Diesel Pump Subsidy-ಶೇ 90% ಸಬ್ಸಿಡಿಯಲ್ಲಿ ಡಿಸೇಲ್ ಪಂಪ್ ಪಡೆಯಲು ಅರ್ಜಿ!

May 27, 2025 | Siddesh
Diesel Pump Subsidy-ಶೇ 90% ಸಬ್ಸಿಡಿಯಲ್ಲಿ ಡಿಸೇಲ್ ಪಂಪ್ ಪಡೆಯಲು ಅರ್ಜಿ!
Share Now:

ರೈತರಿಗೆ ಸಬ್ಸಿಡಿಯಲ್ಲಿ ಡಿಸೇಲ್ ಪಂಪ್ ಅನ್ನು ಸಹಾಯಧನದಲ್ಲಿ(Diesel Pump Subsidy) ಒದಗಿಸಲು ಅರ್ಹರನ್ನು ಆಯ್ಕೆ ಮಾಡಲು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಕೃಷಿ ಇಲಾಖೆಯಲ್ಲಿ ಕೃಷಿ ಭಾಗ್ಯ(Krishi Bhgya Yojane) ಮತ್ತು ಕೃಷಿ ಯಾಂತ್ರೀಕರಣ ಯೋಜನೆ(Agriculture Equipment) ಹಾಗೂ ತೋಟಗಾರಿಕೆ ಇಲಾಖೆಯಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್(NHM) ಯೋಜನೆಯಲ್ಲಿ ರೈತರು ಸಬ್ಸಿಡಿಯಲ್ಲಿ ಡಿಸೇಲ್ ಪಂಪ್(Diesel Pump) ಅನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

ರೈತರು ಸಬ್ಸಿಡಿಯಲ್ಲಿ ಡಿಸೇಲ್ ಪಂಪ್(Diesel Pump Application) ಅನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಅರ್ಜಿ ಸಲ್ಲಿಸಲು ಇಲಾಖೆಯಿಂದ ನಿಗದಿಪಡಿಸಿದ ಮಾನದಂಡಗಳೇನು? ಇತ್ಯಾದಿ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Who Can Apply-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

1) ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

2) ಅರ್ಜಿದಾರರ ಹೆಸರಿಗೆ ಕೃಷಿ ಭೂಮಿಯನ್ನು ಹೊಂದಿರಬೇಕು.

3) ಈ ಹಿಂದೆ ಈ ಯೋಜನೆಗಳ ಮೂಲಕ ಸಹಾಯಧನವನ್ನು ಪಡೆದಿರಬಾರದು.

4) ಅರ್ಜಿದಾರರು ಈಗಾಗಲೇ ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ಅಥವಾ ಇನ್ನಿತರೆ ಪೂರಕ ನೀರಿನ ಮೂಲವನ್ನು ಹೊಂದಿರಬೇಕು.

ಇದನ್ನೂ ಓದಿ: Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ರೂ 75,000/- ರವರೆಗೆ ಶಿಷ್ಯವೇತನ ಪಡೆಯಲು ಅರ್ಜಿ!

Pump Subsidy

ಇದನ್ನೂ ಓದಿ: PM Kisan-2025: ಪಿ ಎಂ ಕಿಸಾನ್ ಯೋಜನೆಯಡಿ ಮೇ 31 ರವರೆಗೆ ವಿಶೇಷ ಅಭಿಯಾನ!

How To Apply-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಆಸಕ್ತ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ತೋಟಗಾರಿಕೆ ಇಲಾಖೆಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸಬಹುದು.

Documents For Diesel Pump Subsidy-ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳು:

1) ರೈತರ ಆಧಾರ್ ಕಾರ್ಡ್ ಪ್ರತಿ
2) ಕುಟುಂಬದ ರೇಷನ್ ಕಾರ್ಡ
3) ಪೋಟೋ
4) ಬ್ಯಾಂಕ್ ಪಾಸ್ ಬುಕ್ ಪ್ರತಿ
5) ಪಹಣಿ/RTC/ಊತಾರ್
6) ನೀರಿನ ಮೂಲದ ಪ್ರಮಾಣ ಪತ್ರ/ಕೃಷಿ ಹೊಂಡ

ಇದನ್ನೂ ಓದಿ: Bele Parihara-38.5 ಲಕ್ಷ ರೈತರ ಖಾತೆಗೆ 3535 ಕೋಟಿ ಬೆಳೆ ಹಾನಿ ಪರಿಹಾರ!

Diesel pumpset subsidy details- ಎಷ್ಟು ಸಹಾಯಧನ ಪಡೆಯಬಹುದು?

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಮತ್ತು ಕೃಷಿ ಯಾಂತ್ರೀಕರಣ ಯೋಜನೆಯಡಿ ಸಬ್ಸಿಡಿಯನ್ನು ಪಡೆಯಬಹುದು ಅದೇ ರೀತಿ ತೋಟಗಾರಿಕೆ ಇಲಾಖೆಯ ಮೂಲಕ ರಾಷ್ಟ್ರೀಯ ತೋಟಗಾರಿಕೆ ಮಿಷನ್(NHM) ಯೋಜನೆಯಡಿ ಒಂದು ಘಟಕಕ್ಕೆ ಶೇ 90% ಸಬ್ಸಿಡಿಯನ್ನು ಪಡೆಯಲು ರೈತರಿಗೆ ಅವಕಾಶವಿರುತ್ತದೆ.

Diesel Pump Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ:

ಕೃಷಿ ಇಲಾಖೆಯಿಂದ ಕೃಷಿ ಯಾಂತ್ರೀಕರಣ ಯೋಜನೆಯಡಿ ಸಹಾಯಧನದಲ್ಲಿ ವಿವಿಧ ಯಂತೋಪಕರಣಗಳನ್ನು ಪಡೆಯಲು ಆನ್ಲೈನ್ ಮೂಲಕ ಈ ಕೆಳಗಿನ ವಿಧಾನವನ್ನು ಅನುಸರಿಸಿ ಕೆ-ಕಿಸಾನ್ ಪೋರ್ಟಲ್ ಅನ್ನು ಪ್ರವೇಶ ಮಾಡಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಮೊದಲಿಗೆ ಇಲ್ಲಿ ಕ್ಲಿಕ್ Apply Now ಮಾಡಿ ಅಧಿಕೃತ ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Mini Tractor Subsidy-ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಘಟಕಗಳಿಗೆ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Diesel Pump Subsidy application

ಇದನ್ನೂ ಓದಿ: BPL Card Benefits-ಬಿಪಿಎಲ್‌ ಕಾರ್ಡ್‌ದಾರರಿಗೆ ಇನ್ನುಂದೆ ಈ ಚಿಕಿತ್ಸೆ ಉಚಿತ!

Step-2: ಇದಾದ ಬಳಿಕ ಇಲ್ಲಿ ಮುಖಪುಟದಲ್ಲಿ ಕಾಣುವ "Farm Mechanisation Application Registration/ಕೃಷಿ ಯಾಂತ್ರೀಕರಣ ಅರ್ಜಿ ನೋಂದಣಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ನಂತರ ಇಲ್ಲಿ ರೈತರ ಐಡಿ/Farmer ID ಅನ್ನು ಹಾಕಿ Get Details ಬಟನ್ ಮೇಲೆ ಕ್ಲಿಕ್ ಮಾಡಿದರೆ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ ಅದನ್ನು ನಮೂದಿಸಿ "Verify and Continue" ಬಟನ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.

Step-4: ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿಯು ಯಶಸ್ವಿಯಾಗಿ ಸಲ್ಲಿಕೆಯಾಗಿದೆ ಎಂದು.

For More Information-ಈ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಉಪಯುಕ್ತ ಮಾಹಿತಿ ಹೀಗಿದೆ:

Agriculture Department Website-ಕೃಷಿ ಇಲಾಖೆಯ ಅಧಿಕೃತ ಜಾಲತಾಣ- Click Here
Horticulture Department Website-ತೋಟಗಾರಿಕೆ ಇಲಾಖೆಯ ವೆಬ್ಸೈಟ್
-Click Here
Online Application-ಅರ್ಜಿ ಸಲ್ಲಿಸಲು ಲಿಂಕ್-Click Here
User manual-ಅರ್ಜಿ ಸಲ್ಲಿಸಲು ಕೈಪಿಡಿ-Download Now

WhatsApp Group Join Now
Telegram Group Join Now
Share Now: