HomeNew postsDiploma in veterinary: 2 ವರ್ಷದ ಪಶುಸಂಗೋಪನಾ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Diploma in veterinary: 2 ವರ್ಷದ ಪಶುಸಂಗೋಪನಾ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ವ್ಯಾಪ್ತಿಯಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಪಶುಸಂಗೋಪನೆಯಲ್ಲಿ(Diploma in veterinary application) 2 ವರ್ಷ ಅವಧಿಯ ಡಿಪ್ಲೋಮಾ ಕೋರ್ಸಿನ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅಗತ್ಯ ದಾಖಲೆಗಳ ಸಮೇತ ಈ ಲೇಖನದಲ್ಲಿ ವಿವರಿಸಿರುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್, ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿ ಮಾಹಿತಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಒಟ್ಟು ಡಿಪ್ಲೋಮಾ ಕಾಲೇಜುಗಳ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

ಇದನ್ನೂ ಓದಿ: Central budget 2024: ಕೇಂದ್ರ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಎಷ್ಟು ಅನುದಾನ? ಇಲ್ಲಿದೆ ಪಿ ಎಂ ಕಿಸಾನ್ ಹಣ ಹೆಚ್ಚಳದ ಅಧಿಕೃತ ಮಾಹಿತಿ!

last date for application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಜುಲೈ 2024

Education Qualification-ಅರ್ಜಿ ಸಲ್ಲಿಸಲು ವಿದ್ಯಾರ್ಹತೆ?

ಪಶುಸಂಗೋಪನಾ ಡಿಪ್ಲೋಮಾ ಪ್ರವೇಶಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯೋಂದಿಗೆ ಕನ್ನಡ ಒಂದು ವಿಷಯವನ್ನು ಕಡ್ಡಾಯವಾಗಿ ಓದಿ ಕನಿಷ್ಟ ಶೇ 45 ರಷ್ಟ ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು.

ಮತ್ತು ಅರ್ಜಿದಾರ ಅಭ್ಯರ್ಥಿಯು ಕಡ್ಡಾಯವಾಗಿ 1 ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು 20 ವರ್ಷ ಮೀರಿರಬಾರದು.

Monthly stipend-ಪ್ರತಿ ತಿಂಗಳು ರೂ 1,000 ಶಿಷ್ಯವೇತನ:

ಈ ಕೋರ್ಸಗೆ ಪ್ರವೇಶ ಪಡೆದು ಎಲ್ಲಾ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ 1,000/- ಶಿಷ್ಯವೇತನವನ್ನು ವ್ಯಾಸಂಗದ ಅವಧಿಯಲ್ಲಿ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: adhar rtc link-2024: ರೈತರು ಇನ್ನೂ 7 ದಿನದ ಒಳಗಾಗಿ ಈ ಕೆಲಸ ಮಾಡದಿದ್ದಲ್ಲಿ ಸರಕಾರಿ ಯೋಜನೆಗಳ ಸೌಲಭ್ಯ ಸಿಗುವುದಿಲ್ಲ!

Required Documents for application-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:

  • SSLC ಅಂಕಪಟ್ಟಿ.
  • 10 ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡಿದ “ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ”
  • ಮೀಸಲಾತಿ ಬಯಸುವ ಅಭ್ಯರ್ಥಿಯು ಸಂಬಂಧಪಟ್ಟ ಪ್ರಾಧಿಕಾರದಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
  • ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ 50% ರಷ್ಟು ಸೀಟುಗಳನ್ನು ಮೀಸಲಿಡಲಾಗಿದ್ದು, ಅಭ್ಯರ್ಥಿಗಳು ಈ ಕೋಟಾದಡಿ ಪ್ರವೇಶ ಬಯಸಿದ್ದಲ್ಲಿ ವ್ಯವಸಾಯಗಾರರ ಪ್ರಮಾಣ ಪತ್ರ ಸಲ್ಲಿಸಬೇಕು.

Online application link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್: Apply Now 

Diploma in veterinary admission-ಪ್ರವೇಶ ವಿಧಾನ:

ಈ ಕೋರ್ಸಿಗೆ ಪ್ರವೇಶವನ್ನು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಮೇರೆಗೆ ಸರಕಾರದ ಮೀಸಲಾತಿ ಆದೇಶದಂತೆ ಹಾಗೂ ಮೆರಿಟ್ ಆಧರಿಸಿ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ.

ಇದನ್ನೂ ಓದಿ: NTPC Recruitment 2024 – ಇಂಧನ ಇಲಾಖೆಯಲ್ಲಿ ಸರ್ವೇಯರ್ ಹುದ್ದೆಗಳ ನೇಮಕಾತಿ

Diploma in veterinary seat details-ಲಭ್ಯವಿರುವ ಒಟ್ಟು ಸೀಟುಗಳ ವಿವರ ಹೀಗಿದೆ:

ಪಶುಸಂಗೋಪನಾ ಪಾಲಿಟೆಕ್ನಿಕ್ ಜಾನುವಾರು ಸಂಶೋಧನಾ ಹಾಗೂ ಮಾಹಿತಿ ಕೇಂದ್ರ, ಕೊನೆಹಳ್ಳಿ, ತಿಪಟೂರ ತಾಲ್ಲೂಕು ತುಮಕೂರು ಜಿಲ್ಲೆ- 50 ಸೀಟು

ಪಶುಸಂಗೋಪನಾ ಪಾಲಿಟೆಕ್ನಿಕ್ ಕುನ್ನೂರು, ಶಿಗ್ಗಾಂವ, ಹಾವೇರಿ ಜಿಲ್ಲೆ- 50 ಸೀಟು

ಪಶುಸಂಗೋಪನಾ ಪಾಲಿಟೆಕ್ನಿಕ್  ಕೊರವಂಗಲ ಕ್ರಾಸ್ ಹಾಸನ ಜಿಲ್ಲೆ- 50 ಸೀಟು

ಪಶುಸಂಗೋಪನಾ ಪಾಲಿಟೆಕ್ನಿಕ್  ಬರ್ಗಿ, ಗುಂಡ್ಲುಪೇಟೆ ತಾಲ್ಲೂಕು, ಚಾಮರಾಜನಗರ ಜಿಲ್ಲೆ- 50 ಸೀಟು

ಪಶುಸಂಗೋಪನಾ ಪಾಲಿಟೆಕ್ನಿಕ್ ಡೋರಳ್ಳಿ, ಶಾಹಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ.- 50 ಸೀಟು

ಇನ್ನು ಹೆಚ್ಚಿನ ಮಾಹಿತಿಗಾಗಿ:

ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಲು ಲಿಂಕ್: Download Now
ಅರ್ಜಿ ಸಲ್ಲಿಸಲು ಲಿಂಕ್: Apply Now 
ಅಧಿಕೃತ ವೆಬ್ಸೈಟ್ ಲಿಂಕ್: Click here

Most Popular

Latest Articles

Related Articles