Breaking News:
LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ! Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000! Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!
HomeNew postsD.Pharm admission-2024: ಡಿ.ಫಾರ್ಮ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

D.Pharm admission-2024: ಡಿ.ಫಾರ್ಮ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

ಕರ್ನಾಟಕ ಸರ್ಕಾರ ಔಷಧ ನಿಯಂತ್ರಣ ಇಲಾಖೆ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ ಡಿ.ಫಾರ್ಮಸಿ(D.Pharmacy ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ(D.Pharm. Admission) 2024-25 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯ, ಬೆಂಗಳೂರು ಮತ್ತು ಕರ್ನಾಟಕದ ಖಾಸಗಿ ಡಿ.ಫಾರ್ಮಸಿ ವಿದ್ಯಾಸಂಸ್ಥೆಗಳಲ್ಲಿರುವ ಸರ್ಕಾರಿ ಕೋಟದಡಿಯಲ್ಲಿ ಪ್ರಥಮ ಡಿ.ಫಾರ್ಮ ಕೋರ್ಸಿನ ಸೀಟುಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ದಾಖಲೆಗಳು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಆನ್ಲೈನ್ ಮೂಲಕ ಅಧಿಕೃತ ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿಯ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಅರ್ಜಿಯನ್ನು ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Colgate Scholarship 2024 – ಕೋಲ್ ಗೇಟ್ ಕಂಪನಿಯಿಂದ ವಿದ್ಯಾರ್ಥಿಗಳಿಗೆ 75 ಸಾವಿರ ವಿದ್ಯಾರ್ಥಿ ವೇತನ!

ಅರ್ಜಿ ಸಲ್ಲಿಸಲು ಅರ್ಹರು:

ಅರ್ಜಿದಾರ ಅಭ್ಯರ್ಥಿಯು ದ್ವಿತೀಯ ಪಿ.ಯು.ಸಿ. (ಪಿಸಿಎಂ/ಪಿಸಿಬಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

Last date for application- ಪ್ರಮುಖ ದಿನಾಂಕಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 14 ಅಕ್ಟೋಬರ್ 2024 ರಿಂದ ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 14 ರಿಂದ 30 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸೀಟು ಹಂಚಿಕೆಯ ಪ್ರಕ್ರಿಯೆಯ ದಿನಾಂಕ ಮತ್ತು ಸಮಯವನ್ನು ವೈಬ್‍ಸೈಟ್ www.beadpharmacy.org ನಲ್ಲಿ ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ: Gruhalakshmi Status-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌!

Online application link-ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಸಮೇತ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

Documents-ಅರ್ಜಿ ಸಲ್ಲಿಸಲು ದಾಖಲೆಗಳು:

1) ಎಸ್.ಎಸ್.ಎಲ್.ಸಿ ಅಂಕಪಟ್ಟಿ/SSLC
2) ಪಿಯುಸಿ ಅಂಕಪಟ್ಟಿ/PUC
3) ವಿಳಾಸ ದೃಡೀಕರಣ ಪತ್ರ/Address Proof
4) ಆಧಾರ್ ಕಾರ್ಡ ಪ್ರತಿ/Aadhar card
5) ಜಾತಿ ಪ್ರಮಾಣ ಪತ್ರ/Caste Certificate
6) ಫೋಟೋ/Photo

ಇದನ್ನೂ ಓದಿ: Horticulture Diploma- ಡಿಪ್ಲೋಮಾ ತೋಟಗಾರಿಕೆ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಪ್ರಥಮದಲ್ಲಿ ಈ Click here ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.

Step-2: ಇದಾದ ನಂತರ ಈ ವೆಬ್ಸೈಟ್ ಗೆ ಮೊದಲ ಬಾರಿಗೆ ಭೇಟಿಯಾಗುತ್ತಿರುವವರು ಮೊದಲು Login form ನಲ್ಲಿ “Register” ಬಟನ್ ಮೇಲೆ ಕ್ಲಿಕ್ ಮಾಡಿ ನೋಂದಣಿಯನ್ನು ಮಾಡಿಕೊಳ್ಳಬೇಕು.

ಇದನ್ನೂ ಓದಿ: Krishi honda subsidy-ಶೇ 80% ಸಬ್ಸಿಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಅರ್ಜಿ!

Step-3: ಬಳಿಕ User Id ಮತ್ತು Password ಅನ್ನು ಹಾಕಿ “Login” ಬಟನ್ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿಯ ಪೋಟೋ ಮತ್ತು ವೈಯಕ್ತಿಕ ವಿವರ ನಮೂದಿಸಿ ಶೈಕ್ಷಣಿಕ ವಿವರವನ್ನು ಹಾಕಿ ಕೊನೆಯಲ್ಲಿ ಎಲ್ಲಾ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿ ಮಾಡಿ ಅರ್ಜಿ ಸಲ್ಲಿಸಬೇಕು.

Online application link- Apply Now

Online application User manual- Download Now

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22270666 ಹಾಗೂ ಇ-ಮೇಲ್ [email protected], [email protected] ಗೆ ಸಂಪರ್ಕಿಸಬಹುದಾಗಿದೆ ಎಂದು ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Most Popular

Latest Articles

- Advertisment -

Related Articles