HomeNew postsEducation loan - ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!

Education loan – ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!

ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Education loan-2024)ಆಹ್ವಾನಿಸಲಾಗಿದೆ. 

ಈ ಯೋಜನೆಯಡಿ ಸೌಲಭ್ಯ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ ವಿದೇಶಿ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ಜನಾಂಗದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. 

application apply method-ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಜಿ ಸಲ್ಲಿಸಲು ಲಿಂಕ್:

ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಅರ್ಜಿ ಸಲ್ಲಿಸಬಹುದು ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.

required documents-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಅರ್ಜಿದಾರರ ಅಧಾರ್ ಕಾರ್ಡ ಪ್ರತಿ.
ಬ್ಯಾಂಕ್ ಪಾಸ್ ಬುಕ್.
ವ್ಯಾಸಂಗ ಪ್ರಮಾಣ ಪತ್ರ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
ಅರ್ಜಿದಾರರ ಪೋಟೋ.

eligibility details-ಅರ್ಹತೆ:

ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿಗಳು ಜನಾಂಗದವರಾಗಿರಬೇಕು. 

ಕೋರ್ಸ್- ಪೂರ್ಣಕಾಲಿಕ ಪದವಿ ಮತ್ತು ಸ್ನಾತಕೋತ್ತರ ಪದವಿ. ವಯಸ್ಸು ಗರಿಷ್ಠ 38 ವರ್ಷ ಮೀರಿರಬಾರದು. 

ಕುಟುಂಬದ ವಾರ್ಷಿಕ ಆದಾಯ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ.8 ಲಕ್ಷ ಮೀರಬಾರದು.

ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಕನಿಷ್ಠ ಶೇ.60 ಅಂಕ ಪಡೆದಿರಬೇಕು. 

ನಿಗಮಕ್ಕೆ ಆಸ್ತಿಯ (ಕಟ್ಟಡ, ಜಮೀನು) ಅಡಮಾನದ ಮೇಲೆ ಮಾತ್ರ ಸಾಲ ಒದಗಿಸಲಾಗುವುದು. ಆಸ್ತಿಯ ಮೌಲ್ಯವು ಸಾಲದ ಮೊತ್ತಕ್ಕಿಂತ ಕಡಿಮೆ ಇರಬಾರದು.

Last date for application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಅರ್ಜಿಯ ಪ್ರತಿ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಕಚೇರಿಗೆ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.

For more information-ಇನ್ನು ಹೆಚ್ಚಿನ ಮಾಹಿತಿಹಾಗಿ:

ನಿಗಮದ ಅಧಿಕೃತ ವೆಬ್ಸೈಟ್ ಲಿಂಕ್: Click here

Most Popular

Latest Articles

Related Articles