Diploma Scholarship-ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹50,000 ವಿದ್ಯಾರ್ಥಿ ವೇತನ!

March 7, 2026 | Siddesh
Diploma Scholarship-ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹50,000 ವಿದ್ಯಾರ್ಥಿ ವೇತನ!
Share Now:

2025 26 ನೇ ಸಾಲಿನ ಷ್ನೇಯ್ಡರ್ ವಿದ್ವಾಂಸ ಕಾರ್ಯಕ್ರಮದ ಅಡಿಯಲ್ಲಿ ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್(Schneider Electric India Foundation Scholarship) ವತಿಯಿಂದ ಬಿ ಟೆಕ್/ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ 50,000 ವಿದ್ಯಾರ್ಥಿ ವೇತನ ಪಡೆಯಲು ಅರ್ಜಿಯನ್ನು ಅಹ್ವಾನ ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿಯ ವೇತನವು ಕೃತಕ ಬುದ್ಧಿ ಮತ್ತು ಯಂತ್ರ ಕಲಿಕೆ ರೋಬೋಟಿಕ್ಸ್ ಇನ್ನಿತರ ತಾಂತ್ರಿಕ ಕ್ಷೇತ್ರಗಳಲ್ಲಿ ಬಿ ಟೆಕ್/ಡಿಪ್ಲೋಮಾ ಅಥವಾ ಇಂಜಿನಿಯರಿಂಗ್(Diploma Scholarship/Engineering Scholarship) ತರಗತಿಯ ವಿದ್ಯಾರ್ಥಿ ಯುವತಿಯರಿಗೆ ಹಣಕಾಸಿನ ನೆರವನ್ನು ನೀಡಿ ಗುಣಮಟ್ಟದ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ಸಹಾಯವನ್ನು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.

ಇದನ್ನೂ ಓದಿ: Ganga Kalyana-2026: ಗಂಗಾ ಕಲ್ಯಾಣ ಯೋಜನೆ ಬಜೆಟ್‌ನಲ್ಲಿ ಸಬ್ಸಿಡಿ ಹೆಚ್ಚಳ!

ಪ್ರಸ್ತುತ ಈ ಲೇಖನದಲ್ಲಿ ವಿದ್ಯಾರ್ಥಿ ವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು?ಈ ಯೋಜನೆ ಅಡಿ ಎಷ್ಟು ವಿದ್ಯಾರ್ಥಿವೇತನವನ್ನು(Scholarship Application) ನೀಡಲಾಗುತ್ತದೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು ಯಾವುವು? ಅರ್ಜಿಯನ್ನು ಸಲ್ಲಿಸುವುದು ಹೇಗೆ? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಇನ್ನಿತರ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.್

Last Date For Scholarship-ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 9 ಮಾರ್ಚ್ 2026

Scholarship Eligibility-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅರ್ಜಿದಾರ ವಿದ್ಯಾರ್ಥಿನಿಯು ಭಾರತದ ಖಾಯಂ ಪ್ರಜೆಯಾಗಿರಬೇಕು.

ಅರ್ಜಿದಾರ ವಿದ್ಯಾರ್ಥಿನಿಯು 10 ಹಾಗೂ 12ನೇ ತರಗತಿಯಲ್ಲಿ ಕನಿಷ್ಠ 65% ಅಂಕಗಳನ್ನು ಪಡೆದಿರಬೇಕು.

ವಿದ್ಯಾರ್ಥಿನಿಯು ವ್ಯಾಸಂಗದ ಮೊದಲ ವರ್ಷದಲ್ಲಿ ಕನಿಷ್ಠ ಶೇಕಡ 70% ಅಂಕಗಳನ್ನು ಗಳಿಸಬೇಕು.

ಬಿ ಟೆಕ್/ಡಿಪ್ಲೋಮಾ/ಇಂಜಿನಿಯರಿಂಗ್ ತರಗತಿಯಲ್ಲಿ 2 ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಮಹಿಳಾ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಕುಟುಂಬದ ವಾರ್ಷಿಕ ಆದಾಯವು 4 ಲಕ್ಷಕ್ಕಿಂತ ಕಡಿಮೆ ಇರಬೇಕು.

ಬಡ್ಡಿ 4 ಸ್ಟುಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Karnataka Budget 2026-ರಾಜ್ಯ ಬಜೆಟ್ 2026-27: ಕೃಷಿ ಮತ್ತು ಮೂಲಸೌಕರ್ಯಕ್ಕೆ ಬಂಪರ್ ಕೊಡುಗೆ; ಜಿಲ್ಲಾವಾರು ಹಂಚಿಕೆಯ ಸಮಗ್ರ ವಿವರ!

Diploma Scholarship Application

ಇದನ್ನೂ ಓದಿ: Yashaswini Card-2026: ಯಶಸ್ವಿನಿ ಕಾರ್ಡ ನೊಂದಣಿ ಆರಂಭ! ಕೂಡಲೇ ಅರ್ಜಿ ಸಲ್ಲಿಸಿ!

Scholarship Amount-ಈ ಕಾರ್ಯಕ್ರಮದ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನ ನೀಡಲಾಗುತ್ತದೆ?

ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ನ ಮೂಲಕ ವಿತರಣೆ ಮಾಡುವ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ 50,000 ರೂ ವಿದ್ಯಾರ್ಥಿವೇತನ ನೀಡಲಾಗುತ್ತದೆ.

Scholarship Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

Step-1: ವಿದ್ಯಾರ್ಥಿಯು ಮೊದಲು ಈ ಲಿಂಕ್ ಮೇಲೆ ಕ್ಲಿಕ್ "Schneider Scholorship " ಮಾಡಿ ಅಧಿಕೃತ ವಿದ್ಯಾರ್ಥಿವೇತನದ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Journalists Training-ಮಹಿಳಾ ಪತ್ರಕರ್ತೆಯರಿಗೆ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಹೈಟೆಕ್ ತರಬೇತಿಗೆ ಅರ್ಜಿ ಆಹ್ವಾನ!

Step-2: ನಂತರ ಈ ಪುಟದಲ್ಲಿ ಕಾಣುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. “Create an Account” ಬಟನ್ ಮೇಲೆ ಪ್ರೆಸ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ಹೊಸ ಖಾತೆಯನ್ನು ರಿಜಿಸ್ಟರ್ ಮಾಡಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ಓಪನ್ ಆಗುತ್ತದೆ.

Step-4: ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Shop Insurance-ಅತೀ ಕಡಿಮೆ ಪ್ರೀಮಿಯಂ ನಲ್ಲಿ ಅಂಗಡಿ ಮಾಲೀಕರಿಗೆ ವಿಮೆ!

Required Documents For Scholarship-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳ ಪಟ್ಟಿ:

ವಿದ್ಯಾರ್ಥಿವೇತನವನ್ನು ಪಡೆಯಲು ಅವಶ್ಯವಿರುವ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ:

  • ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar card
  • ಪ್ರಸ್ತುತ ಶೈಕ್ಷಣಿಕ ವರ್ಷದ ಪ್ರವೇಶದ ಪುರಾವೆ/Entrance Certificate
  • ಹಿಂದಿನ ತರಗತಿಯ ಅಂಕಪಟ್ಟಿ/Marks Card
  • ಸಂಸ್ಥೆಯಿಂದ ಶುಲ್ಕ ರಶೀದಿ/Fee receipt
  • ಆದಾಯ ಪ್ರಮಾಣ ಪತ್ರ/Income Certificate
  • ಬ್ಯಾಂಕ್ ಪಾಸ್ ಪುಸ್ತಕ/Bank Passbook
  • ಫೋಟೊ/Photocopy

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: