Diploma Scholorship-ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಬಿಜಿಎಂ ಫೌಂಡೇಶನ್ ವತಿಯಿಂದ ₹36,000 ವಿದ್ಯಾರ್ಥಿವೇತನ!

January 28, 2026 | Siddesh
Diploma Scholorship-ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಬಿಜಿಎಂ ಫೌಂಡೇಶನ್ ವತಿಯಿಂದ ₹36,000 ವಿದ್ಯಾರ್ಥಿವೇತನ!
Share Now:

ಬಾಂಬೆ ಗೌರಕ್ಷಕ್ ಮಂಡಳಿ (ಬಿಜಿಎಂ) ಅಂಗ ಸಂಸ್ಥೆಯಾದ ಬಿಜಿಎಂ ಫೌಂಡೇಶನ್‌ನ ವತಿಯಿಂದ 2025-2026 ನೇ ಸಾಲಿನ ಬಿಜಿಎಂ ಫೌಂಡೇಶನ್ ಪಶು-ಸೇವಾ ವಿದ್ಯಾರ್ಥಿವೇತನದ ಅಡಿಯಲ್ಲಿ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹36,000 ವಿದ್ಯಾರ್ಥಿವೇತನ ವನ್ನು ಪಡೆಯಲು ಅವಕಾಶವಿದ್ದು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಅರ್ಜಿ ಕರೆಯಲಾಗಿದೆ.

ಪ್ರಸ್ತುತ ಇಂದಿನ ಈ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸುವ ವಿಧಾನಗಳಾವುವು? ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಇನ್ನಿತರ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ:Tarpaulin Subsidy 2026-ಕೃಷಿ ಇಲಾಖೆಯಿಂದ ಶೇ 90% ರಿಯಾಯಿತಿಯಲ್ಲಿ ಟಾರ್ಪಾಲಿನ್ ಪಡೆಯಲು ಅರ್ಜಿ!

Scholorship Amount-ಇದರ ಅಡಿಯಲ್ಲಿ ಎಷ್ಟು ಸಹಾಯಧನವನ್ನು ನೀಡಲಾಗುತ್ತದೆ?

ಬಿಜಿಎಂ ಫೌಂಡೇಶನ್ ಪಶು-ಸೇವಾ ವಿದ್ಯಾರ್ಥಿವೇತನದ ಅಡಿಯಲ್ಲಿ ಆಯ್ಕೆಯಾದ ಅರ್ಹ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹36,000 ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

Last Date To APpply-ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: ಫೆಬ್ರವರಿ 16 2026

ಇದನ್ನೂ ಓದಿ: Aadhar App-ಇನ್ನುಂದೆ ನಿಮ್ಮ ಮೊಬೈಲ್ ನಲ್ಲಿ ಈ ಆ್ಯಪ್ ಇದ್ದರೆ! ಆಧಾರ್ ಕಾರ್ಡ ಬೇಕಿಲ್ಲ!

Documents Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

  • ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar Card
  • ಪ್ರಸ್ತುತ ಶೈಕ್ಷಣಿಕ ವರ್ಷದ ಪ್ರವೇಶದ ಪುರಾವೆ/Entrance Certificate
  • ಹಿಂದಿನ ತರಗತಿಯ ಅಂಕಪಟ್ಟಿ/Marks Card
  • ಸಂಸ್ಥೆಯಿಂದ ಶುಲ್ಕ ರಶೀದಿ/Fee receipt
  • ಆದಾಯ ಪ್ರಮಾಣ ಪತ್ರ/Income Certificate
  • ಬ್ಯಾಂಕ್ ಪಾಸ್ ಪುಸ್ತಕ/Bank Passbook
  • ಫೋಟೊ/Photocopy

ಇದನ್ನೂ ಓದಿ: Marriage Registration-ಇನ್ಮುಂದೆ ಮನೆಯಲ್ಲೇ ಕುಳಿತು ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿ!

Who Can APply-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ಅರ್ಜಿದಾರ‍ ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ಅರ್ಜಿದಾರ‍ ವಿದ್ಯಾರ್ಥಿಯು ಭಾರತದಲ್ಲಿ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ದಾಖಲಾಗಿರಬೇಕು.

ಪಶುವೈದ್ಯಕೀಯ ವಿಜ್ಞಾನ, ಪಶುಸಂಗೋಪನೆ, ಕೃಷಿ, ಡೈರಿ ವಿಜ್ಞಾನ, ಜಾನುವಾರು (ಕೊಂಬುಳ್ಳ ದನ) ನಿರ್ವಹಣೆ, ಪ್ಯಾರಾ ಪಶುವೈದ್ಯಕೀಯ, ಮೇವು ನಿರ್ವಹಣೆ ಅಥವಾ ಸಂಬಂಧಿತ ಕ್ಷೇತ್ರಗಳಲ್ಲಿ ಡಿಪ್ಲೊಮಾ ಕೋರ್ಸ್ (ಯಾವುದೇ ವರ್ಷ) ಮಾಡಿರಬೇಕು.

ಅಭ್ಯರ್ಥಿಯು ಕಳೆದ ವರ್ಷ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು 8 ಲಕ್ಷಕ್ಕಿಂತ ಕಡಿಮೆ ಇರಬೇಕು.

ಬಡ್ಡಿ4ಸ್ಟಡಿ ಅಥವಾ ಬಿಜಿಎಂ ಫೌಂಡೇಶನ್‌ನ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.

ಇದನ್ನೂ ಓದಿ: Coconut Insurance-ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಬೆಳೆ ವಿಮೆ ವ್ಯಾಪ್ತಿಗೆ ತೆಂಗು!

BGM Foundation Scholarship

ಇದನ್ನೂ ಓದಿ: KMF New Products-ಕೆಎಂಎಫ್‌ನಿಂದ ನಂದಿನಿ ಬ್ರ್ಯಾಂಡ್‌ನ ಹೊಸ ಉತ್ಪನ್ನಗಳ ಬಿಡುಗಡೆ!

How To APply In Online Process-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

BGM ಫೌಂಡೇಶನ್ ಪಶು-ಸೇವಾ ವಿದ್ಯಾರ್ಥಿವೇತನದ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ BGM ಫೌಂಡೇಶನ್ ವತಿಯಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಈ ಕೆಳಗೆ ತಿಳಿಸಿರುವ ವಿಧಾನಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು.

Step-1: ವಿದ್ಯಾರ್ಥಿಯು ಮೊದಲು ಈ ಲಿಂಕ್ ಮೇಲೆ ಕ್ಲಿಕ್ "BGM Scholorship " ಮಾಡಿ ಅಧಿಕೃತ ವಿದ್ಯಾರ್ಥಿವೇತನದ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ನಂತರ ಈ ಪುಟದಲ್ಲಿ ಕಾಣುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. “Create an Account” ಬಟನ್ ಮೇಲೆ ಪ್ರೆಸ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ಹೊಸ ಖಾತೆಯನ್ನು ರಿಜಿಸ್ಟರ್ ಮಾಡಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ಓಪನ್ ಆಗುತ್ತದೆ.

Step-4: ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: LPG Cylinder Subsidy-ಗ್ಯಾಸ್ ಸಿಲಿಂಡರ್ 300 ರೂ. ಸಬ್ಸಿಡಿ ನಿಮಗೆ ಬರುತ್ತಿದೆಯೇ? ಚೆಕ್ ಮಾಡುವುದು ಹೇಗೆ?

More Information-ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Read More

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: