Drone operator training- ಉಚಿತ ಡ್ರೋನ್ ಆಪರೇಟರ್ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

November 17, 2024 | Siddesh
Drone operator training- ಉಚಿತ ಡ್ರೋನ್ ಆಪರೇಟರ್ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!
Share Now:

ಅಲ್ಪಸಂಖ್ಯಾತ ಅಭಿವೃದಿ ನಿಗಮದಿಂದ ಉಚಿತವಾಗಿ 15 ದಿನದ ಡ್ರೋನ್ ಆಪರೇಟರ್ ತರಬೇತಿ(Drone operator training) ಪಡೆಯಲು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಹ ನಿರುದ್ಯೋಗಿ ಯುವಕ/ಯುವತಿಯರು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ತರಬೇತಿಯನ್ನು ಪಡೆಯಬಹುದು. ಅಲ್ಪಸಂಖ್ಯಾತ ಅಭಿವೃದಿ ನಿಗಮದಿಂದ ಡ್ರೋನ್ ಆಪರೇಟರ್ ತರಬೇತಿ ಜೊತೆಗೆ ಇತರೆ ತರಬೇತಿಯನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: APL card cancellation- ರೇಷನ್ ಕಾರ್ಡ್ ರದ್ದತಿ ಕುರಿತು ಆಹಾರ ಇಲಾಖೆಯಿಂದ ಮಹತ್ವದ ಪ್ರಕಟಣೆ!

ಈ ತರಬೇತಿಗಳನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ತರಬೇತಿಯ ಕುರಿತು ಮಾಹಿತಿ ಮತ್ತು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ದಾಖಲೆಗಳು ಸೇರಿದಂತೆ ಸಂಪೂರ್ಣ ವಿವರವನ್ನು ಅಂಕಣದಲ್ಲಿ ತಿಳಿಸಲಾಗಿದೆ.

Drone Operator Training Details- ಯಾವೆಲ್ಲ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ?

1) ಹೆವಿ ವೆಹಿಕಲ್ ಡ್ರೈವಿಂಗ್
2) ಬ್ಯೂಟಿ ಪಾರ್ಲರ್ ಕೋರ್ಸ್ (ಪುರುಷ ಮತ್ತು ಮಹಿಳೆಯರಿಗೆ)
3) ಡ್ರೋನ್ ಚಾಲನ ತರಬೇತಿ

Documents- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಾಖಲೆಗಳು:

1) ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)

2) ಬ್ಯಾಂಕ್ ಪಾಸ್ ಬುಕ್

3) ಎಸ್ ಎಸ್ ಎಲ್ ಸಿ/ಪಿಯುಸಿ/ಡಿಪ್ಲೋಮಾ/ಡಿಗ್ರಿ ಅಂಕಪಟ್ಟಿ

4) ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ

ಇದನ್ನೂ ಓದಿ: Mini tractor subsidy- ಶೇ 90% ಸಬ್ಸಿಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಪಡೆಯಲು ಅರ್ಜಿ ಆಹ್ವಾನ!

5) ಆದಾಯ ಪ್ರಮಾಣಪತ್ರ

6) ಸ್ವಯಂ ಘೋಷಣೆ ಪತ್ರ(Download form)

Drone operator training

Who can apply- ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು?

ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ವರ್ಗಕ್ಕೆ ಸೇರಿದ ಯುವಕ/ಯುವತಿಯರು ಅರ್ಜಿ ಸಲ್ಲಿಸಬಹುದು.

ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.

ಅರ್ಜಿದಾರರು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಇದನ್ನೂ ಓದಿ: Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಎಲ್ಲಾ ಮೂಲಗಳಿಂದ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 6,00,000/- ಗಿಂತ ಕಡಿಮೆಯಿರಬೇಕು.

ಆಯ್ಕೆಯಾದ ಅರ್ಜಿದಾರರು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸಬೇಕು.

ಅರ್ಜಿದಾರರು ಈ ಹಿಂದೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳಲ್ಲಿ ತರಬೇತಿ ಪಡೆದಿರಬಾರದು.

ಇದನ್ನೂ ಓದಿ: Uchita holige yantra-ಕೇಂದ್ರದಿಂದ ಮಹಿಳೆಯರಿಗೆ ಸಿಹಿ ಸುದ್ದಿ! ಉಚಿತ ಹೊಲಿಗೆ ಯಂತ್ರ ಪಡೆಯಲು ಅವಕಾಶ!

Application last date- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 05 ಡಿಸೆಂಬರ್ 2024 ಕೊನೆಯ ದಿನಾಂಕವಾಗಿರುತ್ತದೆ.

Drone operator Online application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಆಸಕ್ತ ಅಭ್ಯರ್ಥಿಗಳು ಕೆಳಗಿನ ವಿಧಾನವನ್ನು ಅನುಸರಿಸಿ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ತಮ್ಮ ಮೊಬೈಲ್ ನಲ್ಲೇ ಅರ್ಜಿಯನ್ನು ಸಲ್ಲಿಸಬೇಕು.

Step-1: ಮೊದಲಿಗೆ Drone operator training ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ನಂತರ ಇಲ್ಲಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ಹಾಕಿ "ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

Step-3: ಲಾಗಿನ್ ಅಗಿ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Tags:
WhatsApp Group Join Now
Telegram Group Join Now
Share Now: