯಂ,

ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬಿನಂ ಕ್ಲೋರಿನ್ ಮತ್ತು ನಿಕ್ಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘು ಪೋಷಕಾಂಶಗಳೆಂದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದ ಈ ಎಲ್ಲಾ ಪೋಷಕಾಂಶಗಳು ಬೆಳಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ, ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ)

ಇದನ್ನೂ ಓದಿ: Bele Parihara List-ಹಿಂಗಾರು ಬೆಳೆ ಪರಿಹಾರ ಹಣ ಬಿಡುಗಡೆ ಪಟ್ಟಿ ಬಿಡುಗಡೆ!

ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು. ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ ದೊರೆಯುವ ರೂಪದಲ್ಲಿದ್ದು, ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.

ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯ ಹಾಗೂ ಡಿ.ಎ.ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ

ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.

ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ, ರಂಜಕ, ಪೊಟ್ಯಾಶ್ ರಸಗೊಬ್ಬರಗಳನ್ನು 4:2:1ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಪ್ರಸ್ತುತ ರೈತರು ಯಥೇಚ್ಚವಾಗಿ ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು 5.08: 2.83: 1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತೇಜಿಸಿ, ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸರಿದೂಗಿಸಬಹುದಾಗಿರುತ್ತದೆ.

ಅಲ್ಲದೇ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ, ಆದ್ಯತೆ ನೀಡದೆ, ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10, 14:35:14 ಇತ್ಯಾದಿ ರಸಗೊಬ್ಬರಗಳನ್ನೂ ಸಹ ಬಳಸಬಹುದಾಗಿದೆ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆಯಿಂದ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ.

WhatsApp Group Join Now
Telegram Group Join Now
Share Now: