Diploma Scholarship-ಡಿಪ್ಲೊಮಾ ವಿದ್ಯಾರ್ಥಿನಿಯರಿಗೆ 10,000 ವಿದ್ಯಾರ್ಥಿವೇತನ! ಇನ್ನು 4 ದಿನ ಬಾಕಿ!

February 6, 2026 | Siddesh
Diploma Scholarship-ಡಿಪ್ಲೊಮಾ ವಿದ್ಯಾರ್ಥಿನಿಯರಿಗೆ 10,000 ವಿದ್ಯಾರ್ಥಿವೇತನ! ಇನ್ನು 4 ದಿನ ಬಾಕಿ!
Share Now:

2025-2026 ನೇ ಸಾಲಿನ 11, 12 ನೇ ತರಗತಿ, ವೃತ್ತಿಪರ ಕೋರ್ಸ್‌ಗಳು, ಪಾಲಿಟೆಕ್ನಿಕ್ ಕಾರ್ಯಕ್ರಮಗಳು, ಡಿಪ್ಲೊಮಾ(Diploma Scholarship) ಕೋರ್ಸ್‌ಗಳು ಅಥವಾ ಐಟಿಐನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಮಹೀಂದ್ರಾ ಸಾರಥಿ ಅಭಿಯಾನದ ಅಡಿಯಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಟ್ರಕ್ ಚಾಲಕ ಕುಟುಂಬಗಳ ಅನೇಕ ವಿದ್ಯಾರ್ಥಿನಿಯರು ಆರ್ಥಿಕ ಪರಿಸ್ಥಿತಿಯಿಂದ ಅವರ ಮುಂದಿನ ಅಧ್ಯಯನವನ್ನು(Polytechnic Students Scholarship) ಮುಂದುವರಿಸಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಈ ಅಭಿಯಾನವು ವಿದ್ಯಾರ್ಥಿವೇತನವನ್ನು ನೀಡುವ ಮೂಲಕ ಅದನ್ನು ಬದಲಾಯಿಸುವ ಗುರಿಯನ್ನು ಹೊಂದಿದೆ , ಹಾಗೆಯೇ ಇದು ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದಲ್ಲದೆ, ಅವರ ಶೈಕ್ಷಣಿಕ ಕನಸುಗಳನ್ನು ಆತ್ಮವಿಶ್ವಾಸದಿಂದ ಮುಂದುವರಿಸಲು ಪ್ರೇರೇಪಿಸುತ್ತದೆ.

ಇದನ್ನೂ ಓದಿ: Bele Vime Status-ರೈತರ ಖಾತೆಗೆ ಬೆಳೆ ವಿಮೆ ಪರಿಹಾರ!ಮೊಬೈಲ್ ನಲ್ಲೇ ಹಣ ಜಮಾ ವಿವರ ತಿಳಿಯಿರಿ!

ಪ್ರಸ್ತುತ ಇಂದಿನ ಈ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಯಾರೆಲ್ಲ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಅರ್ಜಿ ಸಲ್ಲಿಸುವ ಹಂತಗಳು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Documenst Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು?

ವಿದ್ಯಾರ್ಥಿನಿಯ ಆಧಾರ್ ಕಾರ್ಡ/Aadhar Card

ಪ್ರಸ್ತುತ ವರ್ಷದ ಪ್ರವೇಶ ಪತ್ರ/Entrance Certificate.

ಹಿಂದಿನ ವರ್ಷದ ಶೈಕ್ಷಣಿಕ ಅಂಕಪಟ್ಟಿ/Marks Card

10ನೇ ತರಗತಿಯ ಅಂಕಪಟ್ಟಿ/10 Marks card.

ಬ್ಯಾಂಕ್ ಪಾಸ್‌ಬುಕ್/Bank Passbook.

ಫೋಟೊ/Photocopy.

Ending Date For Scholorship-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಫೆಬ್ರವರಿ 2026

ಇದನ್ನೂ ಓದಿ: Free Notebook Scheme-1 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ: ಪೋಷಕರ ಜೇಬಿಗೆ ಇನ್ನು ಹೊರೆಯಿಲ್ಲ!

Scholorship Amount-ಈ ಅಭಿಯಾನದ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಬಹುದು?

ಮಹೀಂದ್ರಾ ಸಾರಥಿ ಅಭಿಯಾನದ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿನಿಯರಿಗೆ ಮಹೀಂದ್ರಾ ಲಿಮಿಟೆಡ್‌ನ ವತಿಯಿಂದ 10,000 ವಿದ್ಯಾರ್ಥಿವೇತನವನ್ನು ಪಡೆಯಬಹುದು.

Eligibility Critiria for this scholorship-ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ವಿದ್ಯಾರ್ಥಿನಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ವಿದ್ಯಾರ್ಥಿಯು 11, 12 ನೇ ತರಗತಿ, ವೃತ್ತಿಪರ ಕೋರ್ಸ್‌ಗಳು, ಪಾಲಿಟೆಕ್ನಿಕ್, ಡಿಪ್ಲೊಮಾ ಕೋರ್ಸ್‌ಗಳು ಅಥವಾ ಐಟಿಐನಲ್ಲಿಓದುತ್ತಿರುವ ವಿದ್ಯಾರ್ಥಿನಿಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿದಾರರು ಮಾನ್ಯ ವಾಣಿಜ್ಯ ಚಾಲನಾ ಪರವಾನಗಿ ಹೊಂದಿರುವ ಟ್ರಕ್ ಅಥವಾ ಬಸ್ ಚಾಲಕನ ಮಗಳಾಗಿರಬೇಕು .

ಮಹೀಂದ್ರಾ ಮತ್ತು ಮಹೀಂದ್ರಾ ಲಿಮಿಟೆಡ್ ಮತ್ತು ಬಡ್ಡಿ4ಸ್ಟಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Free Driving Training-ನಿರುದ್ಯೋಗಿ ಯುವಕರಿಗೆ ಸುವರ್ಣಾವಕಾಶ: ಕೆಎಸ್‌ಆರ್‌ಟಿಸಿಯಿಂದ ಉಚಿತ ಭಾರೀ ವಾಹನ ಚಾಲನಾ ತರಬೇತಿ ಮತ್ತು ಪರವಾನಗಿ!

mahindra sarati scholorship application

ಇದನ್ನೂ ಓದಿ: SBI Women Loan-ಮಹಿಳೆಯರ ಸ್ವಂತ ಉದ್ಯಮಕ್ಕೆ"ಸ್ತ್ರೀ ಶಕ್ತಿ ಪ್ಯಾಕೇಜ್"! ಇಲ್ಲಿದೆ ಸಂಪೂರ್ಣ ಮಾಹಿತಿ!

How To Apply-ಹೇಗೆ ಅರ್ಜಿ ಸಲ್ಲಿಸಬಹುದು?

Step-1: ಮೊದಲಿಗೆ ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ " Online Application " ಮಾಡಿ ಅಧಿಕೃತ ವಿದ್ಯಾರ್ಥಿವೇತನದ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ನಂತರ ಅದೇ ಪುಟದಲ್ಲಿ ಕಾಣಿಸುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ ಮೊದಲ ಬಾರಿಗೆ ಈ ತಂತ್ರಾಂಶವನ್ನು ಭೇಟಿ ನೀಡುತ್ತಿರುವ ವಿದ್ಯಾರ್ಥಿಗಳು “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಮಾಡಿ User ID ಮತ್ತು Password ಅನ್ನು ರಚನೆ ಮಾಡಿಕೊಂಡು ಹೊಸ ಖಾತೆಯನ್ನು ರಚಿಸಿಕೊಂಡು ತದನಂತರ “Login” ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಬೇಕು.

Step-3: “Login” ಆದ ನಂತರ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಇಲ್ಲಿ ಅವಶ್ಯವಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: SSP Scholarship-ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಅರ್ಜಿ ಸಲ್ಲಿಸುವ ಗಡುವು ವಿಸ್ತರಣೆ!

For More Information-ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: