Deepika Scholarship 2026-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ಆರ್ಥಿಕ ನೆರವು!

January 22, 2026 | Siddesh
Deepika Scholarship 2026-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ಆರ್ಥಿಕ ನೆರವು!
Share Now:

ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜೀ ಫೌಂಡೇಶನ್ (Azim Premji Foundation) ಜಂಟಿಯಾಗಿ ಹಮ್ಮಿಕೊಂಡಿರುವ 'ದೀಪಿಕಾ ವಿದ್ಯಾರ್ಥಿವೇತನ' ಯೋಜನೆಯ ಎರಡನೇ ಹಂತದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು. ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣವನ್ನು ಉತ್ತೇಜಿಸಲು ಈ ಮಹತ್ವದ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ವಿದ್ಯಾರ್ಥಿವೇತನವನ್ನು ಪಡೆಯಲು ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಈ ಲೇಖನದಲ್ಲಿ ದೀಪಿಕಾ ವಿದ್ಯಾರ್ಥಿವೇತನವನ್ನು(Deepika Scholarship Scheme ) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳು ಯಾವುವು? ಇದಕ್ಕಾಗಿ ಅವಶ್ಯವಿರುವ ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ಹಂತಗಳನ್ನು ವಿವರವಾಗಿ ತಿಳಿಸಿಕೊಡಲಾಗಿದೆ.

ಇದನ್ನೂ ಓದಿ: Akrama-Sakrama-ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೆ ಸಬ್ಸಿಡಿಯಲ್ಲಿ ವಿದ್ಯುತ್ ಸಂಪರ್ಕ!

Deepika Scholarship Amount-ಎಷ್ಟು ವಿದ್ಯಾರ್ಥಿವೇತನ ಒದಗಿಸಲಾಗುತ್ತದೆ?

ವಿದ್ಯಾರ್ಥಿನಿಯರು ಆಯ್ದುಕೊಂಡ ಕೋರ್ಸ್ ಅವಧಿಯ ಆಧಾರದ ಮೇಲೆ ವಿದ್ಯಾರ್ಥಿವೇತನ ಒಟ್ಟು ಮೊತ್ತದ ವಿವರ ಈ ಕೆಳಗಿನಂತೆ ನೀಡಲಾಗುತ್ತದೆ:

ಇಂಜಿನಿಯರಿಂಗ್/ವೈದ್ಯಕೀಯ (4-5 ವರ್ಷ): ಒಟ್ಟು ₹1,20,000 ರಿಂದ ₹1,50,000 ಸಹಾಯಧನ.

ಸಾಮಾನ್ಯ ಪದವಿ (3 ವರ್ಷ): ಒಟ್ಟು ₹90,000 ಆರ್ಥಿಕ ನೆರವು.

ಡಿಪ್ಲೊಮಾ ಕೋರ್ಸ್ (2-3 ವರ್ಷ): ₹60,000 ದಿಂದ ₹90,000 ವರೆಗೆ ಪ್ರೋತ್ಸಾಹಧನ.

ಗಮನಿಸಿ: ವಿದ್ಯಾರ್ಥಿನಿಯರು ಪ್ರತಿ ವರ್ಷದ ಪರೀಕ್ಷೆಯಲ್ಲಿ ಯಾವುದೇ ಬ್ಯಾಕ್‌ಲಾಗ್ (Backlog) ಉಳಿಸಿಕೊಳ್ಳದೆ ಉತ್ತೀರ್ಣರಾಗುವುದು ಕಡ್ಡಾಯ. ಅನುತ್ತೀರ್ಣರಾದಲ್ಲಿ ಮುಂದಿನ ಕಂತಿನ ಹಣವನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: BGM Foundation-ಬಿಜಿಎಂ ಫೌಂಡೇಶನ್ ವತಿಯಿಂದ ಪದವಿಪೂರ್ವ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ!

Deepika Scholarship Eligibility Criteria- ವಿದ್ಯಾರ್ಥಿವೇತನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ದೀಪಿಕಾ ವಿದ್ಯಾರ್ಥಿವೇತನ ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎನ್ನುವ ವಿವರ ಈ ಕೆಳಗಿನಂತಿದೆ:

ಅರ್ಜಿದಾರ ಅಭ್ಯರ್ಥಿಯು ಕಡ್ಡಾಯವಾಗಿ ಕರ್ನಾಟಕದ ನಿವಾಸಿಯಾಗಿರಬೇಕು.

10ನೇ ತರಗತಿ ಮತ್ತು ಪಿಯುಸಿ (PUC) ಎರಡನ್ನೂ ಕರ್ನಾಟಕದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿಯೇ ವ್ಯಾಸಂಗ ಮಾಡಿರಬೇಕು.

2025-26ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೊಮಾ ಪ್ರಥಮ ವರ್ಷಕ್ಕೆ ದಾಖಲಾಗಿರಬೇಕು.

ಆರ್ಥಿಕವಾಗಿ ಹಿಂದುಳಿದ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಮೊದಲ ಆದ್ಯತೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Best Savings Plan-ಸುಕನ್ಯಾ ಸಮೃದ್ಧಿ ಯೋಜನೆ: ₹1.5 ಲಕ್ಷ ಹೂಡಿಕೆಗೆ ₹69 ಲಕ್ಷ ರಿಟರ್ನ್ಸ್!

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಜನವರಿ 2026.

Required Documents-ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು:

ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು ಈ ಕೆಳಗಿನ ಪಟ್ಟಿಯಲ್ಲಿ ತಿಳಿಸಿರುವಅರ್ಜಿ ಸಲ್ಲಿಸುವ ಮೊದಲು ಈ ಕೆಳಗಿನ ದಾಖಲೆಗಳ ಸ್ಕ್ಯಾನ್ ಪ್ರತಿಗಳನ್ನು ಸಿದ್ಧವಾಗಿಟ್ಟುಕೊಳ್ಳಿ:

ಆಧಾರ್ ಕಾರ್ಡ್/Aadhaar Card

SSLC ಮತ್ತು ದ್ವಿತೀಯ ಪಿಯುಸಿ ಅಂಕಪಟ್ಟಿಗಳು/Marks Cards

ಪ್ರಸ್ತುತ ಓದುತ್ತಿರುವ ಕಾಲೇಜಿನ ಪ್ರವೇಶ ಪತ್ರ/Admission Certificate

ಬ್ಯಾಂಕ್ ಪಾಸ್‌ಬುಕ್ ಪ್ರತಿ/Bank Pass Book

ಪಾಸ್‌ಪೋರ್ಟ್ ಅಳತೆಯ ಫೋಟೋ/Photo

ಇದನ್ನೂ ಓದಿ: Prize Money-2025-26ನೇ ಸಾಲಿನ ಮೆಟ್ರಿಕ್ ನಂತರದ ಮತ್ತು SSLC ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!

Deepika Scholarship Online Application-ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ವಿದ್ಯಾರ್ಥಿನಿಯರು ಕೆಳಗಿನ ಹಂತಗಳನ್ನು ಅನುಸರಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು:

Step-1: ಅಜೀಂ ಪ್ರೇಮ್‌ಜೀ ಫೌಂಡೇಶನ್‌ನ ಅಧಿಕೃತ ವೆಬ್‌ಸೈಟ್ azimpremjifoundation.org ಗೆ ಭೇಟಿ ನೀಡಿ.

Deepika Scholarship Application

ಇದನ್ನೂ ಓದಿ: Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

Step-2: 'Register' ಬಟನ್ ಮೇಲೆ ಕ್ಲಿಕ್ ಮಾಡಿ, ಇಮೇಲ್ ಮತ್ತು ಫೋನ್ ಸಂಖ್ಯೆ ಬಳಸಿ ಖಾತೆ ತೆರೆಯಿರಿ.

Step-3: ಲಾಗಿನ್ ಆದ ನಂತರ ನಿಮ್ಮ ವೈಯಕ್ತಿಕ, ಶೈಕ್ಷಣಿಕ ಮತ್ತು ಬ್ಯಾಂಕ್ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.

Step-4: ಕೇಳಲಾದ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

Step-5: ಕೊನೆಯದಾಗಿ ಅರ್ಜಿಯನ್ನು 'Submit' ಮಾಡಿ ಮತ್ತು ಮುಂದಿನ ಉಲ್ಲೇಖಕ್ಕಾಗಿ ಪ್ರಿಂಟ್ ತೆಗೆದುಕೊಳ್ಳಿ.

ಇದನ್ನೂ ಓದಿ: Re-Marriage Assistance-ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆಯಡಿ ₹3.0 ಲಕ್ಷ ಆರ್ಥಿಕ ನೆರವು!

Helpline Number-ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:

ಅರ್ಜಿ ಸಲ್ಲಿಕೆ ಸಮಯದಲ್ಲಿ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ಅಥವಾ ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಈ ಸಂಖ್ಯೆಗೆ ವಾಟ್ಸಾಪ್ ಮೂಲಕ ಸಂಪರ್ಕಿಸಬಹುದು: 9019960536.

ರಾಜ್ಯದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಯರ ಶಿಕ್ಷಣದ ಕನಸಿಗೆ 'ದೀಪಿಕಾ ವಿದ್ಯಾರ್ಥಿವೇತನ' ಆಸರೆಯಾಗಿದೆ. ಅರ್ಹ ವಿದ್ಯಾರ್ಥಿನಿಯರು ಕಾಲಮಿತಿಯೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಿ.

ನಿಮಗೆ ಈ ಮಾಹಿತಿ ಇಷ್ಟವಾದಲ್ಲಿ ಹಾಗೂ ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ಸ್ನೇಹಿತರೊಂದಿಗೆ ಮತ್ತು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹಂಚಿಕೊಳ್ಳಿ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: