E-Swathu Documents-ಗ್ರಾಮ ಪಂಚಾಯತಿಯಲ್ಲಿ ಇ ಸ್ವತ್ತು ವಿತರಣೆಗೆ ನೂತನ ಆದೇಶ ಪ್ರಕಟ!

May 14, 2025 | Siddesh
E-Swathu Documents-ಗ್ರಾಮ ಪಂಚಾಯತಿಯಲ್ಲಿ ಇ ಸ್ವತ್ತು ವಿತರಣೆಗೆ ನೂತನ ಆದೇಶ ಪ್ರಕಟ!
Share Now:

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಪಂಚಾಯತಿ ಕಚೇರಿಯಿಂದ ಇ-ಸ್ವತ್ತು(E-Swathu) ತಂತ್ರಾಂಶದಲ್ಲಿ ನೋಂದಣಿಯನ್ನು ಮಾಡಿಕೊಂಡು ಅಧಿಕೃತ ದಾಖಲೆಗಳನ್ನು ವಿತರಣೆ ಮಾಡಲು ಸಂಬಂಧಪಟ್ಟ ಇಲಾಖೆಯಿಂದ ನೂತನ ಆದೇಶವನ್ನು ಹೊರಡಿಸಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ಗ್ರಾಮೀಣ ಭಾಗದಲ್ಲಿ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡಲು ಮುಂದಾಗಿದ್ದು ಈ ಕುರಿತು ಗ್ರಾಮ ಪಂಚಾಯತಿ ಅಧಿಕಾರಿಗಳು ಯಾವೆಲ್ಲ ನಿಯಮಗಳನ್ನು ಪಾಲನೆ ಮಾಡಬೇಕು ಎನ್ನುವ ಅಧಿಕೃತ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.

ಇದನ್ನೂ ಓದಿ: Bele Parihara List-ಹಿಂಗಾರು ಬೆಳೆ ಪರಿಹಾರ ಹಣ ಬಿಡುಗಡೆ ಪಟ್ಟಿ ಬಿಡುಗಡೆ!

ಗ್ರಾಮೀಣ ವ್ಯಾಪ್ತಿಯಲ್ಲಿರುವ ಖಾಲಿ ಜಾಗ ಮತ್ತು ಮನೆಗಳಿಗೆ ಅಧಿಕೃತ ಮಾಲೀಕರನ್ನು ಗುರುತಿಸಲು ಇ-ಸ್ವತ್ತು(E-Swathu Document) ದಾಖಲೆಯನ್ನು ಗ್ರಾಮ ಪಂಚಾಯತಿಯಿಂದ ಪಡೆಯುವುದು ಕಡ್ಡಾಯವಾಗಿರುತ್ತದೆ ಅದ್ದರಿಂದ ಈ ದಾಖಲೆಯು ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ ಈ ದಾಖಲೆಯ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

E-swathu-ಇ-ಸ್ವತ್ತು ದಾಖಲೆ ಏಕೆ ಮುಖ್ಯ?

ಗ್ರಾಮೀಣ ಭಾಗದಲ್ಲಿ ಮನೆ ಅಥವಾ ಖಾಲಿ ಜಾಗವನ್ನು ಹೊಂದಿರುವವರು ತಮ್ಮ ಮಾಲೀಕತ್ವವನ್ನು ಅಧಿಕೃತ ದಾಖಲೆಯ ಮೂಲಕ ರುಜುವಾತು ಮಾಡಲು ಇ-ಸ್ವತ್ತು ದಾಖಲೆಯನ್ನು ಹೊಂದಿರುವುದು ಕಡ್ಡಾಯ ಮತ್ತು ಅತೀ ಮುಖ್ಯವಾಗಿದೆ ಅದ್ದರಿಂದ ಇ-ಸ್ವತ್ತು ದಾಖಲೆಯು ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಇದನ್ನೂ ಓದಿ: Bangalore Weather-ಅವಧಿಗೂ ಮುನ್ನ ಮುಂಗಾರು ಮಳೆ! ಇಲ್ಲಿದೆ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ!

Revenue Land Documents-ಭೂಕಂದಾಯ ಅಧಿನಿಯಮ, 1964 ರ ಪ್ರಕರಣಗಳಿಗೆ ಇ-ಸ್ವತ್ತು:

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ಅನ್ನು ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು ಈ ಕುರಿತು ಅಧಿಕೃತ ಮಾರ್ಗಸೂಚಿಯನ್ನು ಹೊರಡಿಸಿ ಸಂಬಂಧಪಟ್ಟ ಇಲಾಖೆಯಿಂದ ಆದೇಶವನ್ನು ಹೊರಡಿಸಲಾಗಿದೆ.

ಇದನ್ನೂ ಓದಿ: Ration Card And LPG-ಜೂನ್ 01 ರಿಂದ ರೇಷನ್ ಕಾರ್ಡ ಮತ್ತು LPG ಸಿಲಿಂಡರ್ ವಿತರಣೆಯಲ್ಲಿ ಪ್ರಮುಖ ಬದಲಾವಣೆ!

E-swathu Benefits-ಇ-ಸ್ವತ್ತು ದಾಖಲೆಯ ಪ್ರಯೋಜನಗಳು:

  • ಆಸ್ತಿಯ ಮಾಲೀಕರನ್ನು ನಿಖರವಾಗಿ ಗುರುತಿಸಲು ಗ್ರಾಮ ಪಂಚಾಯತಿ ವತಿಯಿಂದ ನೀಡುವ ಅಧಿಕೃತ ಮಾಲೀಕತ್ವ ಸೂಚಕ ನೋಂದಣಿ ದಾಖಲೆ ಇದಾಗಿದ್ದು ನಕಲಿ ಮಾಲೀಕರ ಹಾವಲಿಗೆ ತಡೆಗೆ ಈ ದಾಖಲೆ ಸಹಕರಿಯಾಗಿದೆ.
  • ಆಸ್ತಿಯ ಮಾಲೀಕರು ಇ-ಸ್ವತ್ತು ದಾಖಲೆಯ ಆಧಾರದ ಮೇಲೆ ಬ್ಯಾಂಕ್ ಮೂಲಕ ಗೃಹ ಸಾಲವನ್ನು ಪಡೆಯಲು ಸಾಧ್ಯವಾಗುತ್ತದೆ.
  • ಆಸ್ತಿಯನ್ನು ಮಾರಾಟ ಮತ್ತು ಖರೀದಿ ಮಾಡಲು ಈ ಪ್ರಮಾಣ ಪತ್ರವು ಸಹಕರಿಯಾಗಿದೆ.
  • ನಿಖರ ಮಾಲೀಕರನ್ನು ಗುರುತಿಸಲು ಈ ದಾಖಲೆ ಅತೀ ಮುಖ್ಯವಾಗಿದೆ.

ಇದನ್ನೂ ಓದಿ: Nrega Yojane-2025: ನರೇಗಾ ಯೋಜನೆಯಡಿ ಕಾರ್ಮಿಕರಿಗೆ ದಿನಕ್ಕೆ 370/- ರೂ ಪಾವತಿ!

E-swathu application

E-swathu Online Application-ಇ-ಸ್ವತ್ತು ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ನಾಗರಿಕರು ತಮ್ಮ ಮನೆ/ಜಾಗಕ್ಕೆ ಈ ದಾಖಲೆಯನ್ನು ಪಡೆಯಲು ನಿಮ್ಮ ಗ್ರಾಮ ಪಂಚಾಯತಿಯನ್ನು ನೇರವಾಗಿ ಅಗತ್ಯ ದಾಖಲಾತಿಗಳ ಸಮೇತ ಭೇಟಿ ಮಾಡಿ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

E-swathu Guideline-ಭೂಕಂದಾಯ ಅಧಿನಿಯಮ, 1964 ರ ಪ್ರಕರಣಗಳಿಗೆ ಇ-ಸ್ವತ್ತು ಮಾರ್ಗಸೂಚಿ:

1) ಕಂದಾಯ ಇಲಾಖೆಯ ತಂತ್ರಾಂಶದ ಮೂಲಕ ತಹಶೀಲ್ದಾರರಿಂದ ಸ್ವೀಕರಿಸಲಾದ ಹಕ್ಕು ಪತ್ರಗಳಲ್ಲಿ ತಪ್ಪಾದ/ಅಪೂರ್ಣ (ವಿಸ್ತೀರ್ಣ, ಚಕ್ಕುಬಂಧಿ ಇತ್ಯಾದಿ) ಮಾಹಿತಿಯಿದ್ದಲ್ಲಿ ಅಂತಹ ಹಕ್ಕು ಪತ್ರಗಳಿಗೆ ಇ-ಸ್ವತ್ತು ತಂತ್ರಾಂಶದಲ್ಲಿ PID ತಯಾರಿಸಿದ ಇ-ಸ್ವತ್ತು ತಂತ್ರಾಂಶದಲ್ಲಿ ತಿರಸ್ಕರಿಸುವುದು.

    2) ತಪ್ಪಾದ/ಅಪೂರ್ಣ ಮಾಹಿತಿಯುಳ್ಳ ಹಕ್ಕುಪತ್ರಗಳಿಗೆ ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ PID ಗಳನ್ನು ಸೃಜಿಸಿರುವ ಸಂದರ್ಭಗಳಿದ್ದಲ್ಲಿ XML ಫೈಲ್‌ಗಳನ್ನು ರಿಜೆಕ್ಟ್ ಮಾಡುವುದು, ಈಗಾಗಲೇ, ಒಂದು ವೇಳೆ ನೋಟೀಸ್ ಸೃಜಿಸಿ 15 ದಿನಗಳ ಮ್ಯುಟೇಷನ್ ಅವಧಿಯಲ್ಲಿದ್ದಲ್ಲಿ ಅಂತಹ PID ಗಳನ್ನು ಅನುಮೋದಿಸದೆ ಫಲಾನುಭವಿಗಳ ಮಾಹಿತಿಯನ್ನು ತಹಶೀಲ್ದಾರರಿಗೆ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ ಸಲ್ಲಿಸುವುದು.

    3) ತಹಶೀಲ್ದಾರರಿಂದ ಸ್ವೀಕರಿಸಲಾದ ಹಕ್ಕು ಪತ್ರಗಳ ವಿವರಗಳನ್ನಯ ಈಗಾಗಲೇ ಗ್ರಾಮ ಪಂಚಾಯಿತಿಯ ಪಂಚತಂತ್ರ ತಂತ್ರಾಂಶದಲ್ಲಿ ಫಲಾನುಭವಿಯ ವಿವರಗಳು ಇದ್ದಲ್ಲಿ ತಹಶೀಲ್ದಾರರಿಂದ ಸ್ವೀಕರಿಸಲಾದ ಹಕ್ಕು ಪತ್ರಗಳಿಗೆ ಹೊಸದಾಗಿ ಇ-ಸ್ವತ್ತು ತಂತ್ರಾಂಶದಲ್ಲಿ PID ಸೃಜಿಸದೆ, ಪಂಚತಂತ್ರ ತಂತ್ರಾಂಶದಲ್ಲಿನ ಆಸ್ತಿಯ PID ಗೆ ಹಕ್ಕು ಪತ್ರವನ್ನು ಜೋಡಣೆ ಮಾಡುವುದು. ಈ ಪ್ರಕರಣದಲ್ಲಿ ನೊಂದಣಿಯ ಅಗತ್ಯ ಇರುವುದಿಲ್ಲ.

    4) ಪಂಚತಂತ್ರ ತಂತ್ರಾಂಶದಲ್ಲಿನ ಮಾಹಿತಿಗೆ ಹಕ್ಕು ಪತ್ರವನ್ನು ಜೋಡಣೆ ಮಾಡದೆಯೇ, ಹಕ್ಕು ಪತ್ರಗಳಿಗೆ ಹೊಸದಾಗಿ ಇ-ಸ್ವತ್ತು ತಂತ್ರಾಂಶದಲ್ಲಿ PID ಸೃಜಿಸಲಾಗಿದ್ದರೆ, ಪಂಚತಂತ್ರದಲ್ಲಿನ ಹಳೆಯ PIDಯನ್ನು ನಿಷ್ಕ್ರಿಯಗೊಳಿಸುವುದು (Disable).

    ಇದನ್ನೂ ಓದಿ: Caste Survey Karnataka-ರಾಜ್ಯಾದ್ಯಂತ ಮನೆ-ಮನೆ ಜಾತಿಗಳ ಸಮೀಕ್ಷೆ ಕುರಿತು ಮಹತ್ವದ ಮಾಹಿತಿ ಪ್ರಕಟ!

    5) ಪಂಚತಂತ್ರ ತಂತ್ರಾಂಶದಲ್ಲಿನ ಮಾಹಿತಿಗೆ ಹಕ್ಕು ಪತ್ರವನ್ನು ಜೋಡಣೆ ಮಾಡದೆಯೇ, ಹಕ್ಕು ಪತ್ರಗಳಿಗೆ ಹೊಸದಾಗಿ ಇ-ಸ್ವತ್ತು ತಂತ್ರಾಂಶದಲ್ಲಿ PID ಸೃಜಿಸಲಾಗಿದ್ದು ಮತ್ತು ಪಂಚತಂತ್ರ ತಂತ್ರಾಂಶದಲ್ಲಿನ PID ಯನ್ನು ಇ-ಸ್ವತ್ತು ತಂತ್ರಾಂಶದಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವರ್ಗಾವಣೆಗೆ ಒಳಪಡಿಸಿದ್ದರೆ, ಅಂತಹ ಸಂದರ್ಭದಲ್ಲಿ ಹಕ್ಕು ಪತ್ರಗಳನ್ನಯ ಸೃಜಿಸಲಾಗಿರುವ PID ಯ XML File ಗೆ ಗ್ರಾಮ ಪಂಚಾಯಿತಿಯಿಂದ ನೋಟೀಸ್ ಸೃಜಿಸದೆ, XML File ಅನ್ನು ರಿಜೆಕ್ಟ್ ಮಾಡುವುದು.

    ಒಂದು ವೇಳೆ ನೋಟೀಸ್ ಸೃಜಿಸಿ, 15 ದಿನಗಳ ಮ್ಯುಟೇಷನ್ ಅವಧಿಯಲ್ಲಿದ್ದರೇ, ಅಂತಹ PID ಗಳನ್ನು ಅನುಮೋದಿಸದೆ ಫಲಾನುಭವಿಗಳ ಮಾಹಿತಿಯನ್ನು ತಹಶೀಲ್ದಾರರಿಗೆ ಮುಂದಿನ ಸೂಕ್ತ ತಿದ್ದುಪಡಿಗೆ ವರ್ಗಾಯಿಸುವುದು.

    6) ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಡಿ ರಡಿಯಲ್ಲಿ ವಾಸದ ಮನೆಗಳಿಗೆ ಹಾಗೂ ಹೊಂದಿಕೊಂಡಿರುವ ಜಾಗಗಳಿಗೆ ಹಕ್ಕು ಪತ್ರಗಳನ್ನು ವಿತರಣೆ” ಮಾಡಲಾಗಿರುತ್ತದೆ. ಪುಸ್ತುತ, ವಿತರಣೆ ಮಾಡಲಾಗಿರುವ ಹಕ್ಕು ಪತ್ರಗಳಲ್ಲಿ ನಿವೇಶನದ ಮಾಹಿತಿ ಮಾತ್ರ ಲಭ್ಯವಿರುವುದರಿಂದ ಕಾವೇರಿ ತಂತ್ರಾಂಶದಿಂದ ಗ್ರಾಮ ಪಂಚಾಯಿತಿಗಳು ಫಲಾನುಭವಿ ಹೆಸರಿಗೆ ಸ್ವೀಕರಿಸುವ XML File ಗಳನ್ನು ಮ್ಯುಟೇಷನ್ ಪ್ರಕ್ರಿಯೆಗೆ ಒಳಪಡಿಸಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯು,

    ಇದನ್ನೂ ಓದಿ: Birth Certificate-ಇನ್ನೂ ಮುಂದೆ ಜನನ ಪ್ರಮಾಣ ಪತ್ರ ಪಡೆಯುವುದು ಭಾರಿ ಸುಲಭ!

    15 ದಿನಗಳ ನೋಟೀಸ್ ಅವಧಿಯಲ್ಲಿ ಹಕ್ಕು ಪತ್ರಗಳಲ್ಲಿನ ವಿವರಗಳಿಗೆ ಅನುಗುಣವಾಗಿ ಮನೆಗಳ ಸ್ಥಳ ಪರಿಶೀಲನೆ ಮಾಡಿ ಕಟ್ಟಡಕ್ಕೆ ಸಂಬಂಧಿಸಿದ ಮಾಹಿತಿಯನ್ನು ಮಹಜರಿನೊಂದಿಗೆ ಲಿಖಿತವಾಗಿ ಫಲಾನುಭವಿಯಿಂದ ಪಡದು ಫಲಾನುಭವಿಯ ಹೆಸರನ್ನು ಇ-ಸ್ವತ್ತು ತಂತ್ರಾಂಶದಲ್ಲಿ ಅನುಮೋದನೆ ಮಾಡಿದ ನಂತರ, ಪುನಃ ಮ್ಯಾನ್ಯುಯಲ್ ಮ್ಯುಟೇಷನ್ ಮಾಡುವ ಮೂಲಕ (ಸ್ವತ್ತಿನ ಪ್ರಕಾರ)ನಿವೇಶನದ ವಿಷರದೊಂದಿಗೆ ಕಟ್ಟಡದ ಮಾಹಿತಿಯನ್ನು ತಂತ್ರಾಂಶದಲ್ಲಿ ಇಂದೀಕರಿಸುವ ಮೂಲಕ ಫಲಾನುಭವಿಯ ಹೆಸರಿಗೆ ನಮೂನೆಗಳ ವಿತರಣೆಗೆ ಕ್ರಮ ವಹಿಸುವುದು.

    7) ಹಕ್ಕು ಪತ್ರಗಳ ಷರತ್ತುಗಳನ್ವಯ ಫಲಾನುಭವಿಗಳು ಪಡೆದ ಆಸ್ತಿಯನ್ನು 15 ವರ್ಷಗಳ ಅವಧಿಯವರಗೆ ಪರಭಾರೆ ಮಾಡದ ಅಂಶವನ್ನು ಇ-ಸ್ವತ್ತು ತಂತ್ರಾಂಶದ ಹಕ್ಕುಗಳು ಮತ್ತು ಋಣಗಳು ಕಾಲಂನಲ್ಲಿ ಸ್ವಯಂ ಚಾಲಿತವಾಗಿ (Automatic) ದಾಖಲಾಗಿರುವುದನ್ನು ಹಾಗೂ ಇ-ಸ್ವತ್ತು ನಮೂನೆಗಳಲ್ಲಿ ದಾಖಲಾಗಿರುವುದರ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯು ದೃಢೀಕರಿಸಿಕೊಳ್ಳುವುದು.

    E-swathu Website-ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ಇ-ಸ್ವತ್ತು ತಂತ್ರಾಂಶ- Click here

    WhatsApp Group Join Now
    Telegram Group Join Now
    Share Now: